logo
ಕನ್ನಡ ಸುದ್ದಿ  /  ಕರ್ನಾಟಕ  /  ಕಲಬುರಗಿಯಲ್ಲಿ ಸೆಪ್ಟೆಂಬರ್ 16 ರಂದು ಮಿನಿ ಉದ್ಯೋಗ ಮೇಳ; ನೇರ ಸಂದರ್ಶನಕ್ಕೆ ಹಾಜರಾಗಿ

ಕಲಬುರಗಿಯಲ್ಲಿ ಸೆಪ್ಟೆಂಬರ್ 16 ರಂದು ಮಿನಿ ಉದ್ಯೋಗ ಮೇಳ; ನೇರ ಸಂದರ್ಶನಕ್ಕೆ ಹಾಜರಾಗಿ

HT Kannada Desk HT Kannada

Sep 14, 2023 01:23 PM IST

ಕಲಬುರಗಿಯಲ್ಲಿ ಸೆಪ್ಟೆಂಬರ್ 16 ರಂದು ಮಿನಿ ಉದ್ಯೋಗ ಮೇಳ; ನೇರ ಸಂದರ್ಶನಕ್ಕೆ ಹಾಜರಾಗಿ

    • ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸೆಪ್ಟೆಂಬರ್‌ 16ರಂದು ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಸೆಪ್ಟೆಂಬರ್ 16 ರಂದು ಮಿನಿ ಉದ್ಯೋಗ ಮೇಳ; ನೇರ ಸಂದರ್ಶನಕ್ಕೆ ಹಾಜರಾಗಿ
ಕಲಬುರಗಿಯಲ್ಲಿ ಸೆಪ್ಟೆಂಬರ್ 16 ರಂದು ಮಿನಿ ಉದ್ಯೋಗ ಮೇಳ; ನೇರ ಸಂದರ್ಶನಕ್ಕೆ ಹಾಜರಾಗಿ

ಕಲಬುರಗಿ: ಖಾಸಗಿ ಕೈಗಾರಿಕೆಗಳಲ್ಲಿ ಮತ್ತು ಉದ್ಯಮಗಳಲ್ಲಿ ಉದ್ಯೋಗ ಹುಡುಕುತ್ತಿರುವ ನಿರುದ್ಯೋಗಿ ಯುವ-ಯುವತಿಯರಿಗೆ ಗುಡ್‌ ನ್ಯೂಸ್‌. ಸೆಪ್ಟೆಂಬರ್‌ 16 ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Bangalore News: ಬೆಂಗಳೂರು ರಸ್ತೆಗಳಲ್ಲಿ ಮರ ಬೀಳುವ ಸನ್ನಿವೇಶವಿದೆಯಾ, ಈ ನಂಬರ್‌ಗಳಿಗೆ ಕರೆ ಮಾಡಿ

Mandya News: ಮಂಡ್ಯ ಜಿಲ್ಲೆಯಲ್ಲಿ ಒಂದೇ ವರ್ಷದಲ್ಲಿ 180 ಬಾಲ್ಯವಿವಾಹ ಪ್ರಕರಣ, 75ರಲ್ಲಿ ಎಫ್‌ಐಆರ್‌ ದಾಖಲು

KRS Dam: ಕೊಡಗಲ್ಲಿ ಉತ್ತಮ ಮಳೆ, ಕೆಆರ್‌ಎಸ್ ಜಲಾಶಯಕ್ಕೆ ಬಂತು 2 ಅಡಿ ನೀರು

ಬೆಂಗಳೂರು: ಖಾಸಗಿ ಶಾಲಾ ಶುಲ್ಕ ಶೇ 30- 40 ಹೆಚ್ಚಳ, ಶುಲ್ಕ ನಿಯಂತ್ರಣ ಬೇಕೆನ್ನುತ್ತಿರುವ ಪಾಲಕರು, ಕೈಕಟ್ಟಿ ಕುಳಿತ ಸರ್ಕಾರ- 10 ಮುಖ್ಯ ಅಂಶ

ಶ್ರೀ ಸಾಯಿ ಅರ್ಥ್ ಮೂವರ್ಸ್ದಲ್ಲಿ ರಿಷಪ್‌ನಿಸ್ಟ್, ಟೆಕ್ನಿಷಿಯನ್/ ವೇಲ್ಡರ್, ಬ್ಯಾಕೆಂಡ್, ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಐಟಿಐ/ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಜನಾ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ದಲ್ಲಿ ಬ್ರಾಂಚ್‌ ಮ್ಯಾನೇಜರ್, ಎಕ್ಸಿಕ್ಯೂಟಿವ್ ಹುದ್ದೆಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಯುನೈಟೆಡ್ ಆಸ್ಪತ್ರೆಯಲ್ಲಿ ನರ್ಸಿಂಗ್ ಸ್ಟಾಫ್ ಹುದ್ದೆಗೆ ಜಿ.ಎನ್.ಎಮ್./ ಬಿ.ಎಸ್.ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ದೇವಾನಂದ ಆಟೋಮೋಬೈಲ್ಸ್‌ನಲ್ಲಿ ವರ್ಕ್ಶಾಪ್ ಮ್ಯಾನೇಜರ್, ಎಲೆಕ್ಟ್ರಿಷಿಯನ್, ಸುಪರ್‌ವೈಸರ್, ಸರ್ವಿಸ್ ಅಡ್ವೆಸರ್, ಸ್ಪೇರ್ ಪಾರ್ಟ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಐಟಿಐ, ಡಿಪ್ಲೋಮಾ, ಯಾವುದೇ ಪದವಿ ಹಾಗೂ ಬಿ.ಇ. (ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರಬೇಕು. ಜೀವಿತಂದಲ್ಲಿ ವಿವಿಧ ಹುದ್ದೆಗಳಿಗೆ ಯಾವುದೇ ಪದವಿ/ಪಿ.ಜಿ. ವಿದ್ಯಾರ್ಹತೆ ಹೊಂದಿರಬೇಕು. ನೆಟ್ಯಾಪ್ಸ್ದಲ್ಲಿ ವಿವಿಧ ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ನಡ್ಜ್ ಕೋಹಿನೂರ ಇನ್ಸ್ಸ್ಟಿಟ್ಯೂಟ್‌ದಲ್ಲಿ ಬೇಸಿಕ್ ಕಂಪ್ಯೂಟರ್ ಟ್ರೆಟನ್‌, ಟ್ಯಾಲಿ ಟ್ರೇನರ್, ಸೇಲ್ಸ್ಎಕ್ಸಿಕ್ಯೂಟಿವ್ ಹುದ್ದೆಗೆ ಬಿ.ಕಾಮ್, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಐಡಿಎಫ್‌ಸಿ ಫಸ್ಟ್ ಭಾರತ ಲೀ. ದಲ್ಲಿ ಬ್ರಾöಚ್ ಮ್ಯಾನೇಜರ್, ಜಿ.ಆರ್.ಓ., ಐ.ಆರ್.ಓ. .ಎಚ್.ಎಲ್ ಹುದ್ದೆಗೆ ಪಿಯುಸಿ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 20 ರಿಂದ 32 ವರ್ಷದೊಳಗಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್(ಬಯೋಡೆಟಾ) ಭಾವಚಿತ್ರ ಹಾಗೂ ಆಧಾರ್ ಕಾರ್ಡ್ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 9620095270ಗೆ ಸಂಪರ್ಕಿಸಲು ಮನವಿ ಮಾಡಿದ್ದಾರೆ.

(ವರದಿ: ಎಸ್.ಬಿ.ರೆಡ್ಡಿ, ಕಲಬುರಗಿ)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ