logo
ಕನ್ನಡ ಸುದ್ದಿ  /  ಕರ್ನಾಟಕ  /  Sudhakar On Siddaramaiah: ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ನೇರ ಕಾರಣ? ಸುಧಾಕರ್​ ಸ್ಫೋಟಕ ಮಾಹಿತಿ

Sudhakar On Siddaramaiah: ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ನೇರ ಕಾರಣ? ಸುಧಾಕರ್​ ಸ್ಫೋಟಕ ಮಾಹಿತಿ

Meghana B HT Kannada

May 17, 2023 02:35 PM IST

ಸಿದ್ದರಾಮಯ್ಯ- ಸುಧಾಕರ್

    • Dr K Sudhakar: "2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು" ಎಂದು ಸುಧಾಕರ್ ಟ್ವೀಟ್​ ಮಾಡಿದ್ದಾರೆ.
ಸಿದ್ದರಾಮಯ್ಯ- ಸುಧಾಕರ್
ಸಿದ್ದರಾಮಯ್ಯ- ಸುಧಾಕರ್

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ (Congress JDS coalition govt collapse) ಸಿದ್ದರಾಮಯ್ಯ ಅವರೇ ನೇರ ಕಾರಣ ಎಂಬರ್ಥದಲ್ಲಿ ಮಾಜಿ ಸಚಿವ ಡಾ ಕೆ ಸುಧಾಕರ್​ ಟ್ವೀಟ್​ಗಳನ್ನು ಮಾಡಿದ್ದು, ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

KRS Dam: ಕೊಡಗಲ್ಲಿ ಉತ್ತಮ ಮಳೆ, ಕೆಆರ್‌ಎಸ್ ಜಲಾಶಯಕ್ಕೆ ಬಂತು 2 ಅಡಿ ನೀರು

ಬೆಂಗಳೂರು: ಖಾಸಗಿ ಶಾಲಾ ಶುಲ್ಕ ಶೇ 30- 40 ಹೆಚ್ಚಳ, ಶುಲ್ಕ ನಿಯಂತ್ರಣ ಬೇಕೆನ್ನುತ್ತಿರುವ ಪಾಲಕರು, ಕೈಕಟ್ಟಿ ಕುಳಿತ ಸರ್ಕಾರ- 10 ಮುಖ್ಯ ಅಂಶ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಮೇ 23 ರಿಂದ ಜೂನ್ 9 ರ ತನಕ ಬೃಹತ್ ಮಾವು ಹಲಸಿನ ಮೇಳ, ಒಂದೇ ಸೂರಿನಡಿ ಹತ್ತಾರು ಬಗೆಯ ಹಣ್ಣು

ಕರ್ನಾಟಕ ಬರ ಪರಿಸ್ಥಿತಿ; 32 ಲಕ್ಷಕ್ಕೂ ಅಧಿಕ ರೈತರಿಗೆ 3454 ಕೋಟಿ ರೂ ಪರಿಹಾರ, ರಾಜ್ಯದಿಂದಲೂ 16 ಲಕ್ಷ ರೈತ ಕುಟುಂಬಕ್ಕೆ ತಲಾ 3,000 ರೂ

ಸುಧಾಕರ್​ ಸರಣಿ ಟ್ವೀಟ್​ ಹೀಗಿದೆ

“2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.”

"2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು."

“ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ?”

ಬಂಡಾಯವೆದ್ದಿದ್ದ ಸುಧಾಕರ್​

2019 ರಲ್ಲಿ ಹೆಚ್​ ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್​ -ಕಾಂಗ್ರೆಸ್​ ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು, ಬಿಜೆಪಿಗೆ ಪಕ್ಷಾಂತರಗೊಂಡು ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾದ 17 ಶಾಸಕರಲ್ಲಿ ಡಾ ಕೆ ಸುಧಾಕರ್​ ಕೂಡ ಒಬ್ಬರು. ಈ 17 ಮಂದಿಯ ಪೈಕಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಸುಧಾಕರ್​ ಸೇರಿದಂತೆ 13 ಮಂದಿಗೆ ಟಿಕೆಟ್​ ನೀಡಿತ್ತು. ಆದರೆ ಸುಧಾಕರ್​ ಸೋಲುಂಡಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ