logo
ಕನ್ನಡ ಸುದ್ದಿ  /  Karnataka  /  Heavy Rain Forecast For Three Days From Today In Karnataka Announcement Of Yellow Alert Rmy

Karnataka Weather: ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ

Raghavendra M Y HT Kannada

May 29, 2023 07:22 AM IST

ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ (PTI)

  • ರಾಜ್ಯದಲ್ಲಿ ಮತ್ತೆ ವರುಣ ಅಬ್ಬರಿಸಲಿದ್ದು, ಇಂದಿನಿಂದ ಮೂರುನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ (PTI)
ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ (PTI)

ಬೆಂಗಳೂರು: ಕರ್ನಾಟಕದ ಕೆಲವೆಡೆ ನಿನ್ನೆ (ಮೇ 28, ಭಾನುವಾರ) ಭಾರಿ ಮಳೆಯಾಗಿದೆ (Karnataka Rain). ಇನ್ನೂ ಮೂರ್ನಾಲ್ಕು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಟ್ರೆಂಡಿಂಗ್​ ಸುದ್ದಿ

Vijayanagara News: ಮಾಜಿ ಡಿಸಿಎಂ ಎಂ.ಪಿ.ಪ್ರಕಾಶ್‌ ಪತ್ನಿ ರುದ್ರಾಂಬ ನಿಧನ

Ramanagar News: ಮೇಕೆದಾಟಿನಲ್ಲಿ ಈಜಲು ಹೋಗಿ ಮೂವರು ಯುವತಿಯರು ಸೇರಿ ಐವರ ದುರ್ಮರಣ

Railway News: ಬೆಂಗಳೂರು ಬಿಲಾಸ್‌ಪುರಕ್ಕೆ ವಿಶೇಷ ಬೇಸಿಗೆ ರೈಲು, ಮೇ ತಿಂಗಳ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Holiday Declared: ಶ್ರೀನಿವಾಸಪ್ರಸಾದ್‌ ನಿಧನ, ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ನಾಳೆ ಸರ್ಕಾರಿ ಕಚೇರಿಗಳಿಗೆ ರಜೆ

ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗದಲ್ಲಿ ಜೂನ್ 1ರ ವರೆಗೆ ಭಾರಿ ಮಳೆಯಾಗುವ ಸಂಭವ ಇದೆ. ಹೀಗಾಗಿ ಇಲ್ಲಿ ಜನರು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದಿರುವ ಇಲಾಖೆ, ಯೆಲ್ಲೋ ಅಲರ್ಟ್ ಘೋಷಿಸಿದೆ ಎಂದು ವರದಿಯಾಗಿದೆ.

ಹಾಸನ ಜಿಲ್ಲೆಯ ಬೇಲೂರು ಹಾಗೂ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಿನ್ನೆ ತಲಾ 2 ಸೆಂಟಿ ಮೀಟರ್ ಮಳೆಯಾಗಿದೆ. ಚಿಕ್ಕಮಗಳೂರಿನ ಕಳಸ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಿರಾಲಿಯಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ.

ಇಂದು (ಮೇ 29, ಸೋಮವಾರ) ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ನಾಳೆ (ಮೇ 30, ಮಂಗಳವಾರ) ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದದ್ದು, ಗುಡುಗು ಸಹಿತ ಮಳೆಯಾಗುಗವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕೆಲವೆಡೆ ಉಷ್ಣಾಂಶದಲ್ಲಿ ಬದಲಾವಣೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಅಂದರೆ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ಹೆಚ್ಚಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಸಾಮಾನ್ಯವಾಗಿದೆ. ರಾಯಚೂರಿನಲ್ಲಿ ಗರಿಷ್ಠ 40.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಮುಂಗಾರು ಮಳೆ ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 70,132 ಹೆಕ್ಟೇರ್ ಬಿತ್ತನೆ ಗುರಿ ಇದೆ. ಅನ್ನದಾತ ಬಿತ್ತನೆ ಕಾರ್ಯಕ್ಕೆ ಸಜ್ಜಾಗುತ್ತಿದ್ದು ಭೂತಾಯಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಜೂನ್ ಮೊದಲ ವಾರದಲ್ಲಿ ಮುಂಗಾರು ಮಳೆಯ ಸಿಂಚನದೊಂದಿಗೆ ಬಿತ್ತನೆ ಆರಂಭವಾಗಲಿದೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು