logo
ಕನ್ನಡ ಸುದ್ದಿ  /  ಕರ್ನಾಟಕ  /  Krs Party's Manifesto: ವಿಧಾನಸಭಾ ಚುನಾವಣೆ: ಪ್ರಣಾಳಿಕೆ ಬಿಡುಗಡೆ ಮಾಡಿದ ಕೆಆರ್‌ಎಸ್ ಪಕ್ಷ

KRS Party's Manifesto: ವಿಧಾನಸಭಾ ಚುನಾವಣೆ: ಪ್ರಣಾಳಿಕೆ ಬಿಡುಗಡೆ ಮಾಡಿದ ಕೆಆರ್‌ಎಸ್ ಪಕ್ಷ

HT Kannada Desk HT Kannada

Mar 15, 2023 10:03 PM IST

google News

ಕೆಆರ್‌ಎಸ್ ಪಕ್ಷದ ನಾಯಕರ ಸುದ್ದಿಗೋಷ್ಠಿ

    • ಕರ್ನಾಟಕದ ನೆಲ, ಜಲ ಮತ್ತು ಪರಿಸ್ಥಿತಿಗಳನ್ನು ಅವಲೋಕಿಸಿ ನಮ್ಮ ಕೆಆರ್‌ಎಸ್ ಪಕ್ಷ ಮುಂಬರುವ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ ಎಂದು ಮಂಜುನಾಥ್ ಹೇಳಿದರು.
ಕೆಆರ್‌ಎಸ್ ಪಕ್ಷದ ನಾಯಕರ ಸುದ್ದಿಗೋಷ್ಠಿ
ಕೆಆರ್‌ಎಸ್ ಪಕ್ಷದ ನಾಯಕರ ಸುದ್ದಿಗೋಷ್ಠಿ

ಬೆಂಗಳೂರು: ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಯಾವಲ್ಲಾ ಯೊಜನೆಗಳನ್ನು ರೂಪಿಸಬೇಕು ಮತ್ತು ಕಾರ್ಯಕ್ರಮಗಳನ್ನು ಅನುಷ್ಟಾನಕ್ಕೆ ತರಬೇಕು ಎನ್ನುವ ನಿಟ್ಟಿನಲ್ಲಿ ರಾಜ್ಯದ ಜನಸಾಮಾನ್ಯರ ಜೊತೆ ಮತ್ತು ಚಿಂತಕರು ಹಾಗೂ ತಜ್ಞರ ಜೊತೆ ಹಲವಾರು ಸಭೆಗಳು ಮತ್ತು ಸಂವಾದಗಳನ್ನು ನಡೆಸಿದ ನಂತರ ಕೆ.ಆರ್.ಎಸ್ ಪಕ್ಷವು ಪ್ರಣಾಳಿ ಸಿದ್ಧಪಡಿಸಿದೆ ಎಂದು ಬೆಂಗಳೂರು ಜಿಲ್ಲಾಧ್ಯಕ್ಷ ಮಂಜುನಾಥ್ ಎಸ್ ತಿಳಿಸಿದರು.

ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಂಜುನಾಥ್ ಕರ್ನಾಟಕದ ನೆಲ, ಜಲ ಮತ್ತು ಪರಿಸ್ಥಿತಿಗಳನ್ನು ಅವಲೋಕಿಸಿ ನಮ್ಮ ಕೆಆರ್‌ಎಸ್ ಪಕ್ಷ ಮುಂಬರುವ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ ಎಂದು ಮಂಜುನಾಥ್ ಹೇಳಿದರು.

ಕೆಆರ್‌ಎಸ್ ಪಕ್ಷದ ಪ್ರಣಾಳಿಕೆ ಹೀಗಿದೆ..

- ರಾಜ್ಯ ಸರ್ಕಾರದಲ್ಲಿ ಪ್ರಸ್ತುತ ಖಾಲಿ ಇರುವ 3 ಲಕ್ಷಕ್ಕಿಂತಲೂ ಹೆಚ್ಚಿನ ಹುದ್ದೆಗಳನ್ನು ಒಂದು ವರ್ಷದ ಒಳಗೆ ಭರ್ತಿ ಮಾಡಲಾಗುವುದು

- ಭ್ರಷ್ಟಾಚಾರರಹಿತ, ಪಾರದರ್ಶಕ ಮತ್ತು ಜವಾಬ್ದಾರಿಯುತ ಆಡಳಿತಕ್ಕಾಗಿ ಮತ್ತು ಭ್ರಷ್ಟಾಚಾರ ನಿಗ್ರಹಕ್ಕಾಗಿ ಲೋಕಾಯುಕ್ತ ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು.

- ರಾಜ್ಯದಲ್ಲಿ ಬಡತನ ನಿವಾರಣೆಗಾಗಿ ಸಂಪೂರ್ಣ ಮದ್ಯ ನಿಷೇಧ ಮಾಡಲಾಗುತ್ತದೆ.

- ಶಿಕ್ಷಣದ ಪ್ರತಿಹಂತದಲ್ಲಿಯೂ ಉಚಿತ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಕ್ರಮ ವಹಿಸಲಾಗುವುದು.

- ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಕನಿಷ್ಠ ಒಂದುಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮತ್ತು ತಾಲ್ಲೂಕಿಗೆ ಒಂದು ಸರ್ಕಾರಿ ಮಲ್ಟಿ ಸ್ಪಷಾಲಿಟಿ ಆಸ್ಪತ್ರೆ ತೆರೆಯಲಾಗುವುದು

- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರ್ಥಿಕತೆ ನಿರ್ಮಾಣ

- ಉದ್ಯೋಗ ಸೃಷ್ಟಿ, ಗ್ರಾಮ ಸ್ವರಾಜ್ಯ ವೈಜ್ಞಾನಿಕ ಬೆಳೆ ಪದ್ಧತಿ ಜಾರಿ

- ಕೃಷಿ ಉತ್ಪನ್ನಗಳಿಗೆ ಗ್ರಾಮೀಣ ಭಾಗದಲ್ಲಿಯೇ ಮೌಲ್ಯವರ್ಧನೆಗೆ ಕ್ರಮ ಕೈಗೊಳ್ಳಲಾಗುವುದು.

- ಸಾಲ ಮುಕ್ತ ರೈತ, ಬಡತನ ಮುಕ್ತ ಹಳ್ಳಿಗಳು

- ರಾಜ್ಯಾದ್ಯಂತ ಕರೆಗಳನ್ನು ತುಂಬಿಸಿ ಅಂತರ್ಜಲಮಟ್ಟ ವೃದ್ಧಿಸಲು ಶ್ರಮಿಸಲಾಗುವುದು.

- ರಾಜ್ಯದ ಪ್ರತಿ ಹಳ್ಳಿ ಪಟ್ಟಣಕ್ಕೆ ಮಳೆ, ನದಿ ಮೂಲದಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು.

- ಗ್ರಾಮೀಣಾಭಿವೃದ್ಧಿ ಇಲಾಖೆಗೆ ಕಾಯಕಲ್ಪ ನೀಡಿ ಅಧಿಕಾರ ವಿಕೇಂದ್ರೀಕರಣಕ್ಕೆ ಆದ್ಯತೆ ಕೊಟ್ಟು ಗ್ರಾಮ ಸ್ವರಾಜ್ಯ ಸ್ಥಾಪನೆಗೆ ಕ್ರಮವಾಗಿಸಲಾಗುವುದು.

- ಕಡ್ಡಾಯವಾಗಿ ಗ್ರಾಮಸಭೆ ಮತ್ತು ವಾರ್ಡ್ ಸಭೆ ನಡೆಸಲು ಕ್ರಮ ಗ್ರಾಮಗಳಲ್ಲಿ ಉತ್ತಮ ಮತ್ತು ಸುಸಜ್ಜಿತ ನಾಗರಿಕ ಸೌಲಭ್ಯಗಳನ್ನು ಒದಗಿಸಲಾಗುವುದು. ನೈರ್ಮಲ್ಯತೆಗೆ ಆದ್ಯತೆ ನೀಡಿ ಸ್ವಚ್ಛ ಗ್ರಾಮಗಳ ನಿರ್ಮಾಣ ಮಾಡಿ ಗ್ರಾಮಗಳನ್ನುಕಾಲಕಾಲಕ್ಕೆ ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೇರಿಸುವ ಕೆಲಸ ನಿರ್ವಹಿಸಲಾಗುವುದು ಎಂದು ಹೇಳಿದರು.

8 ವರ್ಷಗಳಲ್ಲಿ ನಮ್ಮ ಮೆಟ್ರೋ ಕಾಮಗಾರಿ ಪೂರ್ಣ:

ನಮ್ಮ ಮೆಟ್ರೋ ಯೋಜನೆಯ ಎಲ್ಲ ಹಂತಗಳನ್ನು ಮತ್ತು ಬೆಂಗಳೂರಿನ ಎಲ್ಲಾ ದಿಕ್ಕುಗಳಿಗೂ ವಿಸ್ತರಿಸಿ ಇನ್ನು 8 ವರ್ಷಗಳಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು.. ಹೀಗೆ ನೂರಾರು ವಿಚಾರ ವಿಷಯಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ