CM Bommai Happy for Rishi Sunak as British PM: ಬ್ರಿಟನ್ ಪ್ರಧಾನಿಯಾಗಿ ಕರ್ನಾಟಕದ ಅಳಿಯ ರಿಷಿ ಸುನಕ್ ಆಯ್ಕೆ; ಸಿಎಂ ಬೊಮ್ಮಾಯಿ ಸಂತಸ
Oct 25, 2022 07:45 AM IST
ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಅವರು ಆಯ್ಕೆಯಾಗಿರುವುದಕ್ಕೆ ಸಿಎಂ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ.
ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಅವರು ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆ ಹಾಗೂ ಸಂತಸ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಶಿಗ್ಗಾಂವಿ(ಹಾವೇರಿ): ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಅವರು ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆ ಹಾಗೂ ಸಂತಸ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಶಿಗ್ಗಾಂವಿಯಲ್ಲಿ ನಿನ್ನೆ (ಅಕ್ಟೋಬರ್ 24, ಸೋಮವಾರ) ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಬ್ರಿಟಿಷರು ಭಾರತವನ್ನು 200 ವರ್ಷಗಳ ಕಾಲ ಆಳಿದರು. ಅವರು ಈ ಬೆಳವಣಿಗೆಯನ್ನು ನಿರೀಕ್ಷಿಸಿರಲಾರರು. ಭಾರತೀಯರು ವಿಶ್ವದಲ್ಲಿ ಎಲ್ಲ ರಂಗಗಳಲ್ಲಿ ಮುಂದಿದ್ದಾರೆ. ಹಲವು ದೇಶಗಳಲ್ಲಿ ಸಂಸದರಾಗಿಯೂ ಆಯ್ಕೆಯಾದವರಿದ್ದಾರೆ. ಇದೀಗ ರಿಷಿ ಸುನಕ್ ಅವರು ಬ್ರಿಟನ್ ಪ್ರಧಾನಿಯಾಗುವುದು ಅತ್ಯಂತ ವಿಶೇಷವಾದುದು. ಚಕ್ರ ಪೂರ್ತಿ ತಿರುಗಿದೆ ಎಂದು ಅಭಿಪ್ರಾಯ ಪಟ್ಟರು.
ಶಿಗ್ಗಾಂವಿ ಯಲ್ಲಿ ಕಿತ್ತೂರು ಚೆನ್ನಮ್ಮನ ಸ್ಮರಣಾರ್ಥ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಮುಖ್ಯಮಂತ್ರಿಗಳು ರಾಣಿ ಚೆನ್ನಮ್ಮನ ಪ್ರೇರಣೆಯಿಂದ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ 5 ಲಕ್ಷ ವರೆಗೆ ಬೀಜಧನ ಹಾಗೂ ಸಾಲ ಸೌಲಭ್ಯ ಒದಗಿಸುವ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ಈ ಯೋಜನೆಯಡಿ ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಮತ್ತಿತರ ಬೆಂಬಲ ನೀಡಲಾಗುವುದು ಎಂದು ತಿಳಿಸಿದರು. ಇದೇ ರೀತಿ ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘಗಳ ಮೂಲಕ ಯುವಕರಿಗೆ ನೆರವು ನೀಡಲಾಗುವುದು. ಡಿಸೆಂಬರ್ ನಲ್ಲಿ ಎರಡೂ ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಹೆಚ್ಚಿಸುವ ಅಧ್ಯಾದೇಶ ಜಾರಿಗೆ ಬಂದಿರುವುದು ನಿಜಕ್ಕೂ ಸಂತಸ ತಂದಿದೆ. ಈ ಸಮುದಾಯಗಳ 50 ವರ್ಷದ ಬೇಡಿಕೆ ಈಡೆರಿಸಿದಂತಾಗಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಆಧರಿಸಿ, ಸುಗ್ರೀವಾಜ್ಞೆ ಹೊರಡಿಸಲಾಗಿದ್ದು ಮುಂದಿನ ಅಧಿವೇಶನದಲ್ಲಿ ಅಂಗೀಕಾರ ಪಡೆದು, ಸಂವಿಧಾನದ 9ನೆ ಪರಿಚ್ಛೇದದಲ್ಲಿ ಸೇರ್ಪಡೆಗೊಳಿಸಲು ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.
ಸಿದ್ದರಾಮಯ್ಯನವರು ಅಹಿಂದ ನಾಯಕರಾಗಿ ಮಾಡದ ಕೆಲಸವನ್ನು ನೀವು ಮಾಡಿದ್ದೀರಿ ಎಂದ ಪತ್ರಕರ್ತರ ಮಾತಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನಾನು ನನ್ನ ಚಿಂತನೆ, ನನ್ನ ಕರ್ತವ್ಯ ವನ್ನಷ್ಟೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಬ್ರಿಟನ್ ಪ್ರಧಾನಿಯಾಗಿ ಭಾರತ ಮೂಲದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರ ಅಳಿಯನಿಗೆ ಪ್ರಧಾನಿ ಹುದ್ದೆ ಒಲಿದುಬಂದಿದೆ.
ರಿಷಿ ಸುನಕ್‌ಗೆ 193 ಸಂಸದರು ಬೆಂಬಲ ನೀಡಿದ್ದರು. ಕೇವಲ 26 ಸಂಸದರ ಬೆಂಬಲವನ್ನು ಹೊಂದುವ ಮೂಲಕ ಪ್ರತಿಸ್ಪರ್ಧಿಯಾಗಿದ್ದ ಪನ್ನಿ ಮೊರ್ಡಾಂಟ್ ರೇಸ್‌ನಿಂದ ಹಿಂದೆ ಸರಿದ ಕಾರಣ ರಿಷಿ ಸುನಕ್ ಏಕಾಂಗಿಯಾಗಿ ಪ್ರಧಾನಿ ಹುದ್ದೆಗೆ ಏರಿದರು. ಇದಕ್ಕೂ ಮೊದಲು ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.
45 ದಿನ ಅಧಿಕಾರದಲ್ಲಿದ್ದ ಲಿಜ್ ಟ್ರಸ್ ದೇಶವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡುವಲ್ಲಿ ಸೋತ ಕಾರಣ ಕೆಲವು ದಿನಗಳ ಹಿಂದಷ್ಟೇ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಭಾರತೀಯ ಸಂಜಾತ ರಿಷಿ ಸುನಕ್ ವಹಿಸಿಕೊಳ್ಳಲಿದ್ದಾರೆ.
200 ವರ್ಷಗಳ ಬ್ರಿಟನ್ ಪ್ರಜಾಪ್ರಭುತ್ವದ ಇತಿಹಾಸದಲ್ಲಿಯೇ ರಿಷಿ ಸುನಕ್ ಅವರು ಅತಿ ಕಿರಿಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂಗ್ಲೆಂಡ್‌ನ 57 ನೇ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವ ರಿಷಿ ಸುನಕ್ ಅವರಿಗೆ ಈಗ ಕೇವಲ 42 ವರ್ಷ.
ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಮಂತ್ರಿಮಂಡಲದಲ್ಲಿ ಅತಿಕಿರಿಯ ಸಚಿವನಾಗಿ ಸ್ಥಾನ ಪಡೆದಾಗ ಅವರಿಗೆ 39 ವರ್ಷ ವಯಸ್ಸಾಗಿತ್ತು. ಇದಾದ ಮೂರೇ ಜನಿಸಿದ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.ಭಾರತದ ಪಂಜಾಬ್ ಮೂಲದ ರಿಷಿ ಸುನಕ್ ಅವರು ವಿಂಚೆಸ್ಟರ್ ಕಾಲೇಜಿನಲ್ಲಿ ಶಿಕ್ಷಣ ಪಡೆದರು.
ಬಳಿಕ ಆಕ್ಸ್‌ಡ್‌ನ ಲಿಂಕನ್ ಮತ್ತು ಕಾಲೇಜಿನಲ್ಲಿ ತತ್ವಶಾಸ್ತ್ರ, ರಾಜಕೀಯ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದರು. ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಿಂದ ಫುಲ್‌ಬ್ರೈಟ್ ವಿದ್ವಾಂಸರಾಗಿ ಎಂಬಿಎ ಪಡೆದಿದ್ದಾರೆ.
ವಿಭಾಗ