logo
ಕನ್ನಡ ಸುದ್ದಿ  /  ಕರ್ನಾಟಕ  /  ಹಾವೇರಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ರಾಜಕೀಯ ಬಣ್ಣದ ನಡುವೆಯೇ ಮತ್ತೊಂದು ಟ್ವಿಸ್ಟ್

ಹಾವೇರಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ರಾಜಕೀಯ ಬಣ್ಣದ ನಡುವೆಯೇ ಮತ್ತೊಂದು ಟ್ವಿಸ್ಟ್

Raghavendra M Y HT Kannada

Jan 15, 2024 12:22 PM IST

ಹಾವೇರಿ ಎಸ್ಪಿ ಅನೂಷ್ ಕುಮಾರ್ ( ANI)

  • ಹಾನಗಲ್‌ ಅತ್ಯಾಚಾರ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇದರ ನಡುವೆ ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪಗಳು ಜೋರಾಗಿಯೇ ನಡೆಯುತ್ತಿವೆ.

ಹಾವೇರಿ ಎಸ್ಪಿ ಅನೂಷ್ ಕುಮಾರ್ ( ANI)
ಹಾವೇರಿ ಎಸ್ಪಿ ಅನೂಷ್ ಕುಮಾರ್ ( ANI)

ಹಾವೇರಿ (ಹಾನಗಲ್): ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, 7 ಮಂದಿ ಆರೋಪಿಗಳ ಪೈಕಿ ಇಬ್ಬರು ಅತ್ಯಾಚಾರ ವೆಸಗಿಲ್ಲ ಎಂದು ಸಂತ್ರಸ್ತೆ ಪೊಲೀಸರ ಮುಂದೆ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ.

ಟ್ರೆಂಡಿಂಗ್​ ಸುದ್ದಿ

ಅಂಜಲಿ ಅಂಬಿಗೇರ ಸಹೋದರಿ ಯಶೋದಾ ಆತ್ಮಹತ್ಯೆ ಯತ್ನ, ಹುಬ್ಬಳ್ಳಿ ಅಂಜಲಿ ಹತ್ಯೆ ಕೇಸ್‌ ಸಂಬಂಧಿಸಿದ ಇತ್ತೀಚಿನ 10 ವಿದ್ಯಮಾನಗಳು

ಕರ್ನಾಟಕ ಹವಾಮಾನ ಮೇ 19; ರಾಜ್ಯದಲ್ಲಿ ಮಳೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Bus Accident: ಫ್ಲೈ ಓವರ್‌ಗೆ ಹಾರಿದ ಸಾರಿಗೆ ಬಸ್‌ ಪ್ರಯಾಣಿಕರು ಪಾರಾಗಿದ್ದೇ ರೋಚಕ; ನೆಲಮಂಗಲದಲ್ಲಿ ಸಿನಿಮಾ ಸ್ಟಂಟ್ ನಂತೆ ಸಂಭವಿಸಿದ ಅಪಘಾತ

Hassan Scandal: 100 ಕೋಟಿ ರೂ. ಆಫರ್ ವಿಚಾರವನ್ನು ಎಸ್‌ಐಟಿ ನೋಡಿಕೊಳ್ಳುತ್ತೆ, ದೇವರಾಜೇಗೌಡ ಜೈಲಲ್ಲೇ ಇರ್ತಾರೆ: ಗೃಹ ಸಚಿವ

ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದು, ಇಂದು (ಜನವರಿ 15, ಸೋಮವಾರ) ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಕ್ಕಿಆಲೂರಿನ ಸಂತೆ ವ್ಯಾಪಾರಿ ಸಾದಿಕ್ ಬಾಬುಸಾದ್ ಅಗನಿಮನಿ (29) ಮತ್ತು ನಿಯಾಜ್ ಅಹ್ಮದ್ ಮುಲ್ಲಾ (19) ಬಂಧಿತ ಆರೋಪಿಗಳು. ಅಫ್ತಾಬ್ ಚಂದನಕಟ್ಟಿ, ಮದರಸಾಬ್ ಮಂಡಕ್ಕಿ ಹಾಗೂ ಅಬ್ದುಲ್ಲಾಖಾದರ್ ಜಾಫರಸಾಬ್ ಹಂಚಿನಮನಿ ಎಂಬ ಮೂವರು ಆರೋಪಿಗಳನ್ನು ಈ ಮೊದಲೇ ಬಂಧಿಸಲಾಗಿತ್ತು.

ಸಂತ್ರಸ್ತೆಗೆ ಹಣ ಕೊಟ್ಟು ಪ್ರಕರಣ ಮುಚ್ಚಿಹಾಕುವ ಪ್ರಯತ್ನ: ಮಾಜಿ ಸಿಎಂ

ಇನ್ನು ಇದೇ ಪ್ರಕರಣ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕ ನಡುವಿನ ವಾಗ್ವಾದಕ್ಕೂ ಕಾರಣವಾಗಿದೆ. ಹಾನಗಲ್‌ನಲ್ಲಿ ನಡೆದ ನೈತಿಕ ಪೊಲಿಸ್ ಗಿರಿ ಪ್ರಕರಣವನ್ನು ಸಂತ್ರಸ್ತರಿಗೆ ಹಣ ಕೊಟ್ಟು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾನಗಲ್ ಪ್ರಕರಣವನ್ನು ಅಲ್ಲಿನ ಪೊಲೀಸರು ಸಂತ್ರಸ್ತರಿಗೆ ದುಡ್ಡು ಕೊಟ್ಟು ಆಮಿಷವೊಡ್ಡಿ ಮುಚ್ಚಿ ಹಾಕಲು ಯತ್ನಿಸಿದ್ದರು. ತನಿಖೆಗೆ ಎಸ್.ಐ.ಟಿ ರಚನೆ ಮಾಡಿ. ತನಿಖೆ ನೆಪದಲ್ಲಿ ಸಂತ್ರಸ್ಥೆಯನ್ನು ಶಿರಸಿಗೆ ಕರದೊಯ್ಯಲಾಗುತ್ತಿದೆ. ಬಿಜೆಪಿ ಮಹಿಳಾ ನಿಯೋಗ ಅಲ್ಲಿಗೆ ಭೇಟಿ ಕೊಡುತ್ತಿದೆ ಅಂತ ಈ ರೀತಿ ಮಾಡುತ್ತಿದ್ದಾರೆ. ಇದೆಲ್ಲ ರಾಜಕಾರಣವನ್ನು ಕಾಂಗ್ರೆಸ್ ನವರು ಮಾಡುತ್ತಾರೆ. ಅವರಿಂದ ನಾವೇನು ಜಾಸ್ತಿ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದಿದ್ದಾರೆ.

ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತಿದೆ - ಗೃಹ ಸಚಿವ ಪರಮೇಶ್ವರ್

ರಾಜ್ಯದಲ್ಲಿ ಮಹಿಳಾ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಸರ್ಕಾರದ ಮೇಲೆ ಅನಾವಶ್ಯಕವಾಗಿ ಸುಳ್ಳು ಆರೋಪಗಳನ್ನು ಹೊರಿಸುವುದು ಸರಿಯಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಿರ್ಭಯಾ ಯೋಜನೆಯಡಿ ಮಹಿಳಾ ಸುರಕ್ಷತಾ ಕಾರ್ಯಕ್ರಮಗಳನ್ನು ಕೈಗೊಂಡಿದ್ದೇವೆ. ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ಹಾವೇರಿ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ‌ ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ‌. ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ತನಿಖೆ ಇನ್ನು ಪೂರ್ಣಗೊಂಡಿಲ್ಲ. ಈ ಮೊದಲೇ ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಆರೋಪಿಸುವುದು ಸರಿಯಲ್ಲ ಎಂದು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂದು ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಂ ಸೂಚಿಸಿದ್ದಾರೆ. ಹಾವೇರಿ ಎಸ್ಪಿ ಮುಂದಾಳತ್ವದಲ್ಲಿ ತನಿಖೆಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದಿದ್ದಾರೆ.

ಜನವರಿ 8 ರಂದು ಹಾನಗಲ್ ತಾಲೂಕಿನ ನಾಲ್ಕರ್ ಕ್ರಾಸ್‌ನಲ್ಲಿ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಅನ್ಯ ಧರ್ಮದ ಮಹಿಳೆ ಮತ್ತು ವ್ಯಕ್ತಿ ಹೋಟೆಲ್‌ನಲ್ಲಿ ಕಾಣಿಸಿಕೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದಿದ್ದ ಅಕ್ಕಿಆಲೂರು ಗ್ರಾಮದ 7 ಮಂದಿ ಯುವಕರು ತಕ್ಷಣವೇ ಸ್ಥಳಕ್ಕೆ ಬಂದು ಇಬ್ಬರನ್ನ ಕೂಡಿ ಹಾಕಿ ಹಲ್ಲೆ ಮಾಡಿದ್ದರು. ನಂತರ ಮಹಿಳೆ ಮೇಲೆ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ