ಕೃಷ್ಣ ಜನ್ಮಾಷ್ಟಮಿ ಸಂಭ್ರಮ: 88 ಬಗೆಯ ಖಾದ್ಯ ತಯಾರಿಸಿದ ಭಕ್ತೆ, ಮಂಗಳೂರಿನ ವೈದ್ಯರ ಟ್ವೀಟ್ ವೈರಲ್
Sep 08, 2023 10:29 AM IST
ಕೃಷ್ಣ ಜನ್ಮಾಷ್ಟಮಿಗೆ 88 ಬಗೆಯ ಖಾದ್ಯ ತಯಾರಿಸಿದ ಭಕ್ತೆ
- ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಕಾರ್ಡಿಯಾಲಜಿಸ್ಟ್ (ಹೃದ್ರೋಗ ತಜ್ಞ) ಆಗಿರುವ ಡಾ. ಪದ್ಮನಾಭ್ ಕಾಮತ್ ಅವರು ಜನ್ಮಾಷ್ಟಮಿಯ ದಿನ ತಮ್ಮ ರೋಗಿಯೊಬ್ಬರು ತಯಾರಿಸಿದ 88 ಬಗೆಯ ಖಾದ್ಯಗಳ ಫೋಟೋಗಳನ್ನು ಎಕ್ಸ್ ( ಟ್ವಿಟರ್) ನಲ್ಲಿ ಶೇರ್ ಮಾಡಿದ್ದಾರೆ.
ಮಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮಕ್ಕೆ ಭಕ್ತೆಯೊಬ್ಬರು ಕೃಷ್ಣನಿಗೆ 88 ಬಗೆಯ ಖಾದ್ಯ ಬಡಿಸಿದ್ದು ಇದರ ಫೋಟೋವನ್ನು ಮಂಗಳೂರಿನ ವೈದ್ಯರೊಬ್ಬರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ
ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಕಾರ್ಡಿಯಾಲಜಿಸ್ಟ್ (ಹೃದ್ರೋಗ ತಜ್ಞ) ಆಗಿರುವ ಡಾ. ಪದ್ಮನಾಭ್ ಕಾಮತ್ ಅವರು ಜನ್ಮಾಷ್ಟಮಿಯ ದಿನ ತಮ್ಮ ರೋಗಿಯೊಬ್ಬರು ತಯಾರಿಸಿದ 88 ಬಗೆಯ ಖಾದ್ಯಗಳ ಫೋಟೋಗಳನ್ನು ಎಕ್ಸ್ ( ಟ್ವಿಟರ್) ನಲ್ಲಿ ಶೇರ್ ಮಾಡಿದ್ದಾರೆ.
“ಆಕೆಗೆ ಮತ್ತು ಆಕೆಗೆ ಶ್ರೀಕೃಷ್ಣನ ಮೇಲಿರುವ ಭಕ್ತಿಯ ಬಗ್ಗೆ ಹೆಮ್ಮೆಯಿದೆ. ನನ್ನ ಬಳಿ ಚಿಕಿತ್ಸೆ ಪಡೆಯುತ್ತಿದ್ದ (ರೋಗಿ) ಅವರು ಈ ಹಿಂದಿನ ಅವರ ದಾಖಲೆಯನ್ನು ಮುರಿದಿದ್ದಾರೆ. ಗೋಕುಲಾಷ್ಟಮಿ ಹಿನ್ನೆಲೆ ಅವರು 88 ಬಗೆ ಬಗೆಯ ಖಾದ್ಯಗಳನ್ನು ತಯಾರಿಸಿದ್ದಾರೆ” ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಈ ಟ್ವಿಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಶ್ರೀ ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ಆಚರಿಸಲಾಗುತ್ತದೆ. ಮಥುರಾ ಶ್ರೀ ಕೃಷ್ಣನ ಜನ್ಮ ಸ್ಥಳ. ಶ್ರಾವಣ ಮಾಸದಲ್ಲಿ ಬರುವ ಕೃಷ್ಟ ಪಕ್ಷದ ಅಷ್ಟಮಿಯು ಕೃಷ್ಣ ಹುಟ್ಟಿದ ದಿನ. ಈ ದಿನ ಕಾರಾಗೃಹದಲ್ಲಿ ಕೃಷ್ಣನ ಜನನವಾಗಿತ್ತು. ಮೈನವಿರೇಳಿಸುವ ಕೃಷ್ಣ ಹುಟ್ಟಿದ ಕಥೆ ಇಲ್ಲಿದೆ ಓದಿ. ವಿವರ ಓದಿಗೆ ಇಲ್ಲಿ ಕ್ಲಿಕ್ ಮಾಡಿ