logo
ಕನ್ನಡ ಸುದ್ದಿ  /  Karnataka  /  Hd Kumaraswamy Is The Only Leader Who Kept His Promise To The People In This Country Says Hd Deve Gowda

HDD on HDK: ಈ ದೇಶದಲ್ಲಿ ಜನರಿಗೆ ಕೊಟ್ಟ ಮಾತು ಉಳಿಸಿಕೊಂಡ ಏಕೈಕ ನಾಯಕ ಕುಮಾರಸ್ವಾಮಿ ಮಾತ್ರ - ಹೆಚ್​ಡಿಡಿ

HT Kannada Desk HT Kannada

Oct 30, 2022 09:20 PM IST

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು

    • ಇಡೀ ದೇಶದಲ್ಲಿ ಹೇಳಿದ್ದನ್ನು ಮಾಡಿ ತೋರಿಸಿದ, ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಏಕೈಕ ನಾಯಕ ಹೆಚ್​ ಡಿ ಕುಮಾರಸ್ವಾಮಿ ಅವರು ಮಾತ್ರ ಎಂದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು

ಬೆಂಗಳೂರು: ಇಡೀ ದೇಶದಲ್ಲಿ ಹೇಳಿದ್ದನ್ನು ಮಾಡಿ ತೋರಿಸಿದ, ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಏಕೈಕ ನಾಯಕ ಹೆಚ್​ ಡಿ ಕುಮಾರಸ್ವಾಮಿ ಅವರು ಮಾತ್ರ ಎಂದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದರು.

ಟ್ರೆಂಡಿಂಗ್​ ಸುದ್ದಿ

ಹುಬ್ಬಳ್ಳಿ -ಋಷಿಕೇಶ ವಿಶೇಷ ರೈಲು ಸಂಚಾರ, ಇಂದಿನಿಂದ ಮೇ 27ರ ತನಕ 5 ಟ್ರಿಪ್‌, ಋಷಿಕೇಶ -ಹುಬ್ಬಳ್ಳಿ ನಡುವೆಯೂ 5 ರೈಲು ಸಂಚಾರ

Srinivas Prasad Death: ಚಾಮರಾಜನಗರ ಸಂಸದ, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ, 5 ದಶಕ ರಾಜಕಾರಣ ನಡೆಸಿದ ಮುತ್ಸದ್ದಿ

ಕರ್ನಾಟಕ ಹವಾಮಾನ ಏಪ್ರಿಲ್‌ 29; ಬೀದರ್, ಹಾವೇರಿ, ಕೋಲಾರ ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು, ಆರೆಂಜ್ ಅಲರ್ಟ್

ಬಸವಳಿದ ಬಿಎಂಟಿಸಿ: ಬೆಂಗಳೂರು ನಾಗರಿಕರಿಗೆ ಬಿಎಂಟಿಸಿ ಬಸ್‌ಗಿಂತಲೂ ಮೆಟ್ರೋ ಇಷ್ಟ; ಖಾಸಗಿ ವಾಹನಗಳ ಸಂಖ್ಯಾಸ್ಫೋಟ, ಸಾರಿಗೆ ಬಸ್‌ಗಳಿಗೆ ಸಂಕಷ್ಟ

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ವೀರಶೈವ ಲಿಂಗಾಯತ ಸಮುದಾಯದ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು ಅವರು, ಎರಡು ಸಲ ಮುಖ್ಯಮಂತ್ರಿ ಆಗಿದ್ದಾಗಲೂ ಕುಮಾರಸ್ವಾಮಿ ಅವರು ಮಾತು ಕೊಟ್ಟ ಹಾಗೆ ಎಲ್ಲ ಕೆಲಸಗಳನ್ನು ಮಾಡಿದರು. ಸಾಲಮನ್ನಾ ಮಾಡಿ ಮಾತು ಉಳಿಸಿಕೊಂಡರು. ಹೀಗಾಗಿ ನನ್ನ ಮನಸ್ಸಿಗೆ ಶಾಂತಿ ನೆಮ್ಮದಿ ಸಿಗಬೇಕಾದರೆ ಮತ್ತೊಮ್ಮೆ ಈ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎಂದು ಅವರು ಹೇಳಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಕೂಡ ಕೆಲಸ ಮಾಡುತ್ತೇನೆ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಪಕ್ಷ ಗೆಲ್ಲಲು ಸಾಧ್ಯವಾದ ಎಲ್ಲ ಕೆಲಸವನ್ನು ಮಾಡುತ್ತೇನೆ. ಮುಖಂಡರು, ಕಾರ್ಯಕರ್ತರು ಎಲ್ಲರೂ ಶಿಸ್ತು, ಪ್ರಾಮಾಣಿಕತೆ, ಬದ್ಧತೆಯಿಂದ ಪಕ್ಷಕ್ಕೆ ದುಡಿಯಬೇಕು. ನಿಸ್ವಾರ್ಥವಾಗಿ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು.

ಕುಮಾರಸ್ವಾಮಿ ಅವರು ಈ ಬಾರಿ ಅಧಿಕಾರಕ್ಕೆ ಬಂದೇ ಬರುತ್ತಾರೆ, ಅವರು ಕನಸು ಕಾಣುತ್ತಿರುವ ಪಂಚರತ್ನ ಕಾರ್ಯಕ್ರಮಗಳನ್ನು ಜಾರಿಗೆ ತಂದೆ ತರುತ್ತಾರೆ. ಇಡಿ ರಾಜ್ಯದ ಅಭಿವೃದ್ಧಿಗೆ ಪಂಚರತ್ನ ಯೋಜನೆ ಪರಿಣಾಮಕಾರಿಯಾಗಿದೆ ಎಂದು ಮಾಜಿ ಪ್ರಧಾನಮಂತ್ರಿಗಳು ನುಡಿದರು.

ರಾಜ್ಯದಲ್ಲಿ ಮತ್ತೊಮ್ಮೆ ಜೆಡಿಎಸ್ ಸರಕಾರ ಬರಬೇಕು. ಆ ಕ್ಷಣವನ್ನು ನಾನು ನೋಡಬೇಕು ಎಂದು ಮಾಜಿ ಪ್ರಧಾನಿಗಳು ಪುನರುಚ್ಚರಿಸಿದರು. ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ದೊಡ್ಡ ಮಟ್ಟದಲ್ಲಿ ಪಕ್ಷದ ಕಚೇರಿಯಲ್ಲಿ ಸೇರಿರುವುದು ನೋಡಿ ನನಗೆ ಸಂತೋಷ ಆಗಿದೆ. ಯಾವ ಯಾವ ಸಮುದಾಯಕ್ಕೆ ನಾನು ಮತ್ತು ಕುಮಾರಸ್ವಾಮಿ ಎಷ್ಟೆಲ್ಲಾ ಒಳ್ಳೆಯ ಕೆಲಸ ಮಾಡಿದೆವು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

    ಹಂಚಿಕೊಳ್ಳಲು ಲೇಖನಗಳು