logo
ಕನ್ನಡ ಸುದ್ದಿ  /  ಕರ್ನಾಟಕ  /  Indian Railways: ಕರ್ನಾಟಕದಲ್ಲಿ ಹಲವು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ, 5 ರೈಲುಗಳ ಸಂಚಾರ ಭಾಗಶಃ ರದ್ದು

Indian Railways: ಕರ್ನಾಟಕದಲ್ಲಿ ಹಲವು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ, 5 ರೈಲುಗಳ ಸಂಚಾರ ಭಾಗಶಃ ರದ್ದು

Umesha Bhatta P H HT Kannada

Jul 22, 2024 06:43 PM IST

google News

ಕರ್ನಾಟಕದಲ್ಲಿ 2024ರ ಜುಲೈ ಹಾಗೂ ಆಗಸ್ಟ್‌ನಲ್ಲಿ ಹಲವು ರೈಲು ಸಂಚಾರ ಬದಲಾವಣೆಯಾಗಲಿದೆ.

    • Train Updates 2024ರ ಜುಲೈ ಹಾಗೂ ಆಗಸ್ಟ್‌ನಲ್ಲಿ ಭಾರತೀಯ ರೈಲ್ವೆ( Indian Railways) ನೈರುತ್ಯ ವಲಯ( South western Railways) ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಿದೆ.
ಕರ್ನಾಟಕದಲ್ಲಿ 2024ರ ಜುಲೈ ಹಾಗೂ ಆಗಸ್ಟ್‌ನಲ್ಲಿ ಹಲವು ರೈಲು ಸಂಚಾರ ಬದಲಾವಣೆಯಾಗಲಿದೆ.
ಕರ್ನಾಟಕದಲ್ಲಿ 2024ರ ಜುಲೈ ಹಾಗೂ ಆಗಸ್ಟ್‌ನಲ್ಲಿ ಹಲವು ರೈಲು ಸಂಚಾರ ಬದಲಾವಣೆಯಾಗಲಿದೆ.

ಬೆಂಗಳೂರು: ಭಾರತೀಯ ರೈಲ್ವೆಯ ನೈರುತ್ಯ ರೈಲ್ವೆ ವಲಯವು 2024ರ ಜುಲೈ ಹಾಗೂ ಆಗಷ್ಟ್‌ ತಿಂಗಳಿನ ಹಲವು ರೈಲುಗಳ ಸಂಚಾರದಲ್ಲಿ ಸಾಕಷ್ಟು ಬದಲಾವಣೆ ಮಾಡಿದೆ. ಆಗಸ್ಟ್‌ ತಿಂಗಳಿನಲ್ಲಿ ವಿವಿಧ ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. 5 ರೈಲುಗಳ ಸಂಚಾರ ಭಾಗಶಃ ರದ್ದು ಮಾಡಲಾಗಿದ್ದು,5 ರೈಲುಗಳ ನಿಯಂತ್ರಣಕ್ಕೆ ಮುಂದಾಗಿದೆ. ಇನ್ನು 2 ರೈಲುಗಳ ಸಮಯ ಮರುನಿಗದಿ ಮಾಡಿ ಆದೇಶ ಹೊರಡಿಸಿದೆ. ಅಲ್ಲಲ್ಲಿ ನಡೆಯುತ್ತಿರುವ ರೈಲ್ವೆ ಕಾಮಗಾರಿಗಳ ನಡೆಯುತ್ತಿರುವ ಕಾರಣದಿಂದ ಈ ಬದಲಾವಣೆ ಮಾಡಲಾಗಿದೆ. ಪ್ರಯಾಣಿಕರು ಪೂರ್ವನಿಗದಿತ ಈ ಪ್ರಕಟಣೆಗಳನ್ನು ಗಮನಿಸಿ ಪ್ರವಾಸ, ಪ್ರಯಾಣವನ್ನು ಯೋಜಿಸಿಕೊಳ್ಳಬೇಕು ಎಂದು ನೈರುತ್ಯ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ.

ವಿವಿಧ ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

ನಿಟ್ಟೂರು ಮತ್ತು ಸಂಪಿಗೆ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್-64ರ ರಸ್ತೆ ಕೆಳಸೇತುವೆಗೆ ತಾತ್ಕಾಲಿಕ ಗರ್ಡರ್ ಗಳನ್ನು ಅಳವಡಿಸುವ ಮತ್ತು ತೆಗೆದುಹಾಕಲು ಅಗತ್ಯ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳನ್ನು ರದ್ದು, ಭಾಗಶಃ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ ಮತ್ತು ಸಮಯ ಮರುನಿಗದಿ ಮಾಡಲಾಗುತ್ತಿದೆ. ಇದರ ವಿವರ ಇಲ್ಲಿದೆ.

8 ರೈಲುಗಳ ಸಂಚಾರ ರದ್ದು:

ಈ ಕೆಳಗಿನ ರೈಲುಗಳ ಸಂಚಾರ 2024ರ ಆಗಸ್ಟ್ 8 ಮತ್ತು 15 ರಂದು ತಾತ್ಕಾಲಿಕವಾಗಿ 2 ದಿನ ರದ್ದು ಮಾಡಲಾಗುತ್ತಿದೆ:

1. ರೈಲು ಸಂಖ್ಯೆ 07346 ತುಮಕೂರು-ಚಾಮರಾಜನಗರ ಡೈಲಿ ಪ್ಯಾಸೆಂಜರ್ ಸ್ಪೆಷಲ್.

2. ರೈಲು ಸಂಖ್ಯೆ 07328 ಚಾಮರಾಜನಗರ-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್.

3. ರೈಲು ಸಂಖ್ಯೆ 16239 ಚಿಕ್ಕಮಗಳೂರು-ಯಶವಂತಪುರ ಡೈಲಿ ಎಕ್ಸ್‌ಪ್ರೆಸ್.

4. ರೈಲು ಸಂಖ್ಯೆ 16240 ಯಶವಂತಪುರ-ಚಿಕ್ಕಮಗಳೂರು ಡೈಲಿ ಎಕ್ಸ್‌ಪ್ರೆಸ್.

5. ರೈಲು ಸಂಖ್ಯೆ 06576 ತಮಕೂರು-ಕೆಎಸ್ಆರ್ ಬೆಂಗಳೂರು ಮೆಮು ಸ್ಪೆಷಲ್.

6. ರೈಲು ಸಂಖ್ಯೆ 06575 KSR ಬೆಂಗಳೂರು-ತಮುಕೂರು ಮೆಮು ಸ್ಪೆಷಲ್.

7. ರೈಲು ಸಂಖ್ಯೆ 16579 ಯಶವಂತಪುರ-ಶಿವಮೊಗ್ಗ ಟೌನ್ ಇಂಟರ್‌ಸಿಟಿ ಡೈಲಿ ಎಕ್ಸ್‌ಪ್ರೆಸ್.

8. ರೈಲು ಸಂಖ್ಯೆ 16580 ಶಿವಮೊಗ್ಗ ಟೌನ್-ಯಶವಂತಪುರ ಇಂಟರ್‌ಸಿಟಿ ಡೈಲಿ ಎಕ್ಸ್‌ಪ್ರೆಸ್.

5 ರೈಲುಗಳ ಸಂಚಾರ ಭಾಗಶಃ ರದ್ದು

ಈ ಕೆಳಗಿನ ರೈಲುಗಳನ್ನು 2024ರ ಆಗಸ್ಟ್ 8 ಮತ್ತು 15 ರಂದು ತಾತ್ಕಾಲಿಕವಾಗಿ 2 ದಿನ ಭಾಗಶಃ ರದ್ದು ಮಾಡಲಾಗುತ್ತಿದೆ:

1. ರೈಲು ಸಂಖ್ಯೆ 06571 ಕೆಎಸ್ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ ರೈಲು ಹಿರೇಹಳ್ಳಿ-ತುಮಕೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ ಮತ್ತು ಈ ರೈಲು ಹಿರೇಹಳ್ಳಿಯಲ್ಲಿ ಕೊನೆಗೊಳ್ಳುತ್ತದೆ.

2. ರೈಲು ಸಂಖ್ಯೆ 06572 ತುಮಕೂರು-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ರೈಲು ತುಮಕೂರು-ಹಿರೇಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ ಮತ್ತು ಈ ರೈಲು ಹಿರೇಹಳ್ಳಿಯಿಂದ ತನ್ನ ನಿಗದಿತ ಸಮಯದಲ್ಲಿ ಹೊರಡಲಿದೆ.

3. ರೈಲು ಸಂಖ್ಯೆ 20652 ತಾಳಗುಪ್ಪ-ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ-ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ ಮತ್ತು ಈ ರೈಲು ಅರಸೀಕೆರೆಯಲ್ಲಿ ಕೊನೆಗೊಳ್ಳುತ್ತದೆ.

4. ರೈಲು ಸಂಖ್ಯೆ 12726 ಧಾರವಾಡ-ಕೆಎಸ್‌ಆರ್ ಬೆಂಗಳೂರು ಸಿದ್ದಗಂಗಾ ಡೈಲಿ ಎಕ್ಸ್‌ಪ್ರೆಸ್ ಅರಸೀಕೆರೆ-ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ ಮತ್ತು ಈ ರೈಲು ಅರಸೀಕೆರೆಯಲ್ಲಿ ಕೊನೆಗೊಳ್ಳುತ್ತದೆ.

5. ರೈಲು ಸಂಖ್ಯೆ 12725 ಕೆಎಸ್‌ಆರ್ ಬೆಂಗಳೂರು-ಧಾರವಾಡ ಸಿದ್ದಗಂಗಾ ಡೈಲಿ ಎಕ್ಸ್‌ಪ್ರೆಸ್ ಕೆಎಸ್‌ಆರ್ ಬೆಂಗಳೂರು-ಅರಸಿಕೆರೆ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ ಮತ್ತು ಈ ರೈಲು ಅರಸೀಕೆರೆಯಿಂದ ತನ್ನ ನಿಗದಿತ ಸಮಯದಲ್ಲಿ ಹೊರಡಲಿದೆ.

5 ರೈಲುಗಳ ಮಾರ್ಗ ಬದಲಾವಣೆ

1. 2024ರ ಆಗಸ್ಟ್ 7 ಮತ್ತು 14 ರಂದು ವಾಸ್ಕೋ-ಡ-ಗಾಮಾದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋ ಡ ಗಾಮಾ-ಯಶವಂತಪುರ ಡೈಲಿ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

2. ಆಗಸ್ಟ್ 8 ಮತ್ತು 15 ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 22687 ಮೈಸೂರು-ವಾರಣಾಸಿ ದ್ವಿ-ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ತುಮಕೂರಿನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

3. ಆಗಸ್ಟ್ 8 ಮತ್ತು 15 ರಂದು ಯಶವಂತಪುರ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 82653 ಯಶವಂತಪುರ-ಜೈಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ತುಮಕೂರಿನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

4. ಆಗಸ್ಟ್ 8 ಮತ್ತು 15 ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 19668 ಮೈಸೂರು-ಉದಯಪುರ ಸಿಟಿ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ, ದಾವಣಗೆರೆ ಮಾರ್ಗವಾಗಿ ಸಂಚರಿಸಲಿದೆ.

5. ಆಗಸ್ಟ್ 8 ಮತ್ತು 15 ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 17326 ಮೈಸೂರು-ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್ ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

5 ರೈಲುಗಳ ನಿಯಂತ್ರಣ

1. 2024ರ ಆಗಸ್ಟ್ 6 ಮತ್ತು 13 ರಂದು ಬಿಕಾನೇರ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16588 ಬಿಕಾನೇರ್-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯೆ 150 ನಿಮಿಷ ನಿಯಂತ್ರಿಸಲಾಗುತ್ತದೆ.

2. ಆಗಸ್ಟ್ 8 ಮತ್ತು 15 ರಂದು ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 12629 ಯಶವಂತಪುರ-ಹಜರತ್ ನಿಜಾಮುದ್ದೀನ್ ರೈಲನ್ನು ಮಾರ್ಗ ಮಧ್ಯೆ 50 ನಿಮಿಷ ನಿಯಂತ್ರಿಸಲಾಗುತ್ತದೆ.

3. ಆಗಸ್ಟ್ 8 ಮತ್ತು 15 ರಂದು ರೈಲು ಸಂಖ್ಯೆ 20651 ಕೆಎಸ್ಆರ್ ಬೆಂಗಳೂರು-ತಾಳಗುಪ್ಪ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗದಲ್ಲಿ 10 ನಿಮಿಷಗಳವರೆಗೆ ನಿಯಂತ್ರಿಸಲ್ಪಡುತ್ತದೆ.

4. ಆಗಸ್ಟ್ 8 ಮತ್ತು 15 ರಂದು ಬೆಳಗಾವಿಯಿಂದ ಹೊರಡುವ ರೈಲು ಸಂಖ್ಯೆ 17325 ಬೆಳಗಾವಿ-ಮೈಸೂರು ವಿಶ್ವಮಾನವ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗದಲ್ಲಿ 55 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ

5. ಆಗಸ್ಟ್ 8 ಮತ್ತು 15 ರಂದು ರೈಲು ಸಂಖ್ಯೆ 07345 ಚಾಮರಾಜನಗರ-ತುಮಕೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ಮಾರ್ಗದಲ್ಲಿ 120 ನಿಮಿಷಗಳವರೆಗೆ ನಿಯಂತ್ರಿಸಲ್ಪಡುತ್ತದೆ.

2 ರೈಲುಗಳ ಸಮಯ ಮರುನಿಗದಿ

1. 2024ರ ಆಗಸ್ಟ್ 8 ಮತ್ತು 15 ರಂದು ರೈಲು ಸಂಖ್ಯೆ 17309 ಯಶವಂತಪುರ-ವಾಸ್ಕೋಡಗಾಮಾ ಡೈಲಿ ಎಕ್ಸ್‌ಪ್ರೆಸ್ ರೈಲು ಯಶವಂತಪುರದಿಂದ 60 ನಿಮಿಷ ತಡವಾಗಿ ಹೊರಡಲಿದೆ.

2. ಆಗಸ್ಟ್ 14 ರಂದು ರೈಲು ಸಂಖ್ಯೆ 06513 ತುಮಕೂರು-ಶಿವಮೊಗ್ಗ ಟೌನ್ ಮೆಮು ಸ್ಪೆಷಲ್ ರೈಲು ತುಮಕೂರಿನಿಂದ 85 ನಿಮಿಷ ತಡವಾಗಿ ಹೊರಡಲಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ