logo
ಕನ್ನಡ ಸುದ್ದಿ  /  ಕರ್ನಾಟಕ  /  Jp Nadda In Karnataka: ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಜೆ.ಪಿ.ನಡ್ಡಾ; ಅವರ ಇಂದಿನ ಕಾರ್ಯಕ್ರಮ ಏನು?

JP Nadda in Karnataka: ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಜೆ.ಪಿ.ನಡ್ಡಾ; ಅವರ ಇಂದಿನ ಕಾರ್ಯಕ್ರಮ ಏನು?

HT Kannada Desk HT Kannada

Feb 21, 2023 09:57 AM IST

ಶೃಂಗೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

  • JP Nadda in Karnataka: ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಚಿಕ್ಕಮಗಳೂರು, ಹಾಸನಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಎರಡು ದಿನಗಳ ಪ್ರವಾಸ ಇಂದು ಮುಗಿಯಲಿದ್ದು, ಈ ದಿನದ ಅವರ ಕಾರ್ಯಕ್ರಮದ ವಿವರ ಹೀಗಿದೆ.

ಶೃಂಗೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ
ಶೃಂಗೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda )

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿದ್ದಾರೆ. ನಿನ್ನೆ ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳ ಪ್ರವಾಸ ಮಾಡಿದ್ದು, ಇಂದು ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಮೇ 23 ರಿಂದ ಜೂನ್ 9 ರ ತನಕ ಬೃಹತ್ ಮಾವು ಹಲಸಿನ ಮೇಳ, ಒಂದೇ ಸೂರಿನಡಿ ಹತ್ತಾರು ಬಗೆಯ ಹಣ್ಣು

ಕರ್ನಾಟಕ ಬರ ಪರಿಸ್ಥಿತಿ; 32 ಲಕ್ಷಕ್ಕೂ ಅಧಿಕ ರೈತರಿಗೆ 3454 ಕೋಟಿ ರೂ ಪರಿಹಾರ, ರಾಜ್ಯದಿಂದಲೂ 16 ಲಕ್ಷ ರೈತ ಕುಟುಂಬಕ್ಕೆ ತಲಾ 3,000 ರೂ

ಕರಾವಳಿಯಲ್ಲಿ ಹೃದಯಾಘಾತದಿಂದಾಗಿ ಇಬ್ಬರ ಸಾವು; ಖೋಟಾ ನೋಟು ಪ್ರಕರಣ ಆರೋಪಿಗಳಿಂದ ಮಹತ್ವದ ಮಾಹಿತಿ

ಕೊಚ್ಚಿಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ, ಬೆಂಗಳೂರು ವಿಮಾನನಿಲ್ದಾಣದಲ್ಲಿ ತುರ್ತುಭೂಸ್ಪರ್ಶ, 150 ಪ್ರಯಾಣಿಕರು ಸೇಫ್

ನಿನ್ನೆ ಶೃಂಗೇರಿ ತಲುಪಿದ್ದ ಜೆ.ಪಿ.ನಡ್ಡಾ ಅವರು ಇಂದು ಬೆಳಗ್ಗೆ ಶೃಂಗೇರಿಯ ಶಾರದಾಂಬೆಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಇತರ ನಾಯಕರು ಜತೆಗಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜೆ.ಪಿ.ನಡ್ಡಾ ಅವರ ಪ್ರವಾಸ ದಿನಚರಿ ಪ್ರಕಾರ, ಇಂದು ಬೆಳಗ್ಗೆ 10.15ಕ್ಕೆ ಚಿಕ್ಕಮಗಳೂರಿನಲ್ಲಿ ಬೈಕ್‌ ಜಾಥಾದಲ್ಲಿ ಭಾಗವಹಿಸಲಿದ್ದಾರೆ. ಇದಾಗಿ ಮಧ್ಯಾಹ್ನ 12.35ಕ್ಕೆ ಬೇಲೂರು ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು.

ಈ ಸಭೆಯ ಬಳಿಕ ಅಪರಾಹ್ನ 2.45ಕ್ಕೆ ಬೇಲೂರು ಶ್ರೀ ಚೆನ್ನಕೇಶವ ದೇವಾಲಯಕ್ಕೆ ಭೇಟಿ ನೀಡುವರು. ಇದಾಗಿ ಹಾಸನಕ್ಕೆ ತೆರಳುವರು. ಸಂಜೆ 4.15ಕ್ಕೆ ಹಾಸನದ ಕೃಷ್ಣಾ ಹೋಟೆಲ್‌ ಹಿಂಭಾಗದ ಮೈದಾನದಲ್ಲಿ ಜಿಲ್ಲಾ ಬೂತ್‌ ಸಮಿತಿ ಸಮಾವೇಶದಲ್ಲಿ ಪಾಲ್ಗೊಳ್ಳುವರು ಎಂದು ಪಕ್ಷದ ಟ್ವೀಟ್‌ ತಿಳಿಸಿದೆ.

ನಿನ್ನೆ ಚಿಕ್ಕಮಗಳೂರಿನಲ್ಲಿ ಅಡಕೆ ಬೆಳೆಗಾರರ ಸಮಾವೇಶದಲ್ಲಿ ಜೆ.ಪಿ.ನಡ್ಡಾ ಭಾಗವಹಿಸಿದ್ದರು. ಈ ಸಂಬಂಧ ಅವರು ಟ್ವೀಟ್‌ ಮಾಡಿದ್ದು, ಚಿಕ್ಕಮಗಳೂರಿನಲ್ಲಿ ಇಂದು ನಡೆದ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಅಡಿಕೆ ಬೆಳೆಗಾರರನ್ನು ಉದ್ದೇಶಿಸಿ ಮಾತನಾಡಿದೆ. ಅಡಿಕೆ ಬೆಳೆಗಾರರ ಕಲ್ಯಾಣಕ್ಕಾಗಿ ಮತ್ತು ರಾಜ್ಯದ ಆರ್ಥಿಕತೆಯ ಮೇಲೆ ಅವರ ಸಕಾರಾತ್ಮಕ ಪ್ರಭಾವವನ್ನು ವೃದ್ಧಿಸುವ ನಿಟ್ಟಿನಲ್ಲಿ ಬಿಜೆಪಿ ನಿರಂತರವಾಗಿ ಕೆಲಸ ಮಾಡಿದೆ ಎಂದು ಬರೆದುಕೊಂಡಿದ್ದಾರೆ.

ಈ ವಿಚಾರವಾಗಿ ಬಿಜೆಪಿ ಕೂಡ ಟ್ವೀಟ್‌ ಮಾಡಿದ್ದು, “ಎಲೆಚುಕ್ಕೆ ರೋಗ ನಿಯಂತ್ರಣ, ವಿದೇಶಿ ಅಡಿಕೆ ಆಮದು ಬೆಲೆ ಹೆಚ್ಚಳ ಸೇರಿದಂತೆ ಅಡಿಕೆ ಬೆಳೆಗಾರರ ಬೇಡಿಕೆಗಳಿಗೆ ನಮ್ಮ ಸರ್ಕಾರ ಸ್ಪಂದಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿನಡ್ಡಾ ಅವರು ಸಹ ಆದ್ಯತೆ ಮೇರೆಗೆ ರಾಜ್ಯದ ಅಡಿಕೆ ಬೆಳೆಗಾರರನ್ನು ಭೇಟಿಯಾಗಿದ್ದಾರೆ” ಎಂದು ಬರೆದುಕೊಂಡಿದೆ.

ಜೆ.ಪಿ.ನಡ್ಡಾ ಅವರ ಟ್ವೀಟ್‌ ಇಲ್ಲಿದೆ ಗಮನಿಸಿ

ನಿನ್ನೆ ರಾತ್ರಿ ಶೃಂಗೇರಿ ತಲುಪಿದ್ದ ಬಿಜೆಪಿ ರಾಷ್ಟ್ರೀಯ ಅ‍ಧ್ಯಕ್ಷ ಜೆ.ಪಿ.ನಡ್ಡಾ ಅಲ್ಲಿ, ಶೃಂಗೇರಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಇದಾದ ಬಳಿಕ ಟ್ವೀಟ್‌ ಮಾಡಿರುವ ಅವರು, “ಇಂದು ಕರ್ನಾಟಕದ ಶೃಂಗೇರಿ ಶಾರದಾ ಮಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರ ಆಶೀರ್ವಾದ ಪಡೆದು ಕೃತಾರ್ಥನಾದೆ. ಮಠದ ವಾತಾವರಣ ನನ್ನನ್ನು ಪ್ರಭಾವಿತಗೊಳಿಸಿತು ಮತ್ತು ಆಳವಾದ ಆಧ್ಯಾತ್ಮಿಕ ಶಾಂತಿಯ ಅರಿವು ಮೂಡಿಸಿತು.” ಎಂದು ಹೇಳಿಕೊಂಡಿದ್ದಾರೆ.

ಅಡಕೆ ಬೆಳೆಗಾರರ ಸಮಾವೇಶವನ್ನು ಉದ್ದೇಶಿಸಿ ಅವರು ಮಾಡಿದ ಭಾಷಣವನ್ನು ಮತ್ತೊಮ್ಮೆ ಆಲಿಸುವುದಾದರೆ ಈ ಕೆಳಗಿನ ಟ್ವೀಟ್‌ ಗಮನಿಸಬಹುದು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೆ.20 ಮತ್ತು 21ರಂದು ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುವರು. ವಿವಿಧ ಸಭೆ, ಸಮಾವೇಶಗಳಲ್ಲಿ ಪಾಲ್ಗೊಂಡು ಬಳಿಕ ಫೆ.21ರ ರಾತ್ರಿ ಬೆಂಗಳೂರಿನಿಂದ ದೆಹಲಿಗೆ ಹಿಂತಿರುಗುವವರಿದ್ದಾರೆ ಎಂದು ಎನ್. ರವಿಕುಮಾರ್ ತಿಳಿಸಿದ್ದಾರೆ.

ಪಕ್ಷದ ಬಲ ಮೂರು ಜಿಲ್ಲೆಗಳಲ್ಲಿ ಹೇಗಿದೆ?

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪ್ರವಾಸ ಆಯೋಜನೆ ಆಗಿರುವ ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ 17 ವಿಧಾನ ಸಭಾ ಕ್ಷೇತ್ರಗಳಿವೆ. ಇಲ್ಲಿ, 10 ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 5 ಕ್ಷೇತ್ರದಲ್ಲಿ ಬಿಜೆಪಿ ಇದ್ದು ಮತ್ತೆ ಎಲ್ಲ ಕ್ಷೇತ್ರದಲ್ಲಿ ಗೆಲ್ಲುವ ನಿರೀಕ್ಷೆ ಹೊಂದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಐದು ಕ್ಷೇತ್ರಗಳ ಪೈಕಿ ನಾಲ್ಕಷ್ಟೇ ಬಿಜೆಪಿ ತೆಕ್ಕೆಯಲ್ಲಿದೆ. ಈ ನಾಲ್ಕನ್ನು ಉಳಿಸಿಕೊಂಡು ಐದನೇಯದನ್ನು ಗೆಲ್ಲುವುದು ಬಿಜೆಪಿ ರಣತಂತ್ರದಲ್ಲಿ ಅಡಗಿದೆ. ಇನ್ನು ಹಾಸನದಲ್ಲಿ ಏಳು ಕ್ಷೇತ್ರದಲ್ಲಿ ಒಂದು ಮಾತ್ರ ಬಿಜೆಪಿ ತೆಕ್ಕೆಯಲ್ಲಿದೆ. ಉಳಿದ ಆರು ಗೆಲ್ಲುವ ಬಹುದೊಡ್ಡ ಸವಾಲು ಬಿಜೆಪಿ ಮುಂದಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ