logo
ಕನ್ನಡ ಸುದ್ದಿ  /  ಕರ್ನಾಟಕ  /  Ias Coaching: ಐಎಎಸ್‌, ಐಪಿಎಸ್‌ ಕನಸು ನನಸು ಮಾಡೋಕೆ ಬಡತನ ಇನ್ನು ಅಡ್ಡಿಯಾಗಲ್ಲ; ಕರ್ನಾಟಕದ ಸರ್ಕಾರದ ಹೊಸ ಉಪಕ್ರಮ ಇದು

IAS Coaching: ಐಎಎಸ್‌, ಐಪಿಎಸ್‌ ಕನಸು ನನಸು ಮಾಡೋಕೆ ಬಡತನ ಇನ್ನು ಅಡ್ಡಿಯಾಗಲ್ಲ; ಕರ್ನಾಟಕದ ಸರ್ಕಾರದ ಹೊಸ ಉಪಕ್ರಮ ಇದು

HT Kannada Desk HT Kannada

Jul 21, 2023 07:28 PM IST

ಸಚಿವ ಶಿವರಾಜ ತಂಗಡಗಿ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಶುಕ್ರವಾರ ವಿವಿಧ ನಿಗಮದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಸಚಿವರು ಸೂಚನೆ ನೀಡಿದರು.

  • IAS Coaching: ಐಎಎಸ್‌, ಐಪಿಎಸ್‌ ಮಾಡುವುದು ಬಹುತೇಕರ ಕನಸು. ಹಿಂದುಳಿದ ವರ್ಗದವರಿಗೆ ಈ ಕನಸು ನನಸಾಗಿಸುವುದಕ್ಕೆ ಬಡತನ ಇನ್ನು ಒಂದು ಅಡ್ಡಿ ಆಗಿರಲ್ಲ. ಕರ್ನಾಟಕ ಸರ್ಕಾರ ಇದಕ್ಕಾಗಿ ಹೊಸ ಉಪಕ್ರಮ ತೆಗೆದುಕೊಂಡಿದ್ದು, ಅದರ ವಿವರ ಹೀಗಿದೆ. 

ಸಚಿವ ಶಿವರಾಜ ತಂಗಡಗಿ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಶುಕ್ರವಾರ ವಿವಿಧ ನಿಗಮದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಸಚಿವರು ಸೂಚನೆ ನೀಡಿದರು.
ಸಚಿವ ಶಿವರಾಜ ತಂಗಡಗಿ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಶುಕ್ರವಾರ ವಿವಿಧ ನಿಗಮದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಸಚಿವರು ಸೂಚನೆ ನೀಡಿದರು.

ಬೆಂಗಳೂರು: ಯುಪಿಎಸ್‌ಸಿ ಪರೀಕ್ಷೆ (UPSC Exam) ಬರೆದು ಐಎಎಸ್‌, ಐಪಿಎಸ್‌ (IAS, IPS) ಅಧಿಕಾರಿಗಳಾಗಬೇಕು. ಇದ್ಕಕಾಗಿ ಐಎಎಸ್‌ ಕೋಚಿಂಗ್‌ (IAS Coaching) ಪಡೆಯಬೇಕು ಎಂಬ ಕನಸು ಕಾಣುತ್ತಿರುವ ಹಿಂದುಳಿದ ವರ್ಗದವರಿಗೆ ಒಂದು ಗುಡ್‌ ನ್ಯೂಸ್‌ ಇದೆ. ಈ ಕನಸು ನನಸು ಮಾಡುವುದಕ್ಕೆ ಇನ್ನು ಬಡತನ ಒಂದು ಅಡ್ಡಿಯಾಗಿ ಕಾಡುವುದಿಲ್ಲ. ಅಂತಹ ಉಪಕ್ರಮ ಒಂದನ್ನು ಕರ್ನಾಟಕ ಸರ್ಕಾರ (Karnataka Govt) ಜಾರಿಗೊಳಿಸಲು ಮುಂದಾಗಿದೆ.

ಟ್ರೆಂಡಿಂಗ್​ ಸುದ್ದಿ

ಕರ್ನಾಟಕ ಹವಾಮಾನ ಮೇ 19; ರಾಜ್ಯದಲ್ಲಿ ಮಳೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Bus Accident: ಫ್ಲೈ ಓವರ್‌ಗೆ ಹಾರಿದ ಸಾರಿಗೆ ಬಸ್‌ ಪ್ರಯಾಣಿಕರು ಪಾರಾಗಿದ್ದೇ ರೋಚಕ; ನೆಲಮಂಗಲದಲ್ಲಿ ಸಿನಿಮಾ ಸ್ಟಂಟ್ ನಂತೆ ಸಂಭವಿಸಿದ ಅಪಘಾತ

Hassan Scandal: 100 ಕೋಟಿ ರೂ. ಆಫರ್ ವಿಚಾರವನ್ನು ಎಸ್‌ಐಟಿ ನೋಡಿಕೊಳ್ಳುತ್ತೆ, ದೇವರಾಜೇಗೌಡ ಜೈಲಲ್ಲೇ ಇರ್ತಾರೆ: ಗೃಹ ಸಚಿವ

Hassan Scandal : ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ

ಕೇಂದ್ರ ಲೋಕಾಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಗೆ ಸಿದ್ಧತೆ ನಡೆಸುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಬೆಂಗಳೂರು ಹಾಗೂ ದೆಹಲಿಯಲ್ಲಿ ಉಚಿತ ವಸತಿ ವ್ಯವಸ್ಥೆ ಕಲ್ಪಿಸುವ ಬಗ್ಗೆ ಅಗತ್ಯ ಕ್ರಮ ತೆಗೆದುಕೊ‍ಳ್ಳಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ‌ ನೀಡಿದ್ದಾರೆ.

ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಶುಕ್ರವಾರ ವಿವಿಧ ನಿಗಮದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಸಚಿವರು ಸೂಚನೆ ನೀಡಿದರು.

ಯುಪಿಎಸ್ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ‌‌ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ದೆಹಲಿ ಮತ್ತು ಬೆಂಗಳೂರಿನಲ್ಲಿ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸುವಂತೆ ಮನವಿ‌ ಮಾಡಿ ಬೇಡಿಕೆ ಸಲ್ಲಿಸಿದ್ದಾರೆ. ಗ್ರಾಮೀಣ ಭಾಗದ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಸಂಬಂಧ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ, ವರದಿ ಸಿದ್ಧಪಡಿಸುವಂತೆ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.‌

ಇಲಾಖೆಗೆ ನೀಡಿರುವ ಅನುದಾನ ಬಳಸಿಕೊಂಡು ಶೇ.100 ಗುರಿ ಸಾಧಿಸಿ

ಬಜೆಟ್ ನಲ್ಲಿ ಇಲಾಖೆಗೆ ನೀಡಲಾಗಿರುವ ಹಣವನ್ನು ಸೂಕ್ತವಾಗಿ ಬಳಸಿಕೊಳ್ಳಬೇಕು. ಮಾರ್ಚ್ ವೇಳೆಗೆ ಶೇ.100ರಷ್ಟು ಗುರಿ ಸಾಧಿಸಬೇಕು. ಮಾರ್ಚ್ ತಿಂಗಳವರೆಗೆ ಹಣ ಉಳಿಸಿಕೊಂಡು ತರಾತುರಿಯಲ್ಲಿ ಹಣ ವ್ಯಯಿಸುವ ಕೆಲಸ ಆಗಬಾರದು. ಅವಧಿಗೂ ಮುನ್ನ ಬಳಕೆ ಮಾಡಿದರೆ ಮುಖ್ಯಮಂತ್ರಿಗಳ ಬಳಿ ಹೆಚ್ಚಿನ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಪ್ರಸ್ತುತ ಕ್ಷೇತ್ರದಲ್ಲಿ ಆಯಾ ಶಾಸಕರು ಕಳುಹಿಸುತ್ತಿರುವುದು ತಡವಾಗುತ್ತಿದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.‌

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಕೂಡಲೇ ಶಾಸಕರಿಗೆ ನವೆಂಬರ್ ಒಳಗೆ ಯೋಜನೆಯ ಫಲಾನುಭವಿಗಳ ಆಯ್ಕೆ ಪಟ್ಟಿ ಸಿದ್ಧಪಡಿಸಿ‌ ಕಳುಹಿಸುವಂತೆ ಪತ್ರ ಬರೆಯಿರಿ ಎಂದು ಸಲಹೆ ನೀಡಿದರು.

ಇಲಾಖೆಯಲ್ಲಿನ ಶೈಕ್ಷಣಿಕ ಸಾಲ, ಸ್ವಾವಲಂಬಿ ಸಾಲ, ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಪ್ರತಿಯೊಂದು ಯೋಜನೆಗಳು ಜನರಿಗೆ ಪರಿಣಾಮಕಾರಿಯಾಗಿ ತಲುಪಬೇಕು. ಇಲಾಖೆ ವ್ಯಾಪ್ತಿಗೆ ಬರುವ ನಿಗಮಗಳ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯೇ ಇಲ್ಲ.

ಈ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಇಲಾಖೆಯಲ್ಲಿನ ಯೋಜನೆಗಳ ಬಗ್ಗೆ ರಾಜ್ಯದ ಜನರಿಗೆ ಮಾಹಿತಿ ಒದಗಿಸಬೇಕು. ಈ ಬಗ್ಗೆ ಅಧಿಕಾರಿಗಳು ಗಮನವಹಿಸಬೇಕು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಇಲಾಖೆ ಕಾರ್ಯದರ್ಶಿ ತುಳಸಿ ಮದಿನೇನಿ, ಒಕ್ಕಲಿಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಮುರಳೀಧರ್, ಲಿಂಗಾಯತ ಅಭಿವೃದ್ಧಿ ನಿಗಮದ ಅಮರೇಗೌಡ ಮಾಲಿ ಪಾಟೀಲ್, ಮಧುಸೂದನ್ ರೆಡ್ಡಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ