logo
ಕನ್ನಡ ಸುದ್ದಿ  /  ಕರ್ನಾಟಕ  /  Indian Railways: ಬೆಳಗಾವಿ, ಹುಬ್ಬಳ್ಳಿಯಿಂದ ಸೂರತ್‌ನ ಉಧ್ನಾ ನಿಲ್ದಾಣಕ್ಕೆ ಏಕಮುಖ ವಿಶೇಷ ರೈಲು ಸೇವೆ ನಾಳೆ ಆರಂಭ

Indian Railways: ಬೆಳಗಾವಿ, ಹುಬ್ಬಳ್ಳಿಯಿಂದ ಸೂರತ್‌ನ ಉಧ್ನಾ ನಿಲ್ದಾಣಕ್ಕೆ ಏಕಮುಖ ವಿಶೇಷ ರೈಲು ಸೇವೆ ನಾಳೆ ಆರಂಭ

Umesha Bhatta P H HT Kannada

Jul 09, 2024 08:55 AM IST

google News

ಬೆಳಗಾವಿ, ಹುಬ್ಬಳ್ಳಿಯಿಂದ ಉಧ್ನಾ ನಗರಕ್ಕೆ ವಿಶೇಷ ರೈಲು ಸಂಚರಿಸಲಿದೆ.

    • Hubli News  ಭಾರತೀಯ ರೈಲ್ವೆಯ( Indian Railway) ನೈರುತ್ಯ ರೈಲ್ವೆ ವಲಯವು ಗುಜರಾತ್‌ ನ ಉಧ್ನಾ ನಿಲ್ದಾಣಕ್ಕೆ(Udhna)  ಬೆಳಗಾವಿ ಹಾಗೂ ಹುಬ್ಬಳ್ಳಿಯಿಂದ ವಿಶೇಷ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.
ಬೆಳಗಾವಿ, ಹುಬ್ಬಳ್ಳಿಯಿಂದ ಉಧ್ನಾ ನಗರಕ್ಕೆ ವಿಶೇಷ ರೈಲು ಸಂಚರಿಸಲಿದೆ.
ಬೆಳಗಾವಿ, ಹುಬ್ಬಳ್ಳಿಯಿಂದ ಉಧ್ನಾ ನಗರಕ್ಕೆ ವಿಶೇಷ ರೈಲು ಸಂಚರಿಸಲಿದೆ.

ಹುಬ್ಬಳ್ಳಿ: ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸುವ ಸಲುವಾಗಿ, ಭಾರತೀಯ ರೈಲ್ವೆಯು ಬೆಳಗಾವಿ ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣದಿಂದ ಗುಜರಾತ್‌ನ ಸೂರತ್‌ ಮಹಾನಗರಕ್ಕೆ ಹೊಂದಿಕೊಂಡಂತೆ ಇರುವ ಸಬ್‌ ಅರ್ಬನ್‌ ಉದ್ನಾ ನಿಲ್ದಾಣಕ್ಕೆ ಏಕಮುಖ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಬೆಳಗಾವಿ ಹಾಗು ಹುಬ್ಬಳ್ಳಿ ನಗರದಿಂದ ತಲಾ ಒಂದು ಟ್ರಿಪ್‌ ಅನ್ನು ರೂಪಿಸಲಾಗಿದ್ದು. ಜುಲೈ 10ರಂದು ಬೆಳಗಾವಿಯಿಂದ ಹಾಗೂ ಜುಲೈ 13ರಂದು ಈ ವಿಶೇಷ ರೈಲುಗಳ ಸಂಚಾರ ಇರಲಿದೆ ಎಂದು ನೈರುತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.

ಜುಲೈ 10 ರಂದು, ಬೆಳಗಾವಿಯಿಂದ ಉಧ್ನಾಕ್ಕೆ ವಿಶೇಷ ರೈಲು (07354) ಸಂಚಾರ

ಈ ವಿಶೇಷ ರೈಲು ಜುಲೈ 10, 2024 ರಂದು ಬೆಳಿಗ್ಗೆ 10:30 ಗಂಟೆಗೆ ಬೆಳಗಾವಿಯಿಂದ ಹೊರಟು ಘಟಪ್ರಭಾ, ರಾಯಬಾಗ, ಕುಡಚಿ, ಮೀರಜ್, ಸಾಂಗ್ಲಿ, ಕರಾಡ, ಸತಾರಾ, ಪುಣೆ, ಕಲ್ಯಾಣ್, ಭಿವಂಡಿ ರೋಡ್, ವಸಾಯಿ ರೋಡ್, ಪಾಲ್ಘರ್, ವಾಪಿ ಮತ್ತು ವಲ್ಸಾದ್ ನಿಲ್ದಾಣಗಳಲ್ಲಿ ನಿಲುಗಡೆಯ ಮೂಲಕ ಮರುದಿನ ಮಧ್ಯ ರಾತ್ರಿ 2:45 ಕ್ಕೆ ಉಧ್ನಾ ನಿಲ್ದಾಣವನ್ನು ತಲುಪಲಿದೆ.

ಈ ವಿಶೇಷ ರೈಲು ಎಸಿ ತ್ರಿ ಟೈಯರ್-2, ಸ್ಲೀಪರ್ ಕ್ಲಾಸ್-10, ಜನರಲ್ ಸೆಕೆಂಡ್ ಕ್ಲಾಸ್-3, ಎಸ್ಎಲ್ ಆರ್ ಡಿ-2 ಸೇರಿದಂತೆ ಒಟ್ಟು 17 ಬೋಗಿಗಳನ್ನು ಒಳಗೊಂಡಿರಲಿದೆ.

ಜುಲೈ 13 ರಂದು, ಹುಬ್ಬಳ್ಳಿಯಿಂದ ಉಧ್ನಾಗೆ ವಿಶೇಷ ರೈಲು (07358) ಸಂಚಾರ

ಈ ವಿಶೇಷ ರೈಲು ಜುಲೈ 13, 2024 ರಂದು ರಾತ್ರಿ 8:20 ಗಂಟೆಗೆ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣದಿಂದ ಹೊರಟು ಬಾದಾಮಿ, ಬಾಗಲಕೋಟೆ, ವಿಜಯಪುರ, ಸೋಲಾಪುರ, ದೌಂಡ್, ಪುಣೆ, ಲೋನಾವಲ್, ಕಲ್ಯಾಣ್, ಕಮಾನ್ ರೋಡ್, ವಸಾಯಿ ರೋಡ್ ಮತ್ತು ವಾಪಿ ನಿಲ್ದಾಣಗಳಲ್ಲಿ ನಿಲುಗಡೆಯ ಮೂಲಕ ಮರುದಿನ ಸಂಜೆ 4:45 ಗಂಟೆಗೆ ಉಧ್ನಾ ನಿಲ್ದಾಣವನ್ನು ತಲುಪಲಿದೆ.

ಈ ವಿಶೇಷ ರೈಲು ಎಸಿ ಟು ಟೈಯರ್-1, ಎಸಿ ತ್ರಿ ಟೈಯರ್-2, ಸ್ಲೀಪರ್ ಕ್ಲಾಸ್-10, ಜನರಲ್ ಸೆಕೆಂಡ್ ಕ್ಲಾಸ್-5, ಎಸ್ಎಲ್ ಆರ್ ಡಿ-2 ಸೇರಿದಂತೆ ಒಟ್ಟು 20 ಬೋಗಿಗಳು ಒಳಗೊಂಡಿರಲಿದೆ.

ವಿಶೇಷ ಸೂಚನೆ: ಹವಾನಿಯಂತ್ರಿತ ಬೋಗಿಗಳು ಲಾಕ್ ಆಗಿರುತ್ತವೆ ಮತ್ತು ಪ್ರಯಾಣಿಕರಿಗೆ ಲಭ್ಯವಿರುವುದಿಲ್ಲ.ನಿಯಮಿತ ರೈಲುಗಳಲ್ಲಿ ವಿಪರೀತ ರಶ್ ನಿಂದಾಗಿ ಅನಾನುಕೂಲತೆಯನ್ನು ಎದುರಿಸುತ್ತಿರುವ ಪ್ರಯಾಣಿಕರಿಗೆ ಈ ವಿಶೇಷ ರೈಲುಗಳು ಹೆಚ್ಚು ಅನುಕೂಲತೆಯನ್ನು ಒದಗಿಸಲಿದೆ.

ಮುಂಗಡ ಬುಕಿಂಗ್ ಮತ್ತು ವೇಳಾಪಟ್ಟಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ, ಪ್ರಯಾಣಿಕರು www.enquiry.indianrail.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139 ನಂಬರಗೆ ಡಯಲ್ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ