logo
ಕನ್ನಡ ಸುದ್ದಿ  /  ಕರ್ನಾಟಕ  /  Guest Lecturers Demand Letter: ಸೇವಾ ಭದ್ರತೆ, ಗೌರವಧನ ಹೆಚ್ಚಳ ಸಹಿತ 15 ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ ಅತಿಥಿ ಉಪನ್ಯಾಸಕರು

Guest lecturers demand letter: ಸೇವಾ ಭದ್ರತೆ, ಗೌರವಧನ ಹೆಚ್ಚಳ ಸಹಿತ 15 ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ ಅತಿಥಿ ಉಪನ್ಯಾಸಕರು

HT Kannada Desk HT Kannada

Nov 28, 2022 08:47 PM IST

google News

ಸೇವಾ ಭದ್ರತೆ, ಗೌರವಧನ ಹೆಚ್ಚಳ ಸಹಿತ 15 ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ ಅತಿಥಿ ಉಪನ್ಯಾಸಕರು

    • ಸೇವಾ ಭದ್ರತೆಯೊಂದಿಗೆ ವಾರ್ಷಿಕ ಶೇ.5ರಷ್ಟು ಗೌರವಧನ ಹೆಚ್ಚಳ, ನಿವೃತ್ತಿಯ ಸಂದರ್ಭದಲ್ಲಿ 25 ಲಕ್ಷ ರೂ.ಗಳ ಇಡಿಗಂಟು ಮತ್ತು ಕಾಯಂ ಉಪನ್ಯಾಸಕರಿಗೆ ನೀಡುವಂತೆ ತಮಗೂ ಓಓಡಿ ಹಾಗೂ ರಜೆ ಸೌಲಭ್ಯ ನೀಡಬೇಕು ಮುಂತಾದ 15 ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರಿಗೆ ಸೋಮವಾರ ಮನವಿ ಸಲ್ಲಿಸಿದೆ.
ಸೇವಾ ಭದ್ರತೆ, ಗೌರವಧನ ಹೆಚ್ಚಳ ಸಹಿತ 15 ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ ಅತಿಥಿ ಉಪನ್ಯಾಸಕರು
ಸೇವಾ ಭದ್ರತೆ, ಗೌರವಧನ ಹೆಚ್ಚಳ ಸಹಿತ 15 ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ ಅತಿಥಿ ಉಪನ್ಯಾಸಕರು

ಬೆಂಗಳೂರು: ಸೇವಾ ಭದ್ರತೆಯೊಂದಿಗೆ ವಾರ್ಷಿಕ ಶೇ.5ರಷ್ಟು ಗೌರವಧನ ಹೆಚ್ಚಳ, ನಿವೃತ್ತಿಯ ಸಂದರ್ಭದಲ್ಲಿ 25 ಲಕ್ಷ ರೂ.ಗಳ ಇಡಿಗಂಟು ಮತ್ತು ಕಾಯಂ ಉಪನ್ಯಾಸಕರಿಗೆ ನೀಡುವಂತೆ ತಮಗೂ ಓಓಡಿ ಹಾಗೂ ರಜೆ ಸೌಲಭ್ಯ ನೀಡಬೇಕು ಮುಂತಾದ 15 ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರಿಗೆ ಸೋಮವಾರ ಮನವಿ ಸಲ್ಲಿಸಿದೆ.

ಸಂಘಟನೆಯ ಗೌರವಾಧ್ಯಕ್ಷರಾಗಿರುವ ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಅವರ ನೇತೃತ್ವದಲ್ಲಿ ಸಂಘದ ರಾಜ್ಯಾಧ್ಯಕ್ಷ ಅರುಣ್‌ ಶಿವಮೊಗ್ಗ ಮತ್ತಿತರರು ಈ ಮನವಿಯನ್ನು ಕೊಟ್ಟರು. ಮನವಿ ಸ್ವೀಕರಿಸಿದ ಸಚಿವರು, ಈ ಬೇಡಿಕೆಗಳನ್ನು ಈಡೇರಿಸುವ ಸಾಧ್ಯಾಸಾಧ್ಯತೆಗಳ ಬಗ್ಗೆ ಪರಿಶೀಲಿಸುವುದಾಗಿ ಹೇಳಿದರು.

ರಾಜ್ಯದ ಉನ್ನತ ಶಿಕ್ಷಣ ವಲಯದಲ್ಲಿ ಎನ್‌ಇಪಿ ಜಾರಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿರುವ 11 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿಗೆ ಸೇವಾ ವಿಲೀನದ ಸೌಲಭ್ಯ ನೀಡುವ ಮೂಲಕ, ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಬೇಕು. ಹಾಗೆಯೇ ಎನ್‌ಇಪಿ ಅನುಸಾರ 40-50 ವಿದ್ಯಾರ್ಥಿಗಳಂತೆ ಒಂದೊಂದು ತರಗತಿಗಳನ್ನು ವಿಭಾಗಿಸುವುದರಿಂದ ತಮ್ಮ ನೇಮಕಾತಿಗೆ ಇಲ್ಲಿ ಪರಿಗಣಿಸಬೇಕು ಎಂದು ಸಂಘಟನೆಯು ಕೇಳಿಕೊಂಡಿದೆ.

ಇದರ ಜತೆಗೆ ನೇಮಕಾತಿಗಳಲ್ಲಿ ಮೀಸಲಾತಿ, ವಯೋಮಿತಿ ಸಡಿಲಿಕೆ, ವೇತನಸಹಿತ 6 ತಿಂಗಳ ಮಾತೃತ್ವ/ಪಿತೃತ್ವ ರಜೆ, ವಿಮೆ, ಇಎಸ್‌ಐ ಮತ್ತು ಇಪಿಎಫ್‌ ಸೌಲಭ್ಯಗಳನ್ನು ಕೂಡ ತಮಗೆ ಒದಗಿಸಬೇಕು. ಹಾಗೆಯೇ, ಮೌಲ್ಯಮಾಪನಕ್ಕೆ ತೆರಳಿದ ದಿನಗಳ ಗೌರವಧನವನ್ನು ಕಡಿತ ಮಾಡಬಾರದು. ಪರಸ್ಪರ ಸ್ಥಳ ಬದಲಾವಣೆ ಮತ್ತು ಕಾರ್ಯಭಾರದ ಕೊರತೆ ಉಂಟಾದಲ್ಲಿ ಕರ್ತವ್ಯದಿಂದ ಬಿಡುಗಡೆಗೊಳಿಸದೆ ಕಾರ್ಯಭಾರವಿರುವ ಕಾಲೇಜುಗಳಿಗೆ ವರ್ಗಾವಣೆ ಮಾಡುವ ನೀತಿಯನ್ನು ಜಾರಿಗೆ ತರಬೇಕು ಎಂದು ಮನವಿಯಲ್ಲಿ ಗಮನ ಸೆಳೆಯಲಾಗಿದೆ.

ಗಮನಿಸಬಹುದಾದ ಇತರೆ ಸುದ್ದಿಗಳು

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಮಾರ್ಚ್‌ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಮಾರ್ಚ್‌ 9, 2023ರಿಂದ ಮಾರ್ಚ್‌ 29, 2023ರವರೆಗೆ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ಹೆಚ್ಚಿನ ಓದಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ 'ಏರೋ ಇಂಡಿಯಾ'ಗೆ ಡೇಟ್​ ಫಿಕ್ಸ್

ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನವಾದ 'ಏರೋ ಇಂಡಿಯಾ' ಕಳೆದ ಕೆಲವು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿದೆ. ಈ ವರ್ಷ 2023 ರ ಫೆಬ್ರವರಿ 13 ರಿಂದ 17 ರವೆಗೆ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಅಧಿಕೃತವಾಗಿ ಪ್ರಕಟಿಸಿದೆ. ವಿವರ ಓದಿಗೆ ಇಲ್ಲಿ ಕ್ಲಿಕ್ಕಿಸಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ