logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Cet 2024: ಏಪ್ರಿಲ್‌ನಲ್ಲಿ ಸಿಇಟಿ ಪರೀಕ್ಷೆ:4 ತಿಂಗಳ ಮೊದಲೇ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಪರೀಕ್ಷೆ ವಿವರ ಇಲ್ಲಿದೆ

Karnataka CET 2024: ಏಪ್ರಿಲ್‌ನಲ್ಲಿ ಸಿಇಟಿ ಪರೀಕ್ಷೆ:4 ತಿಂಗಳ ಮೊದಲೇ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಪರೀಕ್ಷೆ ವಿವರ ಇಲ್ಲಿದೆ

HT Kannada Desk HT Kannada

Dec 23, 2023 09:34 AM IST

google News

ಕರ್ನಾಟಕ ಸಿಇಟಿ ಪರೀಕ್ಷೆಗಳ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

    • Karnatata CET ಕರ್ನಾಟಕ ಪರೀಕ್ಷಾ ಪ್ರಾಧಿಕಾರವು( KEA) 2024ನೇ ಸಾಲಿನ ಪ್ರವೇಶ ಪರೀಕ್ಷೆಗಳ ( CET) ದಿನಾಂಕವನ್ನು ಪ್ರಕಟಿಸಿದೆ.
ಕರ್ನಾಟಕ ಸಿಇಟಿ ಪರೀಕ್ಷೆಗಳ  ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ಕರ್ನಾಟಕ ಸಿಇಟಿ ಪರೀಕ್ಷೆಗಳ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ನೇ ಸಾಲಿನ ವಿವಿಧ ವೃತ್ತಿ ಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳ ದಿನಾಂಕವನ್ನು ನಾಲ್ಕು ತಿಂಗಳು ಮೊದಲೇ ಪ್ರಕಟಿಸಿದೆ.

ಎಂಜಿನಿಯರಿಂಗ್‌, ಕೃಷಿ, ಪಶು ಸಂಗೋಪನೆ, ನರ್ಸಿಂಗ್‌, ಫಾರ್ಮಸಿ, ಆಯುಷ್ ಸಹಿತ ವಿವಿಧ ವೃತ್ತಿಪರ ಕೋರ್ಸ್‌ ಗಳಿಗೆ 2024ರ ಪ್ರವೇಶ ಪರೀಕ್ಷೆಗಳನ್ನು ಏಪ್ರಿಲ್‌ 20 ಮತ್ತು 21ರಂದು ನಿಗದಿ ಮಾಡಲಾಗಿದೆ.

ಏ.20ರ ಬೆಳಿಗ್ಗೆ 10.30ರಿಂದ ಜೀವ ವಿಜ್ಞಾನ, ಮಧ್ಯಾಹ್ನ 2.30ರಿಂದ ಗಣಿತ, 21ರಂದು ಬೆಳಿಗ್ಗೆ ಭೌತ ವಿಜ್ಞಾನ ಮತ್ತು ಮಧ್ಯಾಹ್ನ ರಸಾಯನ ವಿಜ್ಞಾನ ಪರೀಕ್ಷೆ ತಲಾ 60 ಅಂಕಗಳಿಗೆ ನಡೆಯಲಿದೆ.

ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.19ರಂದು ಬೆಂಗಳೂರು, ಬೀದರ್‌, ಬೆಳಗಾವಿ, ಬಳ್ಳಾರಿ, ವಿಜಯಪುರ ಮತ್ತು ಮಂಗಳೂರು ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

ನ್ಯಾಚುರೋಪಥಿ ಮತ್ತು ಯೋಗ, ಬಿ.ಫಾರ್ಮಾ, ಫಾರ್ಮಾ-ಡಿ, ದ್ವಿತೀಯ ವರ್ಷದ ಬಿ.ಫಾರ್ಮಾ, ಕೃಷಿ ಕೋರ್ಸುಗಳು, ಪಶು ಸಂಗೋಪನೆ, ಬಿ.ಎಸ್‌ಸಿ (ನರ್ಸಿಂಗ್), ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ‌ ಕೋರ್ಸುಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಗೂ ಈ ಸೂಚನೆ ಅನ್ವಯವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ( KEA) ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿದ್ದಾರೆ.

ಸಿಇಟಿ ಎಂಜಿನಿಯರಿಂಗ್‌ನ 3ನೇ ಸೆಮಿಸ್ಟರ್‌ಗೆ ನೇರ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಏ.18ರಂದು ಸಿಇಟಿ ನಡೆಸಲಾಗುವುದು.ಎಂಬಿಎ, ಎಂಸಿಎ, ಎಂ.ಇ, ಎಂ.ಟೆಕ್‌, ಎಂ.ಆರ್ಕ್‌ ಕೋರ್ಸುಗಳಿಗೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಏ.18 ಮತ್ತು 19ರಂದು ಪಿಜಿಸಿಇಟಿ ನಡೆಸಲಾಗುವುದು. ಎರಡಕ್ಕೂ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಪೋರ್ಟಲ್‌ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಜನವರಿ 10ರಿಂದ ನಿಗದಿತ ಶುಲ್ಕದೊಂದಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಸರಿಯಾದ ಆರ್‌.ಡಿ. ಸಂಖ್ಯೆ, ಜಾತಿ/ಆದಾಯ ಪ್ರಮಾಣಪತ್ರ ಮತ್ತು ಕಲ್ಯಾಣ ಕರ್ನಾಟಕ (371ಜೆ) ಪ್ರಮಾಣಪತ್ರಕ್ಕೆ ಸಂಬಂಧಿಸಿದ ಅಗತ್ಯ ವಿವರಗಳನ್ನು ಸಲ್ಲಿಕೆ ಮಾಡಬೇಕು. ತಪ್ಪಿದಲ್ಲಿ, ಇಂತಹ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.

2023ರಲ್ಲಿ ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಬಯಸಿ ನಂತರ ಸೀಟು ರದ್ದುಪಡಿಸಿಕೊಂಡಿರುವ ಅಥವಾ ಹೆಚ್ಚುವರಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳಿಗೆ ಪ್ರಾಧಿಕಾರವು ಆ ಮೊತ್ತವನ್ನು ಹಿಂದಿರುಗಿಸಲಿದೆ., ಕೆಲವರ ಅರ್ಜಿಗಳಲ್ಲಿ ಬ್ಯಾಂಕ್‌ ವಿವರಗಳು ತಪ್ಪಾಗಿದ್ದು, ಡಿ.31ರೊಳಗೆ ಸರಿಯಾದ ವಿವರ ನಮೂದಿಸಬೇಕು ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ