logo
ಕನ್ನಡ ಸುದ್ದಿ  /  ಕರ್ನಾಟಕ  /  Breaking News: ಜುಲೈ 14ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ಆರಂಭ ಸಾಧ್ಯತೆ

Breaking News: ಜುಲೈ 14ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ಆರಂಭ ಸಾಧ್ಯತೆ

D M Ghanashyam HT Kannada

Jun 28, 2023 03:46 PM IST

ಗೃಹಲಕ್ಷ್ಮಿ ಯೋಜನೆಗೆ ಜುಲೈ 14 ರಿಂದ ಅರ್ಜಿ ಸ್ವೀಕಾರ ಸಾಧ್ಯತೆ

  • Gruhalakshmi Yojane: ಬಹು ನಿರೀಕ್ಷೆಯ ಗೃಹಲಕ್ಷ್ಮಿ ಯೋಜನೆಯ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಿದೆ. ಇದರ ಅರ್ಜಿ ಬಿಡುಗಡೆ ಜುಲೈ 14ಕ್ಕೆ ನಡೆಯುವ ಸಾಧ್ಯತೆ ಇದೆ. 

ಗೃಹಲಕ್ಷ್ಮಿ ಯೋಜನೆಗೆ ಜುಲೈ 14 ರಿಂದ ಅರ್ಜಿ ಸ್ವೀಕಾರ ಸಾಧ್ಯತೆ
ಗೃಹಲಕ್ಷ್ಮಿ ಯೋಜನೆಗೆ ಜುಲೈ 14 ರಿಂದ ಅರ್ಜಿ ಸ್ವೀಕಾರ ಸಾಧ್ಯತೆ

ಬೆಂಗಳೂರು: ಕರ್ನಾಟಕದ ಜನತೆ ಕಾತರದಿಂದ ನಿರೀಕ್ಷಿಸುತ್ತಿರುವ ಗೃಹಲಕ್ಷ್ಮಿ ಯೋಜನೆ ಕುರಿತು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆಯಾಗಿದೆ ಎಂದು ಸಚಿವ ಎಚ್‌.ಕೆ.ಪಾಟೀಲ ಹೇಳಿದರು.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಮೇ 23 ರಿಂದ ಜೂನ್ 9 ರ ತನಕ ಬೃಹತ್ ಮಾವು ಹಲಸಿನ ಮೇಳ, ಒಂದೇ ಸೂರಿನಡಿ ಹತ್ತಾರು ಬಗೆಯ ಹಣ್ಣು

ಕರ್ನಾಟಕ ಬರ ಪರಿಸ್ಥಿತಿ; 32 ಲಕ್ಷಕ್ಕೂ ಅಧಿಕ ರೈತರಿಗೆ 3454 ಕೋಟಿ ರೂ ಪರಿಹಾರ, ರಾಜ್ಯದಿಂದಲೂ 16 ಲಕ್ಷ ರೈತ ಕುಟುಂಬಕ್ಕೆ ತಲಾ 3,000 ರೂ

ಕರಾವಳಿಯಲ್ಲಿ ಹೃದಯಾಘಾತದಿಂದಾಗಿ ಇಬ್ಬರ ಸಾವು; ಖೋಟಾ ನೋಟು ಪ್ರಕರಣ ಆರೋಪಿಗಳಿಂದ ಮಹತ್ವದ ಮಾಹಿತಿ

ಕೊಚ್ಚಿಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ, ಬೆಂಗಳೂರು ವಿಮಾನನಿಲ್ದಾಣದಲ್ಲಿ ತುರ್ತುಭೂಸ್ಪರ್ಶ, 150 ಪ್ರಯಾಣಿಕರು ಸೇಫ್

ಯೋಜನೆಯ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಕುರಿತು ಶೀಘ್ರದಲ್ಲಿಯೇ ಅಧಿಕೃತ ಹೇಳಿಕೆ ನೀಡಲಿದ್ದಾರೆ. ಜುಲೈ 14ರಿಂದ ಈ ಯೋಜನೆ ಆರಂಭವಾಗುವ ನಿರೀಕ್ಷೆಯಿದೆ. ಈ ಕುರಿತು ಚರ್ಚೆ ನಡೆದಿದೆ ಎಂದು ಅವರು ತಿಳಿಸಿದರು.

ಗೃಹಲಕ್ಷ್ಮಿ ವಿಚಾರವಾಗಿ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಕುರಿತು ಅಧಿಕೃತವಾಗಿ ನಿಮ್ಮ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಜುಲೈ 14ರಿಂದ ಗೃಹಲಕ್ಷ್ಮಿ ಆರಂಭಿಸಲು ಚರ್ಚೆಯಾಗಿದೆ. ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ವಿವರವಾದ ಕಾರ್ಯಕ್ರಮ ಪಟ್ಟಿ ಹೊರಬರಬಹುದು ಎಂದು ಮಾಹಿತಿ ನೀಡಿದರು. ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಕುರಿತು ಮುಖ್ಯಮಂತ್ರಿಯೊಂದಿಗೆ ಸಮಾಲೋಚನೆ ಮಾಡಿದ್ದಾರೆ. ಅವರೇ ಹೆಚ್ಚಿನ ವಿವರ ಒದಗಿಸುತ್ತಾರೆ ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಹಾಗೂ ಪಂಗಡವರಿಗೆ ಟೆಂಡರ್‌ ಮೂಲಕ ವಹಿಸಲಾದ ಕಾಮಗಾರಿಗಳ ಮೊತ್ತದ ಮಿತಿ 50 ಲಕ್ಷ ರೂಪಾಯಿ ಇತ್ತು. 2017-18ರ ಬಜೆಟ್‌ನಲ್ಲಿ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದರು. ಇದೀಗ ಈ ಮೊತ್ತವನ್ನು 1 ಕೋಟಿ ರೂಪಾಯಿ ಹೆಚ್ಚಿಸಲು ಪಾರದರ್ಶಕ ಅಧಿನಿಯಮಕ್ಕೆ ತಿದ್ದುಪಡಿ ಮಾಡಲು ಉದ್ದೇಶಿಸಲಾಗಿದೆ. ಇದನ್ನು ವಿಧಾನಸಭೆಯಲ್ಲಿ ಮಂಡಿಸುತ್ತೇವೆ ಎಂದು ಹೇಳಿದರು. ಕರ್ನಾಟಕ ರಸ್ತೆ ಸುರಕ್ಷತಾ ಪ್ರಾಧಿಕಾರ ಕಾಯ್ದೆಗೆ ತಿದ್ದುಪಡಿ ಮಾಡಲು ಉದ್ದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಪ್ರಾಧಿಕಾರದ ವ್ಯಾಪ್ತಿಗೆ ಬಿಬಿಎಂಪಿ ಕೂಡ ಸೇರಲಿದೆ ಎಂದು ಸಚಿವ ಪಾಟೀಲ ಹೇಳಿದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ