logo
ಕನ್ನಡ ಸುದ್ದಿ  /  ಕರ್ನಾಟಕ  /  Acid Attack Compensation: ಕರ್ನಾಟಕದಲ್ಲಿ ಆಸಿಡ್ ದಾಳಿಗೊಳಗಾದವರಿಗೆ ಪರಿಹಾರ 3 ರಿಂದ 10 ಲಕ್ಷ ರೂಪಾಯಿಗೆ ಏರಿಕೆ, ದೌರ್ಜನ್ಯ ತಡೆಗೆ ಕ್ರಮ

Acid Attack Compensation: ಕರ್ನಾಟಕದಲ್ಲಿ ಆಸಿಡ್ ದಾಳಿಗೊಳಗಾದವರಿಗೆ ಪರಿಹಾರ 3 ರಿಂದ 10 ಲಕ್ಷ ರೂಪಾಯಿಗೆ ಏರಿಕೆ, ದೌರ್ಜನ್ಯ ತಡೆಗೆ ಕ್ರಮ

HT Kannada Desk HT Kannada

Feb 21, 2023 05:40 PM IST

google News

Acid Attack Compensation: ಕರ್ನಾಟಕದಲ್ಲಿ ಆಸಿಡ್ ದಾಳಿ ಪರಿಹಾರ 3 ರಿಂದ 10 ಲಕ್ಷ ರೂಪಾಯಿಗೆ ಏರಿಕೆ, ದೌರ್ಜನ್ಯ ತಡೆಗೆ ಕ್ರಮ (Representative Image)

    • Acid Attack Compensation in Karnataka:  ರಾಜ್ಯದಲ್ಲಿ ಆಸಿಡ್ ದಾಳಿಗೊಳಗಾದವರಿಗೆ ನೀಡುತ್ತಿದ್ದ 3 ಲಕ್ಷ ರೂ ಪರಿಹಾರವನ್ನು 10 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.
Acid Attack Compensation: ಕರ್ನಾಟಕದಲ್ಲಿ ಆಸಿಡ್ ದಾಳಿ ಪರಿಹಾರ 3 ರಿಂದ 10 ಲಕ್ಷ ರೂಪಾಯಿಗೆ ಏರಿಕೆ, ದೌರ್ಜನ್ಯ ತಡೆಗೆ ಕ್ರಮ (Representative Image)
Acid Attack Compensation: ಕರ್ನಾಟಕದಲ್ಲಿ ಆಸಿಡ್ ದಾಳಿ ಪರಿಹಾರ 3 ರಿಂದ 10 ಲಕ್ಷ ರೂಪಾಯಿಗೆ ಏರಿಕೆ, ದೌರ್ಜನ್ಯ ತಡೆಗೆ ಕ್ರಮ (Representative Image) (HT_PRINT)

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಿಸಲು ವ್ಯಾಪಕ ಕ್ರಮಗಳನ್ನು ಕೈಗೊಂಡಿದ್ದು, ಆಸಿಡ್ ದಾಳಿಗೊಳಗಾದವರಿಗೆ ನೀಡುತ್ತಿದ್ದ 3 ಲಕ್ಷ ರೂ ಪರಿಹಾರವನ್ನು 10 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಗಣಿ, ಭೂ ವಿಜ್ಞಾನ, ವಿಶೇಷ ಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವ ಹಾಲಪ್ಪ ಆಚಾರ್ ವಿಧಾನಪರಿಷತ್‌ನಲ್ಲಿ ಇಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ನ ಸಲೀಂ ಅಹಮದ್ ಅವರ ಪರವಾಗಿ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಸಿಡ್ ದಾಳಿ ಪ್ರಕರಣಗಳಲ್ಲಿ ತಕ್ಷಣವೇ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಇತ್ತೀಚೆಗೆ ಕನಕಪುರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಆಸಿಡ್ ದಾಳಿ ಸಂದರ್ಭದಲ್ಲಿ ಸರ್ಕಾರ ತಕ್ಷಣವೇ ಸ್ಪಂದಿಸಿದೆ. ತಾವೂ ಕೂಡ ಆಸ್ಪತ್ರೆಗೆ ತೆರಳಿ ಸಂತ್ರಸ್ತೆಗೆ ಧೈರ್ಯ ತುಂಬಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾಗಿ ತಿಳಿಸಿದರು.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ತಪ್ಪು ಮಾಡಿದವರ ಮೇಲೆ ಕಾನೂನು ಕ್ರಮ ತೆಗೆಕೊಳ್ಳಲಾಗುತ್ತಿದೆ. ಜೊತೆಗೆ ಸಂತ್ರಸ್ತರಿಗೆ ಸೂಕ್ತ ಪುನರ್ ವಸತಿ, ವೃತ್ತಿ ತರಬೇತಿ ನೀಡಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ. 2021-22 ರ ಸಾಲಿನಲ್ಲಿ 25 ಸಾವಿರ ನೋಂದವರಿಗೆ ಎಲ್ಲಾ ರೀತಿಯ ನೆರವು ಕಲ್ಪಿಸಲಾಗಿದೆ ಎಂದು ಹೇಳಿದರು.

ಮಹಿಳಾ ದೌರ್ಜನ್ಯ ತಡೆಯಲು ನಿರ್ಭಯ ಯೋಜನೆಯಡಿಯಲ್ಲಿ ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆತ್ಮ ರಕ್ಷಣೆ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ. ಮಹಿಳಾ ದೌರ್ಜನ್ಯದ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದ್ದರೆ ಗೃಹ ಇಲಾಖೆಯಿಂದ ಮಾಹಿತಿ ತರಿಸಿ ಸದನದ ಮುಂದಿಡುವುದಾಗಿ ಹೇಳಿದರು.

ವಿಶೇಷ ಚೇತನರಿಗೆ ಪರಿಕರಗಳನ್ನು ಒದಗಿಸಲು 2023-24 ನೇ ಸಾಲಿಗೆ 50 ಕೋಟಿ ರೂ ನಿಗದಿ

ವಿಕಲಚೇತನರಿಗೆ ದ್ವಿಚಕ್ರ ವಾಹನ ಒಳಗೊಂಡಂತೆ ವಿವಿಧ ಪರಿಕರಗಳನ್ನು ಒದಗಿಸಲು ಪ್ರಸ್ತುತ ಲಭ್ಯವಿರುವ ಆರ್ಥಿಕ ಸಂಪನ್ಮೂಲ ಕಡಿಮೆ ಇದ್ದು, ಇದಕ್ಕಾಗಿ ಈ ಬಾರಿ ಬಜೆಟ್ ನಲ್ಲಿ 50 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಗಣಿ, ಭೂ ವಿಜ್ಞಾನ, ವಿಶೇಷ ಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವ ಹಾಲಪ್ಪ ಆಚಾರ್ ವಿಧಾನಪರಿಷತ್ತಿಗಿಂದು ತಿಳಿಸಿದರು.

ಪ್ರಶ್ನೋತ್ತರ ಕಲಾಪದಲ್ಲಿ ಎಸ್. ರವಿ ಕುಮಾರ್ ಅವರ ಪ್ರಸ್ತಾಪಗಳಿಗೆ ಉತ್ತರಿಸಿದ ಸಚಿವರು, 2022-23 ನೇ ಸಾಲಿನ ಬಜೆಟ್ ನಲ್ಲಿ ಈ ಉದ್ದೇಶಕ್ಕಾಗಿ 16 ಕೋಟಿ ರೂಪಾಯಿ ನಿಗದಿ ಮಾಡಲಾಗಿತ್ತು. ಈ ಬಾರಿ ಅಧಿಕ ಹಣ ನಿಗದಿ ಮಾಡಿದ್ದು, ಹೆಚ್ಚು ಮಂದಿ ವಿಕಲಚೇತರಿಗೆ ಸೌಲಭ್ಯಗಳು ದೊರೆಯಲಿವೆ. ವಿಶೇಷ ಚೇತನರಿಗೆ ಇನ್ನಷ್ಟು ಪರಿಕರಗಳು ಮತ್ತು ಸೌಲಭ್ಯಗಳನ್ನು ಕಲ್ಪಿಸುವಂತೆ ಸರ್ಕಾರಕ್ಕೂ ಸಹ ಪ್ರತ್ಯೇಕವಾಗಿ ಪತ್ರ ಬರೆದು ಮನವಿ ಮಾಡುವುದಾಗಿ ತಿಳಿಸಿದರು.

ಕಳೆದ ವರ್ಷ 1.41 ಲಕ್ಷ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲಾಗಿದ್ದು, ಫಲಾನುಭವಿಗಳ ಬೇಡಿಕೆಗೆ ಹೋಲಿಸಿದರೆ ಸೌಲಭ್ಯ ವಿತರಣೆ ಕಡಿಮೆ ಇದೆ. ಇದಕ್ಕಾಗಿಯೇ ಸಂಪನ್ಮೂಲ ಹೆಚ್ಚಿಸಲಾಗುತ್ತಿದೆ. ಶಾಸಕರ ನಿಧಿಯಿಂದಲೂ ಸಹ ವಿಶೇಷ ಚೇತನರಿಗೆ ಪರಿಕರಗಳನ್ನು ವಿತರಿಸಲು ಅವಕಾಶವಿದೆ. ಜೊತೆಗೆ ಸ್ಥಳೀಯ ಸಂಸ್ಥೆಗಳು ಸಹ ತಮ್ಮ ಬಜೆಟ್ ನಲ್ಲಿ ಶೇ 5 ರಷ್ಟು ಮೊತ್ತವನ್ನು ವಿಶೇಷಚೇತನರಿಗೆ ಮೀಸಲಿರಿಸಿದ್ದು, ಈ ಮೊತ್ತದಿಂದ ಲ್ಯಾಪ್ ಟಾಪ್, ಶೈಕ್ಷಣಿಕ ಉದ್ದೇಶಕ್ಕಾಗಿ ಬ್ರೈಲ್ ವಸ್ತುಗಳನ್ನು ನೀಡುತ್ತಿದ್ದು, ದ್ವಿಚಕ್ರ ವಾಹನಗಳನ್ನು ಸಹ ಒದಗಿಸಲು ಅವಕಾಶವಿದೆ ಎಂದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ