logo
ಕನ್ನಡ ಸುದ್ದಿ  /  ಕರ್ನಾಟಕ  /  Bhavani Revanna: ಭವಾನಿ ರೇವಣ್ಣ ಅವರಿಗೆ ಬಿಗ್ ರಿಲೀಫ್; ಕರ್ನಾಟಕ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಆದೇಶ ಎತ್ತಿಹಿಡಿದ ಸುಪ್ರಿಂಕೋರ್ಟ್

Bhavani Revanna: ಭವಾನಿ ರೇವಣ್ಣ ಅವರಿಗೆ ಬಿಗ್ ರಿಲೀಫ್; ಕರ್ನಾಟಕ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಆದೇಶ ಎತ್ತಿಹಿಡಿದ ಸುಪ್ರಿಂಕೋರ್ಟ್

Umesha Bhatta P H HT Kannada

Oct 18, 2024 02:05 PM IST

google News

ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿದ್ದ ಭವಾನಿ ರೇವಣ್ಣ ಅವರಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್‌ ಆದೇಶವನ್ನು ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿದೆ.

    • ಹಾಸನದ ಜಿಲ್ಲಾಪಂಚಾಯಿತಿ ಮಾಜಿ ಸದಸ್ಯೆ ಭವಾನಿ ರೇವಣ್ಣ ಅವ ರ ವಿರುದ್ದದ ಪ್ರಕರಣದಲ್ಲಿ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್‌ ಆದೇಶವನ್ನು ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿದೆ.
ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿದ್ದ ಭವಾನಿ ರೇವಣ್ಣ ಅವರಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್‌ ಆದೇಶವನ್ನು ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿದೆ.
ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿದ್ದ ಭವಾನಿ ರೇವಣ್ಣ ಅವರಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್‌ ಆದೇಶವನ್ನು ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿದೆ.

ಬೆಂಗಳೂರು:ಅಪಹರಣ ಪ್ರಕರಣದಲ್ಲಿ ಜೆಡಿಎಸ್ ನಾಯಕಿ ಭವಾನಿ ರೇವಣ್ಣಅವರಿಗೆ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರಿಂಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಉಜ್ಜಲ್ ಭೂಯಾನ್ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು ಮಧ್ಯೆ ಪ್ರವೇಶಿಸುವುದಿಲ್ಲ ಎಂದೂ ಸುಪ್ರಿಂಕೋರ್ಟ್ ಹೇಳಿದೆ. ಅಪಹರಣ ಪ್ರಕರಣದಲ್ಲಿ ಭವಾನಿ ಅವರಿಗೆ ರಾಜ್ಯ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು. ಈ ಜಾಮೀನು ರದ್ದುಪಡಿಸುವಂತೆ ರಾಜ್ಯ ಸರ್ಕಾರ ಸುಪ್ರಿಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಭವಾನಿ ರೇವಣ್ಣ ಅವರು ರಾಜಕೀಯ ಕುಟುಂಬಕ್ಕೆ ಸೇರಿದ್ದಾರೆ ಎಂಬ ಒಂದೇ ಕಾರಣಕ್ಕೆ ಅವರಿಗೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ ಎಂದೂ ಅಭಿಪ್ರಾಯಪಟ್ಟಿದೆ.

ಇವರು ತಮ್ಮ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಮಹಿಳೆಯನ್ನು ದೂರು ದಾಖಲಿಸದಂತೆ ತಡೆಯಲು ಅಪಹರಿಸಿದ್ದಾರೆ ಎಂಬ ದೂರು ದಾಖಲಾಗಿತ್ತು. ಈ ವರ್ಷದ ಜೂನ್ ತಿಂಗಳಲ್ಲಿ ರಾಜ್ಯ ಹೈ ಕೋರ್ಟ್ ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಿತ್ತು.ವಿನಾಕಾರಣ ಮಹಿಳೆಯೊಬ್ಬರನ್ನು ಬಂಧಿಸುವುದು ಸರಿಯಲ್ಲ ಎಂದು ಜಾಮೀನು ನೀಡುವಾಗ ಅಭಿಪ್ರಾಯಪಟ್ಟಿತ್ತು.

ಆದರೆ ರಾಜ್ಯ ಸರ್ಕಾರ ಭವಾನಿ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ವಾದಿಸಿತ್ತು. ಭವಾನಿ ಅವರು ಪೊಲೀಸರ ಎಲ್ಲ 85 ಪ್ರಶ್ನೆಗಳಿಗೆ ಉತ್ತರಿಸಿದ್ದರು ಎನ್ನುವುದನ್ನು ಕೋರ್ಟ್ ಗುರುತಿಸಿತ್ತು. ಜೊತೆಗೆ ಪೊಲೀಸರಿಗೆ ಬೇಕಾದ ರೀತಿಯಲ್ಲೇ ಉತ್ತರಿಸಬೇಕು ಎಂದೇನೂ ಇಲ್ಲ ಎಂದೂ ಹೇಳಿತ್ತು.

ಅಪರಾಧ ನಡೆಸದಂತೆ ತಮ್ಮ ಪುತ್ರನನ್ನು ನಿಯಂತ್ರಿಸಬೇಕಿತ್ತು ಎಂಬ ಪ್ರಾಸಿಕ್ಯೂಶನ್ ವಾದವನ್ನು ಒಪ್ಪದ ನ್ಯಾಯಾಲಯ ವಯಸ್ಸಿಗೆ ಬಂದ ಮಕ್ಕಳನ್ನು ನಿಯಂತ್ರಿಸಬೇಕು ಎನ್ನುವುದು ಕಾನೂನಿಗೆ ಒಳಪಡುವುದಿಲ್ಲ ಎಂದಿತ್ತು.

ಭವಾನಿ ಅವರು ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸೇರಿದ್ದು ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆಗಳಿವೆ ಎಂದು ವಾದಿಸಿತ್ತು. ಆದರೆ ನ್ಯಾಯಾಲಯ ಈ ಅಂಶವನ್ನು ತಿರಸ್ಕರಿಸಿ ಅವರು ಜಾಮೀನಿಗೆ ಅರ್ಹರಾಗಿದ್ದಾರೆ ಎಂದು ಹೇಳಿತ್ತು. ಜೊತೆಗೆ ಆರೋಪಿಯ ಕೃತ್ಯಕ್ಕೂ ಭವಾನಿ ಅವರಿಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿತ್ತು.

ಹೈಕೋರ್ಟ್ ತೀರ್ಮಾನವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿನ ಮೊರೆ ಹೋಗಿತ್ತು. ಜುಲೈ ತಿಂಗಳಲ್ಲಿ ವಾದಿ ಪ್ರತಿವಾದಿಗಳಿಗೆ ನೋಟಿಸ್ ನೀಡಿತ್ತು. ಇಂದು ಭವಾನಿ ಅವರಿಗೆ ಸುಪ್ರಿಂಕೋರ್ಟ್ ರಿಲೀಫ್ ನೀಡಿದೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದ್ದು ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದಾರೆ.

ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಪ್ರಜ್ವಲ್ ಭಾಗಿಯಾಗಿದ್ದಾರೆ ಎನ್ನಲಾದ ಅತ್ಯಾಚಾರದ ವಿಡಿಯೋ ಗಳು ಸಾವಿರಾರು ಸಂಖ್ಯೆಯಲ್ಲಿ ಹಂಚಿಕೆಯಾಗಿದ್ದವು.

ಪ್ರಜ್ವಲ್ ರೇವಣ್ಣ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಪ್ರಜ್ವಲ್ ರೇವಣ್ಣ ವಿರುದ್ದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಎಸಗಿರುವ ಸಂಬಂಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಎಸ್ ಐ ಟಿ ಚಾರ್ಜ್‌ಶೀಟ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

(ವರದಿ: ಎಚ್. ಮಾರುತಿ, ಬೆಂಗಳೂರು)

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ