logo
ಕನ್ನಡ ಸುದ್ದಿ  /  ಕರ್ನಾಟಕ  /  Kalaburagi News: ಕೆಯುಐಡಿಎಫ್‌ಸಿ ನಿಗಮದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ಭರ್ತಿ

Kalaburagi News: ಕೆಯುಐಡಿಎಫ್‌ಸಿ ನಿಗಮದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ಭರ್ತಿ

HT Kannada Desk HT Kannada

Nov 21, 2023 11:50 AM IST

google News

Kalaburagi News: ಕೆಯುಐಡಿಎಫ್‌ಸಿ ನಿಗಮದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ಭರ್ತಿ

    • Job Alert: ಹುಬ್ಬಳ್ಳಿ, ಬೆಳಗಾವಿ ಮತ್ತು ಕಲಬುರಗಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಡಿಸೆಂಬರ್‌ 19ರೊಳಗೆ ಆನ್‌ಲೈನ್‌ ಮೂಲಕ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.
Kalaburagi News: ಕೆಯುಐಡಿಎಫ್‌ಸಿ ನಿಗಮದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ಭರ್ತಿ
Kalaburagi News: ಕೆಯುಐಡಿಎಫ್‌ಸಿ ನಿಗಮದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ಭರ್ತಿ

ಕಲಬುರಗಿ: ಕೆಯುಐಡಿಎಫ್‌ಸಿ ನಿಗಮದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆಯಡಿ ಕೇಂದ್ರ ಕಚೇರಿ ಬೆಂಗಳೂರು ಹಾಗೂ ಯೋಜನಾ ಅನುಷ್ಠಾನ ಘಟಕ ಹುಬ್ಬಳ್ಳಿ/ಬೆಳಗಾವಿ/ಕಲಬುರಗಿಯಲ್ಲಿ ಖಾಲಿಯಿರುವ 10 ಹುದ್ದೆಗಳಿಗೆ ಹೆಚ್.ಆರ್.ಪಾಲಿಸಿ ಅನ್ವಯ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಕೆಯುಡಬ್ಲ್ಯೂಎಸ್‌ಎಂಪಿ/ ಕೆಯುಐಡಿಎಫ್‌ಸಿ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

(ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಿರಿಸಲಾದ 1 ಹುದ್ದೆ ಹಾಗೂ ಕಲ್ಯಾಣ ಕರ್ನಾಟಕ ಮೀಸಲಾತಿ ಹೊರತುಪಡಿಸಿದ 9 ಹುದ್ದೆಗಳು) ಸೇರಿದಂತೆ ಒಟ್ಟು 10 ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅನುಭವ, ವೇತನ/ಭತ್ಯೆ, ಗುತ್ತಿಗೆ ನೇಮಕಾತಿ ಷರತ್ತು ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಯನ್ನು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ದಿಂದ ಪಡೆಯಬಹುದಾಗಿದೆ.

ಅರ್ಹ ಅಭ್ಯರ್ಥಿಗಳು ನಿಗಮದ www.kuidfc.com/carees ವೆಬ್‌ಸೈಟ್‌ದಲ್ಲಿ ಆನ್‌ಲೈನ್ ಮೂಲಕ ಡಿಸೆಂಬರ್ 19ರೊಳಗಾಗಿ ಅರ್ಜಿ ಸಲ್ಲಿಸಬೇಕು. ಖುದ್ದಾಗಿ ಅಥವಾ ಅಂಚೆ/ಕೊರಿಯರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ವಿದ್ಯಾರ್ಹತೆ, ಅನುಭವ ಇತರೆ ಸಂಬಂಧಪಟ್ಟ ದಾಖಲೆಗಳನ್ನು ಅರ್ಜಿಗಳೊಂದಿಗೆ ಅಪಲೋಡ್ ಮಾಡದಿರುವ ಅಪೂರ್ಣ ಅರ್ಜಿಗಳನ್ನು ಹಾಗೂ ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ನೇಮಕಾತಿ ವಿಷಯದಲ್ಲಿ ಸಂಸ್ಥೆಯ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಕಲಬುರಗಿ: ನ. 22 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಖಾಸಗಿ ಕಂಪನಿ ಹಾಗೂ ವಿವಿಧ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳ ಶೋಧನೆ ಮಾಡುವ ನಿರುದ್ಯೋಗಿ ಯುವಕ/ಯುವತಿಯರಿಗೆ ಇದೀಗ ಕಲಬುರಗಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಇದೇ 22 ರಂದು ನೇರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 22 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಟ್ಯಾಲಿ ಸೋಲ್ಯೂಷನ್ಸ್‌ನಲ್ಲಿ ಟೆಲಿಕಾಲರ್/ಸೇಲ್ಸ್ ಮ್ಯಾನೇಜರ್ ಹುದ್ದೆಗೆ ಬಿ.ಕಾಂ.,ಬಿ.ಬಿ.ಎ., ಎಂ.ಬಿ.ಎ., ಎಂ.ಕಾಂ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 21 ರಿಂದ 30 ವರ್ಷದೊಳಗಿರಬೇಕು. ಐಐಎಫ್‌ಎಲ್‌ದಲ್ಲಿ ಡಿಎಸ್ಟಿ/ಆರ್‌ಓ/ಆರ್‌ಎಂ/ಕಲೇಕ್ಷನ್ ಹುದ್ದೆಗೆ ಪಿ.ಯು.ಸಿ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಹೆಡ್ ಹಿಲ್ಡ್ ಹೈ ಫೌಂಡೇಶನ್‌ದಲ್ಲಿ ಬಿಪಿಓ/ಐಟಿ, ಮ್ಯಾನ್ಯುಫ್ಯಾಕ್ಚರಿಂಗ್ ರಿಟೇಲ್, ಬ್ಯಾಂಕಿಂಗ್, ಸೇಲ್ಸ್ ಹುದ್ದೆಗೆ ಎಸ್.ಎಸ್.ಎಲ್.ಸಿ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಮುತ್ತೂಟ್ ಫೈನಾನ್ಸ್‌ನಲ್ಲಿ ಇಂಟರನ್ ಎಕ್ಸಿಕ್ಯೂಟಿವ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ಪ್ರೋಬೇಷನರಿ ಆಫೀಸರ್ ಹುದ್ದೆಗೆ ಎಂಬಿಎ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 21 ರಿಂದ 30 ವರ್ಷದೊಳಗಿರಬೇಕು.

ಕಿಯಾ ಮೋರಾರ್ಸ್‌ನಲ್ಲಿ ಹೆಚ್.ಆರ್. ಎಕ್ಸಿಕ್ಯೋಟಿವ್/ ಮ್ಯಾನೇಜರ್ ಹುದ್ದೆಗೆ ಎಂಬಿಎ ವಿದ್ಯಾರ್ಹತೆ ಹೊಂದಿರುವ ಪುರುಷ ಅಭ್ಯರ್ಥಿಗಳು ಮಾತ್ರ ಎರಡು ವರ್ಷಗಳ ಅನುಭವ ಹೊಂದಿರಬೇಕು. ಟ್ರೇನಿ ಕೇಂದ್ರ ಮ್ಯಾನೇಜರ್ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಮಾತ್ರ ಪಿ.ಯು.ಸಿ, ಐ.ಟಿ.ಐ., ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಸರ್ವಿಸ್ ಮ್ಯಾನೇಜರ್ ಹುದ್ದೆಗೆ ಡಿಪ್ಲೋಮಾ (ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್(ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846, 8003343944 ಗಂಟೆಯವರೆಗೆ (ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 5ಗಂಟೆಯವರೆಗೆ) ಸಂಪರ್ಕಿಸಲು ಕೋರಲಾಗಿದೆ.

(ವರದಿ: ಎಸ್.ಬಿ.ರೆಡ್ಡಿ, ಕಲಬುರಗಿ)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ