logo
ಕನ್ನಡ ಸುದ್ದಿ  /  ಕರ್ನಾಟಕ  /  Pakistan Former Pm Imran Khan: ಇಸ್ಲಾಮಾಬಾದ್ ಹೈಕೋರ್ಟ್ ಹೊರಗಡೆ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ

Pakistan Former PM Imran Khan: ಇಸ್ಲಾಮಾಬಾದ್ ಹೈಕೋರ್ಟ್ ಹೊರಗಡೆ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ

HT Kannada Desk HT Kannada

May 09, 2023 03:37 PM IST

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸಲಾಗಿದೆ.

  • ವಿವಿಧ ಪ್ರಕರಣಗಳಲ್ಲಿ ಜಾಮೀನು ಪಡೆಯಲು ಯತ್ನಿಸುತ್ತಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್ ಹೊರಗಡೆ ಬಂಧಿಸಲಾಗಿದೆ.

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸಲಾಗಿದೆ.
ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸಲಾಗಿದೆ.

ನವದೆಹಲಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನವಾಗಿದೆ (Imran Khan Arrest). ಇಸ್ಲಾಮಾಬಾದ್‌ನ ಹೈಕೋರ್ಟ್ ಹೊರಗಡೆ ಭದ್ರತಾ ಪಡೆ ಖಾನ್ ಅವರನ್ನು ಅರೆಸ್ಟ್ ಮಾಡಿದೆ.

ಟ್ರೆಂಡಿಂಗ್​ ಸುದ್ದಿ

ದೊಡ್ಡಬಳ್ಳಾಪುರ: ಹೇಮಂತಗೌಡ ಹತ್ಯೆ ಪ್ರಕರಣದ 2ನೇ ಆರೋಪಿ ಬಂಧನ, ಪೊಲೀಸರ ಮೇಲೆ ಹಲ್ಲೆಗೆತ್ನಿಸಿದ್ದ ಕಾರಣ ಕಾಲಿಗೆ ಗುಂಡೇಟು

ಮಂಗಳೂರು ವಿಮಾನ ನಿಲ್ಧಾಣಕ್ಕೆ ಬಂದು ಗೊಂದಲಕ್ಕೆ ಒಳಗಾದ ಮಹಿಳೆ, ನೆರವಾದ ಭದ್ರತಾ ಸಿಬ್ಬಂದಿ, ನಾಪತ್ತೆ ಪ್ರಕರಣ ಸುಖಾಂತ್ಯ

ದಕ್ಷಿಣ ಕನ್ನಡದ ಮಂಗಳೂರು, ಪುತ್ತೂರಲ್ಲಿ ಹಲಸು, ಮಾವು ಸೇರಿ ವಿವಿಧ ಹಣ್ಣುಗಳ ಮೇಳ, ದಿನಾಂಕ ಮತ್ತು ಇತರೆ ವಿವರ

ಬೆಂಗಳೂರು: ಕೊನೆಗೂ ತೆರಿಗೆ ಕಟ್ಟಲು ಒಪ್ಪಿಕೊಂಡ ಮಂತ್ರಿ ಮಾಲ್; ಬೀಗ ತೆಗೆಯುವಂತೆ ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ

ವಿವಿಧ ಪ್ರಕರಣಗಳಲ್ಲಿನ ಎಫ್ಐಆರ್ ಹಾಗೂ ಕೊಲೆ ಯತ್ನ ಪ್ರಕರಣದಲ್ಲಿ ಜಾಮೀನು ಪಡೆಯಲು ಇಸ್ಲಾಮಾಬಾದ್ ಹೈಕೋರ್ಟ್‌ಗೆ ಬರುತ್ತಿದ್ದ ಸಂದರ್ಭದಲ್ಲಿ ಇಮ್ರಾನ್ ಖಾನ್‌ ಅವರನ್ನು ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್‌ ಹೈಕೋರ್ಟ್ ಆವರದಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಬಂಧನಕ್ಕೂ ಮುನ್ನ ಪ್ರತಿಕ್ರಿಯಿಸಿದ್ದ ಇಮ್ರಾನ್ ನನ್ನ ವಿರುದ್ಧ ಯಾವುದೇ ಪ್ರಕರಣಗಳು ಇಲ್ಲ. ನನ್ನನ್ನು ಜೈಲಿನಲ್ಲಿ ಇಡಬೇಕೆಂಬುದೇ ಅವರ ಉದ್ದೇಶ. ನಾನು ಅದಕ್ಕೆ ಸಿದ್ಧನಿದ್ದೇನೆ ಅಂತ ಹೇಳಿದ್ದಾರೆ.

ನಮ್ಮ ಚುನಾವಣಾ ಪ್ರಚಾರವನ್ನು ಹತ್ತಿಕ್ಕುವ ಪ್ರಯತ್ನವಾಗಿ ಸರ್ಕಾರವು ನನ್ನನ್ನು ಬಂಧಿಸಲು ಪ್ರಯತ್ನಿಸುತ್ತಿದೆ. ತನ್ನನ್ನು ಬಂಧಿಸುವುದು ಕೇವಲ ನಾಟಕವಾಗಿದೆ. ಅಪಹರಿಸಿ ಹತ್ಯೆ ಮಾಡುವ ಉದ್ದೇಶವನ್ನು ಇವರು ಹೊಂದಿದ್ದಾರೆ ಎಂದು ಇಮ್ರಾನ್‌ ಖಾನ್‌ ಇತ್ತೀಚೆಗಷ್ಟೇ ಆರೋಪಿಸಿದ್ದರು.

ಕಳೆದ ವರ್ಷ ಇಮ್ರಾನ್‌ ಖಾನ್‌ ಅವರನ್ನು ಅವಿಶ್ವಾಸ ಮತದ ಮೂಲಕ ಪದಚ್ಯುತಿಗೊಳಿಸಲಾಗಿತ್ತು. ಮತ್ತೆ ಚುನಾವಣೆ ಗೆದ್ದು ಪ್ರಧಾನಿಯಾಗುವ ಸಾಧ್ಯತೆ ಇರುವುದರಿಂದ ನನ್ನನ್ನು ಕಾನೂನು ಪ್ರಕರಣಗಳಲ್ಲಿ ಸಿಲುಕಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ದೂರಿದ್ದರು.

ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷರೂ ಆಗಿರುವ 70 ವರ್ಷದ ಇಮ್ರಾನ್ ಖಾನ್ ವಿರುದ್ಧ ಈ ಹಿಂದೆ ಹಲವು ಕೋರ್ಟ್‌ಗಳು ಬಂಧನದ ವಾರಂಟ್ ಹೊರಡಿಸಿದ್ದವವು.

ಇಸ್ಲಾಮಾಬಾದ್ ನ್ಯಾಯಾಲಯಕ್ಕೆ ಸೇರಿದ ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಅಲ್ಲಿನ ಸೆಷನ್ಸ್ ಕೋರ್ಟ್ ಖಾನ್‌ಗೆ ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಿತ್ತು. ಇದಕ್ಕೂ ಹಿಂದಿನ ದಿನ ಸಿವಿಲ್ ನ್ಯಾಯಾಧೀಶ ರಾಣಾ ಮುಜಾಹಿದ್ ರಹೀಮ್ ಅವರು ಮೂರು ಪುಟಗಳ ಕಾಯ್ದಿರಿಸಿದ ತೀರ್ಪನ್ನು ಬಿಡುಗಡೆ ಮಾಡಿದ್ದರು. ಕೋರ್ಟ್‌ಗೆ ಇಮ್ರಾನ್‌ ಖಾನ್‌ ಪದೇ ಪದೆ ಗೈರಾಗುತ್ತಿದ್ದ ಕಾರಣ ಜಾಮೀನುರಹಿತ ವಾರಂಟ್‌ ಹೊರಡಿಸಲಾಗಿತ್ತು.

2022ರ ಆಗಸ್ಟ್ 20 ರಂದು ಎಫ್ -9 ಪಾರ್ಕ್‌ನಲ್ಲಿ ನಡೆದ ರ್ಯಾಲಿಯಲ್ಲಿ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಝೀಬಾ ಚೌಧರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಪಾಕಿಸ್ತಾನದ ಮಾಜಿ ಪ್ರಧಾನಿ ವಿಚಾರಣೆಗೆ ಹಾಜರಾಗುವ ಬದಲು, ನ್ಯಾಯಾಧೀಶರ ಮುಂದೆ ಹಾಜರಾಗುವುದರಿಂದ ವಿನಾಯಿತಿಗಾಗಿ ಮನವಿ ಸಲ್ಲಿಸಿದ್ದರು. ವಿಡಿಯೋ ಕಾನ್ಪರೆನ್ಸ್‌ ಮೂಲಕ ನ್ಯಾಯಾಲಯದ ಪ್ರಕ್ರಿಯೆಯಲ್ಲಿ ಭಾಗಿಯಾಗಲು ಅನುಮತಿ ಕೋರಿದರು ಎಂದು ಈ ಹಿಂದೆ ಜಿಯೋ ನ್ಯೂಸ್ ವರದಿ ಮಾಡಿತ್ತು.

ಕಳೆದ ವರ್ಷ ಏಪ್ರಿಲ್‌ನಲ್ಲಿ ಪ್ರಧಾನಿ ಹುದ್ದೆಯಿಂದ ಕೆಳಗಿಳಿದಿದ್ದ ಇಮ್ರಾನ್‌ ಖಾನ್‌ ಅವರನ್ನು ಬಂಧಿಸಲು ಇತ್ತೀಚೆಗೆ ಪೊಲೀಸ್‌ ತಂಡವು ಪ್ರಯತ್ನಿಸಿತ್ತು. ಆದರೆ, ಇಮ್ರಾನ್‌ ಖಾನ್‌ ನಿವಾಸಕ್ಕೆ ಪೊಲೀಸರು ಆಗಮಿಸಿದಾಗ ಮನೆಯ ಹೊರಗೆ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಆ ಸಮಯದಲ್ಲಿ ಇಮ್ರಾನ್‌ ಖಾನ್‌ ತನ್ನ ಮನೆಯಿಂದ ಎಸ್ಕೇಪ್‌ ಆಗಿದ್ದರು.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ