logo
ಕನ್ನಡ ಸುದ್ದಿ  /  ಕರ್ನಾಟಕ  /  Siddaramaiah: ಮೋದಿ ಹೋದಲೆಲ್ಲಾ ಬಿಜೆಪಿ ಚುನಾವಣೆ ಸೋತಿಲ್ವಾ?: ಸಿದ್ದರಾಮಯ್ಯ ಪ್ರಶ್ನೆ!

Siddaramaiah: ಮೋದಿ ಹೋದಲೆಲ್ಲಾ ಬಿಜೆಪಿ ಚುನಾವಣೆ ಸೋತಿಲ್ವಾ?: ಸಿದ್ದರಾಮಯ್ಯ ಪ್ರಶ್ನೆ!

HT Kannada Desk HT Kannada

Sep 26, 2022 08:17 PM IST

google News

ಸಿದ್ದರಾಮಯ್ಯ (ಸಂಗ್ರಹ ಚಿತ್ರ)

    • ರಾಹುಲ್‌ ಗಾಂಧಿ ಹೋದಲೆಲ್ಲಾ ಬಿಜೆಪಿ ಜಯಗಳಿಸಿದೆ. ರಾಹುಲ್‌ ಗಾಂಧಿ ಕರ್ನಾಟಕಕ್ಕೆ ಬರುವುದರಿಂದ ರಾಜ್ಯದಲ್ಲಿಯೂ ಬಿಜೆಪಿ ಮತ್ತಷ್ಟು ಬಲಗೊಳ್ಳಲಿದೆ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ, ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ದೇಶದ ಎಲ್ಲಾ ರಾಜ್ಯಗಳಲ್ಲಿ ಪ್ರಚಾರ ಮಾಡಿದ್ದಾರೆ. ಹಾಗಂತ ಅವರು ಹೋದಲೆಲ್ಲಾ ಬಿಜೆಪಿ ಗೆದ್ದಿದಿಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಸಿದ್ದರಾಮಯ್ಯ (ಸಂಗ್ರಹ ಚಿತ್ರ) (PTI)

ಮೈಸೂರು: ರಾಹುಲ್‌ ಗಾಂಧಿ ಹೋದಲೆಲ್ಲಾ ಬಿಜೆಪಿ ಜಯಗಳಿಸಿದೆ. ರಾಹುಲ್‌ ಗಾಂಧಿ ಕರ್ನಾಟಕಕ್ಕೆ ಬರುವುದರಿಂದ ರಾಜ್ಯದಲ್ಲಿಯೂ ಬಿಜೆಪಿ ಮತ್ತಷ್ಟು ಬಲಗೊಳ್ಳಲಿದೆ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ, ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ದೇಶದ ಎಲ್ಲಾ ರಾಜ್ಯಗಳಲ್ಲಿ ಪ್ರಚಾರ ಮಾಡಿದ್ದಾರೆ, ಮುಂದೆಯೂ ಪ್ರಚಾರ ಮಾಡುತ್ತಾರೆ. ಹಾಗಂತ ಅವರು ಹೋದಲೆಲ್ಲಾ ಬಿಜೆಪಿ ಗೆದ್ದಿದಿಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಪಂಜಾಬ್‌, ತೆಲಂಗಾಣ, ಕೇರಳ, ತಮಿಳುನಾಡು, ಹೀಗೆ ಪ್ರಧಾನಿ ಮೋದಿ ಪ್ರಚಾರ ಮಾಡಿದ ಹಲವು ರಾಜ್ಯಗಳಲ್ಲಿ ಬಿಜೆಪಿ ಸೋತಿದೆ. ದೇಶ ಭಿನ್ನ ಭಿನ್ನ ಧ್ವನಿಗಳನ್ನು ಪ್ರತಿನಿಧಿಸುತ್ತದೆ ಎಂಬುದಕ್ಕೆ ಇದು ಸಾಕ್ಷಿ. ಇದುವೇ ಪ್ರಜಾಪ್ರಭುತ್ವದ ಯಶಸ್ಸು ಎಂದು ಸಿದ್ದರಾಮಯ್ಯ ಮಾರ್ಮಿಕವಾಗಿ ನುಡಿದರು.

ರಾಹುಲ್‌ ಹೋದಲೆಲ್ಲಾ ಬಿಜೆಪಿ ಗೆಲ್ಲುತ್ತದೆ ಎಂದು ಹೇಳುವುದು ಅವರ ಕೀಳು ರಾಜಕಾರಣಕ್ಕೆ ಕಾರಣ. ಇಂತಹ ಕೀಳು ಮಟ್ಟದ ರಾಜಕಾರಣವನ್ನು ಸಂಘ ಪರಿವಾರ ಮತ್ತು ಬಿಜೆಪಿ ಮಾತ್ರ ಮಾಡಬಲ್ಲದು ಎಂದು ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್‌ನವರು ಹೋರಾಟ ಫಲದಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಯಾವುದೇ ಪಾತ್ರ ನಿರ್ವಹಿಸದ ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಈ ಪಕ್ಷಕ್ಕೆ ದೇಶಪ್ರೇಮದ ಪಾಠ ಹೇಳಿಕೊಡುತ್ತಿದೆ ಎಂದು ವ್ಯಂಗ್ಯವಾಡಿದರು.

ಮಹಾತ್ಮಗಾಂಧಿ ಅವರನ್ನು ಕೊಂದವರನ್ನು ಆರಾಧಿಸುವ ಇಂತವಹರಿಂದ ಕಾಂಗ್ರೆಸ್‌ ದೇಶಪ್ರೇಮದ ಪಾಠ ಕಲಿಯಬೇಕಿಲ್ಲ. ಪ್ರಜಾಪ್ರಭುತ್ವದಲ್ಲಿ ಭಿನ್ನ ಧ್ವನಿಗಳಿರುತ್ತವೆ ಎಂಬ ಸತ್ಯ ಸಿದ್ಧಾಂತವನ್ನು ಸಂಘ ಪರಿವಾರ ಮತ್ತು ಬಿಜೆಪಿ ಅರತುಕೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಭ್ರಷ್ಟಾಚಾರಾದಲ್ಲಿ ಮುಳುಗಿದೆ. ಈ ಭ್ರಷ್ಟ ಸರ್ಕಾರದ ವಿರುದ್ಧ ಜನಜಾಗೃತಿ ಹಮ್ಮಿಕೊಳ್ಳಲು ಕಾಂಗ್ರೆಸ್‌ ಪೇಸಿಎಂ ಅಭಿಯಾನ ಹಮ್ಮಿಕೊಂಡಿದೆ. ಭ್ರಷ್ಟ ಬಿಜೆಪಿ ಸರ್ಕಾರದ ಅಸಲಿ ಮುಖವಾಡವನ್ನು ಕಾಂಗ್ರೆಸ್‌ ಮುಂದಿಡಲಿದೆ ಎಂದು ಮಾಜಿ ಮುಖ್ಯಮಂತ್ರಿ ತೀವ್ರ ವಾಗ್ದಾಳಿ ನಡೆಸಿದರು.

ಭ್ರಷ್ಟಾಚಾರ ನಿರ್ಮೂಲನೆ ಮಾತನಾಡುವ ಪ್ರಧಾನಿ ಮೋದಿ ಅವರಿಗೆ ಕರ್ನಾಟಕದ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕಣ್ಣಿಗೆ ಕಾಣುತ್ತಿಲ್ಲ. ತನಿಖಾ ಸಂಸ್ಥೆಗಳನ್ನು ವಿಪಕ್ಷ ನಾಯಕರ ವಿರುದ್ಧ ದುರ್ಬಳಕೆ ಮಾಡುವ ಮೋದಿ ಸರ್ಕಾರ, ತನ್ನದೇ ಪಕ್ಷದ ಆಳಿತವಿರುವ ರಾಜ್ಯ ಸರ್ಕಾರವೊಂದರ ಭ್ರಷ್ಟಾಚಾರವನ್ನು ಏಕೆ ಸಹಿಸಿಕೊಂಡಿದೆ ಎಂಬುದು ಅರ್ಥವಾಗುತ್ತಿಲ್ಲ ಎಂಧು ಸಿದ್ದರಾಮಯ್ಯ ಕಿಡಿಕಾರಿದರು.

ಮುಂದುವರೆಸಿದ ಮಾತನಾಡಿದ ಮಾಜಿ ಸಿಎಂ, ದೇಶವನ್ನು ಒಗ್ಗೂಡಿಸುವ ಉದ್ದೇಶದಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಮ್ಮಿಕೊಂಡಿರುವ ʼಭಾರತ್‌ ಜೋಡೋʼ ಅಭಿಯಾನ ಒಂದು ಐತಿಹಾಸಿಕ ಮಹತ್ವ ಹೊಂದಿದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ರಾಜ್ಯದಲ್ಲೂ ಈ ಯಾತ್ರೆ ಸಂಚರಿಸಲಿದ್ದು, ಈ ಅಭಿಯಾನಕ್ಕೆ ರಾಜ್ಯದಲ್ಲಿ ಅಭೂತಪೂರ್ವ ಬಜನಬೆಂಬಲ ದೊರೆಯಲಿದೆ ಎಂದು ಸಿದ್ದರಾಮಯ್ಯ ಇದೇ ವೇಳೆ ಭರವಸೆ ವ್ಯಕ್ತಪಡಿಸಿದರು.

ʼಭಾರತ್‌ ಜೋಡೋʼ ಅಭಿಯಾನದಿಂದಾಗಿ ರಾಷ್ಟ್ರ ರಾಜಕಾರಣದ ದಿಕ್ಕು ಬದಲಾಗಲಿದೆ. ಅಭಿಯಾನದ ಪರಿಣಾಮಗಳು ಈಗಾಗಲೇ ಗೋಚರವಾಗುತ್ತಿವೆ. ರಾಹುಲ್‌ ಗಾಂಧಿ ಹೋದಲೆಲ್ಲಾ ಅಭೂತಪೂರ್ಬ ಜನಬೆಂಬಲ ದೊರೆತಿದ್ದು, ರಾಜ್ಯದಲ್ಲೂ ಈ ಅಭಿಯಾನ ಅತ್ಯಂತ ಯಶಸ್ವಿಯಾಗಲಿದೆ. ಕೋಮುವಾದಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಕಿತ್ತೊಗೆಯಲು ಈ ಅಭಿಯಾನ ನಾಂದಿ ಹಾಡಲಿದೆ ಎಂದು ಸಿದ್ದರಾಮಯ್ಯ ಅತ್ಯಂತ ಆತ್ಮವಿಶ್ವಾದ ಮಾತುಗಳನ್ನಾಡಿದರು.

ಒಟ್ಟಿನಲ್ಲಿ ಸಿದ್ದರಾಮಯ್ಯ, ಬೊಮ್ಮಾಯಿ ನಡುವಿನ ಪೇಸಿಎಂ ಅಭಿಯಾನದ ತಿಕ್ಕಾಟ ಮತ್ತಷ್ಟು ದಿನಗಳ ಕಾಲ ಮುಂದುವರೆಯುವ ಲಕ್ಷಣಗಳು ಕಂಡುಬರುತ್ತಿವೆ. ಇದು ಅಂತಿಮವಾಗಿ ವಿಧಾನಸಭೆ ಚುನಾವಣೆ ಅಖಾಡ ತಲುಪುದೂ ಖಚಿತ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ