logo
ಕನ್ನಡ ಸುದ್ದಿ  /  ಕರ್ನಾಟಕ  /  Gururaghavendra Cooperative Bank Scam: ಗುರುರಾಘವೇಂದ್ರ, ವಶಿಷ್ಟ ಸೌಹಾರ್ದ ಬ್ಯಾಂಕ್ ಹಗರಣ ಸಿಬಿಐಗೆ: ಸಚಿವ ಎಸ್ಟಿಎಸ್

Gururaghavendra Cooperative Bank scam: ಗುರುರಾಘವೇಂದ್ರ, ವಶಿಷ್ಟ ಸೌಹಾರ್ದ ಬ್ಯಾಂಕ್ ಹಗರಣ ಸಿಬಿಐಗೆ: ಸಚಿವ ಎಸ್ಟಿಎಸ್

HT Kannada Desk HT Kannada

Jan 17, 2023 07:44 PM IST

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ನ ಅವ್ಯವಹಾರಗಳು ಮತ್ತು ಪುನಃಶ್ಚೇತನ ಹಾಗೂ ವಶಿಷ್ಟ ಸೌಹಾರ್ದ ಸಹಕಾರಿ ಬ್ಯಾಂಕ್ ನ ಅವ್ಯವಹಾರಗಳ ಕುರಿತ ಪರಾಮರ್ಶೆ ಸಭೆಯನ್ನು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ನಡೆಸಿದ್ದಾರೆ.

  • ಗುರುರಾಘವೇಂದ್ರ ಸಹಕಾರ ಬ್ಯಾಂಕ್, ವಶಿಷ್ಟ ಸೌಹಾರ್ದ ಸಹಕಾರಿ ಬ್ಯಾಂಕ್ ಗಳ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

 ಗುರುರಾಘವೇಂದ್ರ ಸಹಕಾರ ಬ್ಯಾಂಕ್ ನ ಅವ್ಯವಹಾರಗಳು ಮತ್ತು ಪುನಃಶ್ಚೇತನ ಹಾಗೂ ವಶಿಷ್ಟ ಸೌಹಾರ್ದ ಸಹಕಾರಿ ಬ್ಯಾಂಕ್ ನ ಅವ್ಯವಹಾರಗಳ ಕುರಿತ ಪರಾಮರ್ಶೆ ಸಭೆಯನ್ನು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ನಡೆಸಿದ್ದಾರೆ.
ಗುರುರಾಘವೇಂದ್ರ ಸಹಕಾರ ಬ್ಯಾಂಕ್ ನ ಅವ್ಯವಹಾರಗಳು ಮತ್ತು ಪುನಃಶ್ಚೇತನ ಹಾಗೂ ವಶಿಷ್ಟ ಸೌಹಾರ್ದ ಸಹಕಾರಿ ಬ್ಯಾಂಕ್ ನ ಅವ್ಯವಹಾರಗಳ ಕುರಿತ ಪರಾಮರ್ಶೆ ಸಭೆಯನ್ನು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ನಡೆಸಿದ್ದಾರೆ.

ಬೆಂಗಳೂರು: ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆನ್ನುವ ಪ್ರತಿಪಕ್ಷಗಳ ಬೇಡಿಕೆಯನ್ನು ಸರ್ಕಾರ ಈ ಹಿಂದೆ ತಿರಸ್ಕರಿಸಿತ್ತು. ಇದರಿಂದಾಗಿ ಬೆಳಗಾವಿಯಲ್ಲಿ ನಡೆದಿದ್ದ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಸದಸ್ಯರು ಧರಣಿಯನ್ನ ನಡೆಸಿದ್ದರು.

ಟ್ರೆಂಡಿಂಗ್​ ಸುದ್ದಿ

CET Results2024: ಕರ್ನಾಟಕ ಸಿಇಟಿ ಫಲಿತಾಂಶ ಇಂದು ಪ್ರಕಟ ಸಾಧ್ಯತೆ, ನಿಮ್ಮ ಅಂಕ ನೋಡುವುದು ಹೀಗೆ

Bangalore News: ತಮಿಳುನಾಡಿನಲ್ಲಿ ಗುಂಡು ತಗುಲಿ ಬೆಂಗಳೂರಿನ ಯೋಧ ಸಾವು

Hassan Scandal: ಗೃಹ ಇಲಾಖೆ ಬೇರೆಯವರಿಂದ ಹೈಜಾಕ್‌‌, ಪ್ರಜ್ವಲ್‌ ರೇವಣ್ಣ ಪ್ರಕರಣ ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ, ಅಶೋಕ ಆರೋಪ

Karnataka Rains: ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹೊಸದುರ್ಗ,ಚನ್ನಗಿರಿಯಲ್ಲಿ ಭಾರೀ ಮಳೆ, ನಿಮ್ಮೂರಲ್ಲಿ ಎಷ್ಟು ಮಳೆಯಾಗಿದೆ ?

ಸದಸ್ಯರ ಒತ್ತಡಕ್ಕೆ ಮಣಿದ ಸರ್ಕಾರ ತನಿಖಾ ಪ್ರಗತಿ ಕುರಿತು ಜನಪ್ರತಿನಿಧಿಗಳು, ಅಧಿಕಾರಿಗಳು, ಪೊಲೀಸರೊಂದಿಗೆ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುವ ಕುರಿತು ಸರ್ಕಾರ ತನ್ನ ನಿಲುವನ್ನು ಅಂದಿನ ವಿಧಾನ ಪರಿಷತ್​ನಲ್ಲಿ ತಿಳಿಸಿತ್ತು.

ವಿಕಾಸಸೌಧದಲ್ಲಿ ಇಂದು (ಜನವರಿ 17, ಮಂಗಳವಾರ) ನಡೆದ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ನ ಅವ್ಯವಹಾರಗಳು ಮತ್ತು ಪುನಃಶ್ಚೇತನ ಹಾಗೂ ವಶಿಷ್ಟ ಸೌಹಾರ್ದ ಸಹಕಾರಿ ಬ್ಯಾಂಕ್ ನ ಅವ್ಯವಹಾರಗಳ ಕುರಿತ ಪರಾಮರ್ಶೆ ಸಭೆ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರ ನೇತೃತ್ವದಲ್ಲಿ ನಡೆಯಿತು.

ಗುರುರಾಘವೇಂದ್ರ ಸಹಕಾರ ಬ್ಯಾಂಕ್, ವಶಿಷ್ಟ ಸೌಹಾರ್ದ ಸಹಕಾರಿ ಬ್ಯಾಂಕ್ ಗಳ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

ಗುರುರಾಘವೇಂದ್ರ, ವಶಿಷ್ಠ ಸೌಹಾರ್ದ ಸೇರಿದಂತೆ ಇತರೆ ಯಾವುದೇ ಬ್ಯಾಂಕ್ ಗಳಲ್ಲಿ ನಡೆದಿರುವ ಅವ್ಯವಹಾರಗಳಿದ್ದರೆ ಆ ಪ್ರಕರಣಗಳನ್ನು ಸಹ ಸಿಬಿಐಗೆ ವಹಿಸಲು ಶಿಫಾರಸು ಮಾಡಲಾಗುತ್ತದೆ. ಈ ಕುರಿತು ನಿರ್ಣಯ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಯಾವುದೇ ಫಲಿತಾಂಶ ಬರುತ್ತಿಲ್ಲ

ಹಗರಣದ ತನಿಖೆ ಆರಂಭವಾಗಿ ಮೂರು ವರ್ಷವಾದರೂ ಸಾಲ ವಸೂಲಾತಿ ಆಗುತ್ತಿಲ್ಲ. ಸಭೆಗಳು ಮಾತ್ರ ನಡೆಯುತ್ತಿವೆಯೇ ಹೊರತು ಯಾವುದೇ ಫಲಿತಾಂಶ ಬರುತ್ತಿಲ್ಲ. ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಸಮಸ್ಯೆ ಏನು ಎಂದು ಗುರುರಾಘವೇಂದ್ರ ಬ್ಯಾಂಕ್ ನ ಆಡಳಿತಾಧಿಕಾರಿಯನ್ನು ಪ್ರಶ್ನಿಸಿದ್ದಾರೆ.

ಸರ್ಕಾರದ ಮೇಲೆ ಠೇವಣಿದಾರರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಠೇವಣಿದಾರರ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಪ್ರಕರಣವನ್ನು ಸಿಬಿಐಗೆ ವಹಿಸಲಾಗುವುದು. ಸಂಪುಟದಲ್ಲಿ ಈ ಕುರಿತು ಪ್ರಸ್ತಾವನೆ ಮಂಡಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ

ಈ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಅಧಿಕಾರಿಗಳು ಸಮರ್ಥರಿದ್ದು ತನಿಖೆ ನಡೆಸುತ್ತಿದ್ದಾರೆ. ಆದರೆ ಸಾಲ ವಸೂಲಾತಿಯಲ್ಲಿ ವಿಳಂಬವಾಗುತ್ತಿದೆ. ಹೀಗಾಗಿ ಸಿಬಿಐಗೆ ವಹಿಸಿದರೆ ಠೇವಣಿದಾರರಲ್ಲೂ ವಿಶ್ವಾಸ ಮೂಡಲಿದೆ ಎಂದಿದ್ದಾರೆ.

ಶಾಸಕರಾದ ರವಿಸುಬ್ರಮಣ್ಯ, ಸೌಮ್ಯರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್ ಅವರು ಸಚಿವರ ಮಾತುಗಳಿಗೆ ಸಹಮತ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ಬ್ಯಾಂಕ್ ನ ಪುನಶ್ಚೇತನ, ಸಾಲ ವಸೂಲಾತಿಯಲ್ಲಿ ಆಗಿರುವ ಪ್ರಗತಿ ಕುರಿತು ಪರಾಮರ್ಶಿಸಲಾಯಿತು. ಈ ರೀತಿ ವಂಚನೆ ತಡೆಗೆ ಕಾನೂನಿನಲ್ಲಿ ತಿದ್ದೂಪಡಿ ತರುವ ಕುರಿತಂತೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ವಂಚನೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಬ್ಯಾಂಕ್ ಷೇರುದಾರರು ಮತ್ತು ಠೇವಣಿದಾರರ ಹಿತರಕ್ಷಣೆ ವೇದಿಕೆ ಕಳೆದ ಹಲವು ದಿನಗಳಿಂದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದೆ.

ಈ ಪ್ರಕರಣದಲ್ಲಿ ಆರ್​ಬಿಐ ಮಧ್ಯಪ್ರವೇಶಿಸಿ, ವಂಚನೆಗೆ ಒಳಗಾದವರಿಗೆ ನ್ಯಾಯ ಕೊಡಿಸಬೇಕು. ಪ್ರಕರಣವನ್ನು ರಾಜ್ಯ ಸರ್ಕಾರ ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ