logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Gruha Jyothi: ಕಲಬುರಗಿಯಲ್ಲಿ ಸಿದ್ದರಾಮಯ್ಯ-ಮಲ್ಲಿಕಾರ್ಜುನ ಖರ್ಗೆ ಹವಾ; ಗೃಹ ಜ್ಯೋತಿಗೆ ಚಾಲನೆ ನೀಡಿ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

Gruha Jyothi: ಕಲಬುರಗಿಯಲ್ಲಿ ಸಿದ್ದರಾಮಯ್ಯ-ಮಲ್ಲಿಕಾರ್ಜುನ ಖರ್ಗೆ ಹವಾ; ಗೃಹ ಜ್ಯೋತಿಗೆ ಚಾಲನೆ ನೀಡಿ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

Aug 05, 2023 05:43 PM IST

Gruha Jyothi: ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಜಾರ್ಜ್ ಸೇರಿದಂತೆ ಹಲವರು ಸಾಂಕೇತಿಕವಾಗಿ ನಿರ್ಮಿಸಿದ್ದ ಮನೆಯ ವಿದ್ಯುತ್ ಸ್ವಿಚ್ ಆನ್ ಮಾಡುವ ಮೂಲಕ ಲೈಟ್ ಬೆಳಗಿಸಿ ಗೃಹ ಜ್ಯೋತಿ ಯೋಜನೆಯನ್ನು ಲೋಕಾರ್ಪಣೆಗೊಳಿಸಿದರು.

  • Gruha Jyothi: ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಜಾರ್ಜ್ ಸೇರಿದಂತೆ ಹಲವರು ಸಾಂಕೇತಿಕವಾಗಿ ನಿರ್ಮಿಸಿದ್ದ ಮನೆಯ ವಿದ್ಯುತ್ ಸ್ವಿಚ್ ಆನ್ ಮಾಡುವ ಮೂಲಕ ಲೈಟ್ ಬೆಳಗಿಸಿ ಗೃಹ ಜ್ಯೋತಿ ಯೋಜನೆಯನ್ನು ಲೋಕಾರ್ಪಣೆಗೊಳಿಸಿದರು.
ರಾಜ್ಯ ಸರ್ಕಾರದ‌ ಮಹಾತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ಲೋಕಾರ್ಪಣೆ ಮಾಡಲಾಯಿತು.
(1 / 16)

ರಾಜ್ಯಸಭಾ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ, ಇಂಧನ ಸಚಿವ ಕೆಜೆ ಜಾರ್ಜ್ ಸೇರಿದಂತೆ ಇತರೆ ಸಚಿವರು, ಶಾಸಕರು ಸಮಾರಂಭದಲ್ಲಿ ಭಾಗವಹಿಸಿದ್ದರು.
(2 / 16)

ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಜಾರ್ಜ್ ಸೇರಿದಂತೆ ಹಲವರು ಸಾಂಕೇತಿಕವಾಗಿ ನಿರ್ಮಿಸಿದ್ದ ಮನೆಯ ವಿದ್ಯುತ್ ಸ್ವಿಚ್ ಆನ್ ಮಾಡುವ ಮೂಲಕ ಲೈಟ್ ಬೆಳಗಿಸಿ ಗೃಹ ಜ್ಯೋತಿ ಯೋಜನೆಯನ್ನು ಲೋಕಾರ್ಪಣೆಗೊಳಿಸಿದರು.
(3 / 16)

ಗೃಹ ಜ್ಯೋತಿ ಯೋಜನೆಯ ಲೋಕಾರ್ಪಣೆಯ ಬಳಿಕ ಕಾಂಗ್ರೆಸ್ ನಾಯಕರು ಕ್ಯಾಮೆರಾಗೆ ಪೋಸ್​​ ಕೊಟ್ಟಿದ್ದು ಹೀಗೆ.
(4 / 16)

ಈ ಸಂದರ್ಭದಲ್ಲಿ ಹತ್ತು ಫಲಾನುಭವಿಗಳಿಗೆ ಜಿರೋ ಮೌಲ್ಯದ ಜೆಸ್ಕಾಂ ಬಿಲ್‌ಗಳನ್ನು ಸಾಂಕೇತಿಕವಾಗಿ ನೀಡಲಾಯಿತು. 
(5 / 16)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲಿ ನೆರೆದಿದ್ದ ಅಭಿಮಾನಿಗಳತ್ತ ಕೈ ಬೀಸಿದರು.
(6 / 16)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲಿ ನೆರೆದಿದ್ದ ಅಭಿಮಾನಿಗಳತ್ತ ಕೈ ಬೀಸಿದರು.
ಸಿಎಂ ಸಿದ್ದರಾಮಯ್ಯ ಅವರು ರಾಜ್ಯಸಭಾ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೈಕುಲುಕಿದ ಕ್ಷಣ.
(7 / 16)

ನರೇಂದ್ರ ಮೋದಿ ಸರ್ಕಾರಕ್ಕೆ ತಾಕತ್ತಿದ್ದರೆ ದೇಶದೆಲ್ಲೆಡೆ ಗ್ಯಾರಂಟಿ ಯೋಜನೆ ಜಾರಿಗೆ ತರಲಿ ಎಂದು ಸಿಎಂ ಸಿದ್ದರಾಮಯ್ಯ ಅಬ್ಬರದ ಭಾಷಣ ನಡೆಸಿದರು.
(8 / 16)

ಈ ದೇಶವನ್ನು ದಿವಾಳಿ ಮಾಡಿದ್ದು ಮೋದಿ ಅವರ ಸರ್ಕಾರವೇ ಹೊರತು‌ ನಾವು ಯಾರೂ ಅಲ್ಲ ಎಂದು ಟೀಕಿಸಿದ ಸಿಎಂ, ಈ ರಾಜ್ಯದ ಸಂಪತ್ತನ್ನು ಲೂಟಿ ಹೊಡೆದು, ಭ್ರಷ್ಟಚಾರ ಹಾಗೂ ನಿರುದ್ಯೋಗವನ್ನು ಹೆಚ್ಚಿಸುವುದರ ಜೊತೆಗೆ ಬಡವರಿಗೆ ದಲಿತರಿಗೆ ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡಿದ್ದು ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
(9 / 16)

ನಮ್ಮ ಸರ್ಕಾರ ಆಳಿತದಲ್ಲಿದ್ದಾಗ ಕಲ್ಯಾಣ ಕರ್ನಾಟಕದ 99,600 ಸೇರಿದಂತೆ ರಾಜ್ಯದಲ್ಲಿ 14.52 ಲಕ್ಷ ಮನೆ ಕಟ್ಟಿಸಿದ್ದೆವು ಆದರೆ ಬಿಜೆಪಿ ಸರ್ಕಾರ ಕಕ ಭಾಗದಲ್ಲಿ 19000 ಹಾಗೂ ರಾಜ್ಯದಲ್ಲಿ 7 ಲಕ್ಷ ಮನೆ ಕಟ್ಟಿಸಿದ್ದಾರೆ. ಕಕ ಭಾಗದ ಅಭಿವೃದ್ದಿಗೆ ನಮ್ಮ ಸರ್ಕಾರ ತನ್ನ ಬದ್ದತೆ ತೋರಿಸಿದೆ ಎಂದು ಹೇಳಿದ ಸಿಎಂ, ಬಿಜೆಪಿ ಸರ್ಕಾರ ಈ ಭಾಗದ ಹೆಸರನ್ನು ಮಾತ್ರ ಬದಲಾಯಿಸಿದೆ ಎಂದರು.
(10 / 16)

ಶಕ್ತಿ ಯೋಜನೆಯಡಿಯಲ್ಲಿ ಪ್ರತಿನಿತ್ಯ 55 ಲಕ್ಷ ಮಹಿಳೆಯರು ಪ್ರತಿನಿತ್ಯ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಮಹಿಳೆಯರು ದೇವಸ್ಥಾನ ಸೇರಿದಂತೆ ಅವಶ್ಯಕತೆ ಇರುವ ಕಡೆಗೆ ಹೋಗುತ್ತಿದ್ದಾರೆ. ಇದು‌ ಬಿಜೆಪಿ ನಾಯಕರ ಹೊಟ್ಟೆ ಉರಿಗೆ ಕಾರಣವಾಗಿದೆ ಎಂದರು ಸಿದ್ದರಾಮಯ್ಯ. 
(11 / 16)

1.41 ಕೋಟಿ ಫಲಾನುಭವಿಗಳು ಗೃಹಜ್ಯೋತಿ ಯೋಜನೆಯ ಲಾಭ ಪಡೆದುಕೊಳ್ಳಲಿದ್ದಾರೆ. ಜುಲೈ 1 ರಿಂದ ಪ್ರಾರಂಭವಾದ ಈ ಯೋಜನೆಯ ಅಡಿಯಲ್ಲಿ ಅಗಷ್ಟ್ ತಿಂಗಳಲ್ಲಿ 200 ಯೂನಿಟ್ ವರೆಗಿನ ವಿದ್ಯುತ್ ಬಳಕೆಗೆ ಶೂನ್ಯ ದರದ ಬಿಲ್ ಒದಗಿಸಲಿದೆ. ಈ ಯೋಜನೆ  ಖರ್ಗೆ ಅವರು ಉಪಸ್ಥಿತರಿರಬೇಕು ಎಂದುಕೊಂಡು ಇಲ್ಲಿಯೇ ಜಾರಿಗೊಳಿಸಲಾಗುತ್ತಿದೆ ಎಂದು ಸಿಎಂ ಹೇಳಿದರು.
(12 / 16)

ಕರ್ನಾಟಕ ರಾಜ್ಯ ಸರ್ಕಾದ ಐದು ಗ್ಯಾರಂಟಿಗಳ ಬಗ್ಗೆ ಇಡೀ ದೇಶದ ಜನರೇ ಶ್ಲಾಘನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಶಿವಕುಮಾರ ನೇತೃತ್ವದಲ್ಲಿ ಈ ಗ್ಯಾರಂಟಿಗಳು ಜಾರಿಗೆ ಬರುತ್ತಿವೆ ಎಂದು ರಾಜ್ಯ ಸಭಾ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮದಲ್ಲಿ ಹೇಳಿದರು.
(13 / 16)

ಮನಸಿದ್ದರೆ ಮಾರ್ಗ ಸಿಗುತ್ತದೆ. ಯಾರು ಬಡವರ ಬಗ್ಗೆ ಚಿಂತನೆ ಮಾಡುತ್ತಾರೋ‌ ಅವರು ಯೋಜನೆಗಳನ್ನು ಜಾರಿಗೆ ತರಲು ದುಡ್ಡು ಹುಡುಕುತ್ತಾರೆ ಎಂದು ಹೇಳಿ ಸಿಎಂ, ಡಿಸಿಎಂ ಹಾಗೂ ಇಂಧನ ಸಚಿವರಿಗೆ ಮೆಚ್ಚುಗೆ ಸೂಚಿಸಿ‌ ಅಭಿನಂದನೆ ಸಲ್ಲಿಸಿದರು.
(14 / 16)

ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರ ಎಂದು ಪ್ರಶಂಸಿಸಿದ ಖರ್ಗೆ, ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಪ್ರತಿ ವರ್ಷ 2 ಕೋಟಿ ಉದ್ಯೋಗ, ವಿದೇಶದಿಂದ ಕಪ್ಪು ಹಣ ವಾಪಸ್ ತಂದು ಪ್ರತಿ ಕುಟುಂಬಕ್ಕೆ ಹದಿನೈದು ಲಕ್ಷ ಕೊಡುವುದಾಗಿ ಹೇಳಿದ್ದರು. ಎಲ್ಲಿ ಹೋಯಿತು? ಎಂದು ಪ್ರಶ್ನಿಸಿದರು.
(15 / 16)

ಪ್ರಧಾನಿ ಮೋದಿ ತಮ್ಮ ಬಳಿ ಇರುವ ಇಂಟಲಿಜೆನ್ಸಿ ಮೂಲಕ ವರದಿ ತರಿಸಿಕೊಂಡು ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಜಾರಿಗೆ ತರುತ್ತಿರುವ ಬಗ್ಗೆ ತಿಳಿದುಕೊಳ್ಳಲಿ ಎಂದು ಟಾಂಗ್ ನೀಡಿದ ಖರ್ಗೆ, ಗ್ಯಾರಂಟಿಗಳನ್ನು ಜಾರಿಗೊಳಿಸಿದರೆ ರಾಜ್ಯ ಸರ್ಕಾರ ದಿವಾಳಿಯಾಗಲಿದೆ ಎಂದು ಮೋದಿ ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದರು ಎಂದು ನೆನಪಿಸಿಕೊಂಡರು.
(16 / 16)

    ಹಂಚಿಕೊಳ್ಳಲು ಲೇಖನಗಳು