logo
ಕನ್ನಡ ಸುದ್ದಿ  /  Karnataka  /  Five Held For Sexual Assault At Residential School In Hassan

Hassan Crime News: ಹಾಸನದಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಪ್ರಾಂಶುಪಾಲೆ ಸೇರಿ ಐವರ ಬಂಧನ

HT Kannada Desk HT Kannada

Mar 11, 2023 07:04 AM IST

ಹಾಸನದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿರುವ ಪ್ರಕರಣ ದಾಖಲಾಗಿದೆ.

  • ಕಳೆದ ಕೆಲವು ತಿಂಗಳುಗಳಿಂದ ವಸತಿ ಶಾಲೆಯ ಎಂಟು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿರುವ ಘಟನೆ ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಾಸನದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿರುವ ಪ್ರಕರಣ ದಾಖಲಾಗಿದೆ.
ಹಾಸನದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿರುವ ಪ್ರಕರಣ ದಾಖಲಾಗಿದೆ.

ಹಾಸನ: ವಿದ್ಯಾರ್ಥಿಗಳ ಪಾಲಿನ ದೇವರುಗಳೇ ಇಲ್ಲಿ ರಾಕ್ಷಸರಾಗಿದ್ದಾರೆ. ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಕೆಲ ತಿಂಗಳುಗಳಿಂದ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ.

ಟ್ರೆಂಡಿಂಗ್​ ಸುದ್ದಿ

SSLC Results 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಸದ್ಯವೇ ಪ್ರಕಟ, ದಿನಾಂಕ ನಿಗದಿಯಾಗಿಲ್ಲ ಎಂದು ಮಂಡಳಿ

Hassan Sex scandal; ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಸಂಚಲನ, ಬಿಜೆಪಿ ನಾಯಕ ದೇವರಾಜೇ ಗೌಡರ ತುರ್ತು ರಹಸ್ಯ ಪತ್ರ ವೈರಲ್, 5 ಅಂಶಗಳು

Drought: ಕರಾವಳಿ ಜಿಲ್ಲೆಗಳಲ್ಲಿ ಏರಿದ ತಾಪಮಾನ, ನದಿಗಳಲ್ಲಿ ಕಡಿಮೆಯಾದ ನೀರಸೆಲೆ

Hassan Sex Scandal: ಲೈಂಗಿಕ ಹಗರಣ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಯಾರು?, ಶಿಕ್ಷಣ, ಆಸ್ತಿ ಮತ್ತು ಇತರೆ 5 ಅಂಶಗಳ ವಿವರ

ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೇಲೂರು ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲೆ ಸೇರಿದಂತೆ ಐವರನ್ನು ಪೊಲೀಸರು ಶುಕ್ರವಾರ (ಮಾರ್ಚ್ 10) ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪುನಿತ್ (28), ಶಿಕ್ಷಕ ಶಿವಯ್ಯ (32), ಪ್ರಾಂಶುಪಾಲೆ ಗೀತಾಬಾಯಿ (38), ಭದ್ರತಾ ಸಿಬ್ಬಂದಿ ಶ್ರುತಿ ಬಿ.ಸಿ (30), ಶಿಕ್ಷಕ ವಿಜಯಕುಮಾರ (39) ಬಂಧಿತ ಆರೋಪಿಗಳಾಗಿದ್ದಾರೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಕಳೆದ ಕೆಲವು ತಿಂಗಳುಗಳಿಂದ ವಸತಿ ಶಾಲೆಯ ಎಂಟು ಅಪ್ರಾಪ್ತ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಈ ವಾರದ ಆರಂಭದಲ್ಲಿ, ವಿದ್ಯಾರ್ಥಿಗಳು ಪ್ರಾಂಶುಪಾಲರನ್ನು ಬದಲಾಯಿಸುವಂತೆ ಒತ್ತಾಯಿಸಿ ಪ್ರತಿಭಟನೆಯನ್ನು ಪ್ರಾರಂಭಿಸಿದ್ದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸ್ ತಂಡ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಕಲ್ಯಾಣ ಸಮಿತಿಯ ಪ್ರತಿನಿಧಿಗಳು ಶಾಲೆಗೆ ಭೇಟಿ ಪರಿಶೀಲನೆ ನಡೆಸಿದ್ದರು. ಸಂವಾದದ ಸಂದರ್ಭದಲ್ಲಿ, ಪ್ರತಿಭಟನಾನಿರತ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿನ ಸಿಬ್ಬಂದಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಅವರ ಹೇಳಿಕೆಗಳನ್ನು ಆಧರಿಸಿ, ಪೊಲೀಸರು ಒಂದೆರಡು ಸಿಬ್ಬಂದಿಯನ್ನು ಕರೆದೊಯ್ದು ಹೆಚ್ಚಿನ ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಹಳೇಬೀಡು ಪೊಲೀಸರು ಐವರು ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ 2012, ಎಸ್‌ಸಿ ಮತ್ತು ಎಸ್‌ಟಿ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆ 2015 ಮತ್ತು ಕಲಂ 354(ಎ), ಭಾರತೀಯ ದಂಡ ಸಂಹಿತೆ-ಐಪಿಸಿ ಸೆಕ್ಷನ್ 509, 114 ಮತ್ತು 119 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಾಂಶುಪಾಲರು ಸೇರಿದಂತೆ ಐವರ ವಿರುದ್ಧ ಜಾತಿ ದೌರ್ಜನ್ಯ ಮತ್ತು ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವಲತಿ ಶಾಲೆಯಲ್ಲಿ ಎಂಟು ಮಂದಿ ಅಪ್ರಾಪ್ತ ವಿದ್ಯಾರ್ಥಿನಿಯವರ ಮೇಲೆ ಲೈಂಗಿಕ ಕಿರುಕುಳ ನಡೆದಿದೆ. 10ನೇ ತರಗತಿಯ ಮೂರು ವಿದ್ಯಾರ್ಥಿನಿಯ ಮೇಲೆ ಹಾಗೂ ಏಳನೇ ತರಗತಿಯ ಐದು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇನ್ನೂ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಇದೆಲ್ಲದೇ 300 ವಿದ್ಯಾರ್ಥಿಗಳಿಗೆ ದಿನಕ್ಕೆ ಬೇಕಾಗುವ ದಿನಸಿ ಪದಾರ್ಥಗಳನ್ನು ಸರಿಯಾದ ಪ್ರಮಾಣದಲ್ಲಿ ನೀಡದೆ ಕಳ್ಳತನ ಮಾಡಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕೂಡ ಪ್ರಕರಣ ದಾಖಲು ಮಾಡಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಾಸನ ಎಸ್ಪಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು