logo
ಕನ್ನಡ ಸುದ್ದಿ  /  ಕರ್ನಾಟಕ  /  Hdk On Union Budget 2023: 'ಮೂಗಿನ ಬದಲು ಹಣೆಗೆ ತುಪ್ಪ ಸವರಿದ ಕೇಂದ್ರ ಬಜೆಟ್' - ಹೆಚ್.ಡಿ.ಕುಮಾರಸ್ವಾಮಿ

HDK on Union Budget 2023: 'ಮೂಗಿನ ಬದಲು ಹಣೆಗೆ ತುಪ್ಪ ಸವರಿದ ಕೇಂದ್ರ ಬಜೆಟ್' - ಹೆಚ್.ಡಿ.ಕುಮಾರಸ್ವಾಮಿ

HT Kannada Desk HT Kannada

Feb 01, 2023 07:46 PM IST

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

    • ಚುನಾವಣೆ ಹೊಸ್ತಿಲಲ್ಲಿ ಇರುವ ಕರ್ನಾಟಕಕ್ಕೆ ಚುನಾವಣೆ ನೆಪದಲ್ಲಾದರೂ ಏನಾದರೂ ಸಿಗಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ, ಮೂಗಿಗೆ ತುಪ್ಪ ಸವರುವ ಬದಲು ಹಣೆಗೆ ತುಪ್ಪ ಸವರುವ ಕೆಲಸವನ್ನು ಕೇಂದ್ರ ಬಜೆಟ್ ನಲ್ಲಿ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ದಾವಣಗೆರೆ: ಚುನಾವಣೆ ಹೊಸ್ತಿಲಲ್ಲಿ ಇರುವ ಕರ್ನಾಟಕಕ್ಕೆ ಚುನಾವಣೆ ನೆಪದಲ್ಲಾದರೂ ಏನಾದರೂ ಸಿಗಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ, ಮೂಗಿಗೆ ತುಪ್ಪ ಸವರುವ ಬದಲು ಹಣೆಗೆ ತುಪ್ಪ ಸವರುವ ಕೆಲಸವನ್ನು ಕೇಂದ್ರ ಬಜೆಟ್ ನಲ್ಲಿ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.

ಟ್ರೆಂಡಿಂಗ್​ ಸುದ್ದಿ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ , ಅಂಕಿತ ಬಸಪ್ಪ ಕೊನ್ನೂರು ರಾಜ್ಯಕ್ಕೆ ಫಸ್ಟ್‌

ಕರ್ನಾಟಕ ಪದವಿ ಪ್ರವೇಶಾತಿ ಇಂದು ಶುರು; 4 ವರ್ಷದ ಪದವಿ ಇಲ್ಲ, 3 ವರ್ಷದ ಪದವಿ ಮರುಜಾರಿಗೊಳಿಸಿದ ಸರ್ಕಾರ

ಬೆಂಗಳೂರು: ನಿರ್ಮಾಣ ಹಂತದ ಪಾಟರಿ ಟೌನ್ ಮೆಟ್ರೋ ಸುರಂಗ ನಿಲ್ದಾಣದ ಮೇಲ್ಬಾಗದ ರಸ್ತೆಯ ಕೆಳಗೆ ಕುಸಿದ ಭೂಮಿ, ಪರ್ಯಾಯ ಮಾರ್ಗ ಬಳಸಲು ಸೂಚನೆ

ಕರ್ನಾಟಕ ಹವಾಮಾನ ಮೇ 9; ಮೈಸೂರು, ಮಂಡ್ಯ, ಕೊಡಗು, ಬೆಂಗಳೂರು ಸೇರಿ 23 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

ಹರಿಹರ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಮಾಡುವ ವೇಳೆ ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಮಂಡಿಸಿದ 2023-24ನೇ ಸಾಲಿನ ಕೇಂದ್ರ ಬಜೆಟ್​​ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಅವರು, ನಿಸ್ಸಂಶಯವಾಗಿ ಕೇಂದ್ರ ಬಜೆಟ್ ಮಂಡನೆ ಮೂಗಿನ ಬದಲು ಹಣೆಗೆ ತುಪ್ಪ ಸವರುವಂತಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ನೀಡಿರುವ ಬಜೆಟ್ ಇದು ಎಂದರು.

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಘೋಷಣೆ ಮಾಡಿದ್ದಾರೆ. ಅದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿ ಆದಷ್ಟು ಶೀಘ್ರ ಕಾರ್ಯಗತ ಮಾಡಬೇಕು. ಆದರೆ, ಯಾವಾಗ ಮುಗಿಸುತ್ತಿರಿ ಎನ್ನುವ ಬಗ್ಗೆ ಡಬಲ್ ಎಂಜಿನ್ ಸರಕಾರಕ್ಕೆ ಖಾತರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಅವರು ಕುಟುಕಿದರು.

ಅವರು ಈಗ ಯಾವುದೇ ಅಭಿವೃದ್ಧಿ ಘೋಷಣೆ ಮಾಡಿದರೂ ರಾಜ್ಯದಲ್ಲಿ ಚುನಾವಣೆ ಬಳಿಕವೇ ಜಾರಿಗೆ ಆಗುವುದು. ಈ ಬಜೆಟ್ ಪ್ರಸ್ತಾವನೆಗಳನ್ನು ಜಾರಿ ಮಾಡುವ ವಿಷಯದಲ್ಲಿ ಮುಂದೆ ರಾಜ್ಯದಲ್ಲಿ ರಚನೆ ಆಗುವ ಸರಕಾರ ಪಾತ್ರವೂ ಮುಖ್ಯವಾಗಿರುತ್ತದೆ. ನರೇಂದ್ರ ಮೋದಿ ಅವರ ಸರಕಾರ ಬಂದು ಎಂಟು ವರ್ಷ ಆಗಿದೆ. ಈ ಎಂಟು ವರ್ಷದಲ್ಲಿ ಘೋಷಣೆಯಾಗದ ಕಾರ್ಯಕ್ರಮಗಳನ್ನು ಇಂದು ಘೋಷಣೆ ಮಾಡಿದ್ದಾರೆ ಎಂದು ಅವರು ಟೀಕಿಸಿದರು.

ಬಜೆಟ್ ಘೋಷಣೆಗಳು ಕಾಗದದ ಪತ್ರಗಳ ಘೋಷಣೆಗಳಗಿಯೇ ಉಳಿದಿವೆ. ಕಳೆದ 25 ವರ್ಷಗಳಿಂದ ರೈಲ್ವೇ ಯೋಜನೆಗಳು ಇನ್ನೂ ನೆನೆಗುದಿಗೆ ಬಿದ್ದಿವೆ. ಎಷ್ಟು ಸಲ ಕೇಂದ್ರದ ಬಳಿ ಅರ್ಜಿ ಹಿಡಿದುಕೊಂಡು ಹೋಗುವುದು? ಡಬಲ್ ಎಂಜಿನ್ ಸರಕಾರ ಬಂದರೆ ಎಲ್ಲಾ ಮಾಡುತ್ತೇವೆ ಎಂದರು. ಮೂರು ವರ್ಷ ಆಯಿತು. ಇವರು ಏನೂ ಮಾಡಲಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬಿಜೆಪಿ ನಾಯಕರು ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಹೋಗಿ ಸಾವಿರಾರು ಕೋಟಿ ಘೋಷಣೆ ಮಾಡುತ್ತಾರೆ. ಚುನಾವಣೆ ಮುಗಿದ ಮೇಲೆ ಕೈತೊಳೆದುಕೊಂಡು ಅತ್ತ ತಲೆ ಹಾಕುವುದಿಲ್ಲ. ಬಿಜೆಪಿ ಕಾರ್ಯಕ್ರಮಗಳ ಬಗ್ಗೆ ನನಗೆ ನಂಬಿಕೆ ಇಲ್ಲ. ರಾಜ್ಯದಲ್ಲಿ ಬಿಜೆಪಿಯನ್ನು ತಿರಸ್ಕರಿಸಲು ಜನರು ಸಿದ್ಧರಾಗಿದ್ದಾರೆ ಎಂದು ಅವರು ಟೀಕಿಸಿದರು.

ಕರ್ನಾಟಕಕ್ಕೆ ಉಂಡೆ ನಾಮ ಹಾಕಿದ ಬಜೆಟ್‌- ಸಿದ್ದರಾಮಯ್ಯ

ಕೇಂದ್ರದ ಟ್ರಬಲ್ ಎಂಜಿನ್ ಸರ್ಕಾರ ಕಳೆದ ಎಂಟು ವರ್ಷಗಳಿಂದ ಪಾಲಿಸಿಕೊಂಡು ಬಂದಿರುವ ‘ ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ ( ಶ್ರೀಮಂತರ ಪೋಷಣೆ ಮತ್ತು ಬಡವರ ವಿನಾಶ) ಎಂಬ ಜನವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಕೇಂದ್ರದ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ 2023-2024ನೇ ಸಾಲಿನ ಬಜೆಟ್​ ಅನ್ನು ಮಂಡಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಸರ್ಕಾರದ ದುರಾಡಳಿತ ಮತ್ತು ಕೊರೊನಾ ರೋಗದಿಂದಾಗಿ ದೇಶದ ಆರ್ಥಿಕ ಸ್ಥಿತಿ ಹದಗೆಟ್ಟುಹೋಗಿದೆ. ಬಹಳ ಮುಖ್ಯವಾಗಿ ದೇಶದ ಬೆನ್ನೆಲುಬು ಎಂದು ಭಾಷಣದಲ್ಲಿ ಎಲ್ಲರೂ ಕೊಂಡಾಡುವ ರೈತರ ಬದುಕು ನೆಲ ಹಿಡಿದಿದೆ. ನಿರುದ್ಯೋಗದ ಪ್ರಮಾಣದಲ್ಲಿ ಹೆಚ್ಚಾಗಿದೆ. ಅತ್ಯಂತ ಹೆಚ್ಚು ಸಂಖ್ಯೆಯಲ್ಲಿ ಅಂದರೆ ಸುಮಾರು ಶೇಕಡಾ 54ರಷ್ಟು ಉದ್ಯೋಗವನ್ನು ಸೃಷ್ಟಿಸುವ ಮತ್ತು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆಯನ್ನು ನೀಡುವ ಕೃಷಿ ಕ್ಷೇತ್ರವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು