logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಪೊಲೀಸ್ ನೇಮಕಾತಿ 2022; 3,064 ಸಶಸ್ತ್ರ ಕಾನ್ಸ್‌ಟೇಬಲ್ ನೇಮಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ಪೊಲೀಸ್ ನೇಮಕಾತಿ 2022; 3,064 ಸಶಸ್ತ್ರ ಕಾನ್ಸ್‌ಟೇಬಲ್ ನೇಮಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

Raghavendra M Y HT Kannada

Jan 26, 2024 10:53 AM IST

google News

ಕರ್ನಾಟಕ ಪೊಲೀಸ್ ನೇಮಕಾತಿ 2022ರ ಸಶಸ್ತ್ರ ಕಾನ್ಸ್‌ಟೇಬಲ್‌ಗಳ ನೇಮಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯಾಗಿದೆ.

  • ಕರ್ನಾಟಕ ಸಶಸ್ತ್ರ ಪೊಲೀಸರ 3,064 ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯಾಗಿದೆ. ಹಾಲ್‌ ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿಂದೆ ಲಿಂಕ್. 

ಕರ್ನಾಟಕ ಪೊಲೀಸ್ ನೇಮಕಾತಿ 2022ರ ಸಶಸ್ತ್ರ ಕಾನ್ಸ್‌ಟೇಬಲ್‌ಗಳ ನೇಮಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯಾಗಿದೆ.
ಕರ್ನಾಟಕ ಪೊಲೀಸ್ ನೇಮಕಾತಿ 2022ರ ಸಶಸ್ತ್ರ ಕಾನ್ಸ್‌ಟೇಬಲ್‌ಗಳ ನೇಮಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯಾಗಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್‌ಪಿ) ಇಲಾಖೆಯ ಕರ್ನಾಟಕ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ನೇಕಾಮತಿ-2022 ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. 3,064 ಹುದ್ದೆಗಳಿಗೆ 2024ರ ಜನವರಿ 28ರ ಭಾನುವಾರ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳು ರಾಜ್ಯ ಪೊಲೀಸ್ ಅಧಿಕೃತ ವೆಬ್‌ಸೈಟ್ ksp-recruitmen.in ಗೆ ಭೇಟಿ ನೀಡಿ ಹಾಲ್‌ ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವ ವಿಧಾನ ಹೀಗಿದೆ

ಹಂತ 1 - ಕರ್ನಾಟಕ ಪೊಲೀಸ್ ಅಧಿಕೃತ ವೆಬ್‌ಸೈಟ್ ksp-recruitmen.in ಗೆ ಭೇಟಿ ನೀಡಿ

ಹಂತ 2 - ಮುಖಪುಟದಲ್ಲಿ ಕಾಣಿಸುವ ಕರ್ನಾಟಕ ಪೊಲೀಸ್ ನೇಮಕಾತಿ 2022 ಲಿಂಕ್ ಮೇಲೆ ಕ್ಲಿಕ್ ಮಾಡಿ

ಹಂತ 3 - ನಿಮ್ಮ ಲಾಗಿನ್ ಐಡಿ ನಮೂದಿಸಿ ಪ್ರವೇಶ ಪತ್ರ ಪಡೆಯುವ ಮುಖಪುಟ ತೆರೆಯುತ್ತದೆ

ಹಂತ 4 - ಪ್ರವೇಶ ಪತ್ರ ಹೊಸ ವಿಂಡೋದಲ್ಲಿ ಕಾಣಿಸುತ್ತದೆ

ಹಂತ 5 - ಮುಂದಿನ ಪ್ರಕ್ರಿಯೆಗಾಗಿ ನಿಮ್ಮ ಹಾಲ್‌ ಟಿಕೆಟ್‌ ಅನ್ನು ಡೌನ್‌ಲೋಡ್ ಮಾಡಿ ಇಟ್ಟುಕೊಳ್ಳಿ

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡ ಬಳಿಕ ಅದರಲ್ಲಿರುವ ಮಾಹಿತಿ ಸರಿಯಾಗಿದೆಯೇ ಎಂಬುದನ್ನು ಮೊದಲು ಪರೀಕ್ಷಿಸಿಕೊಳ್ಳಬೇಕು. ಅಭ್ಯರ್ಥಿಯ ಹೆಸರು ಸರಿಯಾಗಿ ಇದೆಯೇ ಎಂಬದನ್ನು ಪರಿಶೀಲಿಸಿಕೊಳ್ಳಬೇಕು. ಇದರ ಜೊತೆಗೆ ಹುದ್ದೆಯ ಹೆಸರು, ಅಭ್ಯರ್ಥಿಯ ಕ್ರಮ ಸಂಖ್ಯೆ, ಅರ್ಜಿ ಸಂಕ್ಯೆ, ಹುಟ್ಟಿದ ದಿನಾಂಕ, ಪರೀಕ್ಷೆಯ ದಿನಾಂಕ, ಅಭ್ಯರ್ಥಿಯ ಭಾವಚಿತ್ರ ಸಹಿ ತಮ್ಮದೇ ಎಂಬುದನ್ನು ಖಾತ್ರಿ ಮಾಡಿಕೊಳ್ಳಬೇಕು. ಒಂದು ವೇಳೆ ಯಾವುದೇ ಭಿನ್ನಾಭಿಪ್ರಾಯಗಳು ಇದ್ದಲ್ಲಿ ತಕ್ಷಣವೇ ಪರೀಕ್ಷಾ ಪ್ರಾಧಿಕಾರವನ್ನು ಸಂಪರಿಸಬೇಕು.

ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿದಂತೆ ಅಗತ್ಯ ದಾಖಲೆಗಳನ್ನು ಪರೀಕ್ಷಾ ಕೊಠಡಿಗೆ ತರಬೇಕು. ಐಡಿ ಪುರಾವೆಗಾಗಿ ಪಾನ್ ಕಾರ್ಡ್, ಆಧಾರ್ ಕಾರ್ಡ್ ಅಥವಾ ಡ್ರೈವಿಂಗ್ ಲೈಸೆನ್ಸ್ ಸೇರಿದಂತೆ ಸರ್ಕಾರದ ಯಾವುದಾದರೊಂದು ದಾಖಲೆಗಳೊಂದಿಗೆ ಹಾಜರಾಗಬೇಕು.

ವಿವರಣಾತ್ಮಕ ಮಾದರಿಯ ಪ್ರಶ್ನೆಗಳನ್ನು ಒಳಗೊಂಡ ಮೊದಲ ಪ್ರಶ್ನೆ ಪತ್ರಿಕೆ 50 ಅಂಕಗಳನ್ನು ಹೊಂದಿದ್ದು, ಅಭ್ಯರ್ಥಿಗಳಿಗೆ 90 ನಿಮಿಷಗಳ ಕಾಲಾವಕಾಶ ಇರುತ್ತದೆ. 1ನೇ ಪ್ರಶ್ನೆ ಪತ್ರಿಕೆಯಲ್ಲಿ ಮಾನಸಿಕ ಸಾಮರ್ಥ್ಯ, ಸಾಮಾನ್ಯ ಜ್ಞಾನವನ್ನು ಕೇಂದ್ರೀಕರಿಸುತ್ತದೆ. 2ನೇ ಪೇಪರ್‌ನಲ್ಲಿ 100 ಅಂಕಗಳ ಪ್ರಶ್ನೆಗಳು ಇರಲಿದ್ದು, ಕಾಲಾವಕಾಶ ಒಂದೂವರೆ ಗಂಟೆ ಇರುತ್ತದೆ. (This copy first appeared in Hindustan Times Kannada website. To read more like this please logon to kannada.hindustantime.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ