logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; 10ನೇ ತರಗತಿ ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; 10ನೇ ತರಗತಿ ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

Umesh Kumar S HT Kannada

May 09, 2024 11:23 AM IST

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದೇ ಪ್ರಕಟವಾಗಲಿದೆ.

  • ಕರ್ನಾಟಕದಲ್ಲಿ 10ನೇ ತರಗತಿ ಪರೀಕ್ಷೆ ಬರೆದವರು ತಮ್ಮ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕಾಗಿ ಬಹಳ ಕಾತರದಿಂದ ಕಾಯುತ್ತಿರುವ ಹೊತ್ತು ಇದು. ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದೆ. 10ನೇ ತರಗತಿ ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ. 

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದೇ ಪ್ರಕಟವಾಗಲಿದೆ.
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದೇ ಪ್ರಕಟವಾಗಲಿದೆ.

ಬೆಂಗಳೂರು: ಬಹುನಿರೀಕ್ಷಿತ ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2024 (Karnataka SSLC Results 2024) ಅನ್ನು ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು ಇಂದು (ಮೇ 9) ಪ್ರಕಟಿಸಿದೆ. ಕೆಎಸ್‌ಇಎಬಿ 10 ನೇ ತರಗತಿಯ ರಿಸಲ್ಟ್‌ (KSEAB 10th Results) ಇಂದು (ಗುರುವಾರ) ಬೆಳಗ್ಗೆ 10.30ಕ್ಕೆ ಪ್ರಕಟವಾಗಿದೆ.

ಟ್ರೆಂಡಿಂಗ್​ ಸುದ್ದಿ

CET Results2024: ಕರ್ನಾಟಕ ಸಿಇಟಿ ಫಲಿತಾಂಶ ಇಂದು ಪ್ರಕಟ ಸಾಧ್ಯತೆ, ನಿಮ್ಮ ಅಂಕ ನೋಡುವುದು ಹೀಗೆ

Bangalore News: ತಮಿಳುನಾಡಿನಲ್ಲಿ ಗುಂಡು ತಗುಲಿ ಬೆಂಗಳೂರಿನ ಯೋಧ ಸಾವು

Hassan Scandal: ಗೃಹ ಇಲಾಖೆ ಬೇರೆಯವರಿಂದ ಹೈಜಾಕ್‌‌, ಪ್ರಜ್ವಲ್‌ ರೇವಣ್ಣ ಪ್ರಕರಣ ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ, ಅಶೋಕ ಆರೋಪ

Karnataka Rains: ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹೊಸದುರ್ಗ,ಚನ್ನಗಿರಿಯಲ್ಲಿ ಭಾರೀ ಮಳೆ, ನಿಮ್ಮೂರಲ್ಲಿ ಎಷ್ಟು ಮಳೆಯಾಗಿದೆ ?

ಕರ್ನಾಟಕ ಎಸ್‌ಎಸ್‌ಎಲ್‌ಸಿ (10 ನೇ ತರಗತಿ) ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಪ್ರಥಮ ಭಾಷೆಯ ಪತ್ರಿಕೆ, ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತದೊಂದಿಗೆ ಪ್ರಾರಂಭವಾಯಿತು. ಏಪ್ರಿಲ್ 8 ರಂದು ಜೆಟಿಎಸ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳು ನಡೆದವು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ಅನ್ನು ಮಾರ್ಚ್ - ಏಪ್ರಿಲ್‌ನಲ್ಲಿ ನಡೆಸಲಾಯಿತು. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಈಗಾಗಲೇ ಆಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ರ ಫಲಿತಾಂಶವನ್ನು ಮೇ 9 ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಲಾಗುವುದು ಎಂದು ಮಂಡಳಿಯ ಅಧ್ಯಕ್ಷೆ ಎನ್ ಮಂಜುಶ್ರೀ ತಿಳಿಸಿದ್ದಾರೆ. ಸುದ್ದಿಗೋಷ್ಠಿ ಮುಗಿದ ಬಳಿಕ ಎಲ್ಲ ಶಾಲೆಗಳಲ್ಲೂ ಈ ಫಲಿತಾಂಶ ಪ್ರಕಟವಾಗುತ್ತದೆ. ಅಧಿಕೃತ ವೆಬ್‌ಸೈಟ್‌ಗಳಲ್ಲೂ ಫಲಿತಾಂಶ ಪರಿಶೀಲಿಸಬಹುದು.

ಕರ್ನಾಟಕ ಎಸ್ಎಸ್‌ಎಲ್‌ಸಿ ಫಲಿತಾಂಶ 2024; 10ನೇ ತರಗತಿ ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್

ರಾಜ್ಯದಾದ್ಯಂತ 10 ನೇ ತರಗತಿಯ ಬೋರ್ಡ್ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳು ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಅಥವಾ kseab.karnataka.gov.in ನಲ್ಲಿ ನೇರ ಲಿಂಕ್ ಮೂಲಕವೂ ಪರಿಶೀಲಿಸಬಹುದು.

ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ “ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು ಮೇ 9ರಂದು ಬೆಳಗ್ಗೆ 10.30ಕ್ಕೆ ಸುದ್ದಿಗೋಷ್ಠಿ ನಡೆಸಿ 10ನೇ ತರಗತಿ ಫಲಿತಾಂಶ ಪ್ರಕಟಿಸಲಿದೆ. ಕರ್ನಾಟಕ ಎಸ್‌ ಎಸ್ ಎಲ್‌ ಸಿ ಫಲಿತಾಂಶಗಳನ್ನು ಬೆಳಗ್ಗೆ 10.30ರ ಬಳಿಕ "karresults.nic.in" ನಲ್ಲಿ ವೀಕ್ಷಿಸಬಹುದು" ಎಂದಿದೆ.

ಕರ್ನಾಟಕ ಎಸ್ಎಸ್‌ಎಲ್‌ಸಿ ಫಲಿತಾಂಶ 2024 ಪ್ರಕಟವಾಗುವ ಸರ್ಕಾರಿ ವೆಬ್‌ಸೈಟ್‌ಗಳಿವು

sslc.karnataka.gov.in

karresults.nic.in.

kseab.karnataka.gov.in

ಕರ್ನಾಟಕ ಎಸ್ಎಸ್‌ಎಲ್‌ಸಿ ಫಲಿತಾಂಶ 2024; 10ನೇ ತರಗತಿ ರಿಸಲ್ಟ್ ನೋಡುವುದು ಹೀಗೆ

1) ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ಫಲಿತಾಂಶ ವೆಬ್‌ಸೈಟ್‌ karresults.nic.in ಗೆ ಹೋಗುವುದು

2) ಮುಖಪುಟದಲ್ಲಿರುವ “2024 SSLC Main Examination Result” ಕ್ಲಿಕ್ ಮಾಡಬೇಕು

3) ನಂತರ ನಿಮ್ಮ ಎಸ್‌ಎಸ್‌ಎಲ್‌ಸಿ ರೋಲ್‌ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸಬೇಕು

4) ಆಗ ಸಿಸ್ಟಮ್ (ಡೆಸ್ಕ್‌ಟಾಪ್/ಲ್ಯಾಪ್‌ಟಾಪ್‌/ಮೊಬೈಲ್‌) ಪರದೆಯ ಮೇಲೆ ನಿಮ್ಮ ಎಸ್ಎಸ್‌ಎಲ್‌ಸಿ ಫಲಿತಾಂಶ 2024 ಅಥವಾ 10ನೇ ತರಗತಿಯ ಫಲಿತಾಂಶ ಕಾಣಿಸಿಕೊಳ್ಳಲಿದೆ. ಅದನ್ನು ಪರಿಶೀಲಿಸಿ.

5) ನಿಮ್ಮ ಎಸ್ಎಸ್‌ಎಲ್‌ಸಿ ಫಲಿತಾಂಶ 2024 ಅಥವಾ 10ನೇ ತರಗತಿಯ ಫಲಿತಾಂಶದ ಪುಟವನ್ನು ಡೌನ್‌ಲೋಡ್ ಮಾಡಿ, ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್‌ ತೆಗೆದು ಇರಿಸಿಕೊಳ್ಳಿ.

ಕರ್ನಾಟಕದಲ್ಲಿ ಈ ಸಲ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರು. ಅಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕರ್ನಾಟಕದ 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ