logo
ಕನ್ನಡ ಸುದ್ದಿ  /  ಕರ್ನಾಟಕ  /  Kannada Sahitya Sammelana 2023: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಇಂದಿನ ಕಾರ್ಯಕ್ರಮಗಳ ವಿವರ ಹೀಗಿದೆ

Kannada sahitya sammelana 2023: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಇಂದಿನ ಕಾರ್ಯಕ್ರಮಗಳ ವಿವರ ಹೀಗಿದೆ

HT Kannada Desk HT Kannada

Jan 06, 2023 10:32 AM IST

google News

ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು

  • ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇಂದು ನಡೆಯಲಿರುವ ಕಾರ್ಯಕ್ರಮಗಳು ಹಾಗೂ ಗೋಷ್ಠಿಗಳ ಸಂಪೂರ್ಣ ವಿವರ ಇಲ್ಲಿದೆ. 

ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು
ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ಇಂದಿನಿಂದ ಅದ್ಧೂರಿಯಾಗಿ ನಡೆಯುತ್ತಿದೆ. ಇದಕ್ಕಾಗಿ ಹಾವೇರಿ ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.

ಸಾಹಿತ್ಯ ಸಮ್ಮೇಳನಕ್ಕೆ ಇಂದು ಬೆಳಗ್ಗೆ ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್​ ಹೆಬ್ಬಾರ್​ ರಾಷ್ಟ್ರ ಧ್ವಜಾರೋಹಣ ಮಾಡಿದರೆ, ಸಾಹಿತ್ಯ ಪರಿಷತ್ತಿನ ಧ್ವಜಾರೋಹಣವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಹಾಗೂ ಕನ್ನಡ ಧ್ವಜಾರೋಹಣ ಕಾರ್ಯಕ್ರಮವನ್ನು ಜಿಲ್ಲಾ ಕ.ಸಾ.ಪ ಅಧ್ಯಕ್ಷ ಲಿಂಗಯ್ಯ ಹಿರೇಮಠ ನೆರವೇರಿಸಿದ್ದಾರೆ. ಮೂರು ಧ್ವಜಾರೋಹಣವನ್ನು ಏಕಕಾಲಕ್ಕೆ ಮಾಡಲಾಯಿತು.

ಸಾವಿರಾರು ಮಂದಿ ಸಾಹಿತ್ಯಾಭಿಮಾನಿಗಳು ಈ ನುಡಿ ಜಾತ್ರೆಗೆ ಸಾಕ್ಷಿಯಾಗಲಿದ್ದಾರೆ. ನೀವು ಕೂಡ ಈ ಅಕ್ಷರ ಜಾತ್ರೆಗೆ ಹೋಗುತ್ತಿದ್ದರೆ ಇಂದು ಏನೆಲ್ಲಾ ಕಾರ್ಯಕ್ರಮಗಳು ಹಾಗೂ ಗೋಷ್ಠಿಗಳು ನಡೆಯುತ್ತವೆ ಎಂಬುದನ್ನು ತಿಳಿದುಕೊಂಡರೆ ಸರಿಯಾದ ಸಮಯಕ್ಕೆ ಭಾಗವಹಿಸಲು ಅನುಕೂಲವಾಗುತ್ತದೆ. ಹೀಗಾಗಿ ಇಂದಿನ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಇಂದಿನ ಕಾರ್ಯಕ್ರಮಗಳು

ಬೆಳಗ್ಗೆ 7 ರಿಂದ 7.30ಕ್ಕೆ ಧ್ವಜಾರೋಹಣ

ಬೆಳಗ್ಗೆ 7.30 ರಿಂದ 10.30ರವರೆಗೆ ಮೆರವಣಿಗೆ

ಬೆಳಗ್ಗೆ 10.30ಕ್ಕೆ ಸಿಎಂ ಬೊಮ್ಮಾಯಿ ಅವರಿಂದ ಸಮ್ಮೇಳನ ಉದ್ಧಾಟನೆ ಹಾಗೂ

ಸಮ್ಮೇಳನಾಧ್ಯಕ್ಷ ಡಾ.ದೊಡ್ಡರಂಗೇಗೌಡರಿಂದ ಭಾಷಣ

ಗೋಷ್ಠಿಗಳು

ವೇದಿಕೆ-1 ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆ

ಗೋಷ್ಠಿ-1: ಮಧ್ಯಾಹ್ನ 2 ರಿಂದ 4ರವರೆಗೆ ಸಾಮರಸ್ಯದ ಭಾವ-ಕನ್ನಡದ ಜೀವ. ಚಿತ್ರದುರ್ಗ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ

ಗೋಷ್ಠಿ-2: ಸಂಜೆ 4 ರಿಂದ 6ರವರೆಗೆ ಕವಿಗೋಷ್ಠಿ

ಸಂಜೆ 6 ರಿಂದ 7ರ ವರೆಗೆ ಸಾಧಕರಿಗೆ ಸನ್ಮಾನ

ವೇದಿಕೆ-2 ಪಾಪು-ಚಂಪಾ ವೇದಿಕೆ ಹೆಳವನಕಟ್ಟೆ ಗಿರಿಯ ಮಹಾಮಂಟಪ

ಗೋಷ್ಠಿ-1: ಮಧ್ಯಾಹ್ನ 2 ರಿಂದ 4 ಗಂಟೆವರೆಗೆ ಹಾವೇರಿ ಜಿಲ್ಲಾ ದರ್ಶನ

ಗೋಷ್ಠಿ-2: ಸಂಜೆ 4 ರಿಂದ 5 ಗಂಟೆವರೆಗೆ ಸ್ವಾತಂತ್ರ ಅಮೃತ ಮಹೋತ್ಸವಕ್ಕೆ ಕರ್ನಾಟಕದ ಕೊಡುಗೆ

ಗೋಷ್ಠಿ-3: ಸಂಜೆ 5 ರಿಂದ 7 ಗಂಟೆವರೆಗೆ ಕನ್ನಡ ದಿಗ್ಗಜರು

ವೇದಿಕೆ-3 ಶ್ರೀಹಾನಗಲ್ ಕುಮಾರ ಶಿವಯೋಗಿಗಳ ವೇದಿಕೆ

ಗೋಷ್ಠಿ-1: ಮಧ್ಯಾಹ್ನ 2 ರಿಂದ 3.30ರ ವರೆಗೆ ಶತಮಾನ-ಪುರುಷರು ಈ ಮಹನೀಯರ ಶತಮಾನೋತ್ಸವದ ಸಂದರ್ಭದಲ್ಲಿ

ಗೋಷ್ಠಿ-2: ಮಧ್ಯಾಹ್ನ 3.30 ರಿಂದ 5.15ರ ವರೆಗೆ - ಸಂಕೀರ್ಣ ಗೋಷ್ಠಿ

ಗೋಷ್ಠಿ-3: ಸಂಜೆ 5.15 ರಿಂದ 7ಗಂಟೆವರೆಗೆ ಬೆಳ್ಳಿತೆರೆ-ಕಿರುತೆರೆ

ಸಂಜೆ 7 ರಿಂದ ರಾತ್ರಿ 10ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ