logo
ಕನ್ನಡ ಸುದ್ದಿ  /  ಕರ್ನಾಟಕ  /  ನೀವು ಕಾನೂನು ಪದವೀಧರರೇ, ನಿಮಗೆ ಸಿಗಲಿದೆ ಶಿಷ್ಯ ವೇತನ, ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 30 ಕಡೆ ದಿನ

ನೀವು ಕಾನೂನು ಪದವೀಧರರೇ, ನಿಮಗೆ ಸಿಗಲಿದೆ ಶಿಷ್ಯ ವೇತನ, ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 30 ಕಡೆ ದಿನ

Umesha Bhatta P H HT Kannada

Sep 22, 2024 10:10 AM IST

google News

ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ ಮಾಡಲಾಗಿದೆ.

    • ಕರ್ನಾಟಕದ ಕಾನೂನು ಪದವೀಧರರಿಗೆ ಶಿಷ್ಯ ವೇತನವನ್ನು ನೀಡಲಾಗುತ್ತಿದ್ದು. ಅರ್ಹ ಪದವೀಧರರಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. 
ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ ಮಾಡಲಾಗಿದೆ.
ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ ಮಾಡಲಾಗಿದೆ.

ಬೆಂಗಳೂರು: ಕಾನೂನು ಪದವಿ ಪೂರೈಸಿರುವ ಕರ್ನಾಟಕದ ಅಭ್ಯರ್ಥಿಗಳಿಂದ ಶಿಷ್ಯ ವೇತನಕ್ಕೆ ಅಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಸಲುವಾಗಿ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿದ್ದು, ಅರ್ಹ ಕಾನೂನು ಪದವೀಧರರು ಸೆಪ್ಟೆಂಬರ್, 30 ರವರೆಗೆ ಇಲಾಖಾ ವೆಬ್‍ಸೈಟ್: www.sw.kar.nic.inನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಸಲ್ಲಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಯು ಕೊಡಗು ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು 03 ಅಥವಾ 05 ವರ್ಷಗಳ ಒಳಗಡೆ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪ್ರಾಸಿಕ್ಯೂಟ್ ಬಳಿ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಬಿಟ್ಟು ಹೋಗಬಾರದು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರಿ ಸಿಕ್ಕಿದಲ್ಲಿ ಮಾತ್ರ ನಿಯಮಾನುಸಾರ ಸಡಿಲಗೊಳಿಸಲಾಗುವುದು. ಒಂದು ವೇಳೆ ತರಬೇತಿ ಬಿಟ್ಟು ಹೋದಲ್ಲಿ ಅಂತವರ ಶಿಷ್ಯ ವೇತನವನ್ನು ನಿಯಮಾನುಸಾರ ವಸೂಲಿ ಮಾಡಲಾಗುವುದು.

ತರಬೇತಿ ಅವಧಿಯು 02 ವರ್ಷಗಳಾಗಿದ್ದು, ಮಾಸಿಕ ರೂ.10 ಸಾವಿರ ಗಳಿಗೆ ಶಿಷ್ಯವೇತನವನ್ನು ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ.2.50 ಲಕ್ಷ ಮೀರತಕ್ಕದ್ದಲ್ಲ. ಸುಳ್ಳು ಮಾಹಿತಿ ದಾಖಲಾತಿಗಳನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿ ಪಡಿಸಲಾಗುವುದು. ಅಂತಹ ಅಭ್ಯರ್ಥಿಗಳಿಂದ ತರಬೇತಿ ಅವಧಿಯಲ್ಲಿ ನೀಡಿದ ಶಿಷ್ಯವೇತನವನ್ನು ಶೇ.10ರ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು.

ಅರ್ಜಿಯಲ್ಲಿ ಪೂರ್ಣ ಮಾಹಿತಿ ಇಲ್ಲದಿದ್ದ ಪಕ್ಷದಲ್ಲಿ ಅರ್ಜಿ ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಯು ಕಾನೂನು ಪದವಿಯಲ್ಲಿ ತೇರ್ಗಡೆ ಹೊಂದಿದ 03 ವರ್ಷದೊಳಗಾಗಿ ಬಾರ್ ಕೌನ್ಸಿಲ್‍ನಲ್ಲಿ ಹೆಸರು ನೊಂದಾಯಿಸಿದ ನಂತರ ಶಿಷ್ಯವೇತನ ಮತ್ತು ಎನ್‍ರೋಲ್‍ಮೆಂಟ್ ಫೀಯನ್ನು ನೀಡತಕ್ಕದ್ದು.

ಅಭ್ಯರ್ಥಿಯು ಸುಳ್ಳು ಪ್ರಮಾಣ ಪತ್ರಗಳನ್ನು ನೀಡಿದ್ದಲ್ಲಿ ಮತ್ತು ತರಬೇತಿಗೆ ಮಾಹಿತಿ ನೀಡದೆ ಗೈರು ಹಾಜರಾಗಿದ್ದಲ್ಲಿ ಶಿಷ್ಯ ವೇತನವನ್ನು ತಡೆಯಲಾಗುವುದು. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಕಾನೂನು ಪದವೀಧರ ತರಬೇತಿಗೆ ಆಯ್ಕೆಯಾದ ಮಹಿಳಾ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಗರ್ಭಿಣಿ ಸ್ಥಿತಿಯಲ್ಲಿರುವ ವೇಳೆ ಮಹಿಳಾ ಅಭ್ಯಥಿಗಳಿಗೆ 135 ದಿನಗಳ ತರಬೇತಿ ಭತ್ಯೆ ರಹಿತ ರಜೆಯನ್ನು (2 ವರ್ಷಗಳ ತರಬೇತಿಗೆ 1 ಬಾರಿ ಮಾತ್ರ) ವೈದ್ಯಕೀಯ ಪ್ರಮಾಣ ಪತ್ರ ಪಡೆದು ರಜೆ ಮಂಜೂರುಗೊಳಿಸಿ ತರಬೇತಿಯನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‍ಸೈಟ್: www.sw.kar.nic.in ನಲ್ಲಿ ಸೆಪ್ಟೆಂಬರ್, 30 ರವರೆಗೆ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ದಾಖಲಾತಿಗಳನ್ನು ಸಲ್ಲಿಸಬೇಕಾದ ಕಚೇರಿಗಳ ವಿವರ. ಆಯಾ ಜಿಲ್ಲಾ ಉಪನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ