logo
ಕನ್ನಡ ಸುದ್ದಿ  /  ಕರ್ನಾಟಕ  /  Lkg At Anganwadi: ಕರ್ನಾಟಕದ ಅಂಗನವಾಡಿ ಶಾಲೆಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ಶಿಕ್ಷಣ, ಗೊಂದಲಕ್ಕೆ ತೆರೆ ಎಳೆದ ಸಿಎಂ

LKG at Anganwadi: ಕರ್ನಾಟಕದ ಅಂಗನವಾಡಿ ಶಾಲೆಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ಶಿಕ್ಷಣ, ಗೊಂದಲಕ್ಕೆ ತೆರೆ ಎಳೆದ ಸಿಎಂ

Umesha Bhatta P H HT Kannada

Jun 24, 2024 04:39 PM IST

google News

ಸಿಎಂ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ನಡೆದ ಸಭೆ.

  •  Education News  ಕರ್ನಾಟಕದ ಅಂಗನವಾಡಿಗಳಲ್ಲೂ ಕಾನ್ವೆಂಟ್‌ ಮಾದರಿಯ ಶಿಕ್ಷಣ ನೀಡಲು ಸಿಎಂ ಸಿದ್ದರಾಮಯ್ಯ  ಸಮ್ಮತಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ನಡೆದ ಸಭೆ.
ಸಿಎಂ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ನಡೆದ ಸಭೆ.

ಬೆಂಗಳೂರು: ಬಹುದಿನಗಳ ಬೇಡಿಕೆಯಂತೆ ಕರ್ನಾಟಕದ ಅಂಗನವಾಡಿಗಳಲ್ಲೇ ಖಾಸಗಿ ಶಾಲೆಗಳಂತೆ ಎಲ್‌ಕೆಜಿ. ಯುಕೆಜಿ ಶಿಕ್ಷಣ ಸಿಗಲಿದೆ. ಅಂಗನವಾಡಿ ಕಾರ್ಯಕರ್ಯರು ಹಾಗೂ ಶಿಕ್ಷಣ ಇಲಾಖೆ ನಡುವೆ ಇದ್ದಂತಹ ಗೊಂದಲವನ್ನು ಬಗೆಹರಿಸಿ ಅಂಗನಾಡಿಗಳಲ್ಲೇ ಕಾನ್ವೆಂಟ್‌ ಮಾದರಿಯ ಶಿಕ್ಷಣ ನೀಡಲು ಸರ್ಕಾರ ಸಮ್ಮತಿ ಸೂಚಿಸಿದೆ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ

ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌, ಶಿಕ್ಷಣ ಸಚಿವ ಮಧುಬಂಗಾರಪ್ಪ, ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ.ಅತೀಕ್‌. ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಅಂಗನವಾಡಿ ಶಿಕ್ಷಣದ ಕುರಿತಾಗಿ ವಿಸ್ತೃತವಾಗಿ ಚರ್ಚೆ ನಡೆಯಿತು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಲಕ್ಷ್ಮಿ ಹೆಬ್ಬಾಳಕರ, ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ . ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು.

ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಪೂರ್ವಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ ೯ ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗದು ಎಂದು ಹೇಳಿದ ಸಚಿವರು, ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಲಾ ಮತ್ತು ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್‌, ಮಹಿಳಾ ಮತ್ತು ಮಕ್ಳಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಜಿ.ಸಿ.ಪ್ರಕಾಶ್‌ ಮತ್ತಿತರರು ಉಪಸ್ಥಿತರಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ