logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Elections: ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್‌ 13ಕ್ಕೆ ಉಪ ಚುನಾವಣೆ ಘೋಷಣೆ

Karnataka Elections: ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್‌ 13ಕ್ಕೆ ಉಪ ಚುನಾವಣೆ ಘೋಷಣೆ

Umesha Bhatta P H HT Kannada

Oct 15, 2024 05:02 PM IST

google News

ಕರ್ನಾಟಕ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಪ್ರಕಟವಾಗಿದೆ.

    • ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವ್‌, ಸಂಡೂರು ವಿಧಾನಸಭೆ ಚುನಾವಣೆಗೆ ಮತದಾನ ನವೆಂಬರ್‌ 13ರಂದು ನಡೆಯಲಿದ್ದು. ನವೆಂಬರ್‌ 23ರಂದು ಮತ ಎಣಿಕೆ ನಡೆಯಲಿದೆ. 
ಕರ್ನಾಟಕ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಪ್ರಕಟವಾಗಿದೆ.
ಕರ್ನಾಟಕ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಪ್ರಕಟವಾಗಿದೆ.

ದೆಹಲಿ: ಕರ್ನಾಟಕದಲ್ಲಿ ಮಾಜಿ ಸಿಎಂಗಳಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ, ಶಿಗ್ಗಾಂವ್‌ ಸಹಿತ ಮೂರು ವಿಧಾನಸಭೆ ಕ್ಷೇತ್ರಗಳಿಗೂ ಕರ್ನಾಟಕದಲ್ಲಿ ಮತದಾನದ ದಿನಾಂಕವನ್ನು ಕೇಂದ್ರ ಚುನಾವಣೆ ಆಯೋಗವು ಪ್ರಕಟಿಸಿದೆ. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲೂ ಮಾಜಿ ಸಚಿವ ಇ.ತುಕಾರಾಂ ರಾಜೀನಾಮೆ ತೆರವಾದ ಸ್ಥಾನಕ್ಕೆ ಮರು ಚುನಾವಣೆ ನವೆಂಬರ್‌ 13ಕ್ಕೆ ನಡೆಯಲಿದೆ. ನವೆಂಬರ್‌ 23ರಂದು ಮತ ಎಣಿಕೆ ನಡೆಯಲಿದೆ. ದೇಶದಲ್ಲಿ 48 ವಿಧಾನಸಭೆ ಹಾಗೂ ಎರಡು ಲೋಕಸಭಾ ಸ್ಥಾನಗಳಿಗೆ ಮರು ಚುನಾವಣೆ ಮತದಾನ ದಿನಾಂಕ ಘೋಷಣೆಯಾಗಿದೆ. ಇದರಲ್ಲಿ ಕರ್ನಾಟಕದ ಮೂರು ಕ್ಷೇತ್ರಗಳೂ ಇವೆ. ಕೇಂದ್ರ ಚುನಾವಣೆ ಆಯೋಗದ ಆಯುಕ್ತರಾದ ರಾಜೀವ್‌ ಕುಮಾರ್‌ ಅವರು ಚುನಾವಣೆ ವೇಳಾ ಪಟ್ಟಿಯನ್ನು ಮಂಗಳವಾರ ಘೋಷಿಸಿದರು.

ಕಳೆದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಇ.ತುಕಾರಾಂ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಕುಮಾರಸ್ವಾಮಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಗೆದ್ದು ಕೇಂದ್ರದಲ್ಲಿ ಮಂತ್ರಿ ಆಗಿದ್ದಾರೆ.

ಶಿಗ್ಗಾಂವ್‌ ಕ್ಷೇತ್ರದಲ್ಲಿ ರಾಜೀನಾಮೆ ನೀಡಿರುವ ಬಸವರಾಜ ಬೊಮ್ಮಾಯಿ ಹಾವೇರಿ- ಗದಗ ಲೋಕಸಭಾ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಸಂಡೂರಿನಲ್ಲಿ ರಾಜೀನಾಮೆ ನೀಡಿರುವ ಇ. ತುಕಾರಾಂ ಅವರು ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಈ ಕಾರಣದಿಂದ ಮೂರು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಜಾ.ದಳ, ಬಿಜೆಪಿ ಹಾಗೂ ಆಡಳಿತಾರೂಢ ಕಾಂಗ್ರೆಸ್‌ ತಲಾ ಒಂದೊಂದು ಕ್ಷೇತ್ರವನ್ನು ಹೊಂದಿದ್ದು. ಮೂರೂ ಪಕ್ಷಗಳಿಗೆ ಚುನಾವಣೆ ಪ್ರತಿಷ್ಠೆಎನ್ನಿಸಿದೆ.

ಬಳ್ಳಾರಿ, ಹಾವೇರಿ ಹಾಗೂ ರಾಮನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಚುನಾವಣೆಯ ಅಧಿಕಾರಿಗಳಾಗಿದ್ದು, ಆಯಾ ಭಾಗದ ಉಪವಿಭಾಗಾಧಿಕಾರಿ ಚುನಾವಣಾಧಿಕಾರಿಯಾಗಿರಲಿದ್ದಾರೆ.

ಈಗಾಗಲೇ ಮೂರೂ ಕ್ಷೇತ್ರಗಳಲ್ಲೂ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು. ಗುರುವಾರದಿಂದಲೇ ಚುನಾವಣೆ ಪ್ರಕ್ರಿಯೆಗಳು ಶುರುವಾಗಲಿವೆ.

ಚುನಾವಣೆ ಪ್ರಕಟವಾಗಿರುವುದರಿಂದ ಕರ್ನಾಟಕದಲ್ಲಿ ಒಂದು ತಿಂಗಳ ಕಾಲ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ತುರ್ತು ಹಾಗೂ ಪ್ರಕೃತಿವಿಕೋಪದಂತಹ ಚಟುವಟಿಕೆಗೆ ಯಾವುದೇ ಅಡ್ಡಿಯಿಲ್ಲ. ಆದರೆ ಹೊಸ ಘೋಷಣೆ ಮಾಡುವ ಹಾಗಿಲ್ಲ.

ವಯನಾಡು ಲೋಕಸಭೆ ಕ್ಷೇತ್ರಕ್ಕೂ ಚುನಾವಣೆ ಘೋಷಣೆ

ಇದೇ ವೇಳೆ ಕರ್ನಾಟಕದ ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗೆ ಹೊಂದಿಕೊಂಡಂತೆ ಇರುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಲಿದೆ. ರಾಹುಲ್‌ ಗಾಂಧಿ ಸ್ಪರ್ಧಿಸಿ ಗೆದ್ದ ನಂತರ ರಾಜೀನಾಮೆ ನೀಡಿದ್ದರಿಂದ ಇಲ್ಲಿ ಚುನಾವಣೆ ನಡೆಯಲಿದೆ. ಕಳೆದ ಅವಧಿಯಲ್ಲಿ ರಾಹುಲ್‌ ಗಾಂಧಿ ಇಲ್ಲಿ ಗೆದ್ದಿದ್ದರು. ಈ ಬಾರಿ ಎರಡು ಕ್ಷೇತ್ರದಲ್ಲಿ ಗೆದ್ದರೂ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ.

ವೇಳಾಪಟ್ಟಿ ಹೀಗಿದೆ

ಚುನಾವಣೆ ನೀತಿ ಸಂಹಿತೆ ಜಾರಿ ಅಕ್ಟೋಬರ್‌ 15

ನಾಮಪತ್ರ ಸಲ್ಲಿಕೆ ಆರಂಭ ಅಕ್ಟೋಬರ್‌ 18

ನಾಮಪತ್ರ ಸಲ್ಲಿಕೆಗೆ ಕಡೆ ದಿನ ಅಕ್ಟೋಬರ್‌ 25

ನಾಮ ಪತ್ರ ಪರಿಶೀಲನೆ ಅಕ್ಟೋಬರ್‌ 26 ಹಾಗೂ 27, ಅಕ್ಟೋಬರ್‌ 28

ನಾಮಪತ್ರ ವಾಪಾಸ್‌ ಅಕ್ಟೋಬರ್‌ 30

ಮತ ಚಲಾವಣೆ ನವೆಂಬರ್‌ 13

ಮತ ಎಣಿಕೆ ನವೆಂಬರ್‌ 23

ಕರ್ನಾಟಕ ಸಹಿತ ವಿವಿಧ ರಾಜ್ಯಗಳ ುಪ ಚುನಾವಣೆ ವಿವರ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ