logo
ಕನ್ನಡ ಸುದ್ದಿ  /  ಕರ್ನಾಟಕ  /  Forest News: ಅರಣ್ಯ ಸೇವೆಗೆ ಬಂದರು10 ಮಹಿಳಾ ಅಧಿಕಾರಿಗಳು ಸೇರಿ 16 ಎಸಿಎಫ್‌ ಗಳು, ನೇಮಕ ಪತ್ರ ವಿತರಿಸಿ ಹಸಿರು ನೀತಿ ಬೋಧನೆ

Forest News: ಅರಣ್ಯ ಸೇವೆಗೆ ಬಂದರು10 ಮಹಿಳಾ ಅಧಿಕಾರಿಗಳು ಸೇರಿ 16 ಎಸಿಎಫ್‌ ಗಳು, ನೇಮಕ ಪತ್ರ ವಿತರಿಸಿ ಹಸಿರು ನೀತಿ ಬೋಧನೆ

Umesha Bhatta P H HT Kannada

Jul 16, 2024 08:43 AM IST

google News

ನೂತನ ಎಸಿಎಫ್‌ಗೆ ಸಚಿವ ಈಶ್ವರ ಖಂಡ್ರೆ ಪ್ರತಿಜ್ಞಾ ವಿಧಿ ಬೋಧಿಸಿದರು.

    • ಕರ್ನಾಟಕದ ಅರಣ್ಯ ಇಲಾಖೆ ಸೇವೆಗೆ ಹೊಸದಾಗಿ 16 ಎಸಿಎಫ್‌ಗಳು ಸೇರ್ಪಡೆಯಾಗಿದ್ದಾರೆ.
ನೂತನ ಎಸಿಎಫ್‌ಗೆ ಸಚಿವ ಈಶ್ವರ ಖಂಡ್ರೆ ಪ್ರತಿಜ್ಞಾ ವಿಧಿ ಬೋಧಿಸಿದರು.
ನೂತನ ಎಸಿಎಫ್‌ಗೆ ಸಚಿವ ಈಶ್ವರ ಖಂಡ್ರೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಬೆಂಗಳೂರು:ಭಾರತದಲ್ಲೇ ಅತಿ ಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ಟಾಪ್‌ 5 ಪಟ್ಟಿಯಲ್ಲಿರುವ ಹಾಗೂ ಅತ್ಯುತ್ತಮ ನಿರ್ವಹಣೆ ಮೂಲಕ ಗಮನ ಸೆಳೆದಿರುವ ಕರ್ನಾಟಕ ಅರಣ್ಯ ಇಲಾಖೆಗೆ(Karnataka Forest Department) ಹೊಸ ಅಧಿಕಾರಿಗಳ ಸೇರ್ಪಡೆಯಾಗಿದೆ. ಈಗಾಗಲೇ ನೇಮಕಾತಿ ಪ್ರಕ್ರಿಯೆ ಮುಗಿಸಿರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ( ACF) ಹುದ್ದೆಯ ಅಧಿಕಾರಿಗಳು ಅರಣ್ಯ ಇಲಾಖೆಗೆ ಸೇವೆಗೆ ಬಂದಿದ್ದಾರೆ. ಅರಣ್ಯಶಾಸ್ತ್ರದಲ್ಲಿ ಪದವಿ ಪಡೆದಿರುವ ಕರ್ನಾಟಕದ ವಿವಿಧ ಭಾಗಗಳ ಪದವೀಧರರು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಅಂತಿಮವಾಗಿ ಹುದ್ದೆ ಪಡೆದಿದ್ದಾರೆ. ಎ.ಸಿ.ಎಫ್.ಗಳಾಗಿ 16 ಅಭ್ಯರ್ಥಿಗಳು ಅವಕಾಶ ಪಡೆದಿದ್ದು, ಇದರಲ್ಲಿ ಮಹಿಳೆಯರ ಸಂಖ್ಯೆಯೇ ಅಧಿಕ. 10 ಮಹಿಳಾ ಮತ್ತು 6 ಪುರುಷ ಅಭ್ಯರ್ಥಿಗಳು ಇದರಲ್ಲಿ ಇದ್ದಾರೆ. ಇವರೆಲ್ಲಾ ಮುಂದೆ ಐಎಫ್‌ಎಸ್‌ಗೆ ಬಡ್ತಿ ಪಡೆದು ಉನ್ನತ ಹುದ್ದೆಗೂ ಹೋಗಲಿದ್ದಾರೆ.

ಬೆಂಗಳೂರಿನ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ವಿನೂತನವಾಗಿ ಪ್ರತಿಜ್ಞಾವಿಧಿ ಬೋಧಿಸಿ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನೂತನ ಅಧಿಕಾರಿಗಳಿಗೆ ಶುಭ ಕೋರಿದರು.ದಕ್ಷತೆ, ಪ್ರಾಮಾಣಿಕತೆ, ನಿಷ್ಠೆ ಮತ್ತು ಶ್ರದ್ಧಾಪೂರ್ವಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ. ಕಾನೂನಿನ ಚೌಕಟ್ಟಿನಲ್ಲಿ ಅರಣ್ಯ, ಅರಣ್ಯೋತ್ಪನ್ನ, ವನ್ಯಜೀವಿ ಸಂರಕ್ಷಣೆ ಮಾಡುತ್ತೇನೆ. ಜನಪರವಾಗಿ, ಜನಸ್ನೇಹಿಯಾಗಿ ಒತ್ತುವರಿ ತೆರವು ಮಾಡುತ್ತೇನೆ. ವೃಕ್ಷ ಸಂಪತ್ತು ಮತ್ತು ರಾಜ್ಯದ ಹಸಿರು ಹೊದಿಕೆ ಹೆಚ್ಚಿಸಲು ಶ್ರಮಿಸುತ್ತೇನೆ. ಅರಣ್ಯ ಇಲಾಖೆಯ ಉತ್ತಮ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತೇನೆ ಎಂದು ನೂತನ ಎ.ಸಿ.ಎಫ್ ಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

3 ವರ್ಷ ತರಬೇತಿ

ಇಂದು ನೇಮಕಾತಿ ಪತ್ರ ಪಡೆದ ಎ.ಸಿ.ಎಫ್.ಗಳು 2024ರ ಆಗಸ್ಟ್ 21ರಿಂದ 2 ವರ್ಷಗಳ ಕಾಲ ಡೆಹರಾಡೂನ್ ನಲ್ಲಿ ತರಬೇತಿ ಪಡೆಯಲಿದ್ದಾರೆ. ನಂತರ ಒಂದು ವರ್ಷ ರಾಜ್ಯದಲ್ಲಿ ಒ.ಜೆ.ಟಿ. (ಆನ್ ಜಾಬ್ ಟ್ರೈನಿಂಗ್) ಪಡೆಯಲಿದ್ದು, ಇದು ಪ್ರೊಬೇಷನರಿ ಅವಧಿಯಾಗಿರುತ್ತದೆ. ನಂತರ ಅವರಿಗೆ ಸ್ಥಳ ನಿಯುಕ್ತಿ ಮಾಡಲಾಗುತ್ತದೆ.

ಕಾಡು ಉಳಿಸಿ

ಎಲ್ಲಾ ವಿದ್ಯಾವಂತರಿಗೂ ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸುವ ಅವಕಾಶ ದೊರಕುವುದಿಲ್ಲ. ನೀವೆಲ್ಲರೂ ಪ್ರತಿಭಾವಂತರು ಮತ್ತು ಅದೃಷ್ಟವಂತರಾಗಿದ್ದೀರಿ. ನಿಮಗೆ ಲಭಿಸಿರುವ ಈ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡು ಅರಣ್ಯ ಮತ್ತು ಅರಣ್ಯ ಸಂಪನ್ಮೂಲ ಹಾಗೂ ವನ್ಯಜೀವಿ ಸಂರಕ್ಷಣೆ ಮಾಡಬೇಕು. ಸರ್ಕಾರಿ ಕೆಲಸ ದೇವರ ಕೆಲಸ. ಈ ಘೋಷಣೆಯನ್ನು ವಿಧಾನಸೌಧದ ಪ್ರವೇಶ ದ್ವಾರದಲ್ಲೇ ಕೆತ್ತಿಸಲಾಗಿದೆ. ನೀವೆಲ್ಲರೂ ಅರಣ್ಯ ಸಂರಕ್ಷಣೆಯನ್ನು ದೇವರ ಕೆಲಸ ಎಂದು ಮಾಡಿ. ಅರಣ್ಯ ಉಳಿಸಿ, ಪಕ್ಷಿ ಸಂಕುಲ, ಪ್ರಾಣಿ ಸಂಕುಲ ಮತ್ತು ಕೀಟ ಸಂಕುಲ ಉಳಿಸಿ, ಕಾಡನ್ನು ಕಾಪಾಡಿ, ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಶ್ರಮಿಸಿ ಎನ್ನುವುದು ಈಶ್ವರ ಖಂಡ್ರೆ ಸಲಹೆ.

ಇಡೀ ವಿಶ್ವ ಜಾಗತಿಕ ತಾಪಮಾನ ಮತ್ತು ಹವಾಮಾನ ಬದಲಾವಣೆಯಂತಹ ಬೃಹತ್ ಸವಾಲು ಎದುರಿಸುತ್ತಿದೆ. ಅರಣ್ಯ ಸಂರಕ್ಷಣೆ ಹಿಂದೆಂದಿಗಿಂತಲೂ ಇಂದು ಅತ್ಯಂತ ಮಹತ್ವದ್ದಾಗಿದೆ. ಈ ಕಾಲಘಟ್ಟದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾಗಿರುವ ನೀವು, ಅರಣ್ಯವನ್ನು ಸಂರಕ್ಷಿಸಲು ಇಲಾಖೆಗೆ ಸಹಾಯಕರಾಗಬೇಕು ಎಂಬುದು ಸಚಿವರು ನೀಡಿದ ಸೂಚನೆ.

ಅರಣ್ಯ ಕಾಯಿದೆ ಅಡಿಯಲ್ಲಿ ಪ್ರಕರಣಗಳ ವಿಚಾರಣೆ ನಡೆಸಿ ತೀರ್ಪು ನೀಡುವ ಅಧಿಕಾರವೂ ನಿಮಗೆ ಬರುತ್ತದೆ. ನಿಮ್ಮ ಅಧಿಕಾರ ಬಳಸಿ ಒತ್ತುವರಿ ತೆರವು ಮಾಡಿ, ಜನಸ್ನೇಹಿಯಾಗಿ ಕೆಲಸ ನಿರ್ವಹಿಸಿ ಉತ್ತಮ ಅಧಿಕಾರಿ ಎಂಬ ಹೆಸರು ಗಳಿಸಿ ಎಂದು ಈಶ್ವರ ಖಂಡ್ರೆ ಕಿವಿಮಾತು ಹೇಳಿದರು.

ವಿಧಾನಪರಿಷತ್ ಸದಸ್ಯ ಭೀಮರಾವ್ ಪಾಟೀಲ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಶರಣಕುಮಾರ್ ಮೋದಿ, ಮಾಜಿ ಶಾಸಕ ಎಂ.ಪಿ.ನಾಡಗೌಡ, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ.ಸಿ. ರೈ ಮತ್ತಿತರರು ಪಾಲ್ಗೊಂಡಿದ್ದರು.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ