logo
ಕನ್ನಡ ಸುದ್ದಿ  /  Karnataka  /  Jai Bharat Satyagraha Yatra By Karnataka Congress On Sunday April 15 At Kolar Pcp

ಕರ್ನಾಟಕ ಕಾಂಗ್ರೆಸ್‌ನಿಂದ ಕೋಲಾರದಲ್ಲಿ ಏಪ್ರಿಲ್‌ 16ರಂದು ಜೈ ಭಾರತ ಸತ್ಯಾಗ್ರಹ ಯಾತ್ರೆ , ರಾಹುಲ್‌ ಗಾಂಧಿ, ಖರ್ಗೆ, ಸುರ್ಜೇವಾಲ ಭಾಗಿ

Praveen Chandra B HT Kannada

Apr 15, 2023 07:14 PM IST

ಕರ್ನಾಟಕ ಕಾಂಗ್ರೆಸ್‌ನಿಂದ ಕೋಲಾರದಲ್ಲಿ ಏಪ್ರಿಲ್‌ 16ರಂದು ಜೈ ಭಾರತ ಸತ್ಯಾಗ್ರಹ ಯಾತ್ರೆ (ಸಾಂದರ್ಭಿಕ ಚಿತ್ರ)

    • ಕರ್ನಾಟಕ ಕಾಂಗ್ರೆಸ್‌ ಪಕ್ಷವು (Karnataka Congress) ನಾಳೆ ಅಂದರೆ ಏಪ್ರಿಲ್‌ 15ರ ಭಾನುವಾರ ಕೋಲಾರದಲ್ಲಿ ಜೈ ಭಾರತ ಸತ್ಯಾಗ್ರಹ ಯಾತ್ರೆ (Jai Bharat Satyagraha Yatra) ಹಮ್ಮಿಕೊಂಡಿದೆ.
ಕರ್ನಾಟಕ ಕಾಂಗ್ರೆಸ್‌ನಿಂದ ಕೋಲಾರದಲ್ಲಿ ಏಪ್ರಿಲ್‌ 16ರಂದು ಜೈ ಭಾರತ ಸತ್ಯಾಗ್ರಹ ಯಾತ್ರೆ (ಸಾಂದರ್ಭಿಕ ಚಿತ್ರ)
ಕರ್ನಾಟಕ ಕಾಂಗ್ರೆಸ್‌ನಿಂದ ಕೋಲಾರದಲ್ಲಿ ಏಪ್ರಿಲ್‌ 16ರಂದು ಜೈ ಭಾರತ ಸತ್ಯಾಗ್ರಹ ಯಾತ್ರೆ (ಸಾಂದರ್ಭಿಕ ಚಿತ್ರ) (PTI)

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ ಪಕ್ಷವು (Karnataka Congress) ನಾಳೆ ಅಂದರೆ ಏಪ್ರಿಲ್‌ 15ರ ಭಾನುವಾರ ಕೋಲಾರದಲ್ಲಿ ಜೈ ಭಾರತ ಸತ್ಯಾಗ್ರಹ ಯಾತ್ರೆ (Jai Bharat Satyagraha Yatra) ಹಮ್ಮಿಕೊಂಡಿದೆ. ರಾಹುಲ್ ಗಾಂಧಿರವರು 2019ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಕೋಲಾರದಲ್ಲಿ ಮಾಡಿದ ಭಾಷಣದ ಕಾರಣ ನೀಡಿ ಚುನಾವಣೆಗೆ ಅನರ್ಹತೆಗೊಂಡಿರುವುದಕ್ಕೆ ಮತ್ತು ದೇಶದ ಪ್ರಜಾಪ್ರಭುತ್ವ ಉಳಿವಿಗಾಗಿ ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌ ತಿಳಿಸಿದೆ.

ಟ್ರೆಂಡಿಂಗ್​ ಸುದ್ದಿ

Hassan Sex Scandal: ಹಾಸನದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಪೆನ್‌ಡ್ರೈವ್ ಉರುಳು; ಎಸ್‌ಐಟಿ ತನಿಖೆಗೆ ಸರ್ಕಾರ ನಿರ್ಧಾರ

ಮಳೆಯಿಲ್ಲದೆ ಸೊರಗುತ್ತಿರುವ ನದಿಗಳು; ಏಪ್ರಿಲ್ 28ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

Mangalore News: ಶಿಬರೂರಿನ ನಾಗಮಂಡಲಕ್ಕೆ ಹಿಂಗಾರ ಹರಕೆ ಅರ್ಪಿಸಿದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ; ಮಕ್ಕಳು, ತಾಯಿ ಸುನಂದಾ ಶೆಟ್ಟಿ ಸಾಥ್

ಕರ್ನಾಟಕ ಹವಾಮಾನ ಏಪ್ರಿಲ್ 28: ತಗ್ಗಿದ ಮಳೆ, ಮುಂದುವರಿದ ತಾಪಮಾನ; ಕೋಲಾರ, ಚಿಕ್ಕಬಳ್ಳಾಪುರ ಸೇರಿ 15 ಜಿಲ್ಲೆಗಳಿಗೆ ಶಾಖದ ಅಲೆಯ ಎಚ್ಚರಿಕೆ

ಏಪ್ರಿಲ್‌ 16ರ ಭಾನುವಾರದಂದು ಭಾನುವಾರ ಬೆಳಗ್ಗೆ 11.00 ಗಂಟೆಗೆ ಜೈ ಭಾರತ ಸತ್ಯಾಗ್ರಹ ಯಾತ್ರೆಗೆ ಚಾಲನೆ ದೊರಕಲಿದೆ. ಕೋಲಾರದ ದೇವರಾಜ ಅರಸು ಕಾಲೇಜು ಎದುರು ಈ ಯಾತ್ರೆಗೆ ಚಾಲನೆ ದೊರಕಲಿದೆ.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿಗಳು ಹಾಗೂ ರಾಜ್ಯದ ಇತರ ನಾಯಕರು, ಶಾಸಕರು ಮತ್ತಿತರರು ಭಾಗವಹಿಸಲಿದ್ದಾರೆ.

"7 ಲಕ್ಷ ಮತಗಳ ಅಂತರದಲ್ಲಿ ಗೆದ್ದು ಸಂಸತ್ ಸದಸ್ಯರಾದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ಅಪಮಾನ. ರಾಹುಲ್ ಗಾಂಧಿ ಅವರು ಎಲ್ಲಿ ಭಾಷಣ ಮಾಡಿದ್ದರೋ ಅಲ್ಲಿಯೇ ಮತ್ತೆ ಭಾಷಣ ಮಾಡಬೇಕು ಎಂದು ಏಪ್ರಿಲ್ 16 ರಂದು ಕೋಲಾರದಲ್ಲಿ ಜೈ ಭಾರತ ಸತ್ಯಾಗ್ರಹ ಯಾತ್ರೆ ಹಮ್ಮಿಕೊಂಡಿದ್ದೇವೆ" ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಲೋಕಸಭೆಯಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ವಿರುದ್ಧ ಕಾಂಗ್ರೆಸ್‌ ಈಗಾಗಲೇ ಹಲವು ಪ್ರತಿಭಟನೆಗಳನ್ನು ನಡೆಸಿದೆ. ಕೇರಳದ ವಯನಾಡಿನಲ್ಲಿ ಕರಾಳ ದಿನವನ್ನೂ ಆಚರಿಸಿತ್ತು. ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದ ಸಂಸದರಾಗಿದ್ದರು.

ರಾಹುಲ್ ಗಾಂಧಿ ವಿರುದ್ಧದ ಕ್ರಮವು "ತರಾತುರಿ ಮತ್ತು ರಾಜಕೀಯ ಪ್ರೇರಿತ" ಎಂದು ಇದಕ್ಕೂ ಮುನ್ನ ಕೇರಳದ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಹೇಳಿದ್ದರು. "ಲೋಕಸಭೆಯ ಸೆಕ್ರೆಟರಿಯೇಟ್ ಕ್ರಮವನ್ನು ಕಾಂಗ್ರೆಸ್ ಪಕ್ಷವು ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ಎದುರಿಸಲಿದೆ" ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್‌ ಇದರ ವಿರುದ್ಧ ನಾಳೆ ಕರ್ನಾಟಕದಲ್ಲಿ ಜೈ ಭಾರತ ಸತ್ಯಾಗ್ರಹ ಯಾತ್ರೆ ಹಮ್ಮಿಕೊಂಡಿದೆ.

ಅಂದಹಾಗೆ, ಕರ್ನಾಟಕದಲ್ಲಿ ನಡೆಯಲಿರುವ ಜೈ ಭಾರತ ಸತ್ಯಾಗ್ರಹ ಯಾತ್ರೆ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಯಾತ್ರೆಯಲ್ಲ. ದೇಶದ ವಿವಿಧೆಡೆ ಈಗಾಗಲೇ ಜೈ ಭಾರತ ಸತ್ಯಾಗ್ರಹ ಯಾತ್ರೆ ನಡೆದಿದೆ. ಅದರ ಮುಂದುವರೆದ ಭಾಗವಾಗಿ ನಾಳೆ ಕರ್ನಾಟಕದಲ್ಲಿಯೂ ಜೈ ಭಾರತ ಸತ್ಯಾಗ್ರಹ ಯಾತ್ರೆ ನಡೆಯಲಿದೆ. ಜಾರ್ಖಂಡ್‌, ಜೆಮ್ಸೆಡ್‌ಪುರ ಸೇರಿದಂತೆ ವಿವಿಧೆಡೆ ಈ ಯಾತ್ರೆ ನಡೆದಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಸನಿಹದಲ್ಲಿರುವುದರಿಂದ ಕಾಂಗ್ರೆಸ್‌ ಇದೀಗ ಈ ಯಾತ್ರೆಯನ್ನು ಕರ್ನಾಟಕದಲ್ಲಿ ಆರಂಭಿಸಿದೆ.

    ಹಂಚಿಕೊಳ್ಳಲು ಲೇಖನಗಳು