logo
ಕನ್ನಡ ಸುದ್ದಿ  /  Karnataka  /  Direct Recruitment For 778 Lecturer Vacancies In Undergraduate Colleges Soon Says Minister Bc Nagesh

Direct Recruitment for Lecturer post: ಪದವಿಪೂರ್ವ ಕಾಲೇಜುಗಳಲ್ಲಿ 778 ಉಪನ್ಯಾಸಕರ ನೇರ ನೇಮಕಾತಿ - ಸಚಿವ ನಾಗೇಶ್

HT Kannada Desk HT Kannada

Sep 10, 2022 06:38 PM IST

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ (ಫೋಟೋ-ಸಂಗ್ರಹ)

  • ಶೀಘ್ರದಲ್ಲೇ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಬಿಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ (ಫೋಟೋ-ಸಂಗ್ರಹ)
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ (ಫೋಟೋ-ಸಂಗ್ರಹ)

ಬೆಂಗಳೂರು: ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆಯ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ಟ್ರೆಂಡಿಂಗ್​ ಸುದ್ದಿ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆ. ದಾಖಲು, ಮೇ 7ರಿಂದ 9 ರವರೆಗೆ ಮಳೆ ನಿರೀಕ್ಷೆ- ಹವಾಮಾನ ವರದಿ

Crime News: ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಬೇಟೆ, ಮಾದಕ ವಸ್ತು ಮಾರುತ್ತಿದ್ದ ಇಬ್ಬರ ಬಂಧನ, 16 ಲಕ್ಷ ರೂ ಮೌಲ್ಯದ ಸೊತ್ತುಗಳು ವಶಕ್ಕೆ

ಸೋಶಿಯಲ್ ಮೀಡಿಯಾ ಎಫೆಕ್ಟ್: ಮಾರಕ ಕಾಯಿಲೆಯಿಂದ ಬಳಲುತ್ತಿದ್ದ ಮಗುವಿಗೆ ನೆರವಿನ ಮಹಾಪೂರ, ಇನ್ನು ಹಣ ಹಾಕಬೇಡಿ ಎಂದ ಹೆತ್ತವರು

Mysuru News: ಮುಖ್ಯಮಂತ್ರಿ ಸಿದ್ದರಾಮಯ್ಯ ತವರಲ್ಲೂ ನೀರಿನ ಬವಣೆ, 26 ಗ್ರಾಮಗಳಿಗೆ ಟ್ಯಾಂಕರ್‌ ನೀರು, 113 ಕಡೆ ಮುನ್ನೆಚ್ಚರಿಕೆ

ಶೀಘ್ರದಲ್ಲೇ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಗಳ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಬಿಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗಷ್ಟೇ ತಿಳಿಸಿದ್ದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​​ನಲ್ಲಿ ಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ ಸಿಎಂ ಬೊಮ್ಮಾಯಿ, ಶಿಕ್ಷಣ ಕ್ಷೇತ್ರಕ್ಕೆ 25 ಸಾವಿರ ಕೋಟಿ ರೂ. ಅನುದಾನ ಬಜೆಟ್​ನಲ್ಲಿ ನೀಡಲಾಗಿದೆ. 19 ಸಾವಿರ ಕೋಟಿ ರೂ. ಶಿಕ್ಷಕರ ಸಂಬಳ, 5000 ಕೋಟಿ ರೂ. ಶಾಲೆಗಳ ಅಭಿವೃದ್ಧಿಗಾಗಿ ನೀಡಲಾಗಿದೆ. ಒಂದೇ ವರ್ಷದಲ್ಲಿ 8101 ಶಾಲಾ ಕೊಠಡಿಗಳನ್ನು ನಿರ್ಮಿಸುತ್ತಿರುವುದು ರಾಜ್ಯದ ಇತಿಹಾಸದಲ್ಲೇ ಮೊದಲು. 23 ಸಾವಿರ ಶಾಲಾ ಕೊಠಡಿಗಳನ್ನು ಪುನ: ನಿರ್ಮಿಸಬೇಕಾಗಿದ್ದು, ಪ್ರಥಮ ಹಂತದಲ್ಲಿ 8101 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಉತ್ತಮ ಶಾಲೆಗಳಿದ್ದರು, ಉತ್ತಮ ಶಾಲಾ ಕೊಠಡಿಗಳು ಇಲ್ಲದಿದ್ದ ಕಾರಣ , ಈ ದಾಖಲೆಯ ಕಾರ್ಯಕ್ರಮವನ್ನು ಮಾಡಲಾಗಿದೆ ಎಂದಿದ್ದರು.

    ಹಂಚಿಕೊಳ್ಳಲು ಲೇಖನಗಳು