logo
ಕನ್ನಡ ಸುದ್ದಿ  /  ಕರ್ನಾಟಕ  /  Cm Basavaraj Bommai On Rahul Gandhi Letter: ಆನೆಗೆ ಗಾಯ; ರಾಹುಲ್ ಗಾಂಧಿ ಪತ್ರಕ್ಕೆ ಸ್ಪಂದಿಸಲಾಗುವುದು: ಸಿಎಂ ಬೊಮ್ಮಾಯಿ

CM basavaraj Bommai on Rahul Gandhi letter: ಆನೆಗೆ ಗಾಯ; ರಾಹುಲ್ ಗಾಂಧಿ ಪತ್ರಕ್ಕೆ ಸ್ಪಂದಿಸಲಾಗುವುದು: ಸಿಎಂ ಬೊಮ್ಮಾಯಿ

HT Kannada Desk HT Kannada

Oct 06, 2022 12:41 PM IST

ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಿದ್ದರು.

  • ನಾಗರಹೊಳೆ ಅರಣ್ಯದಲ್ಲಿ ಆನೆ ಮತ್ತು ಅದರ ಮರಿಗೆ ಬಾಲ ಮತ್ತು ಸೊಂಡಿಳಲ್ಲಿ ಗಾಯವಾಗಿರುವ ಬಗ್ಗೆ ರಾಹುಲ್ ಗಾಂಧಿ ಅವರು ಪತ್ರ ಬರೆದಿದ್ದು, ಇದಕ್ಕೆ ಸ್ಪಂದಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಿದ್ದರು.
ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಿದ್ದರು.

ಬೆಂಗಳೂರು: ನಾಗರಹೊಳೆ ಅರಣ್ಯದಲ್ಲಿ ಆನೆ ಮತ್ತು ಅದರ ಮರಿಗೆ ಬಾಲ ಮತ್ತು ಸೊಂಡಿಳಲ್ಲಿ ಗಾಯವಾಗಿರುವ ಬಗ್ಗೆ ರಾಹುಲ್ ಗಾಂಧಿ ಅವರು ಪತ್ರ ಬರೆದಿದ್ದು, ಇದಕ್ಕೆ ಸ್ಪಂದಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ನಾಗರಹೊಳೆ ಅರಣ್ಯಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ ಸಂದರ್ಭದಲ್ಲಿ ಆನೆ ಮತ್ತು ಅದರ ಮರಿಗೆ ಬಾಲ ಮತ್ತು ಸೊಂಡಿಳಲ್ಲಿ ಗಾಯವಾಗಿರುವುದನ್ನು ಗಮನಿಸಿದ್ದು, ಇನ್ನು ಅರ್ಧ ಗಂಟೆಯೊಳಗೆ ಮಾಹಿತಿ ಪಡೆದು ಹಿರಿಯ ಅಧಿಕಾರಿಗಳ ಬಳಿ ಮಾತನಾಡಿ ಆನೆಗಳಿಗೆ ಏನೆಲ್ಲಾ ಚಿಕಿತ್ಸೆ ನೀಡಬಹುದು ಎಂದು ಪರಿಶೀಲನೆ ಮಾಡಲಾಗುವುದು. ಅವರು ಗಮನಕ್ಕೆ ತಂದಿರುವ ವಿಷಯದ ಬಗ್ಗೆ ಸ್ಪಂದಿಸಲಾಗುವುದು ಹಾಗೂ ಮಾನವೀಯ ದೃಷ್ಟಿಯಿಂದ ಅದರ ಅಗತ್ಯವೂ ಇದೆ ಎಂದು ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆ ಯಾವುದೇ ಪರಿಣಾಮ ಬೀರಲ್ಲ:

ಭಾರತ್ ಜೋಡೋ ಅಭಿಯಾನದಲ್ಲಿ ಸೋನಿಯಾ ಗಾಂಧಿ ಪಾಲ್ಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಸಹಜವಾಗಿ ಎಲ್ಲಾ ಪಕ್ಷದ ಮುಖ್ಯ ಸ್ಥರು ತಮ್ಮ ಪಕ್ಷಕ್ಕೆ ಕೆಲಸ ಮಾಡುತ್ತಾರೆ. ಸೋನಿಯಾ ಗಾಂಧಿ ಅರ್ಧ ಕಿ.ಮೀ ನಡೆದು ವಾಪಸ್ಸಾಗಿದ್ದಾರೆ. ಇದ್ಯಾವುದೂ ಪರಿಣಾಮವನ್ನು ಬೀರುವುದಿಲ್ಲ ಎಂದರು. ಪ್ರಿಯಾಂಕಾ ಗಾಂಧಿ ಅಭಿಯಾನದಲ್ಲಿ ಪಾಲ್ಗೊಳ್ಳುವುದಕ್ಕೂ ನಮಗೂ ಸಂಬಂಧ ಇಲ್ಲ, ಇದರಿಂದ ಯಾವ ಪರಿಣಾಮವೂ ಆಗುವುದಿಲ್ಲ ಎಂದರು.

ಆರು ರ್ಯಾಲಿಗಳು

ಭಾರತ್ ಜೋಡೋ ಅಭಿಯಾನಕ್ಕೂ ಮುನ್ನವೇ ತೀರ್ಮಾನಿಸಿದಂತೆ ಬಿಜೆಪಿ ಆರು ರ್ಯಾಲಿಗಳನ್ನು ಕೈಗೊಳ್ಳಲಿದೆ. ಮಧ್ಯೆ ಅಧಿವೇಶನ ಹಾಗೂ ದಸರಾ ಇದ್ದುದರಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಜಂಟಿ ಪ್ರವಾಸವನ್ನು ಪ್ರಾರಂಭ ಮಾಡಲಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

ಪೊಲೀಸ್ ಹಲ್ಲೆ ಕುರಿತು ಪರಿಶೀಲನೆ

ಮಂಡ್ಯದಲ್ಲಿ ಪೊಲೀಸ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿ ಯಾರ ತಪ್ಪಿದೆ ಎಂದು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಭಾರತ್​ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಅವರು ತಮ್ಮ ತಾಯಿ ಮತ್ತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ನಿನ್ನೆ ವಿಶ್ರಾಂತಿಯಲ್ಲಿದ್ದರು.

ಇದೇ ವೇಳೆ ಅವರು ನಾಗರಹೊಳೆ ಮೀಸಲು ಪ್ರದೇಶದಲ್ಲಿ ಸಫಾರಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರು ಗಾಯಗೊಂಡ ಆನೆ ಮರಿಯೊಂದು ತನ್ನ ತಾಯಿ ಆನೆ ಜೊತೆ ಇರುವುದನ್ನು ನೋಡಿದ್ದಾರೆ.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ತೀವ್ರವಾಗಿ ಗಾಯಗೊಂಡಿರುವ ಆನೆ ಮರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದರು.

ನಾನು ಮತ್ತು ಕಾಂಗ್ರೆಸ್ ಅಧ್ಯಕ್ಷರು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಕೆಲಕಾಲ ಭೇಟಿ ನೀಡಿದ್ದೆವು. ಅಲ್ಲಿ ಗಾಯಗೊಂಡಿರುವ ಆನೆ ಮರಿಯೊಂದು ತನ್ನ ತಾಯಿಯೊಂದಿಗೆ ಇರುವ ಕರುಣಾಜನಕ ದೃಶ್ಯ ಕಂಡಿದ್ದೇವೆ. ಪುಟ್ಟ ಮರಿಯ ಬಾಲ ಮತ್ತು ಸೊಂಡಿಲು ಭಾಗದಲ್ಲಿ ತೀವ್ರತರದ ಗಾಯಗಳಾಗಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದೆ' ಎಂದು ರಾಹುಲ್ ತಿಳಿಸಿದ್ದರು.

ರಾಹುಲ್ ಗಾಂಧಿ ಪತ್ರ ಬರೆದ ಒಂದೇ ದಿನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದಾರೆ. ರಾಹುಲ್ ಗಾಂಧಿ ಅವರು ಪತ್ರ ಬರೆದಿದ್ದು, ಇದಕ್ಕೆ ಸ್ಪಂದಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇದಕ್ಕೂ ಮುನ್ನ ಸಿಎಂ ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿ ಪೊಲೀಸ್ ಉಪ ಆಯುಕ್ತರ ಕಚೇರಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಹೆಚ್ಚಿನ ಸುದ್ದಿಗಳಿಗೆ ನಮ್ಮನ್ನು ಫೇಸ್‌ಬುಕ್‌ ಮತ್ತು ಟ್ವಿಟರ್‌ ನಲ್ಲಿ ಫಾಲೋಮಾಡಿ.

    ಹಂಚಿಕೊಳ್ಳಲು ಲೇಖನಗಳು