logo
ಕನ್ನಡ ಸುದ್ದಿ  /  ಕರ್ನಾಟಕ  /  ಹೊಸ ವರ್ಷಾಚರಣೆ 2025: ಬೆಂಗಳೂರು, ಸುತ್ತಮುತ್ತ ಬಿಗಿ ಬಂದೋಬಸ್ತ್‌ ವಹಿಸುವಂತೆ ಪೊಲೀಸರಿಗೆ ಗೃಹ ಸಚಿವ ಜಿ ಪರಮೇಶ್ವರ್‌ ಸೂಚನೆ

ಹೊಸ ವರ್ಷಾಚರಣೆ 2025: ಬೆಂಗಳೂರು, ಸುತ್ತಮುತ್ತ ಬಿಗಿ ಬಂದೋಬಸ್ತ್‌ ವಹಿಸುವಂತೆ ಪೊಲೀಸರಿಗೆ ಗೃಹ ಸಚಿವ ಜಿ ಪರಮೇಶ್ವರ್‌ ಸೂಚನೆ

Rakshitha Sowmya HT Kannada

Dec 24, 2024 07:08 AM IST

google News

ಹೊಸ ವರ್ಷಾಚರಣೆ ಸಂದರ್ಭ ಬೆಂಗಳೂರು ಹಾಗೂ ಸುತ್ತಮುತ್ತ ಬಿಗಿ ಬಂದೋಬಸ್ತ್‌ ವಹಿಸುವಂತೆ ಪೊಲೀಸರಿಗೆ ಗೃಹಸಚಿವ ಜಿ ಪರಮೇಶ್ವರ್‌ ಸೂಚನೆ

  • New Year 2025: ಹೊಸ ವರ್ಷಾಚರಣೆಗೆ ವಾರವಷ್ಟೇ ಬಾಕಿ ಉಳಿದಿದ್ದು ಬೆಂಗಳೂರು , ಸುತ್ತಮುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಂದೋಬಸ್ತ್‌ ವಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಗೃಹಸಚಿವ ಜಿ ಪರಮೇಶ್ವರ್‌, ಪೊಲೀಸ್‌ ಇಲಾಖೆಗೆ ಸೂಚಿಸಿದ್ದಾರೆ. 

ಹೊಸ ವರ್ಷಾಚರಣೆ ಸಂದರ್ಭ ಬೆಂಗಳೂರು ಹಾಗೂ ಸುತ್ತಮುತ್ತ ಬಿಗಿ ಬಂದೋಬಸ್ತ್‌ ವಹಿಸುವಂತೆ ಪೊಲೀಸರಿಗೆ ಗೃಹಸಚಿವ ಜಿ ಪರಮೇಶ್ವರ್‌ ಸೂಚನೆ
ಹೊಸ ವರ್ಷಾಚರಣೆ ಸಂದರ್ಭ ಬೆಂಗಳೂರು ಹಾಗೂ ಸುತ್ತಮುತ್ತ ಬಿಗಿ ಬಂದೋಬಸ್ತ್‌ ವಹಿಸುವಂತೆ ಪೊಲೀಸರಿಗೆ ಗೃಹಸಚಿವ ಜಿ ಪರಮೇಶ್ವರ್‌ ಸೂಚನೆ

ಬೆಂಗಳೂರು: ಹೊಸ ವರ್ಷದ ಸ್ವಾಗತಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಕ್ರಿಸ್‌ಮಸ್‌ ಮತ್ತು ಹೊಸ ವರ್ಷಾಚರಣೆಗೆ ಭರ್ಜರಿ ತಯಾರಿಯೂ ನಡೆಯುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ನಗರದಾದ್ಯಂತ ಬಿಗಿ ಬಂದೋಬಸ್ತ್‌ ಮಾಡುತ್ತಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಬಿಗಿ ಭದ್ರತೆಗೆ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಸಂಭ್ರಮಾಚರಣೆಗೆ ನಿರ್ಬಂಧ ಇಲ್ಲ ಎಂದೂ ಸಚಿವರು ತಿಳಿಸಿದ್ದಾರೆ. ಹೊಸ ವರ್ಷಾಚರಣೆ ಅಂಗವಾಗಿ ಗೃಹ ಸಚಿವರು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಸಭೆ ನಡೆಸಿದ್ದಾರೆ. ಹೊಸ ವರ್ಷಾಚರಣೆ ಅಂಗವಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದು. ಈ ನಿಟ್ಟಿನಲ್ಲಿ ಬಂದೋಬಸ್ತ್ ಕ್ರಮಗಳನ್ನು ಕೈಗೊಳ್ಳಲು ಮತ್ತು ವಿಶೇಷವಾಗಿ ಮಹಿಳೆಯರ ಸುರಕ್ಷತೆಗೆ ಒತ್ತು ನೀಡಲು

ಪೊಲೀಸ್‌ ಇಲಾಖೆ ನಿರ್ಧರಿಸಿದೆ. ಬೆಂಗಳೂರಲ್ಲಿ ಅಂದಾಜು 7 ಲಕ್ಷ ಜನ ಮಧ್ಯರಾತ್ರಿ ಆಚರಣೆಯಲ್ಲಿ ಭಾಗಿಯಾಗುತ್ತಾರೆ.ಒಂದು ವೇಳೆ ಯಾವುದೇ ಅಹಿತಕರ ಘಟನೆ ನಡೆದರೆ ಸ್ಥಳಿಯ ಡಿಸಿಪಿ ಅವರೇ ಹೊಣೆ ಹೊರಬೇಕಾಗುತ್ತದೆ. ಸಂಚಾರ ದಟ್ಟಣೆ ಸಮಸ್ಯೆಯಾಗದಂತೆ ಮೆಟ್ರೋ, ಆಟೋಗಳು, ಬಸ್‌ಗಳ ಓಡಾಟಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸಭೆ ತೀರ್ಮಾನಿಸಿದೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಸಂಭ್ರಮಾಚರಣೆಗೆ ನಿರ್ಬಂಧ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಮದ್ಯ ಸೇವನೆ, 769 ಪ್ರಕರಣ ದಾಖಲು

ಮದ್ಯ ಸೇವಿಸಿ ವಾಹನ ಚಾಲನೆ ಹಾಗೂ ಅತಿ ವೇಗದ ಚಾಲನೆ ಮಾಡಿದವರ ವಿರುದ್ಧ ಕಳೆದ ಒಂದು ವಾರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 60,903 ವಾಹನ ಚಾಲಕರನ್ನು ತಪಾಸಣೆಗೊಳಪಡಿಸಿ 769 ಪ್ರಕರಣಗಳನ್ನು ದಾಖಲಿಸಲಾಗಿದೆ. ಆರೋಪಿ ಚಾಲಕರ ವಾಹನ ಪರವಾನಗಿಯನ್ನು ರದ್ದುಪಡಿಸುವಂತೆ ಸಾರಿಗೆ ಇಲಾಖೆಗೆ ಪತ್ರ ಬರೆಯಲಾಗುವುದು. ಅದೇ ರೀತಿ ಅತಿ ವೇಗವಾಗಿ ವಾಹನ ಚಲಾಯಿಸುತ್ತಿದ್ದ 241 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 2.41 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ಹೊಸ ವರ್ಷಾಚರಣೆ ಸಮೀಪಿಸುತ್ತಿದ್ದು ಮದ್ಯ ಸೇವಿಸಿ ಮತ್ತು ಅತಿ ವೇಗವಾಗಿ ವಾಹನ ಚಲಾಯಿಸುವವರ ಸಂಖ್ಯೆ ಹೆಚ್ಚುತ್ತಿದ್ದು, ನಿರಂತರವಾಗಿ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೌಟುಂಬಿಕ ಕಲಹ, ಪತಿ ಆತ್ಮಹತ್ಯೆ

ಪತ್ನಿಯೊಂದಿಗೆ ನಡೆದ ಜಗಳದಿಂದ ನೊಂದು ಲಾರಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇ ಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ದೂರು ದಾಖಲಾಗಿದೆ. ಜೆಸಿ ನಗರ ನಿವಾಸಿ, ಲಾರಿ ಮಾಲೀಕ ಎಂಜಿ ಸೋಮಶೇಖರ್(47) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತರ ತಂದೆ ನೀಡಿರುವ ದೂರು ಆಧರಿಸಿ ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಭಾನುವಾರ ತಡರಾತ್ರಿ ತಮ್ಮ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸುವಾಗ, ಗಮನಿಸಿದ ಮನೆಯವರು ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೌಟುಂಬಿಕ ಕಲಹಕ್ಕೆ ಮಗ ಮತ್ತು ಸೊಸೆ ಜಗಳ ಮಾಡಿಕೊಂಡಿದ್ದರು ಇದರಿಂದ ನೊಂದು ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನ ಸಾವಿನ ಬಗ್ಗೆ ಯಾರ ಮೇಲೂ ಅನುಮಾನ ಇಲ್ಲ ಎಂದು ಮೃತರ ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಎರಡು ಲಾರಿ ಮಧ್ಯೆ ಸಿಲುಕಿ ಚಾಲಕ ಸಾವು

ಎರಡು ಲಾರಿಗಳ ಮಧ್ಯೆ ಸಿಲುಕಿದ ರಾಜಸ್ಥಾನ ಮೂಲದ ಚಾಲಕನೊಬ್ಬ ಮೃತಪಟ್ಟಿದ್ದು, ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜಸ್ಥಾನದ ಅಜರುದ್ದೀನ್ (24) ಮೃತ ಚಾಲಕ. ರಾಜಸ್ಥಾನದಿಂದ ಬೆಳ್ಳುಳ್ಳಿ ತುಂಬಿಸಿಕೊಂಡು ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಬಂದಿದ್ದರು. ಲಾರಿ ಚಾಲಕ ತಾಡಪಾಲ್‌ಗೆ ಕಟ್ಟಿದ್ದ ಹಗ್ಗವನ್ನು ಬಿಚ್ಚುತ್ತಿದ್ದರು. ಅದೇ ವೇಳೆ ಇನ್ನೊಂದು ಲಾರಿಯನ್ನು ಚಾಲಕ ಹಿಂದಕ್ಕೆ ತೆಗೆದುಕೊಳ್ಳುತ್ತಿದ್ದಾಗ ಅಜರುದ್ದೀನ್‌ ಗೆ ಡಿಕ್ಕಿ ಹೊಡೆದಿದೆ. ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಮಾಡಿದ ಲಾರಿ ಚಾಲಕನೂ ರಾಜಸ್ಥಾನದವನೇ ಆಗಿದ್ದಾನೆ. ಅಪಘಾತ ನಡೆಯುತ್ತಿದ್ದಂತೆ ಆ ಲಾರಿಯ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ