logo
ಕನ್ನಡ ಸುದ್ದಿ  /  ಕರ್ನಾಟಕ  /  Vishwakarma Nigama: ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಸಹಾಯಧನ, ಸಾಲ ಸೌಲಭ್ಯ, ಅರ್ಜಿ ಸಲ್ಲಿಕೆಗೆ ಆಗಸ್ಟ್ 31 ಕೊನೆಯ ದಿನ

VishwaKarma Nigama: ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಸಹಾಯಧನ, ಸಾಲ ಸೌಲಭ್ಯ, ಅರ್ಜಿ ಸಲ್ಲಿಕೆಗೆ ಆಗಸ್ಟ್ 31 ಕೊನೆಯ ದಿನ

Umesha Bhatta P H HT Kannada

Aug 09, 2024 07:50 PM IST

google News

ಕರ್ನಾಟಕ ವಿಶ್ವಕರ್ಮ ಅಭಿವೃದ್ದಿ ನಿಗಮವು ವಿವಿಧ ಸೌಲಭ್ಯಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

    • ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮವು 2024-25ನೇ ಸಾಲಿನ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಗಸ್ಟ್‌ 31 ರೊಳಗೆ ಸಲ್ಲಿಸಲು ಸೂಚಿಸಲಾಗಿದೆ.
ಕರ್ನಾಟಕ ವಿಶ್ವಕರ್ಮ ಅಭಿವೃದ್ದಿ ನಿಗಮವು ವಿವಿಧ ಸೌಲಭ್ಯಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ವಿಶ್ವಕರ್ಮ ಅಭಿವೃದ್ದಿ ನಿಗಮವು ವಿವಿಧ ಸೌಲಭ್ಯಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಬೆಂಗಳೂರು: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಸಮುದಾಯದವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಗಳಡಿ ಸಹಾಯಧನ/ ಸಾಲ, ಸೌಲಭ್ಯ ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ. (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ).

ಏನೇನು ನಿಯಮಗಳಿವೆ?

ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿದೆ.

ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.

ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.

ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು. ವಾರ್ಷಿಕ ವರಮಾನ ರೂ.3.50 ಲಕ್ಷಗಳು.

ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು.

ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98 ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ. 1.20 ಲಕ್ಷಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ಮೀಸಲಾತಿ ಇರಿಸಿದೆ.

ರಾಜ್ಯ ಸರ್ಕಾರದ/ ನಿಗಮದ ಯೋಜನೆಗಳ ವಿವರ

ಆನ್‍ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಯೋಜನೆಗಳು: ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ),

ಗಂಗಾ ಕಲ್ಯಾಣ ಯೋಜನೆ. ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು.

ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕ್‍ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ. ವಿದೇಶಿ ವ್ಯಾಸಂಗ ಯೋಜನೆ-ಈ ಯೋಜನೆಯಡಿ ವಾರ್ಷಿಕ ವರಮಾನವು ರೂ.8 ಲಕ್ಷಗಳ ಮಿತಿಯಲ್ಲಿರಬೇಕು. ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆ-ಈ ಯೋಜನೆಯಡಿ ಅರ್ಜಿಯನ್ನು www.kaushalkar.com ನಲ್ಲಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು. (ಶ್ರೀ /ಶ್ರೀಮತಿ /ಕುಮಾರಿ ಮುಂತಾದ ಮಾಹಿತಿಗಳು).

ಬೆಂಗಳೂರು-ಒನ್/ ಕರ್ನಾಟಕ-ಒನ್/ ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಡಿ ಅರ್ಜಿ ಸಲ್ಲಿಸಲು ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ಸೈಟ್: https://kvcdcl.karnataka.gov.in ರಲ್ಲಿ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿಗಳನ್ನು ಸಂಪರ್ಕಿಬಹುದಾಗಿದೆ

ಜಿಲ್ಲೆಗಳಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಪಡೆಯಬಹುದಾಗಿದೆ.

2023-24 ನೇ ಸಾಲಿನಲ್ಲಿ ಯೋಜನೆಗೆ ಅರ್ಜಿಸಲ್ಲಿಸಿರುವ ಅರ್ಜಿದಾರರು ಮತ್ತೊಮ್ಮೆ ಬೇರೆ ಯೋಜನೆಗಳಿಗೆ ಅರ್ಜಿಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ” ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆ ದಿನವಾಗಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ