PUC Supplementary Result: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ, ಶೇ. 32 ಫಲಿತಾಂಶ, ರಿಸಲ್ಟ್ ನೋಡಲು ಇಲ್ಲಿದೆ ನೇರ ಲಿಂಕ್
Jun 20, 2023 01:24 PM IST
ಸಾಂದರ್ಭಿಕ ಚಿತ್ರ
- Karnataka 2nd PUC Result Out: ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇದೀಗ ಫಲಿತಾಂಶ ಪ್ರಕಟಿಸಿದ್ದು, ಈ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಪಡೆದಿದ್ದಾರೆ. ಪರೀಕ್ಷೆ ಬರೆದ ಅಭ್ಯರ್ಥಿಗಳು karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು.
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇದೀಗ ಫಲಿತಾಂಶ ಪ್ರಕಟಿಸಿದ್ದು, ಈ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಪಡೆದಿದ್ದಾರೆ. ಕರ್ನಾಟಕ ಪಿಯುಸಿ ಸಪ್ಲಿಮೆಂಟರಿ ಫಲಿತಾಂಶ ವೀಕ್ಷಣೆಗೆ ನೇರ ಲಿಂಕ್ ಅನ್ನು ಈ ವರದಿಯ ಕೊನೆಗೆ ನೀಡಲಾಗಿದ್ದು, ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸಬಹುದು.
ಪ್ರಸಕ್ತ ಸಾಲಿನ ಪೂರಕ ಪರೀಕ್ಷೆಯಲ್ಲಿ ಶೇಕಡ 32 ಫಲಿತಾಂಶ ಬಂದಿರುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಪೂರಕ ಪರೀಕ್ಷೆಗೆ 1,58,881 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು, ಅವರಲ್ಲಿ 1,57,756 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ ಕೇವಲ 50,478 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
ಇದೀಗ ಆನ್‌ಲೈನ್‌ನಲ್ಲಿ ಫಲಿತಾಂಶ ಲಭ್ಯವಿದ್ದು, ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸಬಹುದು. ಇಂದು ಸಂಜೆ ಮೂರು ಗಂಟೆ ವೇಳೆಗೆ ಆಯಾ ಶಾಲೆಗಳ ನೋಟಿಸ್ ಬೋರ್ಡ್‌ಗಳಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ.
ಪರೀಕ್ಷೆ ಬರೆದ ಅಭ್ಯರ್ಥಿಗಳು karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ನೀಡುವ ಮೂಲಕ ಫಲಿತಾಂಶ ವೀಕ್ಷಿಸಬಹುದು. ಫಲಿತಾಂಶ ವೀಕ್ಷಣೆಗೆ ನೇರ ಲಿಂಕ್ ಇಲ್ಲಿದೆ. ಇಲ್ಲಿ ಕ್ಲಿಕ್ ಮಾಡಿ.
ಮೇ 24ರಿಂದ ಪಿಯುಸಿ ಪೂರಕ ಪರೀಕ್ಷೆ ಆರಂಭವಾಗಿತ್ತು. ಮೊದಲ ದಿನ ಮಂಗಳವಾರ ಕನ್ನಡ, ಬುಧವಾರ ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ ಪರೀಕ್ಷೆ ನಡೆದಿತ್ತು ಗುರುವಾರ ಇಂಗ್ಲಿಷ್, ಶುಕ್ರವಾರ ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ ಮತ್ತು ಗಣಕ ವಿಜ್ಞಾನ ಪರೀಕ್ಷೆ ನಡೆದಿತ್ತು. ಮೇ 27ರ ಶನಿವಾರ ಇತಿಹಾಸ ಮತ್ತು ಸಂಖ್ಯಾಶಾಸ್ತ್ರ ಪರೀಕ್ಷೆ ನಡೆದಿತ್ತು. ಮೇ 29ರ ಸೋಮವಾರ ಹಿಂದಿ, ಮಂಗಳವಾರ ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ ವಿಷಯಗಳಿಗೆ ಪರೀಕ್ಷೆ ನಡೆದಿತ್ತು. ಮರುದಿನ ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ ಪರೀಕ್ಷೆ ನಡೆದಿದ್ದವು. ಗುರುವಾರ ರಾಜ್ಯ ಶಾಸ್ತ್ರ ಮತ್ತು ಗಣಿತ ಶಾಸ್ತ್ರ, ಶುಕ್ರವಾರ ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ ಪರೀಕ್ಷೆ ನಡೆದಿತ್ತು. ಜೂನ್ 3ರಂದು ಕೊನೆಯ ದಿನ ಅರ್ಥ ಶಾಸ್ತ್ರ ಮತ್ತು ಜೀವಶಾಸ್ತ್ರ ಪೂರಕ ಪರೀಕ್ಷೆ ನಡೆದಿತ್ತು.