ಕನ್ನಡ ಸುದ್ದಿ  /  ಕರ್ನಾಟಕ  /  Hassan Sex Scandal: ಪ್ರಜ್ವಲ್‌ ನಂತರ ತಂದೆ ಎಚ್‌ಡಿರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ದೂರು, ಮೊಕದ್ದಮೆ ದಾಖಲು

Hassan Sex Scandal: ಪ್ರಜ್ವಲ್‌ ನಂತರ ತಂದೆ ಎಚ್‌ಡಿರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ದೂರು, ಮೊಕದ್ದಮೆ ದಾಖಲು

Umesha Bhatta P H HT Kannada

Apr 28, 2024 07:34 PM IST

ಪ್ರಜ್ವಲ್‌ ರೇವಣ್ಣ ಬಳಿಕ ಎಚ್‌ಡಿ ರೇವಣ್ಣ ವಿರುದ್ದವೂ ಮೊಕದ್ದಮೆ ದಾಖಲಿಸಲಾಗಿದೆ.

  • ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ದವೂ ಈಗ ಪ್ರಕರಣ ದಾಖಲಾಗಿದೆ.

ಪ್ರಜ್ವಲ್‌ ರೇವಣ್ಣ ಬಳಿಕ ಎಚ್‌ಡಿ ರೇವಣ್ಣ ವಿರುದ್ದವೂ ಮೊಕದ್ದಮೆ ದಾಖಲಿಸಲಾಗಿದೆ.
ಪ್ರಜ್ವಲ್‌ ರೇವಣ್ಣ ಬಳಿಕ ಎಚ್‌ಡಿ ರೇವಣ್ಣ ವಿರುದ್ದವೂ ಮೊಕದ್ದಮೆ ದಾಖಲಿಸಲಾಗಿದೆ.

ಹಾಸನ: ಲೈಂಗಿಕ ದೌರ್ಜನ್ಯ ಎಸಗಿದ್ಧಾರೆ ಎನ್ನುವ ಕುರಿತು ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ದ ಮೊಕದ್ದಮೆ ದಾಖಲಾದ ಬೆನ್ನಲ್ಲೇ ಮಾಜಿ ಸಚಿವ ಹಾಗೂ ಹೊಳೆ ನರಸೀಪುರ ಶಾಸಕ ಎಚ್.ಡಿ.ರೇವಣ್ಣ ವಿರುದ್ದವೂ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ರೇವಣ್ಣ ಅವರ ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದ ಮಹಿಳೆ ದೂರು ನೀಡಿದ್ದು. ದೂರಿನಂತೆ ಪ್ರಕರಣವನ್ನೂ ದಾಖಲಿಸಿಕೊಳ್ಳಲಾಗಿದೆ. ಹೊಳೆ ನರಸೀಪುರ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆ ಕುರಿತು ತನಿಖೆ ಆರಂಭಿಸಿದ್ದಾರೆ. ಈಗಾಗಲೇ ಪ್ರಜ್ವಲ್‌ ವಿರುದ್ದದ ತನಿಖೆಗೆ ಹಿರಿಯ ಪೊಲೀಸ್‌ ಅಧಿಕಾರಿಗಳನ್ನೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ರೇವಣ್ಣ ಪ್ರಕರಣವನ್ನು ಇದಕ್ಕೆ ಸೇರಿಸಬಹುದೆ ಎನ್ನುವ ಚರ್ಚೆಗಳು ನಡೆದಿವೆ.

ಟ್ರೆಂಡಿಂಗ್​ ಸುದ್ದಿ

Chikkamagaluru News: ಚಿಕ್ಕಮಗಳೂರಿನಲ್ಲಿ ಭಾರೀ ಗಾತ್ರದ ಸಲಗ ವಿದ್ಯುತ್‌ ಶಾಕ್‌ ಗೆ ಬಲಿ

Bangalore News: ಅಜಾಗರೂಕತೆಯಿಂದ ಕಾರು ಚಾಲನೆ, ಬೆಂಗಳೂರಲ್ಲಿ ಬಾಲಕ ಸಾವು, ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Hassan Scandal: ತಿರುವು ಪಡೆದುಕೊಳ್ಳುತ್ತಿರುವ ಪ್ರಜ್ವಲ್‌ ರೇವಣ್ಣ ಪ್ರಕರಣ, ಜೆಡಿಎಸ್‌ ಶಾಸಕನ ವಿರುದ್ದವೇ ಆರೋಪ, ಮತ್ತಿಬ್ಬರ ಬಂಧನ

ಶಕ್ತಿ ಯೋಜನೆ ನಂತರವೂ ರೈಲುಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಏರಿಕೆ, ದೂರದ ಪ್ರಯಾಣ ಬೆಳೆಸುವ ಮಹಿಳೆಯರ ಬೇಡಿಕೆಗಳೇನು?

ದೂರಿನಲ್ಲಿ ಏನೇನಿದೆ

ಈ ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಎಚ್‌.ಡಿ ರೇವಣ್ಣ ಹೆಸರಿದ್ದರೆ, ಎರಡನೇ ಆರೋಪಿಯಾಗಿ ಪ್ರಜ್ವಲ್ ರೇವಣ್ಣ ಹೆಸರನ್ನು ಉಲ್ಲೇಖಿಸಲಾಗಿದೆ.. ಸಂತ್ರಸ್ತ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 354A (ಲೈಂಗಿಕ ಕಿರುಕುಳ ಆರೋಪ), 354D (ಮಹಿಳೆಗೆ ಮುಜುಗರ ಆಗುವಂತೆ ಮಾಡುವುದು), 506 (ಬೆದರಿಕೆ), 509 (ಮಹಿಳೆ ಮಾನಕ್ಕೆ ಹಾನಿ) ಅಡಿ ಹೊಳೆನರಸೀಪುರ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

ದಶಕದ ಹಿಂದೆಯೇ ನಮ್ಮ ಪತಿಗೆ ಮಾಜಿ ಸಚಿವರಾದ ಹೆಚ್ ಡಿ ರೇವಣ್ಣ ಹಾಸನ ಡೈರಿಯಲ್ಲಿ ಕೆಲಸ ಕೊಡಿಸಿದ್ದರು. ಇದಾದ ಬಳಿಕ ನನಗೆ 2015ರಲ್ಲಿ ಹೊಳೆ ನರಸೀಪುರದ ಹಾಸ್ಟೇಲ್ ಒಂದರಲ್ಲಿ ಅಡುಗೆ ಕೆಲಸಕ್ಕೆ ರೇವಣ್ಣ ಅವರೇ ಹೇಳಿ ಸೇರಿಸಿದ್ದರು. ಅಲ್ಲಿಂದ ಸ್ವಲ್ಪ ದಿನದಲ್ಲಿಯೇ ರೇವಣ್ಣ ಅವರು ನನಗೆ ತಮ್ಮ ಮನೆಗೆ ಅಡುಗೆ ಕೆಲಸಕ್ಕೆ ಬರುವಂತೆ ತಿಳಿಸಿದ್ದರು. ಆಯಿತೆಂದು ಅವರ ಮನೆಯಲ್ಲಿ ಕೆಲಸಕ್ಕೆ ಹೋಗುತ್ತಿದ್ದೆ.

ಅಡುಗೆ ಕೆಲಸಕ್ಕೆ ಹೋಗುವಾಗ ಅವರ ಪತ್ನಿ ಭವಾನಿ ಅವರು ಮನೆಯಲ್ಲಿ ಇಲ್ಲದ್ದನ್ನೇ ಗಮನಿಸಿಕೊಂಡು ನನ್ನನ್ನು ಮುಟ್ಟಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಕೊಠಡಿಯಲ್ಲಿದ್ದಾಗ ಹಣ್ಣು ನೀಡುವ ನೆಪದಲ್ಲಿ ಸೀರೆ ಹಿಡಿದು ಎಳೆದಾಡಿರುವುದು ಹಲವು ಬಾರಿ ನಡೆದಿದೆ. ಇದೇ ವೇಳೆ ಅಡುಗೆ ಮನೆಗೆ ಬಂದು ಪ್ರಜ್ವಲ್ ಸಹ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಹಲವು ಬಾರಿ ನನ್ನ ಮಗಳಿಗೂ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತನೆ ಕೂಡ ಮಾಡಿದ್ದಾರೆ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿ ಹೇಳೋದು ಏನು

ಮಹಿಳೆಯೊಬ್ಬರು ನೀಡಿದ ಮೇರೆಗೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ವಿರುದ್ದ ಮೊಕದ್ದಮೆ ದಾಖಲಿಸಿಕೊಂಡಿದ್ದೇವೆ. ಘಟನೆಗೆ ಕುರಿತು ಸಾಕ್ಷ್ಯ ಸಂಗ್ರಹ ಕಲೆ ಹಾಕುವ ಕೆಲಸವೂ ಆಗಲಿದೆ. ಹೇಳಿಕೆಯನ್ನೂ ರೇವಣ್ಣ ಮತ್ತಿತರರಿಂದ ಪಡೆಯಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈಗಾಗಲೇ ಪ್ರಜ್ವಲ್‌ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಅಲ್ಲದೇ ಅವರು ದೌರ್ಜನ್ಯ ಎಸಗಿರುವ ಕುರಿತು ಪೆನ್‌ಡ್ರೈವ್‌ ಕೂಡ ಹರಿದಾಡುತ್ತಿದೆ. ಸರ್ಕಾರವೂ ಈ ಪ್ರಕರಣದ ತನಿಖೆಗೆ ಎಸ್‌ಐಟಿ ತಂಡವನ್ನು ರಚಿಸಿದ್ದು, ತನಿಖೆಯೂ ಶುರುವಾಗಿದೆ. ಇದರ ನಡುವೆ ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ವಿರುದ್ದ ಈಗ ಪ್ರಕರಣಗಳು ದಾಖಲಾಗಿವೆ.

ಎಚ್‌ಡಿಕೆ ಪ್ರತಿಕ್ರಿಯೆ

ಇದೇ ಪ್ರಕರಣದ ಕುರಿತು ಮಾತನಾಡಿರುವ ಮಾಜಿ ಸಿಎಂ ಹಾಗೂ ಕರ್ನಾಟಕ ಜಾ.ದಳ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು. ಈ ಬಗ್ಗೆ ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ಏನು ಹೇಳಬಯಸುವುದಿಲ್ಲ. ತನಿಖೆಯಿಂದಲೇ ಎಲ್ಲವೂ ಹೊರ ಬರಲಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ