logo
ಕನ್ನಡ ಸುದ್ದಿ  /  ಕರ್ನಾಟಕ  /  Hdk Tweet: ಅಧಿಕಾರಕ್ಕಾಗಿ ಹಪಾಹಪಿಯಿಂದ ಅಡ್ಡಮಾರ್ಗ ಹಿಡಿದಿದ್ದು ಏಕೆ? - ಸಚಿವ ಅಶ್ವತ್ಥ​​ ನಾರಾಯಣ್​ಗೆ ಹೆಚ್​​ಡಿಕೆ ಪ್ರಶ್ನೆ

HDK tweet: ಅಧಿಕಾರಕ್ಕಾಗಿ ಹಪಾಹಪಿಯಿಂದ ಅಡ್ಡಮಾರ್ಗ ಹಿಡಿದಿದ್ದು ಏಕೆ? - ಸಚಿವ ಅಶ್ವತ್ಥ​​ ನಾರಾಯಣ್​ಗೆ ಹೆಚ್​​ಡಿಕೆ ಪ್ರಶ್ನೆ

HT Kannada Desk HT Kannada

Oct 02, 2022 04:36 PM IST

ಸಚಿವ ಡಾ. ಸಿ ಎನ್​ ಅಶ್ವತ್ಥ​​ ನಾರಾಯಣ್​ - ಮಾಜಿ ಮುಖ್ಯಂಮಂತ್ರಿ ಹೆಚ್​ ಡಿ ಕುಮಾರಸ್ವಾಮಿ

    • ಅಭಿವೃದ್ದಿ ಕಾಮಗಾರಿಗಳ ಕುರಿತು ಸಚಿವ ಡಾ. ಸಿ ಎನ್​ ಅಶ್ವತ್ಥ​​ ನಾರಾಯಣ್​ ವಿರುದ್ಧ ಕಿಡಿಕಾರಿರುವ ಮಾಜಿ ಮುಖ್ಯಂಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಸರಣಿ ಟ್ವೀಟ್​ಗಳನ್ನು ಮಾಡಿದ್ದಾರೆ.
ಸಚಿವ ಡಾ. ಸಿ ಎನ್​ ಅಶ್ವತ್ಥ​​ ನಾರಾಯಣ್​ - ಮಾಜಿ ಮುಖ್ಯಂಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
ಸಚಿವ ಡಾ. ಸಿ ಎನ್​ ಅಶ್ವತ್ಥ​​ ನಾರಾಯಣ್​ - ಮಾಜಿ ಮುಖ್ಯಂಮಂತ್ರಿ ಹೆಚ್​ ಡಿ ಕುಮಾರಸ್ವಾಮಿ

ಬೆಂಗಳೂರು: ಅಭಿವೃದ್ದಿ ಕಾಮಗಾರಿಗಳ ಕುರಿತು ಸಚಿವ ಡಾ. ಸಿ ಎನ್​ ಅಶ್ವತ್ಥ​​ ನಾರಾಯಣ್​ ವಿರುದ್ಧ ಕಿಡಿಕಾರಿರುವ ಮಾಜಿ ಮುಖ್ಯಂಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಸರಣಿ ಟ್ವೀಟ್​ಗಳನ್ನು ಮಾಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು ಸುತ್ತ ಮುತ್ತ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ; ಅತ್ತ ಕರಾವಳಿ, ಉತ್ತರ ಕರ್ನಾಟಕದಲ್ಲಿ ಮತ್ತಷ್ಟು ಬಿಸಿಯ ಎಚ್ಚರಿಕೆ

SSLC Result 2024: ಎಸ್‌ಎಸ್‌ಎಲ್‌ಸಿ ರಿಸಲ್ಟ್ ಯಾವಾಗ? ಫಲಿತಾಂಶ ನೋಡುವುದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ

Mangalore News: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ಏರ್ಪೋರ್ಟ್‌ಗೆ ಬಿಗಿ ಭದ್ರತೆ, ವಾರದ ಹಿಂದಿನ ಪ್ರಕರಣ ತಡವಾಗಿ ಬೆಳಕಿಗೆ

ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಕರ್ನಾಟಕದಲ್ಲಿ 3.25 ಕೋಟಿ, ಬೆಂಗಳೂರಲ್ಲಿ 2.68 ಕೋಟಿ, ದಂಡ ವಸೂಲಿಗೆ ಬಾಕಿ

ಅಭಿವೃದ್ಧಿ ಕೆಲಸ ಎಂದರೇನು ಡಾ. ಅಶ್ವತ್ಥ​​ ನಾರಾಯಣ್? ವಾಮಮಾರ್ಗ ಎಂದರೆ ಯಾವುದು? ಇವೆರಡರಲ್ಲೂ ತಮಗೆ ಒಳ್ಳೇ ಅನುಭವವೇ ಇದೆ. ಅಧಿಕಾರಿಗಳನ್ನು ಬುಟ್ಟಿಗೆ ಹಾಕಿಕೊಂಡು 'ಕಳ್ಳಮಾರ್ಗ'ದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲು ಹೊರಟಿದ್ದು, ಕ್ಷೇತ್ರದ ಶಾಸಕರನ್ನೇ ಕತ್ತಲೆಯಲ್ಲಿ ಇಟ್ಟಿದ್ದನ್ನು ಏನೆಂದು ಕರೆಯಬೇಕು? ಇದೇನಾ ನೀವು ಹೇಳುವ 'ರಾಜಮಾರ್ಗ'? ಎಂದು ಹೆಚ್​​ಡಿಕೆ ಪ್ರಶ್ನಿಸಿದ್ದಾರೆ.

ಅಧಿಕಾರವೂ ತಪ್ಪಬಾರದು, ಅಭಿವೃದ್ಧಿಯೂ ಆಗಬಾರದು ಎಂದು ನಾನು ಭಾವಿಸಿದ್ದಿದ್ದರೆ ನೀವು ಮಲ್ಲೇಶ್ವರದಲ್ಲಿ ಶಾಸಕರೇ ಆಗುತ್ತಿರಲಿಲ್ಲ. ಆ ದಿನಗಳನ್ನು ಒಮ್ಮೆ ನೆನಪು ಮಾಡಿಕೊಳ್ಳಿ. ಇನ್ನು; ಅಭಿವೃದ್ಧಿ ಬಗ್ಗೆ ಉಪದೇಶ ಮಾಡಿದ್ದೀರಿ, ನಿಮ್ಮ ಮಾದರಿಯಲ್ಲಿ ಅಭಿವೃದ್ಧಿ ಮಾಡಿಕೊಳ್ಳುವುದು ನನಗೆ ಗೊತ್ತಿಲ್ಲ, ನನ್ನಿಂದ ಆಗುವುದೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಡಾ. ಅಶ್ವತ್ಥ​​ ನಾರಾಯಣ್ ಅವರೇ, ಅಧಿಕಾರ ಬರುತ್ತದೆ, ಹೋಗುತ್ತದೆ ಎಂದು ವೇದಾಂತ ಹೇಳಿದ್ದೀರಿ. ಹೌದು; ಇಂಥ ಉದಾತ್ತ, ಆದರ್ಶ ಚಿಂತನೆಯ, ವಿಶಾಲ ಹೃದಯ ವೈಶಾಲ್ಯವುಳ್ಳ ನಿಮ್ಮಂಥ ಪ್ರಾಜ್ಞರೇ ಆಪರೇಶನ್ ಕಮಲ ಎಂಬ ಪಾಪ ಎಸಗಿದ್ದೇಕೆ? ನಮ್ಮ ಶಾಸಕರ ಮನೆಯಲ್ಲಿ ಹಣ ಇಟ್ಟು ಬಂದ್ದಿದ್ದು ಯಾಕೆ? ಎಂದು ಮಾಜಿ ಮುಖ್ಯಮಂತ್ರಿಗಳು ಟ್ವೀಟ್​ ಮಾಡಿದ್ದಾರೆ.

ಅಧಿಕಾರ ಬೇಕಿದ್ದರೆ ನೀವು ಚುನಾವಣೆಯಲ್ಲಿ ಪೂರ್ಣ ಬಹುಮತ ಸಿಗುವವರೆಗೂ ಕಾಯಬಹುದಿತ್ತಲ್ಲವೇ? ಆದರೆ, ಹಪಾಹಪಿಯಿಂದ 'ಅಡ್ಡಮಾರ್ಗ' ಹಿಡಿದಿದ್ದು ಏಕೆ? ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಅಪಹರಿಸಿ ಆಪರೇಷನ್‌ ಕಮಲದ ಸರಕಾರ ಮಾಡಿದ್ದು ಯಾಕೆ? ಇದು ವಾಮಮಾರ್ಗವೋ? ಸನ್ಮಾರ್ಗವೋ? ಸ್ಪಲ್ಪ ಹೇಳಿ ಎಂದು ಟ್ವೀಟ್​ ಮಾಡಿದ್ದಾರೆ ಹೆಚ್​ಡಿಕೆ.

ಬಿಜೆಪಿ ಸರಕಾರ ಬಂದ ಮೇಲೆ ರಾಮನಗರ ಜಿಲ್ಲೆಯಲ್ಲಿ ಎಷ್ಟು ಅಭಿವೃದ್ಧಿ ಆಗಿದೆ ಎಂಬುದನ್ನು ಬಹಿರಂಗ ಚರ್ಚೆ ಮಾಡೋಣ ಬನ್ನಿ. ಆಗ ಯಾರ ಆತ್ಮಸಾಕ್ಷಿ ಏನು ಎಂಬುದು ಜನರಿಗೂ ತಿಳಿಯುತ್ತದೆ. 'ಎಂಎಲ್‌ಸಿ ಕೋರಿಕೆ ಮೇರೆಗೆ..' ಎಂದು ಬಿಡುಗಡೆ ಮಾಡಿದ 50 ಕೋಟಿ ರೂ. ಒಳಗುಟ್ಟಿನ ಬಗ್ಗೆಯೂ ಚರ್ಚಿಸೋಣ ಬನ್ನಿ. ನಾನು ತಯಾರಿದ್ದೇನೆ ಎಂದು ಕುಮಾರಸ್ವಾಮಿ ಸವಾಲೆಸೆದರು.

ವಿಭಾಗ

    ಹಂಚಿಕೊಳ್ಳಲು ಲೇಖನಗಳು