logo
ಕನ್ನಡ ಸುದ್ದಿ  /  ಕರ್ನಾಟಕ  /  Indian Railways: ಬಜೆಟ್‌ನಲ್ಲಿ ಕರ್ನಾಟಕದ ರೈಲ್ವೆಗೆ 7559 ಕೋಟಿ ರೂ.ಗಳ ಹಂಚಿಕೆ, ಹೊಸ ರೈಲು ಮಾರ್ಗಗಳಿಗೆ ಒತ್ತು

Indian Railways: ಬಜೆಟ್‌ನಲ್ಲಿ ಕರ್ನಾಟಕದ ರೈಲ್ವೆಗೆ 7559 ಕೋಟಿ ರೂ.ಗಳ ಹಂಚಿಕೆ, ಹೊಸ ರೈಲು ಮಾರ್ಗಗಳಿಗೆ ಒತ್ತು

Umesha Bhatta P H HT Kannada

Jul 24, 2024 08:28 PM IST

google News

ಬಜೆಟ್‌ದಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಅನುದಾನ ದೊರೆತಿದೆ.

    • Railway Budget Karnataka ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ನಲ್ಲಿ ರೈಲ್ವೆಗೂ ಆದ್ಯತೆ ದೊರೆತಿದ್ದು. ಕರ್ನಾಟಕಕ್ಕೂ ಅನುದಾನ ಒದಗಿಸಲಾಗಿದೆ. 
ಬಜೆಟ್‌ದಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಅನುದಾನ ದೊರೆತಿದೆ.
ಬಜೆಟ್‌ದಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಅನುದಾನ ದೊರೆತಿದೆ.

ಬೆಂಗಳೂರು: ಈ ಸಾಲಿನ ಕೇಂದ್ರ ಬಜೆಟ್‌ನಲ್ಲಿ ರೈಲ್ವೆಗೆ ದಾಖಲೆಯ ಮೊತ್ತವನ್ನು ಹಂಚಿಕೆ ಮಾಡಲಾಗಿದೆ. 2024-25ನೇ ಸಾಲಿನ ಬಜೆಟ್ ನಲ್ಲಿ ರೈಲ್ವೆಗೆ 2,62 ಲಕ್ಷ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಇದರಲ್ಲಿ ಭಾರತೀಯ ರೈಲ್ವೆಯ ಸುರಕ್ಷತೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ 1,09,000 ಕೋಟಿ ರೂ. ಮೀಸಲಿಡಲಾಗಿದೆ. ಈ ಆರ್ಥಿಕ ಸಾಲಿಗೆ 7559 ಕೋಟಿ ರೂ.ಗಳ ಕಾರ್ಯ ವೆಚ್ಚದ ಅಡಿಯಲ್ಲಿ ಕರ್ನಾಟಕಕ್ಕೆ ಅತ್ಯಧಿಕ ಬಜೆಟ್ ಹಂಚಿಕೆ ಮಾಡಲಾಗಿದೆ. ಇದು 2009-14ನೇ ಸಾಲಿನ ಸರಾಸರಿ ಬಜೆಟ್ ಅನುದಾನ 835 ಕೋಟಿ ರೂ.ಗಳಿಗೆ ಹೋಲಿಸಿದರೆ 9 ಪಟ್ಟು ಹೆಚ್ಚಾಗಿದೆ. ಬಜೆಟ್‌ ನಂತರ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ರೈಲ್ವೆ ಅನುದಾನದ ಹಂಚಿಕೆ., ಕರ್ನಾಟಕದ ಯೋಜನೆಗಳ ವಿವರಗಳನ್ನು ಒದಗಿಸಿದರು.

ಕರ್ನಾಟಕದಲ್ಲಿ ಈಗಾಗಲೇ ಜಾರಿಯಲ್ಲಿರುವ ರೈಲ್ವೆ ಯೋಜನೆಗಳು, ಅಗತ್ಯ ಇರುವ ರೈಲ್ವೆ ಮಾರ್ಗಗಳ ಆಧುನೀಕರಣ, ನಿಲ್ದಾಣಗಳ ಅಭಿವೃದ್ದಿ, ಸುರಕ್ಷತಾ ಚಟುವಟಿಕೆಗಳು ಸೇರಿದಂತೆ ವಿವಿಧ ಚಟುವಟಿಕೆಗಳಿಗೆ ಅನುದಾನಗಳ ಹಂಚಿಕೆ ಆಗಲಿದೆ.

ಕಳೆದ 10 ವರ್ಷಗಳಲ್ಲಿ ಕರ್ನಾಟಕದಾದ್ಯಂತ 638 ರಸ್ತೆ ಮೇಲ್ಸೇತುವೆಗಳು ಮತ್ತು ರಸ್ತೆ ಕೆಳಸೇತುವೆಗಳನ್ನು ನಿರ್ಮಿಸಲಾಗಿದೆ, ಇದು ರಸ್ತೆ ಪ್ರಯಾಣಿಕರಿಗೆ ಸುರಕ್ಷಿತ ಮಾರ್ಗವನ್ನು ಖಾತ್ರಿಪಡಿಸಿದೆ. ಪ್ರಸ್ತುತ ಕರ್ನಾಟಕದಲ್ಲಿ 47,016 ಕೋಟಿ ರೂ.ಗಳ ಮೌಲ್ಯದ 3840 ಕಿ.ಮೀ ಉದ್ದದ 31 ಯೋಜನೆಗಳು ಪ್ರಗತಿಯಲ್ಲಿವೆ. 2014 ರಿಂದ 2024 ರವರೆಗೆ, ಸರಾಸರಿ ವಾರ್ಷಿಕ ಹೊಸ ಮಾರ್ಗವು ಗಮನಾರ್ಹವಾಗಿ 163 ಕಿಲೋಮೀಟರ್ ಗೆ ಹೆಚ್ಚಾಗಿದ್ದು, ಇದು 2009 ರಿಂದ 2014 ರವರೆಗೆ ವರ್ಷಕ್ಕೆ ಸರಾಸರಿ 113 ಕಿಲೋಮೀಟರ್ ಗೆ ಹೋಲಿಸಿದರೆ 1.4 ಪಟ್ಟು ಹೆಚ್ಚಳವನ್ನು ಕಂಡಿದೆ ಎನ್ನುತ್ತಾರೆ ನೈರುತ್ಯ ರೈಲ್ವೆಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಡಿ.

ಕರ್ನಾಟಕದಲ್ಲಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಒಟ್ಟು 59 ರೈಲ್ವೆ ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲಾಗುತ್ತಿದೆ. ಈ ರೈಲ್ವೆ ನಿಲ್ದಾಣಗಳು ನಿಲ್ದಾಣಗಳನ್ನು ವಿಶ್ವದರ್ಜೆಯ ಸೌಲಭ್ಯಗಳಾಗಿ ಪರಿವರ್ತಿಸುವುದು, ಪ್ರಯಾಣಿಕರ ಅನುಭವವನ್ನು ಹೆಚ್ಚಿಸುವುದು ಮತ್ತು ಮೂಲಸೌಕರ್ಯ ಸೌಲಭ್ಯಗಳನ್ನು ಆಧುನೀಕರಿಸುವುದು ಮತ್ತು ಹೆಚ್ಚುತ್ತಿರುವ ಬೇಡಿಕೆಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ. ಪ್ರಯಾಣಿಕರಿಗೆ ಅತ್ಯಾಧುನಿಕ ಸೌಲಭ್ಯಗಳು ಮತ್ತು ಸೇವೆಗಳನ್ನು ಒದಗಿಸುವ ದೃಷ್ಟಿಕೋನವನ್ನು ಈ ನಿಲ್ದಾಣಗಳು ಹೊಂದಿರಲಿವೆ. 2009-2014 ರ ಅವಧಿಯಲ್ಲಿ ವಿದ್ಯುದ್ದೀಕರಣವು ವರ್ಷಕ್ಕೆ ಸರಾಸರಿ 18 ಕಿ.ಮೀ ಆಗಿದ್ದು ಮತ್ತು 2014-2024 ರ ಅವಧಿಯಲ್ಲಿ ಸರಾಸರಿ ವಿದ್ಯುದ್ದೀಕರಣವನ್ನು ವರ್ಷಕ್ಕೆ 317 ಕಿ.ಮೀ.ಗೆ ಗಮನಾರ್ಹವಾಗಿ ಹೆಚ್ಚಿಸಲಾಗಿದೆ, ಇದು ಕಳೆದ 10 ವರ್ಷಗಳಲ್ಲಿ 18 ಪಟ್ಟು ಹೆಚ್ಚಾಗಿದೆ.

ನೈಋತ್ಯ ರೈಲ್ವೆಯಲ್ಲಿ, ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ 1103 ಕೋಟಿ ರೂ.ಗಳ ವೆಚ್ಚದಲ್ಲಿ 46 ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲಾಗುತ್ತಿದೆ ಮತ್ತು 5 ಪ್ರಮುಖ ನಿಲ್ದಾಣಗಳನ್ನು ಸಹ ಪುನರಾಭಿವೃದ್ಧಿ ಮಾಡಲಾಗುತ್ತಿದೆ. ಯಶವಂತಪುರ ನಿಲ್ದಾಣವನ್ನು 367 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಜುಲೈ 2025 ರೊಳಗೆ ಯೋಜನೆಯನ್ನು ಪೂರ್ಣಗೊಳಿಸುವ ಗುರಿ ಹೊಂದಿದೆ. ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣವನ್ನು 484 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಅಕ್ಟೋಬರ್ 2025 ರೊಳಗೆ ಯೋಜನೆಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಪ್ರಸ್ತುತ ಶೇ 88ರಷ್ಟು ರೈಲ್ವೆ ಮಾರ್ಗವು ವಿದ್ಯುದ್ದೀಕರಣಗೊಂಡಿದ್ದು ಮಾರ್ಚ್ 2025 ರ ವೇಳೆಗೆ ಶೇ 100 ವಿದ್ಯುದ್ದೀಕರಣದ ಗುರಿಯನ್ನು ಹೊಂದಿದೆ ಎನ್ನುವುದು ರೈಲ್ವೆ ಅಧಿಕಾರಿಗಳು ನೀಡುವ ವಿವರಣೆ.

 

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ