logo
ಕನ್ನಡ ಸುದ್ದಿ  /  ಕರ್ನಾಟಕ  /  Haveri News: ಗ್ಯಾಂಗ್ ರೇಪ್ ಪ್ರಕರಣ ಎಸ್ಐಟಿಗೆ ವಹಿಸಲು ಆಗ್ರಹಿಸಿ ಜ 20 ರಂದು ಹಾವೇರಿಯಲ್ಲಿ ಬೃಹತ್ ಪ್ರತಿಭಟನೆ

Haveri News: ಗ್ಯಾಂಗ್ ರೇಪ್ ಪ್ರಕರಣ ಎಸ್ಐಟಿಗೆ ವಹಿಸಲು ಆಗ್ರಹಿಸಿ ಜ 20 ರಂದು ಹಾವೇರಿಯಲ್ಲಿ ಬೃಹತ್ ಪ್ರತಿಭಟನೆ

Umesha Bhatta P H HT Kannada

Jan 18, 2024 04:56 PM IST

google News

ಹಾವೇರಿ ಎಸ್ಪಿ ಕಚೇರಿ ಎದುರು ಶನಿವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

    • Haveri crime ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ನಡೆದ ಗ್ಯಾಂಗ್‌ ರೇಪ್‌ ಹಾಗೂ ನೈತಿಕ ಪೊಲೀಸ್‌ ಗಿರಿ ಪ್ರಕರಣವನ್ನು ಎಸ್‌ಐಟಿಗೆ ವಹಿಸುವಂತೆ ಆಗ್ರಹಿಸಿ ಬಿಜೆಪಿ ಶನಿವಾರ ಹಾವೇರಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. 
ಹಾವೇರಿ ಎಸ್ಪಿ ಕಚೇರಿ ಎದುರು ಶನಿವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಹಾವೇರಿ ಎಸ್ಪಿ ಕಚೇರಿ ಎದುರು ಶನಿವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಎಸ್ ಐಗೆ ವಹಿಸುವಂತೆ ಜನವರಿ 20 ಹಾವೇರಿ ಎಸ್ಪಿ ಕಚೇರಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಳೆದ ವಾರ ನಡೆದ ಪ್ರಕರಣದಲ್ಲಿ ನೈತಿಕ ಪೊಲೀಸ್‌ಗಿರಿ ಹಾಗೂ ಅತ್ಯಾಚಾರ ಆರೋಪದ ಮೇಲೆ ಈವರೆಗೂ ಏಳು ಮಂದಿಯನ್ನು ಬಂಧಿಸಲಾಗಿದೆ. ಇಬ್ಬರು ಪೊಲೀಸರು ಅಮಾನತುಪಡಿಸಲಾಗಿದೆ. ಪ್ರಕರಣದ ಕುರಿತು ತನಿಖೆ ನಡೆದಿದ್ದು, ಸಂತ್ರಸ್ತ ಮಹಿಳೆ ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ. ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎಂದು ಬಿಜೆಪಿ ಆರೋಪಿಸಿದ್ದರೆ, ಸಿಎಂ ಸಿದ್ದರಾಮಯ್ಯ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದು ಹೇಳಿದ್ಧಾರೆ. ಇದರ ನಡುವೆ ಇದು ಹೋರಾಟದ ಸ್ವರೂಪ ಪಡೆದಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ಕಾಪಾಡುವಲ್ಲಿ ರಾಜಕಾರಣ ಬಹಳ ಪಾತ್ರ ವಹಿಸುತ್ತಿದೆ. ಹಾನಗಲ್ ಪೊಲಿಸರು ಕಾನೂನು ಪ್ರಕಾರ ನಡೆದುಕೊಂಡಿಲ್ಲ. ಆ ಹೆಣ್ಣು ಮಗಳಿಗೆ ಸರಿಯಾದ ಚಕಿತ್ಸೆ ನೀಡುತ್ತಿಲ್ಲ. ಈ ಬಗ್ಗೆ ಸಿಎಂ ಕೂಡ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ ಎಸ್ ಐಟಿ ತನಿಖೆ ನಡೆಸುವಂತೆ ಆಗ್ರಹಿಸಿ ಜನೇವರಿ 20 ರಂದು ಹಾವೇರಿ ಎಸ್ಪಿ ಕಚೇರಿ ಎದುರು ಪ್ರತಿಭಟನೆ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ನೈತಿಕ ಪೊಲಿಸ್ ಗಿರಿ ಮಾಡಿ ಗ್ಯಾಂಗ್ ರೇಪ್ ಮಾಡಿರುವ ಪ್ರಕರಣವನ್ನು ಪೊಲಿಸರು ಮುಚ್ಚಿ ಹಾಕುವ ಯತ್ನ ಮಾಡಿದ್ದರು. ಹಾವೇರಿ ಎಸ್ಪಿ, ಹೊಮ್‌ಮಿನಿಸ್ಟರ್ ಅದನ್ನು ಒಪ್ಪಿಕೊಳ್ಳಲು ಸಿದ್ದರಿರಲಿಲ್ಲ. ಆದರೆ, ಈಗ ಹಾನಗಲ್ ಪೊಲಿಸರನ್ನು ಅವರೇ ಅಮಾನತು ಮಾಡಿದ್ದಾರೆ‌. ಹೀಗಾಗಿ ಪೊಲಿಸರಿಂದ ಲೋಪವಾಗಿರುವುದನ್ನು ಒಪ್ಪಿಕೊಂಡಂತಾಗಿದೆ. ಇದರೊಟ್ಟಿಗೆ ಸಿಎಂ ಎಸ್ ಐಟಿ ತನಿಖೆಗೆ ನಿರಾಕರಿಸಿರುವುದು ಅಪರಾಧ ಮಾಡುವವರಿಗೆ ಪುಷ್ಟಿ ಕೊಟ್ಟಂತೆ ಆಗುತ್ತದೆ ಎಂದು ಆಪಾದಿಸಿದ್ದಾರೆ.

ಅಂದು ನಡೆಯುವ ಪ್ರತಿಭಟನೆಯಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಅನೇಕ ನಾಯಕರು ಹಾಗೂ ಜಿಲ್ಲಾ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಎಸ್‌ಐಟಿ ತನಿಖೆಗೆ ಒತ್ತಾಯಿಸಿ ಮೊದಲ ಹಂತದ ಹೋರಾಟ ಮಾಡುತ್ತೇವೆ. ಆಗಲೂ ಸೂಕ್ತ ಪ್ರತಿಕ್ರಿಯೆ ಬಾರದೇ ಇದ್ದರೆ ಹೋರಾಟ ಮುಂದುವರೆಸುತ್ತೇವೆ ಎನ್ನುವುದು ಬೊಮ್ಮಾಯಿ ಅವರ ವಿವರಣೆ.

ಸಿಎಂಗೆ ಮೋದಿ ಫೋಬಿಯಾ

ಸಿಎಂ ಸಿದ್ದರಾಮಯ್ಯ ಅವರಿಗೆ ಮೋದಿ ಫೋಬಿಯಾ ಇದೆ.‌ ಇಡಿ ದೇಶದಲ್ಲಿ ಪ್ರಧಾನಿ ನರೇಂದ್ರ ಮೊದಿ ದಕ್ಷ ಆಡಳಿತ ನೀಡುತ್ತಿದ್ದಾರೆ. ಎಲ್ಲ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ‌. ಮತ್ತೆ ಮೂರನೆ ಬಾರಿಗೆ ಪ್ರಧಾನಿ ಆಗಲಿದ್ದಾರೆ. ಹೀಗಾಗಿ ಅದನ್ನು ಸಹಿಸಿಕೊಳ್ಳಲಾಗದೇ ಸಿದ್ದರಾಮಯ್ಯ ಅವರ ವಿರುದ್ದ ಅನಗತ್ಯ ಆರೋಪ ಮಾಡುತ್ತಾರೆ ಎಂದು ಬೊಮ್ಮಾಯಿ ಟೀಕಿಸಿದರು.

ಕೇಂದ್ರದ ಅನುದಾನದ ಕುರಿತು ಪ್ರಧಾನಿ ನರೇಂದ್ರ ಮೋದಿ ಜೊತೆ ಬಹಿರಂಗ ಚರ್ಚೆಗೆ ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಬೊಮ್ಮಾಯಿ, ಸಿಎಂಗೆ ಪ್ರಧಾನಿ ಜೊತೆ ಮಾಡಲು ಆಗಲ್ಲ ಅನ್ನುವುದು ಗೊತ್ತಿದೆ. ಅವರು ಮೊದಲು ನಮ್ಮ ಐಟಿ ಸೆಲ್ ಹುಡುಗರ ಜೊತೆ ಚರ್ಚೆ ಮಾಡಲಿ. ನಮ್ಮ ಐಟಿ ಸೆಲ್ ಹುಡುಗರು ಎಲ್ಲ ಮಾಹಿತಿ ಇಟ್ಟುಕೊಂಡಿದ್ದಾರೆ ಎಂದು ತಿರುಗೇಟು ನೀಡಿದರು.

15 ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಅನುದಾನ ಶೇ 4.7 ನಿಂದ ಶೇ 3.6 ಗೆ ಇಳಿಯಲು ಸಿದ್ದರಾಮಯ್ಯ ಅವರೇ ಕಾರಣ ಅವರು ಸರಿಯಾಗಿ ರಾಜ್ಯದ ವಸ್ತು ಸ್ಥಿತಿ ಬಗ್ಗೆ ಮಾಹಿತಿ ನೀಡಿಲ್ಲ. ನಮ್ಮ ಅವಧಿಯಲ್ಲಿಯೂ ಪ್ರವಾಹ ಬಂದಾಗ ಹಿಂದಿನ ಯುಪಿಎ ಸರ್ಕಾರ ಪರಿಹಾರ ನೀಡಿತ್ತಾ ? ನಾವು ಕೇಂದ್ರದ ಅನುದಾನಕ್ಕಾಗಿ ಕಾಯದೇ 2500 ಕೋಟಿ ರೂ. ಪರಿಹಾರ ನೀಡಿದ್ದೇವು. ಕರ್ನಾಟಕದ ಜನರು ನಿಮಗೆ ಮತ ಹಾಕಿದ್ದು, ಒಳ್ಳೆಯ ಆಡಳಿತ ನೀಡಲಿ ಎಂದು. ಆದರೆ, ನೀವು ಅವೈಜ್ಞಾನಿಕ ಗ್ಯಾರೆಂಟಿ ಜಾರಿ ಮಾಡಿ ಆರ್ಥಿಕತೆ ಹಳಿ ತಪ್ಪಿಸುತ್ತಿದ್ದೀರಿ. ಗ್ಯಾರೆಂಟಿ ಯೋಜನೆಗಳ ಜಾರಿಗೆ 30 ಸಾವಿರ ಕೋಟಿ ಖರ್ಚು ಮಾಡಲು ಹೊರಟಿದ್ದೀರಿ, ಆದರೆ, ಅದಕ್ಕೆ ಹಣ ಮೀಸಲಿಟ್ಟಿಲ್ಲ. ಅಭಿವೃದ್ಧಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿಲ್ಲ. ಅದನ್ನು ಅವರ ಶಾಸಕರೇ ಹೇಳುತ್ತಿದ್ದಾರೆ. ಅವರ ಶಾಸಕರನ್ನು ಸಮಾಧಾನ ಮಾಡಲು ಪ್ರತಿಯೊಬ್ಬರಿಗೂ 25 ಕೋಟಿ ರೂ. ಕೊಡುವುದಾಗಿ ಹೇಳಿದ್ದಾರೆ. ನಾನು ಸಿಎಂ ಆಗಿದ್ದಾಗ ಕಾಂಗ್ರೆಸ್ ಶಾಸಕರಿಗೂ 25 ಕೋಟಿ ಕೊಟ್ಟಿದ್ದೆ. ನಮಗೂ 25 ಕೋಟಿ ಕೊಡಬೇಕಾಗುತ್ತದೆ ಎಂದು ಆಗ್ರಹಿಸಿದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ