logo
ಕನ್ನಡ ಸುದ್ದಿ  /  ಕರ್ನಾಟಕ  /  Pancharatna Rathayatra: ನಾಳೆಯಿಂದ ಮತ್ತೆ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ

Pancharatna Rathayatra: ನಾಳೆಯಿಂದ ಮತ್ತೆ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ

HT Kannada Desk HT Kannada

Jan 16, 2023 06:44 PM IST

ನಾಳೆಯಿಂದ ಮತ್ತೆ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ

    • ಸಂಕ್ರಾಂತಿ ಹಬ್ಬದ ನಿಮಿತ್ತ ಮೂರು ದಿನ ಸ್ಥಗಿತವಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಪಂಚರತ್ನ ರಥಯಾತ್ರೆ ನಾಳೆಯಿಂದ (ಜ.17) ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಲಿದೆ.
ನಾಳೆಯಿಂದ ಮತ್ತೆ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ
ನಾಳೆಯಿಂದ ಮತ್ತೆ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ

ಬೆಂಗಳೂರು: ಸಂಕ್ರಾಂತಿ ಹಬ್ಬದ ನಿಮಿತ್ತ ಮೂರು ದಿನ ಸ್ಥಗಿತವಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಪಂಚರತ್ನ ರಥಯಾತ್ರೆ ನಾಳೆಯಿಂದ (ಜ.17) ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಲಿದೆ.

ಟ್ರೆಂಡಿಂಗ್​ ಸುದ್ದಿ

Hassan Sex Scandal; ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್‌ ಲೈಂಗಿಕ ದೌರ್ಜನ್ಯ ಕೇಸ್‌ ಏನಾಯಿತು, ಇದುವರೆಗಿನ 10 ಪ್ರಮುಖ ಅಂಶಗಳು

ಕರ್ನಾಟಕ ಹವಾಮಾನ ಮೇ 6; ಚಾಮರಾಜನಗರ, ಮೈಸೂರು ಜಿಲ್ಲೆಗಳ ಕೆಲವೆಡೆ ಮಳೆ, ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಶಾಖದ ಅಲೆ ಎಚ್ಚರಿಕೆ

ನೂರಾರು ವಿದ್ಯಾರ್ಥಿಗಳ ನೆನಪಿನಂಗಳದಲ್ಲಿ ಉಳಿದಿರುವ ಗುರುಮಾತೆ; ದಿವಂಗತ ವಿದ್ಯಾ ಸರಸ್ವತಿ ಚೂಂತಾರು - ವ್ಯಕ್ತಿ ವ್ಯಕ್ತಿತ್ವ ಅಂಕಣ

Hassan Scandal: ವಾಟ್ಸ್‌ ಆಪ್‌ ಮೂಲಕವೂ ವಿಡಿಯೋ ಹಂಚಿದರೆ ಕ್ರಮ, ಎಸ್‌ಐಟಿ ಎಚ್ಚರಿಕೆ

ಈ ಹಂತದಲ್ಲಿ ಒಟ್ಟು 18 ದಿನ ಪಂಚರತ್ನ ರಥಯಾತ್ರೆ ನಡೆಯಲಿದೆ. ನಾಳೆಯಿಂದ 6 ದಿನಗಳ ಕಾಲ ಪಂಚರತ್ನ ರಥಯಾತ್ರೆ ವಿಜಯಪುರ ಜಿಲ್ಲೆಯಲ್ಲಿ ನಡೆಯಲಿದೆ. ಕ್ರಮವಾಗಿ ಇಂಡಿ, ಸಿಂಧಗಿ, ದೇವರಹಿಪ್ಪರಗಿ, ನಾಗಠಾಣ, ಮುದ್ದೇಬಿಹಾಳ ಹಾಗೂ ಬಸವನ ಬಾಗೇವಾಡಿ - ಬಬಲೇಶ್ವರ (ಈ ಎರಡೂ ಕ್ಷೇತ್ರಗಳಲ್ಲಿ ಒಂದು ದಿನ) ರಥಯಾತ್ರೆ ನಡೆಯಲಿದೆ.

ಜನವರಿ 23ರಂದು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ, ಜನವರಿ 24ರಿಂದ 29ರವರೆಗೆ ರಾಯಚೂರು ಜಿಲ್ಲೆಯ ಲಿಂಗಸಗೂರು, ದೇವದುರ್ಗ, ರಾಯಚೂರು ಗ್ರಾಮಾಂತರ, ರಾಯಚೂರು, ಮಾನ್ವಿ, ಸಿಂಧನೂರು ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯುತ್ತದೆ.

ಜನವರಿ 30 ರಂದು ಕೊಪ್ಪಳ ಜಿಲ್ಲೆಯ ಕನಕಗಿರಿ, ಕುಷ್ಟಗಿಯಲ್ಲಿ ರಥಯಾತ್ರೆ ನಡೆಯಲಿದೆ. ಜನವರಿ 31ರಂದು ಬಳ್ಳಾರಿ, ವಿಜಯನಗರ ಜಿಲ್ಲೆಗಳ ಸಂಡೂರು, ಹಗರಿಬೊಮ್ಮನಹಳ್ಳಿ ಕ್ಷೇತ್ರಗಳಲ್ಲಿ ರಥಯಾತ್ರೆ ಸಾಗುತ್ತದೆ. ಫೆಬ್ರವರಿ 1ರಂದು ದಾವಣಗೆರೆ ಕ್ಷೇತ್ರದ ಹರಿಹರ ಕ್ಷೇತ್ರದಲ್ಲಿ ಹಾಗೂ ಫೆಬ್ರವರಿ 2-3ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು, ಹಿರೇಕೆರೂರು ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯುತ್ತದೆ.

ಕಲ್ಯಾಣ ಕರ್ನಾಟಕದಲ್ಲಿ ಉತ್ತಮ ಪ್ರತಿಕ್ರಿಯೆ:

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕಲ್ಯಾಣ ಕರ್ನಾಟಕದ ಬೀದರ್ ಮತ್ತು ಕಲಬುರಗಿ ಜಿಲ್ಲೆಯ ಎಂಟು ಕ್ಷೇತ್ರಗಳಲ್ಲಿ ರಥಯಾತ್ರೆ ನಡೆದಿದೆ. ಜನತೆಯಿಂದ ಉತ್ತಮ ಸ್ಪಂದನೆ ಸಿಕ್ಕಿತು. ಆ ಉತ್ಸಾಹದಿಂದ ಪುನಾ ಹದಿನೆಂಟು ದಿನಗಳ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಇಂದು ತಿಳಿಸಿದ್ದಾರೆ.

ಈವರೆಗೆ ಒಟ್ಟು 45 ಕ್ಷೇತ್ರಗಳಲ್ಲಿ ರಥಯಾತ್ರೆ ಮುಗಿದಿದ್ದು, ಎಲ್ಲೆಡೆಯಿಂದ ನಮಗೆ ಅತ್ಯುತ್ತಮ ಜನ ಬೆಂಬಲ ಸಿಕ್ಕಿದೆ. ಪಂಚರತ್ನ ಯೋಜನೆಗಳು ತಮಗೆ ಅನುಕೂಲ ಆಗುತ್ತವೆ ಎನ್ನುವ ನಂಬಿಕೆ ಎಲ್ಲರಿಗೂ ಬಂದಿದೆ ಎಂದು ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಗಮನಿಸಬಹುದಾದ ಇತರೆ ಸುದ್ದಿಗಳು

HDK: 'ಗೃಹ ಸಚಿವರು ಗುಜರಾತ್​​ನಲ್ಲಿದ್ದಾರೆ, ಸ್ಯಾಂಟ್ರೊ ರವಿ ಕೂಡ ಅಲ್ಲೇ ಇದ್ದ' - ಏನೋ ಮಿಸ್​ ಹೊಡಿತಿದೆ ಅಂತಿದಾರೆ ಹೆಚ್​ಡಿಕೆ

ರಾಜ್ಯದ ಗೃಹ ಸಚಿವರು ಗುಜರಾತ್​​ನಲ್ಲಿದ್ದಾರೆ. ಸ್ಯಾಂಟ್ರೊ ರವಿ ಕೂಡ ಅಲ್ಲೇ ಇದ್ದ. ಗೃಹ ಸಚಿವರು ಗುಜರಾತ್​ಗೆ ಯಾವಾಗ ಹೋದರು ಎನ್ನುವುದೇ ಯಕ್ಷಪ್ರಶ್ನೆ. ಗುಜರಾತಿನಲ್ಲೂ ಬಿಜೆಪಿ ಸರ್ಕಾರವಿದೆ. ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ವಿವರ ಓದಿಗೆ ಇಲ್ಲಿ ಕ್ಲಿಕ್​ ಮಾಡಿ

Naa Nayaki: 'ನಾ ನಾಯಕಿ' ಸಮಾರಂಭದಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ಪ್ರಿಯಾಂಕಾ ಗಾಂಧಿಗೆ ಭರ್ಜರಿ ಸ್ವಾಗತ..

ಕೆಪಿಸಿಸಿ ಹಮ್ಮಿಕೊಂಡಿರುವ 'ನಾ ನಾಯಕಿ' ಸಮಾರಂಭದಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದಿಳಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ, ಕೆಪಿಸಿಸಿ ವತಿಯಿಂದ ಭರ್ಜರಿ ಸ್ವಾಗತ ಕೋರಲಾಗಿದೆ. ನಗರದ ಅರಮನೆ ಮೈದಾನದಲ್ಲಿ ನಡೆದ ಈ ಭವ್ಯ ಸಮಾರಂಭದಲ್ಲಿ, ಪ್ರಿಯಾಂಕಾ ಗಾಂಧಿ ಅವರು ಮಹಿಳೆಯರನ್ನುದ್ದೇಶಿಸಿ ಮಾತನಾಡಿದರು. ಈ ಕುರಿತು ಇಲ್ಲಿದೆ ಮಾಹಿತಿ..

ವಿಭಾಗ

    ಹಂಚಿಕೊಳ್ಳಲು ಲೇಖನಗಳು