logo
ಕನ್ನಡ ಸುದ್ದಿ  /  ಕರ್ನಾಟಕ  /  Hdk Vs Bjp |ಕುಟುಂಬವಾದದಲ್ಲಿ ಬಿಜೆಪಿಯದ್ದು ರಾಷ್ಟ್ರೀಯ ದಾಖಲೆ; ಎಚ್‌ಡಿಕೆ ಟ್ವೀಟ್ ಟಾಂಗ್‌!

HDK Vs BJP |ಕುಟುಂಬವಾದದಲ್ಲಿ ಬಿಜೆಪಿಯದ್ದು ರಾಷ್ಟ್ರೀಯ ದಾಖಲೆ; ಎಚ್‌ಡಿಕೆ ಟ್ವೀಟ್ ಟಾಂಗ್‌!

HT Kannada Desk HT Kannada

May 18, 2022 06:40 PM IST

ಬಿಜೆಪಿ ವಿರುದ್ಧ ಎಚ್‌ಡಿಕೆ ಟ್ವಿಟ್‌ ಟಾಂಗ್‌

    • ಒಂದು ರಾತ್ರಿ ಸುರಿದ ಕುಂಭದ್ರೋಣ ಮಳೆಗೆ ಬೆಂಗಳೂರು ತತ್ತರಿಸಿದೆ. 'ಬಿಜೆಪಿ ಎಂಬ ಬುರುಡೆ ಪಾರ್ಟಿ 'ಮಳೆ ಬಗ್ಗೆ, ಜನರ ಕಷ್ಟದ ಬಗ್ಗೆ ಕೇಳುವುದು ಬಿಟ್ಟು, ಜೆಡಿಎಸ್ ಮತ್ತು ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುತ್ತಿದೆ ಎಂದ ಎಚ್‌ಡಿಕೆ. 
ಬಿಜೆಪಿ ವಿರುದ್ಧ ಎಚ್‌ಡಿಕೆ ಟ್ವಿಟ್‌ ಟಾಂಗ್‌
ಬಿಜೆಪಿ ವಿರುದ್ಧ ಎಚ್‌ಡಿಕೆ ಟ್ವಿಟ್‌ ಟಾಂಗ್‌ (twitter)

ಬೆಂಗಳೂರು: ಟ್ವಿಟರ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಆಗಾಗ ಟಾಂಗ್‌ ಕೊಡುವ ಮಾಜಿ ಸಿಎಂ ಕುಮಾರಸ್ವಾಮಿ, ಇದೀಗ ಬೆಂಗಳೂರು ಮಳೆ ಸೇರಿ ಹಲವು ವಿಚಾರಗಳ ಬಗ್ಗೆ ಆಡಳಿತಾರೂಢ ಪಾರ್ಟಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜಧಾನಿಯ ಅವ್ಯವಸ್ಥೆ, ಸ್ಮಾರ್ಟ್‌ ಸಿಟಿ, ಜಲಧಾರೆ ಯೋಜನೆಯ ಆರಂಭಿಕ ಹಿನ್ನೆಡೆ ಬಗ್ಗೆ ಮಾತನಾಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರಲ್ಲಿ ಬಿಯರ್ ಕೊರತೆ; ಈವರೆಗೆ 30,000 ಲೀಟರ್ ಮಾರಾಟ, ಬೈ ಒನ್ ಗೆಟ್‌ ಒನ್ ಆಫರ್‌ ಸಿಗೋದು ಡೌಟ್

Bangalore Crime: ಆನ್‌ಲೈನ್‌ನಲ್ಲಿ ಹೂಡಿಕೆ 5 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ; ಮುಳುವಾದ ದುಪ್ಪಟ್ಟು ಲಾಭ ಗಳಿಸಿ ಸಂದೇಶ

Hassan Scandal: ಎಸ್‌ಐಟಿ ಸಿಎಂ, ಡಿಸಿಎಂ ಏಜೆಂಟ್‌, ಪೆನ್‌ಡ್ರೈವ್‌ ಹಂಚಿದವರ ವಿರುದ್ದ ಕ್ರಮ ಏಕಿಲ್ಲ: ಎಚ್‌ಡಿಕೆ ಗಂಭೀರ ಪ್ರಶ್ನೆ

Mangalore News: ಮಂಗಳೂರು ಮಹಾನಗರದಲ್ಲಿ ನೀರಿನ ರೇಷನಿಂಗ್ ಆರಂಭ, ಎಲ್ಲಿ ಯಾವಾಗ? ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ

ಒಂದು ರಾತ್ರಿ ಸುರಿದ ಕುಂಭದ್ರೋಣ ಮಳೆಗೆ ಬೆಂಗಳೂರು ತತ್ತರಿಸಿದೆ. 'ಬಿಜೆಪಿ ಎಂಬ ಬುರುಡೆ ಪಾರ್ಟಿ 'ಮಳೆ ಬಗ್ಗೆ, ಜನರ ಕಷ್ಟದ ಬಗ್ಗೆ ಕೇಳುವುದು ಬಿಟ್ಟು, ಜೆಡಿಎಸ್ ಮತ್ತು ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುತ್ತಿದೆ. ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದು ಹೊರಟವರು ಕೆಂಪೇಗೌಡರು ಕಟ್ಟಿದ ಭವ್ಯ ಬೆಂಗಳೂರು ನಗರವನ್ನು ಸ್ವಿಮ್ಮಿಂಗ್ ಪೂಲ್ ಮಾಡುತ್ತಿದ್ದಾರೆ! ರಸ್ತೆಗಳು ರಾಜ ಕಾಲುವೆಗಳಾಗಿ, ಮನೆಗಳು ಕೆರೆಗಳಾಗಿವೆ ಎಂದು ಟೀಕಿಸಿದ್ದಾರೆ.

ಈ ತಿಂಗಳ 13ರಂದು ಮುಗಿದ ಜಲಧಾರೆ ಸಮಾರೋಪ ಸಮಾವೇಶದ ಬಗ್ಗೆ ಆರು ದಿನ ಅಧ್ಯಯನ ಮಾಡಿ ಟ್ವೀಟ್ ಮಾಡಿದೆ ಬಿಜೆಪಿ. ಇನ್ನು ಆರಂಭವಾಗದ ಪಂಚರತ್ನ ಯಾತ್ರೆ ಬಗ್ಗೆ ಆಗಲೇ ಏರಿದೆ ಬೀಪಿ. ಮಿಷನ್ 123 ನಮ್ಮ ಗುರಿ. ನಿಮಗೆ ಯಾಕೆ ಉರಿ ಎಂದ ಎಚ್‌ಡಿಕೆ, ಜೆಡಿಎಸ್ ನಲ್ಲಿ 1+2+3 ಸಂಖ್ಯಾಬಲ ಇದೆ, ಸರಿ. ಆದರೆ, ಭಾರೀ ಕುಳಗಳ ಬಿಜೆಪಿಯಲ್ಲಿ 1+2 / 1+2+3 ಲೆಕ್ಕವೇ ಇಲ್ಲ. ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ತುಮಕೂರು ಸೇರಿ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಅದರ ಗರ್ಭಗುಡಿಯಲ್ಲಿ 1+2 / 1+2+3ಗಳ ಕುಟುಂಬ ಶಿಶುಗಳೇ ತುಂಬಿವೆ ಎಂದಿದ್ದಾರೆ.

ಕುಟುಂಬವಾದದಲ್ಲಿ ಬಿಜೆಪಿಯದ್ದು ರಾಷ್ಟ್ರೀಯ ದಾಖಲೆ

ಯಡಿಯೂರಪ್ಪ, ಶೆಟ್ಟರ್, ನಿರಾಣಿ, ಜಾರಕಿಹೊಳಿ, ಜೊಲ್ಲೆ; ಒಂದಾ.. ಎರಡಾ? ಪಟ್ಟಿ ಮಾಡುತ್ತಾ ಹೋದರೆ ಅದೇ ಹನುಮನ ಬಾಲ. ಈಗ ಬಿಜೆಪಿಗರು ಹೇಳಬೇಕು, 1+2 / 1+2+3 ಇರುವುದು ಎಲ್ಲಿ? ಈ ವಿಷಯದಲ್ಲಿ ಬಿಜೆಪಿಯದ್ದು ರಾಷ್ಟೀಯ ದಾಖಲೆ. ಕುಟುಂಬವಾದ, ಹೋದ ಕಡೆಯೆಲ್ಲ ಸುಖವಾದದಲ್ಲಿ ತೇಲಿ ತೆವಳುವ ಬಿಜೆಪಿಯ ಸುಖ ಸಿದ್ಧಾಂತಕ್ಕೆ ರಣರೋಚಕ ಇತಿಹಾಸವೇ ಇದೆ. ಬ್ರಿಟಿಷರ ಬಚ್ಚಲು ಬಾಚಿದ ಅವರಿಗೆ ತಮ್ಮ ಕಪಟ ನೀತಿಗೆ ವಿರುದ್ಧವಾಗಿದ್ದ ರಾಷ್ಟ್ರೀಯವಾದ ಎಂಬ ಏಣಿ ಹತ್ತಿ ತಾನು ರಕ್ಕಸರೂಪ ತಾಳಿದ್ದು ಮರೆತಿದೆಯಾ? ಎಂದು ಪ್ರಶ್ನಿಸಿದ್ದಾರೆ.

ಹೌದು. ಜೆಡಿಎಸ್ ನಲ್ಲಿ ಪಂಚರತ್ನಗಳಿವೆ, ನಿಜ. ಬಿಜೆಪಿಯಲ್ಲಿ ಸೀಡಿರತ್ನಗಳು, 40% ಕಮಿಷನ್ ರತ್ನಗಳು, ಜನರ ಹಣದ ಲೂಟಿ ರತ್ನಗಳು, ಕಾಸಿಗಾಗಿ ಕೆಲಸ ಮಾರಿಕೊಳ್ಳುವ ರತ್ನಗಳು, ಪಿಎಸ್ ಐ ಕಿಂಗ್ ಪಿನ್ ರತ್ನಗಳು, ಮಾಧ್ಯಮಗಳ ವಿರುದ್ಧ ಕೋರ್ಟ್ ಸ್ಟೇ ತಂದ ರತ್ನಗಳು, ಸದನದಲ್ಲೇ ನೀಲಿಚಿತ್ರ ನೋಡಿದ ರತ್ನಗಳು ಕೂಡ ಇವೆ. ಅಲ್ಲವೇ? ಎಂದ ಟಾಂಗ್‌ ಕೊಟ್ಟಿದ್ದಾರೆ.

123 ನಮ್ಮ ಗುರಿ. ನಮ್ಮ ಹೋರಾಟ ನಮ್ಮದು. ಬಿಜೆಪಿಗೆ ಇಲ್ಲಿ ಒಂದು ಸೀಟು ಗೆಲ್ಲಬೇಕಾದರೂ ಮೋದಿಯೇ ಗತಿ. 123 ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳ ಮಾತು ಹಾಗಿರಲಿ. ನಿಮಗಿದ್ದಾರಾ? ಅಭ್ಯರ್ಥಿಗಳಿಗೆ ದಿಕ್ಕಿಲ್ಲದೆ, ಅಕ್ಕಪಕ್ಕದ ಪಕ್ಷಗಳ ನಾಯಕರ ಮನೆ ಬಾಗಿಲ ನೆಲ ನೆಕ್ಕುವ ನೀವಾ ನಮ್ಮ ಬಗ್ಗೆ ಮಾತನಾಡುವುದು. ಜನತಾ ಪರಿವಾರ ದೇವೇಗೌಡ ಆಂಡ್ ಸನ್ಸ್ ಅನ್ನುವವರ ಕಣ್ಣುಗಳಿಗೆ ಕಾಮಾಲೆಯಾ? ಬಿಜೆಪಿಯಲ್ಲಿರುವ ಸನ್ಸ್, ಬ್ರದರ್ಸ್ ಮತ್ತು ಫ್ಯಾಮಿಲಿ ಪಾಲಿಟಿಕ್ಸ್ ಬಗ್ಗೆ ಕುರುಡಾ? ಎಂದು ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ್ದಾರೆ.

ನನ್ನನ್ನು ಲಕ್ಕಿ ಡಿಪ್ ಸಿಎಂ ಎನ್ನುವ ಬಿಜೆಪಿಗೆ, ತನ್ನ ಸಿಎಂಗಳೆಲ್ಲರೂ ಆಪರೇಷನ್ ಕಮಲದ ಕೆಸರಿನಲ್ಲಿ ಡಿಪ್ ಆದವರು ಎನ್ನುವುದು ಗೊತ್ತಿಲ್ಲವೆ?

ಯಡಿಯೂರಪ್ಪ & ಸನ್ಸ್, ಶೆಟ್ಟರ್ -ನಿರಾಣಿ & ಬ್ರದರ್ಸ್, ಜೊಲ್ಲೆ & ಹಸ್ಬೆಂಡ್, ಉದಾಸಿ & ಸನ್ಸ್, ಜಾರಕಿಹೊಳಿ & ಬ್ರದರ್ಸ್, ಲಿಂಬಾವಳಿ ಭಾವ ಬಾಮೈದ, ಅಂಗಡಿ & ಫ್ಯಾಮಿಲಿ, ಬಸವರಾಜು & ಸನ್, ಕತ್ತಿ & ಬ್ರದರ್ಸ್, ಅಪ್ಪಚ್ಚು ರಂಜನ್ & ಬ್ರದರ್. ಕೊನೆಗೆ, ಬಳ್ಳಾರಿಯ ರೆಡ್ಡಿ & ಬ್ರದರ್ಸ್, ಶ್ರೀರಾಮುಲು & ಸಿಸ್ಟರ್. ಪಟ್ಟಿ ಸಾಕಾ? ಇನ್ನೂ ಬೇಕಾ? ದಿಲ್ಲಿಯಿಂದ ಹಳ್ಳಿ ತನಕ ಕುಟುಂಬ ರಾಜಕಾರಣದ ಕೊಳದಲ್ಲಿ ಬಿಜೆಪಿ ಮಿಂದೇಳುತ್ತಿರುವುದು ಸುಳ್ಳಾ? ನನ್ನನ್ನು ಲಕ್ಕಿ ಡಿಪ್ ಸಿಎಂ ಎನ್ನುವ ಬಿಜೆಪಿಗೆ, ತನ್ನ ಸಿಎಂಗಳೆಲ್ಲರೂ ಆಪರೇಷನ್ ಕಮಲದ ಕೆಸರಿನಲ್ಲಿ ಡಿಪ್ ಆದವರು ಎನ್ನುವುದು ಗೊತ್ತಿಲ್ಲವೆ? ಎಂದು ಸರಣಿ ಟ್ವೀಟ್‌ ಮಾಡಿ ಬಿಜೆಪಿಯನ್ನು ಕೈಗೆ ತೆಗೆದುಕೊಂಡಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು