logo
ಕನ್ನಡ ಸುದ್ದಿ  /  ಕರ್ನಾಟಕ  /  Mlc Elections: ಕರ್ನಾಟಕ ವಿಧಾನಪರಿಷತ್‌ ಚುನಾವಣೆ: ಕಾಂಗ್ರೆಸ್‌ 5 ಅಭ್ಯರ್ಥಿಗಳ ಪಟ್ಟಿ ಪ್ರಕಟ

MLC Elections: ಕರ್ನಾಟಕ ವಿಧಾನಪರಿಷತ್‌ ಚುನಾವಣೆ: ಕಾಂಗ್ರೆಸ್‌ 5 ಅಭ್ಯರ್ಥಿಗಳ ಪಟ್ಟಿ ಪ್ರಕಟ

HT Kannada Desk HT Kannada

Oct 29, 2023 12:02 PM IST

google News

ಕರ್ನಾಟಕ ವಿಧಾನಪರಿಷತ್‌ನ ಚುನಾವಣೆಗೆ ಕಾಂಗ್ರೆಸ್‌ ಐವರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

    • Karnataka MLC elections ಕರ್ನಾಟಕದಲ್ಲಿ ಆರು ಕ್ಷೇತ್ರಗಳ ಪದವೀಧರರು( Graduates) ಹಾಗೂ ಶಿಕ್ಷಕರ( Teachers) ಕ್ಷೇತ್ರಕ್ಕೆ ನಡೆಯುತ್ತಿರುವ ವಿಧಾನಪರಿಷತ್‌ ಚುನಾವಣೆಗೆ ಕಾಂಗ್ರೆಸ್‌( Congress) ಐದು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ.
ಕರ್ನಾಟಕ ವಿಧಾನಪರಿಷತ್‌ನ ಚುನಾವಣೆಗೆ ಕಾಂಗ್ರೆಸ್‌ ಐವರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ಕರ್ನಾಟಕ ವಿಧಾನಪರಿಷತ್‌ನ ಚುನಾವಣೆಗೆ ಕಾಂಗ್ರೆಸ್‌ ಐವರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

ಬೆಂಗಳೂರು: ಮುಂದಿನ ಜೂನ್‌ನಲ್ಲಿ ನಡೆಯಲಿರುವ ವಿಧಾನಪರಿಷತ್‌ನ ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ವಿಧಾನ ಪರಿಷತ್‌ ಸದಸ್ಯರಾಗಿದ್ದ ಪುಟ್ಟಣ್ಣ ಅವರಿಗೆ ಅವಕಾಶ ನೀಡಲಾಗಿದೆ.

ಜೆಡಿಎಸ್‌ ನಂತರ ಬಿಜೆಪಿಯಿಂದ ಗೆದ್ದು ಕಾಂಗ್ರೆಸ್‌ನಿಂದ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದ ಎಸ್‌.ಪುಟ್ಟಣ್ಣ ಅವರಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಟಿಕಟ್‌ ನೀಡಲಾಗಿದೆ.

ತುಮಕೂರು ಕೇಂದ್ರಿತ ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ವ್ಯಾಪ್ತಿ ಯೊಂದಿರುವ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಈಗಷ್ಟೇ ಕಾಂಗ್ರೆಸ್‌ ಸೇರಿರುವ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಪತಿ ಡಿ.ಟಿ.ಶ್ರೀನಿವಾಸ್‌ಗೆ ಅವಕಾಶ ಮಾಡಿಕೊಡಲಾಗಿದೆ. ಕಳೆದ ಬಾರಿ ಅವರು ಬಿಜೆಪಿಯಿಂದ ಆಕಾಂಕ್ಷಿತರಾದರೂ ಅವಕಾಶ ನೀಡಿರಲಿಲ್ಲ. ಬಂಡಾಯವಾಗಿ ಸ್ಪರ್ಧಿಸಿ ಶ್ರೀನಿವಾಸ್‌ ವಿಧಾನಪರಿಷತ್‌ ಚುನಾವಣೆಯಲ್ಲಿ ಸೋತಿದ್ದರು. ಇಲ್ಲಿ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಹಾಲಿ ಸದಸ್ಯ.

ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು ಹಾಗೂ ದಕ್ಷಿಣ ಕನ್ನಡ ವ್ಯಾಪ್ತಿ ಹೊಂದಿರುವ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ.ಮಂಜುನಾಥ್‌ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ. ಜೆಡಿಎಸ್‌ನ ಎಸ್‌.ಎಲ್‌.ಭೋಜೇಗೌಡ ಈ ಕ್ಷೇತ್ರದ ಹಾಲಿ ಪರಿಷತ್‌ ಸದಸ್ಯ.

ಕಲಬುರಗಿ ಕೇಂದ್ರಿತ ಕಲಬುರಗಿ, ಯಾದಗಿರಿ, ಬೀದರ್‌, ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಜಿಲ್ಲೆ ಒಳಗೊಂಡ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಹಾಲಿ ಸದಸ್ಯರಾಗಿರುವ ಚಂದ್ರಶೇಖರ ಪಾಟೀಲ್‌ ಅವರಿಗೆ ಕಾಂಗ್ರೆಸ್‌ ಮತ್ತೊಮ್ಮೆ ಮಣೆ ಹಾಕಿದೆ. ಇನ್ನು ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ರಾಮೋಜಿಗೌಡ ಅವರಿಗೆ ಕಾಂಗ್ರೆಸ್‌ ಅವಕಾಶ ನೀಡಿದೆ.

ಆದರೆ ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿ ಪ್ರಕಟಿಸಿಲ್ಲ. ಜೆಡಿಎಸ್‌ನಿಂದ ಗೆದ್ದು ಈಗ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿರುವ ಹಾಲಿ ಸದಸ್ಯ ಮರಿತಿಬ್ಬೇಗೌಡ ಅವರಿಗೆ ಇಲ್ಲಿ ಟಿಕೆಟ್‌ ಘೋಷಿಸುವ ಸಾಧ್ಯತೆಯಿದೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ