logo
ಕನ್ನಡ ಸುದ್ದಿ  /  ಕರ್ನಾಟಕ  /  Gruha Jyothi: ಮೋದಿ ಅವರಿಗೆ ತಾಕತ್ತಿದ್ದರೆ ದೇಶದೆಲ್ಲೆಡೆ ಗ್ಯಾರಂಟಿ ಯೋಜನೆ ಜಾರಿಗೆ ತರಲಿ ಎಂದ ಸಿಎಂ ಸಿದ್ದರಾಮಯ್ಯ; ಗೃಹಜ್ಯೋತಿಗೆ ಚಾಲನೆ

Gruha Jyothi: ಮೋದಿ ಅವರಿಗೆ ತಾಕತ್ತಿದ್ದರೆ ದೇಶದೆಲ್ಲೆಡೆ ಗ್ಯಾರಂಟಿ ಯೋಜನೆ ಜಾರಿಗೆ ತರಲಿ ಎಂದ ಸಿಎಂ ಸಿದ್ದರಾಮಯ್ಯ; ಗೃಹಜ್ಯೋತಿಗೆ ಚಾಲನೆ

HT Kannada Desk HT Kannada

Aug 05, 2023 04:29 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ

  • Gruha Jyothi: ಕಲಬುರಗಿ ನಗರದ ನೂತನ ವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಗ್ಯಾರೆಂಟಿ ಯೋಜನೆಗಳನ್ನು ದೇಶಾದ್ಯಂತ ಚಾಲನೆ ನೀಡುವಂತೆ ಪ್ರಧಾನಿ ಮೋದಿಗೆ ಸವಾಲೆಸೆದರು.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರ (Congress Govt) ಬಡವರ ಪರವಾಗಿದ್ದು, ನಮ್ಮ ಸರಕಾರ ಐದು ಗ್ಯಾರಂಟಿ ಯೋಜನೆಗಳು (Guarantee Schemes) ಘೋಷಿಸಿ ಅನುಷ್ಠಾನಕ್ಕೆ ತರುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರಿಗೆ ತಾಕತ್ತಿದ್ದರೆ ದೇಶದೆಲ್ಲೆಡೆ ಇಂತಹ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಿ ನೋಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

ಟ್ರೆಂಡಿಂಗ್​ ಸುದ್ದಿ

Mandya News: ಮಂಡ್ಯ ಜಿಲ್ಲೆಯಲ್ಲಿ ಒಂದೇ ವರ್ಷದಲ್ಲಿ 180 ಬಾಲ್ಯವಿವಾಹ ಪ್ರಕರಣ, 75ರಲ್ಲಿ ಎಫ್‌ಐಆರ್‌ ದಾಖಲು

KRS Dam: ಕೊಡಗಲ್ಲಿ ಉತ್ತಮ ಮಳೆ, ಕೆಆರ್‌ಎಸ್ ಜಲಾಶಯಕ್ಕೆ ಬಂತು 2 ಅಡಿ ನೀರು

ಬೆಂಗಳೂರು: ಖಾಸಗಿ ಶಾಲಾ ಶುಲ್ಕ ಶೇ 30- 40 ಹೆಚ್ಚಳ, ಶುಲ್ಕ ನಿಯಂತ್ರಣ ಬೇಕೆನ್ನುತ್ತಿರುವ ಪಾಲಕರು, ಕೈಕಟ್ಟಿ ಕುಳಿತ ಸರ್ಕಾರ- 10 ಮುಖ್ಯ ಅಂಶ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಮೇ 23 ರಿಂದ ಜೂನ್ 9 ರ ತನಕ ಬೃಹತ್ ಮಾವು ಹಲಸಿನ ಮೇಳ, ಒಂದೇ ಸೂರಿನಡಿ ಹತ್ತಾರು ಬಗೆಯ ಹಣ್ಣು

ಕಲಬುರಗಿ ನಗರದ ನೂತನ ವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಹಿಂದಿನ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಭರವಸೆಗಳನ್ನು‌ ಈಡೇರಿಸಿದೆ. ನಮ್ಮ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದರ ಜೊತೆಗೆ ಮೂಲಕ ಪ್ರಣಾಳಿಕೆಯಲ್ಲಿ ಘೋಷಿಸಿರುವ 75 ಭರವಸೆಗಳನ್ನು ಬಜೆಟ್‌ಮೂಲಕ ಈಡೇರಿಸುತ್ತೇವೆ ಎಂದು‌ಭರವಸೆ ನೀಡಿದ ಸಿಎಂ, ಪ್ರಧಾನಿ ಸೇರಿದಂತೆ ಬಿಜೆಪಿಯ ನಾಯಕರು ಈ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ

ಈ ದೇಶವನ್ನು ದಿವಾಳಿ ಮಾಡಿದ್ದು ಮೋದಿ ಅವರ ಸರ್ಕಾರವೇ ಹೊರತು‌ ನಾವು ಯಾರೂ ಅಲ್ಲ ಎಂದು ಟೀಕಿಸಿದ ಸಿಎಂ, ಈ ರಾಜ್ಯದ ಸಂಪತ್ತನ್ನು ಲೂಟಿ ಹೊಡೆದು, ಭ್ರಷ್ಟಚಾರ ಹಾಗೂ ನಿರುದ್ಯೋಗವನ್ನು ಹೆಚ್ಚಿಸುವುದರ ಜೊತೆಗೆ ಬಡವರಿಗೆ ದಲಿತರಿಗೆ ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡಿದ್ದು ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ನಮ್ಮ ಸರ್ಕಾರ ಆಳಿತದಲ್ಲಿದ್ದಾಗ ಕಲ್ಯಾಣ ಕರ್ನಾಟಕದ 99,600 ಸೇರಿದಂತೆ ರಾಜ್ಯದಲ್ಲಿ 14.52 ಲಕ್ಷ ಮನೆ ಕಟ್ಟಿಸಿದ್ದೆವು ಆದರೆ ಬಿಜೆಪಿ ಸರ್ಕಾರ ಕಕ ಭಾಗದಲ್ಲಿ 19000 ಹಾಗೂ ರಾಜ್ಯದಲ್ಲಿ 7 ಲಕ್ಷ ಮನೆ ಕಟ್ಟಿಸಿದ್ದಾರೆ. ಕಕ ಭಾಗದ ಅಭಿವೃದ್ದಿಗೆ ನಮ್ಮ ಸರ್ಕಾರ ತನ್ನ ಬದ್ದತೆ ತೋರಿಸಿದೆ ಎಂದು ಹೇಳಿದ ಸಿಎಂ, ಬಿಜೆಪಿ ಸರ್ಕಾರ ಈ ಭಾಗ್ಯದ ಹೆಸರನ್ನು ಮಾತ್ರ ಬದಲಾಯಿಸಿದೆ ಎಂದರು.

ಶಕ್ತಿ ಯೋಜನೆಯಡಿಯಲ್ಲಿ ಪ್ರತಿನಿತ್ಯ 55 ಲಕ್ಷ ಮಹಿಳೆಯರು ಪ್ರತಿನಿತ್ಯ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಮಹಿಳೆಯರು ದೇವಸ್ಥಾನ ಸೇರಿದಂತೆ ಅವಶ್ಯಕತೆ ಇರುವ ಕಡೆಗೆ ಹೋಗುತ್ತಿದ್ದಾರೆ. ಇದು‌ ಬಿಜೆಪಿ ನಾಯಕರ ಹೊಟ್ಟೆ ಉರಿಗೆ ಕಾರಣವಾಗಿದೆ ಎಂದರು.

ಗುಜರಾತ್‌ ಮಾಡೆಲ್‌ ಅಲ್ಲ, ಕರ್ನಾಟಕ ಮಾದರಿ ಗಮನಿಸಿ

1.41 ಕೋಟಿ ಫಲಾನುಭವಿಗಳು ಗೃಹಜ್ಯೋತಿ ಯೋಜನೆಯ ಲಾಭ ಪಡೆದುಕೊಳ್ಳಲಿದ್ದಾರೆ. ಜುಲೈ 1 ರಿಂದ ಪ್ರಾರಂಭವಾದ ಈ ಯೋಜನೆಯ ಅಡಿಯಲ್ಲಿ ಆಗಸ್ಟ್‌ ತಿಂಗಳಲ್ಲಿ 200 ಯೂನಿಟ್ ವರೆಗಿನ ವಿದ್ಯುತ್ ಬಳಕೆಗೆ ಶೂನ್ಯ ದರದ ಬಿಲ್ ಒದಗಿಸಲಿದೆ. ಈ ಯೋಜನೆ ಖರ್ಗೆ ಅವರು ಉಪಸ್ಥಿತರಿರಬೇಕು ಎಂದುಕೊಂಡು ಇಲ್ಲಿಯೇ ಜಾರಿಗೊಳಿಸಲಾಗುತ್ತಿದೆ ಎಂದು ಸಿಎಂ ಹೇಳಿದರು.

ಯೂರೋಪ್ ದೇಶದಲ್ಲಿ ಗ್ಯಾರಂಟಿಗಳನ್ನು ನೋಡಿ‌ ನಾವು ಗ್ಯಾರಂಟಿಗಳನ್ನು ಜಾರಿಗೆ ತರಲಿದ್ದೇವೆ. ಇದೇ ತರಹ ರಾಜ್ಯದ ಬೇರೆ ಬೇರೆ ರಾಜ್ಯಗಳು ಕೂಡ ಗ್ಯಾರಂಟಿ ಯೋಜನೆ ಜಾರಿಗೆ ತರಲಿವೆ. ಇದು ಕರ್ನಾಟಕ‌ ಮಾಡೆಲ್. ನಿಮ್ಮ ಗುಜರಾತ್ ಮಾಡೆಲ್ ಜಾರಿಗೆ ಬರಲು‌ ನಾವು ಬಿಡಲ್ಲ ಎಂದು ಕುಟುಕಿದರು.

ಅನ್ನ ಭಾಗ್ಯ ಯೋಜನೆಯ‌ ಜಾರಿಗೆ ವಿಚಾರದಲ್ಲಿ ಅಕ್ಕಿ ನೀಡದ ಕೇಂದ್ರ ಸರ್ಕಾರ ಬಡವರ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಿಎಂ, ಎಫ್ ಸಿ ಐ ಮೊದಲು ಅಕ್ಕಿ ಕೊಡುವುದಾಗಿ ಹೇಳಿ ಆಮೇಲೆ‌ ನಿರಾಕರಿಸಿತು. ಬಿಜೆಪಿಗರು ಈ‌ ವಿಚಾರದಲ್ಲಿ ರಾಜಕೀಯ ಮಾಡಿದರು ನಿಮಗೆ ನಾಚಿಕೆಯಾಗುವುದಿಲ್ಲವೇ ? ಎಂದರು.

ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ರಾಜ್ಯದ 1.28 ಕೋಟಿ‌ ಮಹಿಳಿಯರಿಗೆ ಪ್ರತಿತಿಂಗಳು 2000 ರೂಪಾಯಿ ಕೊಡಲಿದ್ದೇವೆ. ಇಂತಹ ಯೋಜನೆಯನ್ನು ದೇಶದ ಯಾವುದೇ ರಾಜ್ಯ‌ಜಾರಿಗೆ ತಂದಿಲ್ಲ. ನುಡಿದಂತೆ ನಾವು ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಿದರು.

ಕಲ್ಯಾಣ ಕರ್ನಾಟಕ‌ ಭಾಗದ ಸಮಗ್ರ ಅಭಿವೃದ್ದಿಗೆ ಕಾಂಗ್ರೆಸ್‌ ಸರ್ಕಾರ ಬದ್ಧ

ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ‌ ಭಾಗದ ಸಮಗ್ರ ಅಭಿವೃದ್ದಿಗೆ ಬದ್ದವಾಗಿದ್ದು. ಈ ಭಾಗದ ಹಿರಿಯ ನಾಯಕ‌ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವಂತೆ ಬಿಡುಗಡೆಯಾಗುವ‌ 5000 ಕೋಟಿ‌ ರೂ‌ ಅನುದಾನದ ಬಳಕೆ‌ ಕುರಿತಂತೆ ಪರಿಶೀಲನೆ ಮಾಡಲಾಗುವುದು ಸಿಎಂ ಸಿದ್ದರಾಂಯ್ಯ ಅವರು ಹೇಳಿದರು.

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿಗೊಳಿಸುತ್ತದೆ ಆದರೆ ಅಭಿವೃದ್ದಿ ಮಾಡುವುದಿಲ್ಲ ಎಂದು ಮೋದಿ ಹೇಳಿದ್ದಾರೆ, ನಾವು ಗ್ಯಾರಂಟಿ ಜಾರಿಗೊಳಿಸುವುದರ ಜೊತೆಗೆ ಅಭಿವೃದ್ದಿಯನ್ನೂ ಕೂಡಾ ಮಾಡಲಿದ್ದೇವೆ.‌ ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರಿಗೆ ನಾವು ಕೊಟ್ಟ ಭಾಷೆಯಂತೆ ಜನರಿಗೆ‌ ನೀಡಿದ ವಾಗ್ಧಾನದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಎಂದ ಸಿಎಂ ಇಂದಿನ‌ ಕಾರ್ಯಕ್ರಮದ ರೂವಾರಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಮೆಚ್ಚುಗೆ ಸೂಚಿಸಿದರು.

(ವರದಿ - ಶಂಕರಬಾಬು, ಕಲಬುರಗಿ)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ