logo
ಕನ್ನಡ ಸುದ್ದಿ  /  ಕರ್ನಾಟಕ  /  Yadagiri News: ರಾಷ್ಟ್ರೀಯ ಪೋಷಣ್‌ ಅಭಿಯಾನದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅಕ್ಟೋಬರ್‌ 7ರೊಳಗೆ ಅರ್ಜಿ ಸಲ್ಲಿಸಿ

Yadagiri News: ರಾಷ್ಟ್ರೀಯ ಪೋಷಣ್‌ ಅಭಿಯಾನದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅಕ್ಟೋಬರ್‌ 7ರೊಳಗೆ ಅರ್ಜಿ ಸಲ್ಲಿಸಿ

HT Kannada Desk HT Kannada

Sep 21, 2023 11:46 AM IST

google News

ರಾಷ್ಟ್ರೀಯ ಪೋಷಣ್‌ ಅಭಿಯಾನದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅಕ್ಟೋಬರ್‌ 7ರೊಳಗೆ ಅರ್ಜಿ ಸಲ್ಲಿಸಿ

    • ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅಕ್ಟೋಬರ್‌ 7 ರ ಒಳಗೆ ಅರ್ಜಿ ಸಲ್ಲಿಸಬೇಕಾಗಿದೆ.
 ರಾಷ್ಟ್ರೀಯ ಪೋಷಣ್‌ ಅಭಿಯಾನದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅಕ್ಟೋಬರ್‌ 7ರೊಳಗೆ ಅರ್ಜಿ ಸಲ್ಲಿಸಿ
ರಾಷ್ಟ್ರೀಯ ಪೋಷಣ್‌ ಅಭಿಯಾನದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅಕ್ಟೋಬರ್‌ 7ರೊಳಗೆ ಅರ್ಜಿ ಸಲ್ಲಿಸಿ

ಯಾದಗಿರಿ: ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯ ಅನುಷ್ಠಾನಗೊಳಿಸಲು ಗೌರವಧನ ಆಧಾರದ ಮೇರೆಗೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅಕ್ಟೋಬರ್‌ 7ರೊಳಗೆ ಅರ್ಜಿ ಸಲ್ಲಿಸಬಹುದು.

ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿಯಲ್ಲಿ 1 ಜಿಲ್ಲಾ ಕಾರ್ಯಕ್ರಮ ಸಹಾಯಕರು ಹಾಗೂ ಸುರಪುರ ಶಿಶು ಅಭಿವೃದ್ಧಿ ಯೋಜನೆಯ 1 ತಾಲೂಕು ಸಂಯೋಜನಕರು, ಒಟ್ಟು 2 ಹುದ್ದೆಗಳನ್ನು ಯೋಜನೆಯು ಜಾರಿಯಲ್ಲಿರುವರೆಗೆ ಮಾತ್ರ ಗೌರವಧನ ಆಧಾರದಲ್ಲಿ ನೇಮಕಾತಿಗೊಳಿಸಲು ಅರ್ಜಿ ಆಹ್ವಾನಿಸಿದೆ.

ಈ ಹುದ್ದೆಗಳಿಗೆ ಕರ್ತವ್ಯ ನಿರ್ವಹಿಸಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಈ ಕಚೇರಿ ಅಥವಾ ಯಾದಗಿರಿ ಜಿಲ್ಲಾ ಎನ್.ಐ.ಸಿ ವೆಬ್ ಸೈಟ್ http://yadgir.nic.in ನಲ್ಲಿ ಪಡೆದು 2023ರ ಅಕ್ಟೋಬರ್ 7ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಈ ಕಚೇರಿಯ ಸಮಯದಲ್ಲಿ ಅರ್ಜಿಯನ್ನು ಸಲ್ಲಿಸಬೇಕು, ನಂತರ ಯಾವುದೇ ಅಂಚೆ ಮೂಲಕ ಅಥವಾ ನೇರವಾಗಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲವೆಂದು ಎಂದು ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಅವರು ತಿಳಿಸಿದ್ದಾರೆ.

(ವರದಿ: ಎಸ್.ಬಿ.ರೆಡ್ಡಿ, ಕಲಬುರಗಿ)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ