logo
ಕನ್ನಡ ಸುದ್ದಿ  /  ಕರ್ನಾಟಕ  /  3 ಎಕರೆಗಿಂತ ಕಡಿಮೆ ಅರಣ್ಯ ಭೂಮಿ ಒತ್ತುವರಿ ಮಾಡಿರುವವನ್ನು ಒಕ್ಕಲೆಬ್ಬಿಸೋಲ್ಲ, ದೊಡ್ಡವರನ್ನು ಬಿಡೋಲ್ಲ: ಅರಣ್ಯ ಸಚಿವರ ಖಡಕ್‌ ಎಚ್ಚರಿಕೆ

3 ಎಕರೆಗಿಂತ ಕಡಿಮೆ ಅರಣ್ಯ ಭೂಮಿ ಒತ್ತುವರಿ ಮಾಡಿರುವವನ್ನು ಒಕ್ಕಲೆಬ್ಬಿಸೋಲ್ಲ, ದೊಡ್ಡವರನ್ನು ಬಿಡೋಲ್ಲ: ಅರಣ್ಯ ಸಚಿವರ ಖಡಕ್‌ ಎಚ್ಚರಿಕೆ

Umesha Bhatta P H HT Kannada

Oct 10, 2024 01:46 PM IST

google News

ಕರ್ನಾಟಕದ ಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ಸಚಿವ ಈಶ್ವರ ಖಂಡ್ರೆ ಮಾತನಾಡಿದ್ದಾರೆ.

    • ಕರ್ನಾಟಕದಲ್ಲಿ ಅರಣ್ಯ ಒತ್ತುವರಿದಾದರಿಗೆ ಅರಣ್ಯ ಇಲಾಖೆ ಚಾಟಿ ಬೀಸಿದೆ. ಹಾಗೆಂದು ಸಣ್ಣ ಒತ್ತುವರಿದಾರರಿಗೆ ತೊಂದರೆ ಕೊಡೋಲ್ಲ. ದೊಡ್ಡ ಒತ್ತುವರಿದಾರರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಕರ್ನಾಟಕದ ಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ಸಚಿವ ಈಶ್ವರ ಖಂಡ್ರೆ ಮಾತನಾಡಿದ್ದಾರೆ.
ಕರ್ನಾಟಕದ ಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ಸಚಿವ ಈಶ್ವರ ಖಂಡ್ರೆ ಮಾತನಾಡಿದ್ದಾರೆ.

ಕಾರವಾರ: ಕರ್ನಾಟಕದಲ್ಲಿ ಅರಣ್ಯ ಭೂಮಿ ಒತ್ತುವರಿ ಚಟುವಟಿಕೆ ಸದ್ದು ಮಾಡಿದೆ. ಅರಣ್ಯ ಭೂಮಿ ಒತ್ತುವರಿ ಮಾಡುವವರನ್ನು ಕಾಲಮಿತಯೊಳಗೆ ತೆರವುಗೊಳಿಸಲಾಗುತ್ತಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಸೂಚನೆ ಆಧರಿಸಿ ಇಲಾಖೆ ಅಧಿಕಾರಿಗಳು ಸಣ್ಣ ರೈತರ ಭೂಮಿಗೂ ಕೈ ಹಾಕಿದ್ದಾರೆ. ಇದು ಹಲವು ಜಿಲ್ಲೆಗಳ ರೈತರ ಆತಂಕ ಹಾಗೂ ಆಕ್ರೋಶಕ್ಕೂ ದಾರಿ ಮಾಡಿಕೊಟ್ಟಿದೆ. ಇದರ ನಡುವೆಯೇ 2015ಕ್ಕೆ ಮೊದಲು ತಮ್ಮ ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿರುವ ಬಡ ಜನರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹೊಸದಾಗಿ ಒತ್ತುವರಿ ಮಾಡುವವರಿಗೆ ಅವಕಾಶ ನೀಡುವುದಿಲ್ಲ. ದೊಡ್ಡ ಒತ್ತುವರಿ ತೆರವು ಮಾಡಿಸಲಾಗುವುದು ಎನ್ನುವ ಸ್ಪಷ್ಟನೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು,ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಹಾಕಿರುವವರ ಯಾವುದೇ ಅರ್ಜಿ ಪುನರ್ ಪರಿಶೀಲನೆಯಲ್ಲಿದ್ದರೆ ಅಂತಹವರ ಒತ್ತುವರಿ ತೆರವು ಮಾಡಿಸದಂತೆ ಸೂಚಿಸಲಾಗಿದೆ. ಜೊತೆಗೆ ರಾಜ್ಯ ಸರ್ಕಾರ ಕಳೆದ ವಿಧಾನಮಂಡಳದ ಅಧಿವೇಶನದಲ್ಲಿ ಅರಣ್ಯ ಹಕ್ಕು ಕಾಯಿದೆ ಜಾರಿಗೆ 25 ವರ್ಷಕ್ಕಿಂತ ಹಿಂದೆ ಅರಣ್ಯದಲ್ಲಿದ್ದವರಿಗೆ ಹಕ್ಕು ನೀಡಬೇಕು ಎಂದು ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ ಎನ್ನುವ ಸ್ಪಷ್ಟನೆ ನೀಡಿದರು.

ನಮ್ಮ ಜಿಲ್ಲೆಯಲ್ಲಿ ಹತ್ತಾರು ಎಕರೆ ಒತ್ತುವರಿ ಮಾಡಿದವರು ಯಾರೂ ಇಲ್ಲ. ಜೀವಿನೋಪಾಯಕ್ಕೆ 1 ಎಕರೆ ಅರಣ್ಯ ಜಮೀನು ಒತ್ತುವರಿ ಮಾಡಿದ ಬಡವರಿದ್ದಾರೆ. ಅವರ ಜೀವನೋಪಾಯಕ್ಕೆ ತೊಂದರೆ ನೀಡದಂತೆ ಕ್ರಮವಹಿಸಬೇಕು. ಉತ್ತರ ಕನ್ನಡ ಜಿಲ್ಲೆಯಲ್ಲಿ ಅವಿದ್ಯಾವಂತರಾದ 75 ಸಾವಿರಕ್ಕೂ ಹೆಚ್ಚು ಜನರು ಅರಣ್ಯದಲ್ಲೇ ವಾಸಿಸುತ್ತಿದ್ದಾರೆ. ಅವರು ಹಲವು ದಶಕಗಳಿಂದ ಅರಣ್ಯದಲ್ಲೇ ಬದುಕಿದ್ದಾರೆ. ಉತ್ತರ ಕನ್ನಡ ಜಿಲ್ಲೆಯನ್ನು ಇತರ ಜಿಲ್ಲೆಯಂತೆ ನೋಡಬಾರದು. ನಮ್ಮ ಬಡ ಜನರಿಗೆ ನ್ಯಾಯ ದೊರಕಿಸಬೇಕು ಎನ್ನುವ ಮನವಿಯನ್ನು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾಡಿದರು.

ಇದಕ್ಕೆ ಸ್ಪಂದಿಸಿದ ಸಚಿವ ಈಶ್ವರ ಖಂಡ್ರೆ, ಅವರು, ಮನುಷ್ಯನಿಗೆ ಆಸೆ ಇರಬೇಕು, ಆದರೆ ದುರಾಸೆ ಇರಬಾರದು. ಮಾನವನ ಬದುಕಿಗೆ ಆಧಾರವಾಗಿರುವ ಅರಣ್ಯ ನಾಶ, ಒತ್ತುವರಿ ಮಾಡಬಾರದು. ಇಡೀ ದೇಶದ ಹವಾಮಾನದ ಮೇಲೆ ಪರಿಣಾಮಬೀರಿ, ಮಳೆ ಉತ್ತಮವಾಗಿ ಬೀಳಲು ಪಶ್ಚಿಮಘಟ್ಟಗಳನ್ನು ಎಲ್ಲರೂ ಜತನವಾಗಿ ಕಾಪಾಡಿ ಮುಂದಿನ ಪೀಳಿಗೆಗೆ ನೀಡಬೇಕು. ಭೂಮಿಗೆ ಕಾಡು ಭೂಷಣ, ಕಾಡಿಗೆ ವನ್ಯ ಜೀವಿ, ಸಸ್ಯ ಸಂಕುಲವೇ ಭೂಷಣ. ಇಂತಹ ವನ, ವನ್ಯ ಸಂಪತ್ತನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎನ್ನುವ ಸೂಚನೆ ನೀಡಿದರು.

ಬದಲಾದ ಮನಸ್ಥಿತಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.80ರಷ್ಟು ಅರಣ್ಯವಿದೆ. ವನ, ವನ್ಯಜೀವಿಗಳ ಜೊತೆ ಸಹಬಾಳ್ವೆ ನಡೆಸುವುದರಲ್ಲಿ ಈ ಜಿಲ್ಲೆಯ ಜನರ ಪಾತ್ರ ಮಹತ್ವದ್ದಾಗಿದ್ದು, ಇಷ್ಟು ಬೃಹತ್ ಪ್ರಮಾಣದಲ್ಲಿ ಅರಣ್ಯ ಸಂರಕ್ಷಣೆ ಮಾಡಿರುವ ಎಲ್ಲರೂ ಅಭಿನಂದನಾರ್ಹರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಎಲ್ಲಿ ನೋಡಿದರೂ ಹಸಿರೇ ಕಾಣುತ್ತದೆ. ಪಶ್ಚಿಮಘಟ್ಟದ ಸುಂದರ ತಾಣದಲ್ಲಿರುವ ಜಿಲ್ಲೆಯ ಜನರು ಪುಣ್ಯವಂತರು ಎಂದು ಈಶ್ವರ ಖಂಡ್ರೆ ಹೇಳಿದರು.

7-8 ದಶಕಗಳ ಹಿಂದೆ ಕೆಲವರು ವನ್ಯ ಜೀವಿಗಳನ್ನು ಕೊಂದು, ಸತ್ತ ಪ್ರಾಣಿಯ ಜೊತೆ ಫೋಟೋ ತೆಗೆಸಿಕೊಂಡು ಮನೆಯಲ್ಲಿ ತೂಗುಹಾಕುತ್ತಿದ್ದರು. ಮೋಜಿಗಾಗಿ ಬೇಟೆ ಆಡುತ್ತಿದ್ದರು. ಆದರೆ 1972ರಲ್ಲಿ ವನ್ಯಜೀವಿ ಸಂರಕ್ಷಣಾ ಕಾಯಿದೆ ಜಾರಿಗೆ ತಂದ ಬಳಿಕ ಇಂತಹ ಬೇಟೆ, ಕಳ್ಳಬೇಟೆ ನಿಗ್ರಹವಾಗಿದೆ ಎಂದರು.

ಪರಿಹಾರ ಹೆಚ್ಚಳ

ಹಾವು ಕಚ್ಚಿ ಸಾವನ್ನಪ್ಪುವವರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಂತೆ ಸಾರ್ವಜನಿಕರಿಂದ ಮತ್ತು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ಬೇಡಿಕೆ ಇದ್ದು, ಈ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದರು.

ಕಾಡು ಹಂದಿ, ನವಿಲುಗಳಿಂದ ಆಗುತ್ತಿರುವ ಬೆಳೆ ಹಾನಿಯ ಪರಿಹಾರ ಹೆಚ್ಚಳ ಮಾಡಬೇಕು, ವೈಜ್ಞಾನಿಕವಾಗಿ ಪರಿಹಾರ ನೀಡಬೇಕು ಎಂಬ ಬೇಡಿಕೆ ರೈತರಿಂದ ಬಂದಿದೆ. ಈ ಕುರಿತಂತೆ ಒಂದು ಸಮಿತಿ ಮಾಡಿ ವರದಿ ಬಂದ ಬಳಿಕ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎನ್ನುವುದು ಸಚಿವರು ನೀಡಿದ ಸೂಚನೆ.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾತನಾಡಿ, ಎಂದು ಹೇಳಿದರು.

ಇದಕ್ಕೂ ಮುನ್ನ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಅನುಮೋದಿತ ಕಾರ್ಯಯೋಜನೆಯ ಪ್ರಕಾರ ಅರಣ್ಯ ಪ್ರದೇಶಗಳ ಸತ್ತ ಮತ್ತು ಬಿದ್ದ ಮರವನ್ನು ಹೊರತೆಗೆಯುವ ಪ್ರಾತ್ಯಕ್ಷಿಕೆ ವೀಕ್ಷಿಸಿದರು. ಬಳಿಕ ದಾಂಡೇಲಿಯ ಸರ್ಕಾರಿ ಟಿಂಬರ್ ಡಿಪೋದಲ್ಲಿ ನಾಟಾ ಸಂಗ್ರಹ ಮತ್ತು ಇ-ಹರಾಜು ಪ್ರಕ್ರಿಯೆಯನ್ನು ಪರಿಶೀಲಿಸಿದರು.

 

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ