logo
ಕನ್ನಡ ಸುದ್ದಿ  /  Karnataka  /  It S A Conspiracy Against Me.i Will Come Out Without Any Problem - Bs Yediyurappa

BS Yediyurappa: ಇದು ನನ್ನ ವಿರುದ್ಧದ ಷಡ್ಯಂತ್ರ.. ನಾನು ಯಾವುದೇ ತೊಂದರೆಯಿಲ್ಲದೆ ಹೊರ ಬರುತ್ತೇನೆ - ಬಿಎಸ್​ವೈ

HT Kannada Desk HT Kannada

Sep 14, 2022 06:56 PM IST

ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ

    • ಭ್ರಷ್ಟಾಚಾರ ಆರೋಪ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್​ ಆದೇಶ ನೀಡಿರುವ ಕುರಿತು ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. 
ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿಯಾಗಿದ್ದ ವೇಳೆ ಬಿ ಎಸ್ ಯಡಿಯೂರಪ್ಪ ಅವರ ಕುಟುಂಬಸ್ಥರು ಅಧಿಕಾರ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರ ಎಸಗಿರುವ ಆರೋಪ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರಿನಲ್ಲಿ ಏರಿಯೇಟರ್‌ ಅಳವಡಿಕೆ ಗಡುವು ಮೇ 7 ರವರೆಗೆ ವಿಸ್ತರಣೆ; ಮರುದಿನದಿಂದಲೇ ದಂಡ ವಿಧಿಸುವ ಪ್ರಕ್ರಿಯೆಗೆ ಚಾಲನೆ

Mangalore News: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 52ನೇ ವರ್ಷದ ಸಾಮೂಹಿಕ ವಿವಾಹ; ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿಗಳು

Bengaluru Crime News: ಸಹಪಾಠಿ ಬಳಿ 35 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಆರೋಪ; 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ಬಂಧನ

Udupi News: ಪಾತ್ರ ಮುಗಿಸಿ, ಬಣ್ಣ ತೆಗೆಯುವಾಗಲೇ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ್ ಪುತ್ತೂರು

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಎಸ್​ವೈ, "ಇದರಲ್ಲಿ ಸತ್ಯಾಂಶವಿಲ್ಲ. ನನಗೆ ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದೆ. ನಾನು ಯಾವುದೇ ತೊಂದರೆಯಿಲ್ಲದೆ ಹೊರಗೆ ಬರುತ್ತೇನೆ. ಖಂಡಿತವಾಗಿಯೂ ಇದು ನನ್ನ ವಿರುದ್ಧದ ಷಡ್ಯಂತ್ರ" ಎಂದು ಹೇಳಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್ ಕಂಪನಿಯಿಂದ ಕೋಟ್ಯಂತರ ರೂಪಾಯಿಗಳನ್ನು ನಗದು ಮತ್ತು ಶೆಲ್ ಕಂಪನಿಗಳ ಮೂಲಕ ಲಂಚ ಪಡೆದಿದ್ದಾರೆ. ಹೀಗಾಗಿ, ಅವರ ವಿರುದ್ಧ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ಈ ಹಿಂದೆ ಕೂಡ ಇಂತಹ ಹಲವು ಪ್ರಕರಣಗಳನ್ನು ಯಡಿಯೂರಪ್ಪ ಅವರು ಎದುರಿಸಿದ್ದರು.

ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ಎಸ್ ಯಡಿಯೂರಪ್ಪನವರಿಗೆ 2021ರಲ್ಲಿ ಸಂಕಷ್ಟ ಎದುರಾಗಿತ್ತು. ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕರಿಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಸರಿಯಾಗಿ ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶ ನೀಡಿತ್ತು.

ನಗರದ ದೇವರಬೀಸನಹಳ್ಳಿಯಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ ವಶಪಡಿಸಿಕೊಂಡಿದ್ದ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು 10 ಸಾವಿರ ಪುಟಗಳ ಬಿ ರಿಪೋರ್ಟ್ ಸಲ್ಲಿಸಿದ್ದರು.ಈ ವರದಿ ಪರಿಶೀಲಿಸಿದ ನ್ಯಾಯಾಲಯ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಸೂಕ್ತವಾಗಿಲ್ಲ. ಹೀಗಾಗಿ, ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶಾನುಸಾರ ಸೂಕ್ತ ರೀತಿ ಮರುತನಿಖೆ ಮಾಡಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿತ್ತು.

ಇದೀಗ ಮುಖ್ಯಮಂತ್ರಿಯಾಗಿದ್ದ ವೇಳೆ ಬಿ ಎಸ್ ಯಡಿಯೂರಪ್ಪ ಅವರ ಕುಟುಂಬಸ್ಥರು ಅಧಿಕಾರ ದುರ್ಬಳಕೆ ಮಾಡಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಆರೋಪದ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಸದ್ಯ ಬಿ.ಎಸ್ ಯಡಿಯೂರಪ್ಪ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾಗಿದ್ದಾರೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು