logo
ಕನ್ನಡ ಸುದ್ದಿ  /  ಕರ್ನಾಟಕ  /  ಎಸ್‌ಎಸ್‌ಎಲ್‌ಸಿ ಟಾಪರ್‌ ಅಂಕಿತಾ ಬಸಪ್ಪ ಕೊನ್ನೂರ್‌ಗೆ ಐಎಎಸ್‌ ಅಧಿಕಾರಿಯಾಗುವಾಸೆ; ಸ್ಟಡಿಗೆ ಯೂಟ್ಯೂಬ್‌ ಬಳಸಿಕೊಂಡ ಜಾಣೆ

ಎಸ್‌ಎಸ್‌ಎಲ್‌ಸಿ ಟಾಪರ್‌ ಅಂಕಿತಾ ಬಸಪ್ಪ ಕೊನ್ನೂರ್‌ಗೆ ಐಎಎಸ್‌ ಅಧಿಕಾರಿಯಾಗುವಾಸೆ; ಸ್ಟಡಿಗೆ ಯೂಟ್ಯೂಬ್‌ ಬಳಸಿಕೊಂಡ ಜಾಣೆ

Praveen Chandra B HT Kannada

May 09, 2024 11:51 AM IST

google News

ಎಸ್‌ಎಸ್‌ಎಲ್‌ಸಿ ಟಾಪರ್‌ ಅಂಕಿತಾ ಬಸಪ್ಪ ಕೊನ್ನೂರ್‌ಗೆ ಐಎಎಸ್‌ ಅಧಿಕಾರಿಯಾಗುವಾಸೆ

    • SSLC Exam Topper Ankita Basappa Konnur: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್‌ ಆಗಿ ಹೊರಹೊಮ್ಮಿರುವ ಅಂಕಿತಾ ಕೊನ್ನೂರ್‌ ತನ್ನ ಯಶೋಗಾಥೆಯನ್ನು ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದ್ದಾರೆ. 625ಕ್ಕೆ 625 ಅಂಕ ಪಡೆದಿರುವ ಇವರು ಬಾಗಲಕೋಟೆ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ.
ಎಸ್‌ಎಸ್‌ಎಲ್‌ಸಿ ಟಾಪರ್‌ ಅಂಕಿತಾ ಬಸಪ್ಪ ಕೊನ್ನೂರ್‌ಗೆ ಐಎಎಸ್‌ ಅಧಿಕಾರಿಯಾಗುವಾಸೆ
ಎಸ್‌ಎಸ್‌ಎಲ್‌ಸಿ ಟಾಪರ್‌ ಅಂಕಿತಾ ಬಸಪ್ಪ ಕೊನ್ನೂರ್‌ಗೆ ಐಎಎಸ್‌ ಅಧಿಕಾರಿಯಾಗುವಾಸೆ

ಬೆಂಗಳೂರು: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಕ್ಕೆ ಟಾಪರ್‌ ಆಗಿ ಹೊರಹೊಮ್ಮಿರುವ ಅಂಕಿತಾ ಕೊನ್ನೂರ್‌ಗೆ ಐಎಎಸ್‌ ಅಧಿಕಾರಿಯಾಗುವ ಕನಸು ಇದೆಯಂತೆ. ಬಾಗಲಕೋಟೆ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ ತನ್ನ ಯಶಸ್ಸಿನ ಗುಟ್ಟನ್ನೂ ಹೇಳಿದ್ದಾರೆ. ಐಎಎಸ್‌ ಅಧಿಕಾರಿ ಆಗಬೇಕು ಎನ್ನುವ ಆಸೆಯಿದೆ. ನಾನು ಹಾಸ್ಟೆಲ್‌ನಲ್ಲಿದ್ದೆ, ಅಲ್ಲಿ ಮೊಬೈಲ್ ಫೋನ್ ಇರಲಿಲ್ಲ. ಯಾವುದಾದರೂ ವಿಷಯದ ಬಗ್ಗೆ ಮಾಹಿತಿ ಬೇಕಿದ್ರೆ ಯುಟ್ಯೂಬ್‌ನಲ್ಲಿ ನೋಡ್ತಿದ್ವಿ. ಓದುವುದರಲ್ಲಿ ಹಾರ್ಡ್‌ವರ್ಕ್ ಮತ್ತು ಸ್ಮಾರ್ಟ್‌ವರ್ಕ್‌ ಎರಡೂ ಬೇಕು. ಕಾನ್ಸೆಪ್ಟ್‌ ಅರ್ಥ ಮಾಡಿಕೊಂಡರೆ ಆರಾಮಾಗಿ ಮಾರ್ಕ್ಸ್‌ ತೆಗೆಯಬಹುದು ಎಂದು ಅವರು ಹೇಳಿದ್ದಾರೆ.

ಅಧ್ಯಯನಕ್ಕೆ ಯೂಟ್ಯೂಬ್‌ ನೆರವು

ಈಗಿನ ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡರೆ ಅಧ್ಯಯನ, ಜ್ಞಾನ ಹೆಚ್ಚಿಸಿಕೊಳ್ಳಬಹುದು ಎನ್ನುವುದಕ್ಕೆ ಅಂಕಿತಾ ಕೊನ್ನೂರು ಸಾಕ್ಷಿ. ಈಕೆಗೆ ಪಠ್ಯದ ಯಾವುದಾದರೂ ವಿಷಯ ಅರ್ಥವಾಗದೆ ಇದ್ದರೆ, ಅಥವಾ ಆ ವಿಷಯದ ಕುರಿತು ಇನ್ನಷ್ಟು ತಿಳಿದುಕೊಳ್ಳಲು ಯೂಟ್ಯೂಬ್‌ನಲ್ಲಿ ಸಂಬಂಧಪಟ್ಟ ವಿಡಿಯೋಗಳನ್ನು ನೋಡುತ್ತಿದ್ದರು. ಇದು ಕೂಡ ಇವರ ಯಶಸ್ಸಿಗೆ ನೆರವಾಗಿದೆ.

ಪರೀಕ್ಷೆಯಲ್ಲಿ ಗಡಿಬಿಡಿ ಬೇಡ

ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಚೆನ್ನಾಗಿ ತಯಾರಿ ನಡೆಸಿರುತ್ತಾರೆ. ಚೆನ್ನಾಗಿ ಓದಿರ್ತಾರೆ ಆದರೆ ಪರೀಕ್ಷೆ ಬರೆಯುವುದರಲ್ಲಿ ಗಡಿಬಿಡಿ ಮಾಡಿಕೊಂಡು ಫೇಲ್ ಆಗ್ತಾರೆ. ಕೆಲವರು ನಿರ್ಲಕ್ಷ್ಯದಿಂದ ಫೇಲ್ ಆಗ್ತಾರೆ ಎಂದು ಕರ್ನಾಟಕದ ಎಸ್‌ಎಸ್‌ಎಲ್‌ಸಿ ಟಾಪರ್‌ ಅಂಕಿತಾ ಕೊನ್ನೂರು ಹೇಳಿದ್ದಾರೆ. ನನಗೆ ಐಎಎಸ್‌ ಅಧಿಕಾರಿ ಆಗಬೇಕು ಅಂತ ಆಸೆಯಿದೆ. ಸಮಾಜಕ್ಕಾಗಿ ಕೆಲಸ ಮಾಡಬೇಕು ಅಂತ ಆಸೆಯಿದೆ ಎಂದು ಅವರು ಹೇಳಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಅಂಕಿತಾ ಬಸಪ್ಪ ಮೊದಲನೇ ಸ್ಥಾನಗಳಿಸಿದ್ದಾರೆ. ಬೆಂಗಳೂರಿನ ವಿದ್ಯಾರ್ಥಿನಿ ಮೇದಾ ಪಿ ಶೆಟ್ಟಿ ಎರಡನೇ ಸ್ಥಾನ ಪಡೆದಿದ್ದಾರೆ. ಕಾರ್ಕಳ ತಾಲೂಕಿನ ಜ್ಞಾನಸುಧಾ ವಿದ್ಯಾರ್ಥಿನಿ ಸಹನಾ 623 ಅಂಕ ಪಡೆದು ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.

ಎಸ್‌ಎಸ್‌ಎಲ್‌ಸಿ ಟಾಪರ್ಸ್‌: 7 ಜನರಿಗೆ ದ್ವಿತೀಯ ಸ್ಥಾನ

ಎಸ್‌ಎಸ್‌ಎಲ್‌ಸಿ ಟಾಪರ್ಸ್‌ಗಳಲ್ಲಿ ಏಳು ಜನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ. ಮೇದಾ ಪಿ ಶೆಟ್ಟಿ ( ಬೆಂಗಳೂರು) 624/625, ಹರ್ಷಿತಾ ಡಿಎಂ (ಮಧುಗಿರಿ), ಚಿನ್ಮಯ್ (ದಕ್ಷಿಣ ಕನ್ನಡ), ಸಿದ್ದಾಂತ್ (ಚಿಕ್ಕೊಡಿ ), ದರ್ಶನ್ (ಶಿರಸಿ), ಚಿನ್ಮಯ್ (ಶಿರಸಿ), ಶ್ರೀರಾಮ್ (ಶಿರಸಿ) ದ್ವಿತೀಯ ಸ್ಥಾನ ಪಡೆದಿದ್ದಾರೆ.

"ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ಶೇ 30 ರಷ್ಟು ಫಲಿತಾಂಶ ಕಡಿಮೆಯಾಗಿತ್ತು. ಫಲಿತಾಂಶ ಉತ್ತಮಪಡಿಸಲು ಕೃಪಾಂಕ ಪಡೆಯಲು ಈಗ ಶೇ 25 ಫಲಿತಾಂಶ ಪಡೆದರೆ ಸಾಕು. ಈ ಬಾರಿ ಕೃಪಾಂಕದ ಪ್ರಮಾಣವನ್ನು ಶೇ 10 ರಷ್ಟು ಹೆಚ್ಚಿಸಲಾಗಿದೆ. ಅಪೂರ್ಣ ಫಲಿತಾಂಶ ಪಡೆದಿರುವ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ವಿಶೇಷ ತರಗತಿ ನಡೆಸಲಾಗುವುದು" ಎಂದು ಪರೀಕ್ಷಾ ಮಂಡಳಿ ನಿರ್ದೇಶಕರಾದ ಮಂಜುಳಾ ಹೇಳಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ