logo
ಕನ್ನಡ ಸುದ್ದಿ  /  Karnataka  /  Gruha Jyothi Yojane Govt Notification Cm 200 Unit Electricity Free Siddramaiah Congress Guarantee Karnataka News Uks

Gruha Jyothi Yojane: ಪ್ರತಿ ಮನೆಗೂ ಗರಿಷ್ಠ 200 ಯೂನಿಟ್‌ ವಿದ್ಯುತ್‌ ಉಚಿತಕ್ಕೆ 10 ಷರತ್ತು ಅನ್ವಯ; ಅರ್ಜಿ ಸಲ್ಲಿಸಿದರಷ್ಟೆ ಕರೆಂಟ್‌ ಫ್ರೀ

HT Kannada Desk HT Kannada

Jun 06, 2023 07:15 AM IST

ಗೃಹ ಜ್ಯೋತಿ ಯೋಜನೆಯ ಅಧಿಸೂಚನೆ ಪ್ರಕಟ

  • Gruha Jyothi Yojane: ಮನೆ ಮಾಲೀಕರು ಇರುವಂತಹ ಮನೆಗಳಲ್ಲಿ ಎಲ್ಲ ಮನೆಗಳಿಗೆ 200 ಯೂನಿಟ್‌ ಫ್ರೀ ವಿದ್ಯುತ್‌ ಸಿಗಲ್ಲ. ಈ ಯೋಜನೆಯ ಫಲಾನುಭವಿ ಆಗಲು ಅರ್ಜಿ ಸಲ್ಲಿಸುವುದು ಕಡ್ಡಾಯ. ಮತ್ತೇನಿದೆ ಷರತ್ತು? ವಿವರಗಳಿಗೆ ಮುಂದೆ ಓದಿ.

    Congress Guarantee, Gruha Jyothi Yojane, Siddaramaiah, Karnataka Govt

ಗೃಹ ಜ್ಯೋತಿ ಯೋಜನೆಯ ಅಧಿಸೂಚನೆ ಪ್ರಕಟ
ಗೃಹ ಜ್ಯೋತಿ ಯೋಜನೆಯ ಅಧಿಸೂಚನೆ ಪ್ರಕಟ (KPCC)

ಕಾಂಗ್ರೆಸ್‌ ಪಕ್ಷದ ಚುನಾವಣಾ ಗ್ಯಾರೆಂಟಿ (Congress Guarantee)ಗಳ ಪೈಕಿ ಮೊದಲನೆಯದು ಪ್ರತಿ ಮನೆಗೆ 200 ಯೂನಿಟ್‌ ಕರೆಂಟ್‌ ಫ್ರೀ. ಈ ಗೃಹ ಜ್ಯೋತಿ ಯೋಜನೆ (Gruha Jyothi Yojane) ಜಾರಿಗೊಳಿಸುವುದಕ್ಕೆ ಸಿದ್ದರಾಮಯ್ಯ (Siddaramaiah)ನೇತೃತ್ವದ ಕರ್ನಾಟಕ ಸರ್ಕಾರ (Karnataka Govt) ಇಂದು (ಜೂ.5) ಅಧಿಸೂಚನೆ ಪ್ರಕಟಿಸಿದೆ.

ಟ್ರೆಂಡಿಂಗ್​ ಸುದ್ದಿ

Mangalore News: ಶಿಬರೂರಿನ ನಾಗಮಂಡಲಕ್ಕೆ ಹಿಂಗಾರ ಹರಕೆ ಅರ್ಪಿಸಿದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ; ಮಕ್ಕಳು, ತಾಯಿ ಸುನಂದಾ ಶೆಟ್ಟಿ ಸಾಥ್

ಕರ್ನಾಟಕ ಹವಾಮಾನ ಏಪ್ರಿಲ್ 28: ತಗ್ಗಿದ ಮಳೆ, ಮುಂದುವರಿದ ತಾಪಮಾನ; ಕೋಲಾರ, ಚಿಕ್ಕಬಳ್ಳಾಪುರ ಸೇರಿ 15 ಜಿಲ್ಲೆಗಳಿಗೆ ಶಾಖದ ಅಲೆಯ ಎಚ್ಚರಿಕೆ

Sankey Tank Lake: ಮಳೆ ಕೊರತೆ, ತಾಪಮಾನ ಹೆಚ್ಚಳ; ಬತ್ತುವ ಹಂತಕ್ಕೆ ಬಂದಿದೆಯಾ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಕೆರೆ

Uttara Kannada News: ಪ್ರವಾಸೋದ್ಯಮಕ್ಕೆ ರಣ ಬಿಸಿಲಿನ ಹೊಡೆತ; ಉತ್ತರ ಕನ್ನಡ ಬೀಚ್‌ಗಳಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖ

ಇದರಂತೆ, ಗೃಹ ಜ್ಯೋತಿ ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10ರಷ್ಟು ಹೆಚ್ಚಿನ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕೆ ಅನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಮನ್ನಾ ಮಾಡಲು ಸರ್ಕಾರ ಅನುಮತಿ ನೀಡಿದೆ.

ಅದೇ ರೀತಿ, 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಬೇಕು ಎಂಬ ಪ್ರಸ್ತಾವನೆಗೆ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಯಾವಾಗದಿಂದ 200 ಯೂನಿಟ್‌ ಉಚಿತ ವಿದ್ಯುತ್‌ ಜಾರಿ

ಈ ಯೋಜನೆಯನ್ನು ಜುಲೈ 2023ರ ತಿಂಬಳ ವಿದ್ಯುತ್‌ ಬಳಕೆಗೆ ಆಗಸ್ಟ್ 2023ರ ತಿಂಗಳಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಈ ಕೆಳಕಂಡ ಷರತ್ತುಗಳೊಂದಿಗೆ ಜಾರಿಗೆ ತರಲು ಆದೇಶಿಸಿದೆ.

ಜೂನ್‌ 30ರ ಅಂತ್ಯಕ್ಕೆ (ಜೂನ್ 2023ರ ಮಾಹೆಯಲ್ಲಿ ಬಳಸಿದ ವಿದ್ಯುತ್‌ ಪ್ರಮಾಣಕ್ಕೆ ಜುಲೈ 2023ರಲ್ಲಿ ವಿತರಿಸಿದ ಬಿಲ್ಲಿನ ಮೊತ್ತ ಒಳಗೊಂಡಂತೆ) ಬಾಕಿ ಇರುವ ವಿದ್ಯುತ್‌ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದ್ದು. ಬಾಕಿ ಮೊತ್ತವನ್ನು ನಿಗದಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್‌ ಸ್ಥಾವರ ಸಂಪರ್ಕವನ್ನು ಕಡಿತಗೊಳಿಸಲಾಗುವುದು.

ಗೃಹ ವಿದ್ಯುತ್‌ ಗ್ರಾಹಕರ ಸ್ಥಾವರಗಳಿಗೆ ಮಾಪಕವನ್ನು ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯ.

ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯ ಸೌಲಭ್ಯಕ್ಕೆ ಅರ್ಹರು.

ಎಲ್ಲ ವಿದ್ಯುತ್‌ ಸಂಪರ್ಕಗಳಿಗೆ ಇಲ್ಲ ಪ್ರಯೋಜನ

ಈ ಯೋಜನೆಯು ಗೃಹ ಬಳಕೆಯ ವಿದ್ಯುತ್‌ ಸಂಪರ್ಕಗಳಿಗೆ ಮಾತ್ರ ಅನ್ವಯ. ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್‌ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ.

ಪ್ರತಿ ತಿಂಗಳ ಮಿಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸುವುದು.

ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಜಿಲ್‌ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ net bill ನೀಡುವುದು ಹಾಗೂ ಗ್ರಾಹಕರು net bill ನ್ನು ಪಾವತಿಸುವುದು

ಅರ್ಹ ಯೂನಿಟ್ ಮೊತ್ತಕ್ಕಿಂತ ಒಳಗೆ ಬಿಲ್‌ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು.

ಅರ್ಜಿ ಸಲ್ಲಿಸಿದವರಷ್ಟೆ ಗೃಹ ಜ್ಯೋತಿ ಫಲಾನುಭವಿ

ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.

ಪ್ರತಿ ಫಲಾನುಭವಿಯು ತನ್ನ Customer ID / Account ID ಅನ್ನು ಆಧಾರ್‌ಗೆ ಕಡ್ಡಾಯವಾಗಿ ಜೋಡಣೆ ಮಾಡುವುದು.

ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ / ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿ ಗ್ರಾಹಕರುಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡೆ ಮಾಡಲಾಗುತ್ತದೆ.

ಗ್ರಾಹಕನಿಗೆ ನೀಡಿದ ಉಚಿತ ಮೊತ್ತವನ್ನು ಸರ್ಕಾರದಿಂದ ವಿದ್ಯುತ್‌ ಸರಬರಾಜು ಕಂಪನಿಗಳಿಗೆ ಸಹಾಯಧನದ ಮೂಲಕ ಪಾವತಿಸಲಾಗುವುದು ಎಂದು ಅಧಿಸೂಚನೆ ತಿಳಿಸಿದೆ.

ಈ ಸಂಬಂಧ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಜೂನ್‌ 2ರಂದು ಪ್ರಸ್ತಾವನೆ ಅಂಗೀಕರಿಸಿತ್ತು. ಅದರಂತೆ ಈಗ ಅಧಿಸೂಚನೆ ಪ್ರಕಟವಾಗಿದೆ.

    ಹಂಚಿಕೊಳ್ಳಲು ಲೇಖನಗಳು